Connect with us

ಸುಳ್ಯ

Drone survey for Arecanut Yellow Leaf Disease : ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಮಿಡಿದ ಮೋದಿ ಸರ್ಕಾರ |ಎಲೆ ಹಳದಿ ರೋಗದ ಬಗ್ಗೆ ಇಸ್ರೋ, ಸಿಪಿಸಿಆರ್‌ಐ ತಂಡದಿಂದ ಸುಳ್ಯದಲ್ಲಿ ಡ್ರೋನ್‌ ಆಧಾರಿತ ವೈಜ್ಞಾನಿಕ ಸಮೀಕ್ಷೆ ಆರಂಭ: ಸಂಸದ ಕ್ಯಾ. ಚೌಟ; ಹೇಗೆ ನಡೆಯುತ್ತೆ ಈ ಸಮೀಕ್ಷೆ ? ಇಲ್ಲಿದೆ ಡಿಟೈಲ್ಸ್‌

Published

on



Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ  ನೇತೃತ್ವದ ಕೇಂದ್ರ ಸರ್ಕಾರವು, ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಮುಂತಾದವಗಳ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡುವುದಕ್ಕೆ ಸುಧಾರಿತ ಡ್ರೋನ್‌ ಆಧಾರತ ವೈಮಾನಿಕ ಸಮೀಕ್ಷಾ ಕಾರ್ಯವನ್ನು ಆರಂಭಿಸಿದೆ ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕಳೆದ ಆಗಸ್ಟ್ ನಲ್ಲಿ  ಕರ್ನಾಟಕದ ಅಡಿಕೆ ಬೆಳೆಯುವ ಜಿಲ್ಲೆಗಳ ಸಂಸದರು, ರಾಜ್ಯದ ಸಚಿವರು, ಅಡಿಕೆ ಬೆಳೆಗಾರರ ಸಂಸ್ಥೆಗಳನ್ನು ಒಳಗೊಂಡ ಜಂಟಿ ನಿಯೋಗವು ದೆಹಲಿಯಲ್ಲಿ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರನ್ನು ಭೇಟಿ ಮಾಡಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿತ್ತು. ಈ ವೇಳೆ ಸಂಸದ ಕ್ಯಾ. ಚೌಟ ಅವರು ಕೂಡ  ಎಲೆ ಚುಕ್ಕೆ ಹಾಗೂ ಹಳದಿ ರೋಗ ಸೇರಿದಂತೆ ಅಡಿಕೆ ಬೆಳೆಗೆ ಕಾಡುತ್ತಿರುವ ಹಲವು ಸಮಸ್ಯೆಗಳಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದು, ಅವರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮಾನವಿ ಮಾಡಿದ್ದರು. ಈ ವೇಳೆ ಜಂಟಿ ನಿಯೋಗವು ಅಡಿಕೆ ಹಳದಿ ಎಲೆ ಶಿಲೀಂದ್ರ ಮತ್ತು ಇತರ ರೋಗಗಳಿಂದ ದೀರ್ಘಾವಧಿಯ ಅಧ್ಯಯನ ಮಾಡಲು ಮತ್ತು ಪರಿಹಾರ ಕಂಡುಹಿಡಿಯಲು ಪ್ರತಿಷ್ಟಿತ ಸಂಶೋಧನಾ ಸಂಸ್ಥೆಯಿಂದ ಸಮಗ್ರ ಅಧ್ಯಯ ನಡೆಸಬೇಕೆಂದು ಸಚಿವರ ಮುಂದಿಟ್ಟಿತ್ತು. ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರವು ನಿಯೋಗವನ್ನು ಕಳುಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಹೇಗೆ ನಡೆಯುತ್ತೇ ಸಮೀಕ್ಷೆ ?

Ad Widget

Ad Widget <> Ad Widget

ಕೇಂದ್ರ ಸರ್ಕಾರ ನಿರ್ದೇಶನದಂತೆ ಕಾಸರಗೋಡಿನಲ್ಲಿರುವ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ಸಿಪಿಸಿಆರ್‌ಐ), ಬೆಂಗಳೂರಿನ ಇಸ್ರೋ ಸಂಶೋಧನಾ ವಿಭಾಗ ಹಾಗೂ ಹೈದರಾಬಾದ್‌ನ ಇಸ್ರೋ ವೈಮಾನಿಕ ವಿಭಾಗ (ISRO Aerial Wing)ವು ಜಂಟಿಯಾಗಿ ಈ  ಸರ್ವೆ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಈ ತಂಡವು ಸುಳ್ಯ ತಾಲೂಕಿನ ಆರಂತೋಡು ಮತ್ತು ಪೆರಾಜೆ ಗ್ರಾಮದಲ್ಲಿ ಡ್ರೋನ್‌ ಸಮೀಕ್ಷೆ ನಡೆಸುತ್ತಿದೆ. ಈ ಎರಡು ಪ್ರದೇಶಗಳ ಒಟ್ಟು 2.5 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಈ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಸುಧಾರಿತ ಡ್ರೋನ್‌ ಮೂಲಕ ಅಡಿಕೆ ಮರಗಳ ಎಲೆಗಳ ಫೋಟೊ ಮತ್ತು ವಿಡಿಯೋ ಸೆರೆಹಿಡಿಯಲಾಗುತ್ತದೆ. ಇಲ್ಲಿನ ಚಿತ್ರಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಲಾಗುತ್ತದೆ. ಈ ಮೂಲ ಚಿತ್ರಗಳನ್ನು ಬೇಸ್‌ ಆಗಿ ಪರಿಗಣಿಸಿ ಅದನ್ನು ಇಸ್ರೋದ ಉಪಗ್ರಹಕ್ಕೆ(Satellite) ದತ್ತಾಂಶವಾಗಿ ನೀಡಿ, ಆ ಮೂಲಕ ಕೇವಲ ಪ್ರಾಯೋಗಿಕ ಪ್ರದೇಶವಲ್ಲದೆ, ದೊಡ್ಡ ವ್ಯಾಪ್ತಿಯಲ್ಲಿ ಒಟ್ಟು ಅಡಿಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶಗಳ ಸಮಗ್ರ ಸಮೀಕ್ಷೆ ನಡೆಯಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.



Ad Widget

ಅಡಿಕೆ ಬೆಳೆಗೆ ಬಾಧಿಸಿರುವ ಎಲೆ ಹಳದಿ ರೋಗ ಸಮಸ್ಯೆ ಪರಿಹಾರಕ್ಕೆ ಇದೊಂದು ಮಹತ್ವದ ಹೆಜ್ಜೆಯಾಗಿದ್ದು, ಈ ಸಮೀಕ್ಷೆಯಲ್ಲಿ ವೈಜ್ಞಾನಿಕ ಹಾಗೂ ನಿಖರ ಅಂಕಿ-ಅಂಶಗಳು ದೊರೆಯಲಿದೆ. ಅಲ್ಲದೆ, ಎಲೆ ಹಳದಿ ರೋಗ ಪೀಡಿತ ಅಡಿಕೆ ಮರಗಳಲ್ಲಿ ಆಗುವ ಬದಲಾವಣೆಗಳ ಬಗ್ಗೆಯೂ ನಿರಂತರ ನಿಗಾ ವಹಿಸಲಾಗುತ್ತದೆ. ಅಡಿಕೆ ಬೆಳೆಗೆ ಆಗುವ ರೋಗ ಪ್ರಸರಣದ ವೇಗ ಹಾಗೂ ವ್ಯಾಪ್ತಿ ಬಗ್ಗೆಯೂ ಮಾಹಿತಿ ಲಭ್ಯವಾಗಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.

Ad Widget

Ad Widget
In a major initiative by the Modi government, ISRO and CPCRI have launched a scientific drone survey in Sullia, Karnataka, to combat the devastating Arecanut Yellow Leaf Disease. Learn how advanced drone imagery and satellite data are being used to accurately map the disease's extent, monitor its spread, and provide crucial data to help thousands of farmers. This high-tech study marks a significant step towards finding a long-term solution for affected arecanut growers.

Ad Widget
Click to comment

Leave a Reply

ಸುಳ್ಯ

Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.

Ad Widget

Ad Widget

Ad Widget

Ad Widget

ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Ad Widget

Ad Widget <> Ad Widget

ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.



Ad Widget

ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.

Ad Widget

Ad Widget

ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.

ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.

ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.

ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.

Ad Widget
Continue Reading

ಸುಳ್ಯ

ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.



Ad Widget

ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Continue Reading

ಸುಳ್ಯ

Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ

Published

on



Ad Widget

Ad Widget

Ad Widget

Ad Widget

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.

Ad Widget

Ad Widget

Ad Widget

Ad Widget

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading