ಕಾರ್ಯಕ್ರಮಗಳು
Puttur-ಜ.24 ಮತ್ತು 25 : 33ನೇ ವರ್ಷದ ಇತಿಹಾಸ ಪ್ರಸಿದ್ಧ ಪುತ್ತೂರಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ : ಪೂರ್ವಭಾವಿ ಸಭೆ
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಶ್ರಮದಾನದ ಮೂಲಕ ಕರೆ ನಿರ್ಮಾಣ ಆಗಿದೆ. ಈಗ ಅದು ಅಷ್ಟು ಸುಲಭವಲ್ಲ. ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಮೊದಲು, ಈ ಅವಧಿಯ ಕಂಬಳ ನಡೆದ ಕೂಡಲೇ ಹೊಸಕರೆ ನಿರ್ಮಾಣ ಮಾಡಲಾಗುವುದು ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿಯವರು ಹೇಳಿದ್ದಾರೆ.
ಪುತ್ತೂರು: ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಶ್ರಮದಾನದ ಮೂಲಕ ಕರೆ ನಿರ್ಮಾಣ ಆಗಿದೆ. ಈಗ ಅದು ಅಷ್ಟು ಸುಲಭವಲ್ಲ. ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಮೊದಲು, ಈ ಅವಧಿಯ ಕಂಬಳ ನಡೆದ ಕೂಡಲೇ ಹೊಸಕರೆ ನಿರ್ಮಾಣ ಮಾಡಲಾಗುವುದು ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿಯವರು ಹೇಳಿದ್ದಾರೆ.
2026 ಜ.24 ಮತ್ತು 25ರಂದು ನಡೆಯಲಿರುವ 33ನೇ ವರ್ಷದ ಪುತ್ತೂರಿನ ಐತಿಹಾಸಿಕ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಪೂರ್ವ ಸಿದ್ದತೆಗಾಗಿ ನ.17ರಂದು ನಡೆದ ಕಂಬಳ ಸಮಿತಿಯ ಪ್ರಥಮ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು.ಕಂಬಳ ದಿನ ಕಳೆದಂತೆ ಪ್ರಸಿದ್ದಿ ಪಡೆಯುತ್ತಿದೆ. ಇವತ್ತು ಬಂಗಾರದ ದರ ಒಂದು ಕಡೆ ಏರಿಕೆಯಾಗುತ್ತಿದೆ.ಜೊತೆಗೆ ಖರ್ಚುವೆಚ್ಚಗಳೂ ಹೆಚ್ಚಾಗುತ್ತಿವೆ. ಕಂಬಳದ 10ನೇ ವರ್ಷದಲ್ಲಿ ಎಲಿಕ ಜಯರಾಜ್ ಅವರು, ಕಂಬಳದಲ್ಲಿ ವಿಜೇತರಿಗೆ ಕೊಡುವ ಚಿನ್ನದ ಪದಕವನ್ನು 2 ಪವನ್‌ಗೆ ಹೆಚ್ಚಿಸುವಂತೆ ಮಾಡಿದರು. ಈಗ ಪವನ್‌ಗೆ ಲೆಕ್ಕ ಹಾಕಿದರೆ ಭಾರೀ ದೊಡ್ಡ ಸಂಗತಿಯಾಗಿದೆ. ಮತ್ತೊಂದು ಕಡೆ ಕರೆ ನಿರ್ಮಾಣದ ಜವಾಬ್ದಾರಿಯನ್ನೂ ನಾವೇ ನಿರ್ವಹಿಸಬೇಕಾಗಿದೆ.ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಕರೆ ಮಾಡುವ ವ್ಯವಸ್ಥೆ ಇದೆ. ಇದಕ್ಕೆ ನಮ್ಮ ಶಾಸಕರು ಕೂಡಾ ಸಹಕಾರ ನೀಡಲಿದ್ದಾರೆ ಎಂದು ಹೇಳಿದ ಚಂದ್ರಹಾಸ ಶೆಟ್ಟಿಯವರು, 32 ವರ್ಷಗಳ ಹಿಂದೆ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕೋಡಿಂಬಾಡಿ ದಿವಾಕರ್, ಜಯರಾಜ್ ಸಹಿತ ಹಲವಾರು ಹಿರಿಯರು ಶ್ರಮದಾನದ ಮೂಲಕ ಕಂಬಳದ ಕರೆ ಮಾಡಿಸಿದರು ಎಂದು ನೆನಪಿಸಿಕೊಂಡರು.
