Connect with us

Uncategorized

BIG BREAKING: ಕಾನ್ಪುರ ಹಿಂಸಾಚಾರ – ಪ್ರವಾದಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರೆ ಪಕ್ಷದಿಂದ ವಜಾ : ಅರಬ್ ದೇಶದಲ್ಲಿ ಭಾರತೀಯ ವಸ್ತುಗಳಿಗೆ ಬಹಿಷ್ಕಾರ- ವಕ್ತಾರೆ ಹೇಳಿಕೆಗೂ ಬಿಜೆಪಿಗೂ ಸಂಬಂಧವಿಲ್ಲ ಎಂದ ಬಿಜೆಪಿ..!

Published

on

Ad Widget

Ad Widget

Ad Widget

Ad Widget

ನವದೆಹಲಿ: ಪ್ರವಾದಿ ಮೊಹಮ್ಮದ್ (Prophet Mohammed) ವಿರುದ್ಧ ಪಕ್ಷದ ವಕ್ತಾರೆ ನೂಪುರ್ ಶರ್ಮಾ (Nupur Sharma) ನೀಡಿರುವ ವಿವಾದಾತ್ಮಕ ಹೇಳಿಕೆಗಳಿಂದ ಭಾರತೀಯ ಜನತಾ ಪಕ್ಷ (BJP) ಅಂತರ ಕಾಯ್ದುಕೊಂಡಿದೆ. ಪಕ್ಷದ ರಾಷ್ಟ್ರೀಯ ವಕ್ತಾರೆಯನ್ನೇ ಪಕ್ಷದ ಪ್ರಾಥಮಿಕ ಸದಸ್ಯತದಿಂದ ವಜಾಗೊಳಿಸಿದೆ. ಅರಬ್ ದೇಶಗಳಲ್ಲಿ ಭಾರತದ ವಸ್ತುಗಳ ಬಹಿಷ್ಕಾರ ಪ್ರಾರಂಭವಾಗಿದೆ.

Ad Widget

Ad Widget

Ad Widget

Ad Widget

ಯಾವುದೇ ಪಂಗಡ ಅಥವಾ ಧರ್ಮವನ್ನು ಅವಮಾನಿಸುವ ಯಾವುದೇ ಸಿದ್ಧಾಂತವನ್ನು ಪಕ್ಷವು ಬಲವಾಗಿ ವಿರೋಧಿಸುತ್ತದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಭಾರ ಮುಖ್ಯ ಕಾರ್ಯದರ್ಶಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಿಜೆಪಿ ರಾಷ್ಟ್ರೀಯ ವಕ್ತಾರೆ ನುಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಿದೆ.

Ad Widget

Ad Widget <> Ad Widget

ಪಕ್ಷದ ವಕ್ತಾರರು ಹೇಳಿಕೆಗಳಿಂದ ಆಕ್ರೋಶಗೊಂಡ ಮುಸ್ಲಿಂ ಗುಂಪುಗಳ ಪ್ರತಿಭಟನೆಯ ನಡುವೆ ಬಿಜೆಪಿ ವಿವಾದವನ್ನು ಶಮನಗೊಳಿಸಲು ಪ್ರಯತ್ನಿಸಿದೆ. ಶುಕ್ರವಾರದ ಪ್ರಾರ್ಥನೆಯ ನಂತರ ಕಾನ್ಪುರ ನಗರದ ಪರೇಡ್, ನಯಿ ಸಡಕ್ ಮತ್ತು ಯತೀಂಖಾನಾ ಪ್ರದೇಶಗಳಲ್ಲಿ ಪ್ರಮುಖ ಘರ್ಷಣೆಗಳು ಭುಗಿಲೆದ್ದ ನಂತರ ವಿವಾದವು ಹಿಂಸಾಚಾರಕ್ಕೆ ತಿರುಗಿತು.

ಇತ್ತೀಚೆಗೆ ಟಿವಿ ಚರ್ಚೆಯೊಂದರಲ್ಲಿ ನೂಪುರ್ ಶರ್ಮಾ ಅವರು ಮಾಡಿದ ಅವಮಾನಕರ ಹೇಳಿಕೆಗಳನ್ನು ಖಂಡಿಸಿ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.ಬಿಜೆಪಿಯು ಎಲ್ಲ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧಾರ್ಮಿಕ ವ್ಯಕ್ತಿತ್ವವನ್ನು ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಪಕ್ಷವು ಅಂತಹ ಜನರನ್ನು ಅಥವಾ ಅವರ ಹೇಳಿಕೆಗಳನ್ನು ಪ್ರಚಾರ ಮಾಡುವುದಿಲ್ಲ ಎಂದು ಅರುಣ್ ಸಿಂಗ್ ಹೇಳಿದರು.

Ad Widget

Ad Widget

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ ಪ್ರತಿಯೊಂದು ಧರ್ಮವು ಅರಳಿದೆ ಮತ್ತು ಪ್ರವರ್ಧಮಾನಕ್ಕೆ ಬಂದಿದೆ. ಭಾರತೀಯ ಜನತಾ ಪಕ್ಷವು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಪಕ್ಷವು ಬಲವಾಗಿ ಖಂಡಿಸುತ್ತದೆ” ಎಂದು ಅವರು ಹೇಳಿದರು.

ವಿವಾದಾತ್ಮಕ ಹೇಳಿಕೆಗಳ ನಂತರ ಮಾರುಕಟ್ಟೆಗಳನ್ನು ಮುಚ್ಚುವ ಕರೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ. ಘರ್ಷಣೆಯ ಸಂದರ್ಭದಲ್ಲಿ 20 ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ. ಒಂದು ಗುಂಪು ಮತ್ತೊಂದು ಗುಂಪಿನಿಂದ ಬಂದ್ ಕರೆಯನ್ನು ವಿರೋಧಿಸಿತು, ಇದು ಕಲ್ಲು ತೂರಾಟಕ್ಕೆ ಕಾರಣವಾಯಿತು. ಗುಂಪನ್ನು ಚದುರಿಸಲು ಮತ್ತು ಹೆಚ್ಚಿನ ಹಿಂಸಾಚಾರವನ್ನು ತಡೆಯಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಬೇಕಾಯಿತು. ಪೊಲೀಸರು 36 ಮಂದಿಯನ್ನು ಬಂಧಿಸಿದ್ದು, 1,500 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಘರ್ಷಣೆ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ಥಳದಿಂದ 80 ಕಿಲೋಮೀಟರ್ ದೂರದಲ್ಲಿ ಸಮಾರಂಭದಲ್ಲಿದ್ದರು.

ಭಾರತದ ಆಡಳಿತ ಪಕ್ಷದ ವಕ್ತಾರೆಯ ಹೇಳಿಕೆ ವಿರುದ್ಧ ಅರಬ್ ರಾಷ್ಟ್ರಗಳಲ್ಲಿ ಆಕ್ರೋಶದ ಅಲೆಯು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಹ್ಯಾಶ್‌ಟ್ಯಾಗ್‌ಗಳು ಮತ್ತು ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದ ಹಿನ್ನೆಲೆ ಬಿಜೆಪಿ ಸ್ಪಷ್ಟೀಕರಣ ನೀಡಿದೆ.

Ad Widget
Click to comment

Leave a Reply

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

Uncategorized

Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget <> Ad Widget

ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.

ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಈ ನಡುವೆ ತನಿಖಾಧಿಕಾರಿ ಲೋಕೇಶ್ ಹಾಗೂ ಸಹ ತನಿಖಾಧಿಕಾರಿ ಮನೋಜ್ ನಾಯ್ಕ್ ಅವರು ಕೂಡ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget
Continue Reading

Uncategorized

Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!

Published

on

Ad Widget

Ad Widget

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget

Ad Widget

Ad Widget

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget alt="Ad Widget"/>

Ad Widget

ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.

Ad Widget

Ad Widget <> Ad Widget

ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.

ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

Ad Widget

Ad Widget

ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.

ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.

ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.

ಮಾರ್ಗ ಬದಲಾವಣೆ ಕುರಿತು ಎಫ್‌ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್‌ಗಳು
ಹುಳಿಮಾವು ಜಂಕ್ಷನ್‌ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!