ಕೆಸರುಗದ್ದೆ ಓಟ ಕಂಬಳಕ್ಕೆ ಸಮಸ್ಯೆಯಾಗಿಲ್ಲ:
ಕಳೆದ ಸಲ ಕಂಬಳದ ಜೊತೆಗೆ ಕೆಸರುಗದ್ದೆ ಓಟ ಮಾಡಿದ್ದೆವು. ಅದನ್ನು ಈ ಬಾರಿಯೂ ಮಾಡಲಿಕ್ಕಿದೆ. ಕಳೆದ ಸಲ ಮೊದಲ ಪ್ರಯತ್ನದಲ್ಲೇ ಕೆಸರುಗದ್ದೆ ಓಟ ಯಶಸ್ವಿಯಾಗಿದೆ. ಕಂಬಳಕ್ಕೆ ಇದರಿಂದ ಯಾವುದೇ ಸಮಸ್ಯೆ ಆಗಿಲ್ಲ ಎಂದು ಹೇಳಿದ ಚಂದ್ರಹಾಸ ಶೆಟ್ಟಿಯವರು ಈ ಬಾರಿಯೂ ಅದಕ್ಕೆ ಪೂರ್ಣ ಸಹಕಾರ ಬೇಕೆಂದರು.
ಯಾರೇ ಬರಲಿ, ಬಾರದೆ ಇರಲಿ ಪುತ್ತೂರು ಕಂಬಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿ ನಡೆಯಲಿದೆ:
ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಗೌರವಾಧ್ಯಕ್ಷರಾಗಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಮಾತನಾಡಿ 35 ವರ್ಷದ ಹಿಂದೆ ನಿಂತು ಹೋದ ಕಂಬಳ ಜಯಂತ ರೈ ಅವರ ನೇತೃತ್ವದಲ್ಲಿ ಆರಂಭಗೊಂಡಿತು. ಅದರೊಟ್ಟಿಗಿನ ಯುವಕರ ಆಕರ್ಷಣೆಯ ಶಕ್ತಿಯಿಂದ ಆಗ ಶ್ರಮದಾನದ ಮೂಲಕದೇ ಕರೆ ನಿರ್ಮಾಣ ಮಾಡಲಾಯಿತು. ಶ್ರೀಪತಿ ಆರಿಗ, ಎನ್ ಸುಧಾಕರ್ ಶೆಟ್ಟಿಯವರ ಮುಂದಾಳತ್ವದಲ್ಲಿ ನಡೆಯುತ್ತಿದ್ದ ಕಂಬಳ ಒಂದಷ್ಟು ಸಮಯದ ಬಳಿಕ ಕಂಬಳ ನಿಂತು ಹೋಗುತ್ತದೆ ಎಂದಾಗ ಮುತ್ತಪ್ಪ ರೈ ಅವರು ಮತ್ತೆ ಅದಕ್ಕೆ ಬಹಳ ದೊಡ್ಡ ಮೆರುಗು ನೀಡಿದರು. ಅವರ ಬಳಿಕ ಚಂದ್ರಹಾಸ ಶೆಟ್ಟಿಯವರ ನೇತೃತ್ವದಲ್ಲಿ ಕಂಬಳ ಯಶಸ್ವಿಯಾಗಿ ನಡೆಯುತ್ತಿದೆ.ಈ ಬಾರಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯವೂ ನಡೆಯುತ್ತಿರುವಾಗ ಕಂಬಳದ ಕರೆಯನ್ನು ಬದಲಾಯಿಸುವ ಚಿಂತನೆಯೂ ನಡೆದಿದೆ. ಕಟಪಾಡಿ ಬೀಡುವಿನಲ್ಲೂ ನಿರಂತರ ಕಂಬಳ ನಡೆಯುತ್ತಿತ್ತು.ಈ ಬಾರಿ ಅಲ್ಲೂ ಕಟಪಾಡಿಯಿಂದ ಎರ್ಮಾಳುವಿನಲ್ಲಿ ತೆಂಕ ಬಡ ಕಂಬಳ ನಡೆಯಲಿದೆ. ಇವತ್ತು ಕರೆ ಮಾಡಲು ಮರಳಿನ ಸಮಸ್ಯೆಯಿಂದಾಗಿ ಕ್ರಷರ್ ಹುಡಿ ಬಳಸುವ ಕಾಲ ಬಂದಿದೆ. ಹಾಗಾಗಿ ಪುತ್ತೂರಿನ ಕಂಬಳಕ್ಕೆ ಯಾರೇ ಬರಲಿ, ಬಾರದೆ ಇರಲಿ ನಿರೀಕ್ಷೆಗೂ ಮೀರಿ ಇಲ್ಲಿ ಕಂಬಳ ಯಶಸ್ವಿಯಾಗಿ ನಿರಂತರ ನಡೆಯಲಿದೆ. ಇದು ರೈತರ ವೀರತ್ವದ ಶಕ್ತಿ.ಕ್ರೀಡೆಗೆ ಒತ್ತು ಕೊಟ್ಟರೆ ಕೃಷಿಗೆ ಒತ್ತು ಕೊಟ್ಟಂತೆ ಎಂದರು.
ಸಮಸ್ಯೆಗೆ ಪರಿಹಾರ ಸಿಕ್ಕಿದೆ:
ಇವತ್ತು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಂಬಳ ನಡೆದಿದೆ. ಅದು ಮುಂದೆ ಶಿವಮೊಗ್ಗದಲ್ಲಿ ನಡೆಯುವ ಯೋಚನೆಯಲ್ಲಿದ್ದಾಗ ಕೋರ್ಟ್ ಸ್ಟೇ ಬಂತು. ಕಂಬಳ ನಿಲ್ಲುವ ಸಂದರ್ಭ ಬೃಹತ್ ಪ್ರತಿಭಟನೆ ನಡೆಯಿತು.ಆ ಪ್ರತಿಭಟನೆಯ ಫಲವಾಗಿ ಅವತ್ತು ಸಮಸ್ಯೆಗಳು ಪರಿಹಾರ ಆಗಿದೆ. ಕಂಬಳಕ್ಕೆ ಬೇಕಾಗಿ ಗುಣಪಾಲ್ ಶೆಟ್ಟಿಯವರು ಹಲವು ಅವಿಷ್ಕಾರ ಮಾಡಿದ್ದಾರೆ ಎಂದು ಹೇಳಿದರು.
ಪುತ್ತೂರು ಕಂಬಳ ಮಹಾಲಿಂಗೇಶ್ವರನ ಸಾನಿಧ್ಯದ ಎದುರೇ ನಡೆಯಲಿ: ಕೋಟಿ ಚೆನ್ನಯ ಕಂಬಳ ಸಮಿತಿಯ ಇನ್ನೋರ್ವ ಗೌರವಾಧ್ಯಕ್ಷರಾಗಿರುವ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಮಾತನಾಡಿ ನಾನು ಕಂಬಳದಲ್ಲಿ ಏನೂ ಅಲ್ಲ. ಆದರೆ ಅಪವಾದಕ್ಕೆ ಉತ್ತರವಾಗಿ ನಾನು ಕಂಬಳದ ಜೊತೆಯಲ್ಲೇ ಇದ್ದೇನೆ.ಬೆಂಗಳೂರು ಕಂಬಳ ಆದ ಬಳಿಕ ವಿಶ್ವದಲ್ಲಿಯೇ ಕಂಬಳಕ್ಕೆ ಹೆಸರು ಬಂದಿದೆ.ಆದರೆ ಜಿಲ್ಲೆಯಲ್ಲಿ ಅತಿ ದೊಡ್ಡ ಹೆಸರು ಪಡೆಯುವ ಕಂಬಳ ಪುತ್ತೂರು ಕಂಬಳ ಮಾತ್ರ ಎಂದರು. ಪುತ್ತೂರು ಕಂಬಳ ಇದೇ ಕಂಬಳ ಕರೆಯಲ್ಲಿ ನಡೆಯಬೇಕು. ಯಾಕೆಂದರೆ ಈಗಾಗಲೇ ವಿನಯ ಕುಮಾರ್ ಸೊರಕೆಯವರು ಹೇಳಿದಂತೆ ಕಟಪಾಡಿ ಕಂಬಳ ಎರ್ಮಾಳುವಿಗೆ ಹೋಗುವುದು, ಮೂಡೂರು ಪಡೂರು ಹೋಗಿ ನಾವೂರು ಆಗುವುದು ಕೇಳಿ ಬಂದಿದೆ. ಹಾಗಾಗಿ ಪುತ್ತೂರಿನ ಕಂಬಳ ಬೇರೆ ಸ್ಥಳಕ್ಕೆ ಹೋಗುವುದಕ್ಕೆ ನಾವು ಜೀವ ಇದ್ದರೆ ಬಿಡುವುದಿಲ್ಲ. ಪುತ್ತೂರು ಕಂಬಳ ಇಲ್ಲೇ ಆಗುವುದಕ್ಕೆ ದೃಢ ನಿಶ್ಚಯ ಬೇಕು. ಯಾಕೆಂದರೆ ಕೊನೆಗೆ ಬಲಿಮೆಯಲ್ಲಿ ಪುತ್ತೂರಿನ ತೆಂಕಿಲದಲ್ಲಿ ಮಾಡುವುದೆಂಬ ವಿಚಾರ ಬರುವುದು ಬೇಡ. ಏನೇ ಇದ್ದರೂ ಮಹಾಲಿಂಗೇಶ್ವರ ದೇವರ ಸಾನಿಧ್ಯದ ಎದುರೇ ಕಂಬಳ ನಡೆಯಬೇಕು.ಈ ನಿಟ್ಟಿನಲ್ಲಿ ನಮಗೆ ಗಟ್ಟಿಯಾದ ಶಾಸಕರಿರುವ ಕಾರಣ ಹೆದರಿಕೆಯಿಲ್ಲ ಎಂದರು.
ಕಂಬಳ ದೇವರಿಗೆ ಹತ್ತಿರವಾಗುತ್ತಿದೆ:
ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿ ಗುಡ್ಡೆಯವರು ಮಾತನಾಡಿ ಇವತ್ತು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸಭೆ ಪ್ರಥಮವಾಗಿ ದೇವಳದ ನಟರಾಜ ವೇದಿಕೆಯಲ್ಲಿ ನಡೆಯುತ್ತಿದೆ. ಇದು ಕಂಬಳ ದೇವರಿಗೆ ಬಹಳ ಹತ್ತಿರವಾಗುತ್ತಿರುವ ಸೂಚನೆ ನೀಡಿದಂತಾಗಿದೆ. ಕಂಬಳದಲ್ಲಿ ಅತ್ಯಂತ ಉದ್ದದ ಕರೆ, ಹೆಚ್ಚು ಕಾರ್ಯಕರ್ತರು, ಸ್ಪರ್ಧೆಯಲ್ಲಿ ಹೆಚ್ಚು ಕೋಣಗಳ ಭಾಗವಹಿಸುವಿಕೆ ಎಲ್ಲವೂ ನಮ್ಮ ಕೋಟಿ ಚೆನ್ನಯ ಜೋಡುಕರೆ ಕಂಬಳದಾಗಿದೆ. ಬಹಳ ಅಚ್ಚುಕಟ್ಟಾದ ವ್ಯವಸ್ಥೆ ಇಲ್ಲಿ ಆಗುತ್ತಿದೆ. ಕಂಬಳದ ಗದ್ದೆಯಲ್ಲಿ ಕೋಣಗಳಿಗೆ ನೀರು ಹಾಯಿಸಲು ಮತ್ತು ಕರೆಗೆ ನೀರು ಬಿಡಲು ಪ್ರತ್ಯೇಕ ಬೋರ್‌ವೆಲ್ ವ್ಯವಸ್ಥೆ ಮಾಡಲಾಗಿದೆ. ಕಂಬಳದ ಆರಂಭದಿಂದ ಕೊನೆಯ ತನಕ ಕಾರ್ಯಕರ್ತರು ಸಹಕರಿಸಬೇಕು.ಮಹಾಲಿಂಗೇಶ್ವರ ದೇವರ ಆಶೀರ್ವಾದದಿಂದ ಕಂಬಳ ಸಂಪೂರ್ಣ ಯಶಸ್ವಿಯಾಗಿ ನಡೆಯಲಿದೆ ಎಂದರು.
ದ.ಕ., ಉಡುಪಿ ಜಿಲ್ಲೆಯಲ್ಲೇ ಹೆಸರು ಪಡೆದ ಕಂಬಳ:
ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಸಂಚಾಲಕ ವಸಂತ ಕುಮಾರ್ ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ 32 ವರ್ಷಗಳಿಂದ ಪುತ್ತೂರಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಪ್ರಸಿದ್ದಿ ಪಡೆದಿದೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಂಬಳ ಹೆಸರು ಪಡೆದಿದೆ ಎಂದರು.
ಈ ಬಾರಿ ಕಂಬಳದ ಕೆಸರುಗದ್ದೆ ಓಟದಲ್ಲಿ ರಿಲೇ ಪ್ರಯೋಗ..!
ಪ್ರಥಮ ಪ್ರಯೋಗವಾಗಿ ಕೆಸರಿನಲ್ಲಿ ಓಟ
ಕಳೆದ ಬಾರಿ ಕಂಬಳದ ಗದ್ದೆಯಲ್ಲಿ ಕೆಸರುಗದ್ದೆ ಯಶಸ್ವಿಯಾಗಿ ನಡೆದಿದೆ.ನೂರಾರು ಮಂದಿ ಕ್ರೀಡಾಪಟುಗಳ ಜೊತೆಗೆ 29 ಮಂದಿ ರಾಷ್ಟ್ರೀಯ ಕ್ರೀಡಾಪಟುಗಳು ಕೂಡಾ ಭಾಗವಹಿಸಿದ್ದರು. 11 ರೇಸ್ ಅನ್ನು 11 ನಿಮಿಷದಲ್ಲಿ ಮುಗಿಸಿದ್ದೆವು. ಅದೇ ರೀತಿ ಕಂಬಳದ ಕೆಸರುಗದ್ದೆ ಓಟದಲ್ಲಿ ಈ ಬಾರಿ ರಿಲೇ ಪ್ರಯೋಗ ಮಾಡುವುದು ಉತ್ತಮ. ಇದು ತುಂಬಾ ಆಕರ್ಷಣೀಯವಾಗಿರುತ್ತದೆ. 50 ತಂಡ ಮಾಡಿಕೊಂಡು ಮಾಡಬಹುದು. ರಾಜ್ಯದಲ್ಲಿ 16 ಸ್ಪೋರ್ಟ್ಸ್ ಹಾಸ್ಟೆಲ್ ಇದೆ. ಅದಕ್ಕೆ ಕಂಬಳ ಸಮಿತಿಯಿಂದ ಪತ್ರ ಬರೆದರೆ ಅಲ್ಲಿಂದ ಸ್ಪರ್ಧಿಗಳು ಭಾಗವಹಿಸಬಹುದು. ಕೆಸರು ಗದ್ದೆ ಓಟದಿಂದ ಕಂಬಳಕ್ಕೆ ತೊಡಕಾಗಿಲ್ಲ ಹಾಗಾಗಿ ಅವಕಾಶ ಕೊಟ್ಟರೆ ಈ ಬಾರಿ ರಿಲೇ ಮಾಡುವ ಎಂದು ಉಪ್ಪಿನಂಗಡಿ ಸ.ಪ್ರ.ದ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಾಲ್ವರು ಸಾಧಕರಿಗೆ ಸನ್ಮಾನ:
ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ನಾಲ್ವರು ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಕಂಬಳ ಕ್ಷೇತ್ರದ ಸಾಧನೆಗೆ ಸಂಬಂಧಿಸಿ ಪ್ರಶಸ್ತಿ ಪಡೆದಿರುವ ಸಮಿತಿ ಉಪಾಧ್ಯಕ್ಷ ಸುದರ್ಶನ ನ್ಯಾಕ್ ಕಂಪ, ಅಬೂಬಕ್ಕರ್ ಮುಲಾರ್ ನಿರೂಪಕರೂ ಆಗಿರುವ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್, ದೈವಾರಾಧನೆಯ ಮಧ್ಯಸ್ಥ ಬಾಲಕೃಷ್ಣ ಬೂಡಿಯಾರ್ ಅವರನ್ನು ಕಂಬಳ ಸಮಿತಿಯಿಂದ ಸನ್ಮಾನಿಸಲಾಯಿತು.ಸನ್ಮಾನಿತರ ಪರವಾಗಿ ಸುದರ್ಶನ್ ನ್ಯಾಕ್ ಕಂಪ ಅವರು ಅನಿಸಿಕೆ ವ್ಯಕ್ತಪಡಿಸಿದರು.ಕಂಬಳ ಸಮಿತಿ ಉಪಾಧ್ಯಕ್ಷ ಶಿವರಾಮ ಆಳ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ ಅತಿಥಿಗಳನ್ನು ಗೌರವಿಸಿದರು.ಬಾಲಕೃಷ್ಣ ಪಳ್ಳತ್ತಾರು ಮತ್ತು ಕುಂಬ್ರ ದುರ್ಗಾಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು.ಮಾಣಿ ಉಮೇಶ್ ಸಾಗು, ಕಬಡ್ಡಿ ಕ್ರೀಡಾಪಟುಗಳಾದ ಪ್ರಶಾಂತ್ ರೈ ಕೈಕಾರ, ಅಜಿತ್, ಸಮಿತಿ ಪದಾಧಿಕಾರಿಗಳಾದ ಜೋಕಿಂಡಿ’ಸೋಜ, ಜಿನ್ನಪ್ಪ ಪೂಜಾರಿಮುರ, ಶಶಿಕಿರಣ್ ರೈ ನೂಜಿಬೈಲು, ದುರ್ಗಾಪ್ರಸಾದ್ ರೈ ಕುಂಬ್ರ, ದಿನೇಶ್ ವಲೇರಿಯನ್ ಡಯಾಸ್, ರೋಷನ್ ರೈ ಬನ್ನೂರು, ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆ, ವಿಕ್ರಂ ಶೆಟ್ಟಿ ಅಂತರ, ಶಿವಪ್ರಸಾದ್ ರೈ ಮಠಂತಬೆಟ್ಟು, ಮುರಳಿಧರ ರೈ ಮತಂತಬೆಟ್ಟು, ರಂಜಿತ್ ಬಂಗೇರ, ಹನಡ್ಕ ಗಂಗಾಧರ ಶೆಟ್ಟಿ ಕೈಕಾರ, ಪ್ರಶಾಂತ್ ಮುರ, ದಿಲೀಪ್ ಶೆಟ್ಟಿ ಕೈಕಾರ, ಡಾ.ರಾಜಾರಾಮ ಉಪ್ಪಿನಂಗಡಿ, ಸುಮಿತ್ ಶೆಟ್ಟಿ ಕಂಬಳಬೆಟ್ಟು, ಕೆ.ಸತೀಶ್ ಕುಮಾರ್, ಪ್ರಶಾಂತ್ ಮುರ, ರಾಕೇಶ್ ರೈ ಬೋಳೋಡಿ ಗುತ್ತು,ದಾಮೋದರ ಮುರ, ಜೆ.ಪಿ.ಸಂತೋಷ್ ಕುಮಾರ್, ಚಂದ್ರಶೇಖರ ಪಾಲ್ತಾಡಿ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಗಗನ್‌ದೀಪ್, ಪ್ರವೀಣ್ ಕುಂಚಾರ್, ಸುದೇಶ್ ನ್ಯಾಕ್, ಉಮೇಶ್ ಕರ್ಕೇರ, ಪ್ರವೀಣ್ ಕುಮಾರ್, ನವೀನ್‌ಚಂದ್ರ ನ್ಯಾಕ್ ಬೆದ್ರಾಳ, ಹಂಝ ಎಲಿಯ, ಶರತ್ ಕೇಪುಳು, ಚಂದ್ರಹಾಸ ಶೆಟ್ಟಿ ಬನ್ನೂರು, ಜಯಪ್ರಕಾಶ್ ಬದಿನಾರ್, ರಾಜೇಶ್ ಶೆಟ್ಟಿ ಮಠಂತಬೆಟ್ಟು, ಸುಶಾಂತ್ ಶೆಟ್ಟಿ ಕಂಬಳಬೆಟ್ಟು, ಕೆ.ಸುಂದರ, ಕಿರಣ್ ಡಿ’ಸೋಜ, ಯೋಗೀಶ್ ಸಾಮಾನಿ, ರಾಕೇಶ್ ಶೆಟ್ಟಿ,ರಮೇಶ್ ಗೌಡ, ಉಮಾಶಂಕರ್ ನ್ಯಾಕ್ ಪಾಂಗಳಾಯಿ,ಮುಹಮ್ಮದ್ ಬಡಗನ್ನೂರು, ಮೌರಿಸ್ ಮಸ್ಕರೇನಸ್ ಕಿಶಾನ್ ಸರೋಳಿ, ಖಾದರ್ ಪೋಳ್ಯ, ಹಸೈನಾರ್ ಬನಾರಿ, ಮಹಾಬಲ ರೈ ಒಳತಡ್ಕ, ವಿನಯ ಸುವರ್ಣ, ಸನತ್ ರೈ ಒಳತಡ್ಕ, ಅಭಿಷೇಕ್ ಬೆಳ್ಳಿಪ್ಪಾಡಿ, ಸುರೇಂದ್ರ ರೈ ನೇಸರ, ದಾಮೋದರ, ಬಾಲಕೃಷ್ಣ, ಗಣೇಶ್ ರಾಜ್ ಬಿಳಿಯೂರು, ಪ್ರವೀಣ್ ಶೆಟ್ಟಿ ಅಳಕೆಮಜಲ್, ಮಂಜುನಾಥ ಬನ್ನೂರು, ರಜಾಕ್ ಬಿ.ಎಚ್., ಬಿಪಿನ್ ಕುಮಾರ್ ಶೆಟ್ಟಿ ಮೊದಲಾದ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.
ಸರಕಾರದಿಂದ ರೂ. 5 ಲಕ್ಷ ಶಾಸಕರಿಗೆ ಅಭಿನಂದನೆ
ಶಾಸಕ ಅಶೋಕ್ ಕುಮಾರ್ ರೈ ಅವರ ಮುತುವರ್ಜಿಯಿಂದ ಸುಮಾರು 10 ಕಂಬಳ ಕೂಟಗಳಿಗೆ ಸರಕಾರದಿಂದ ತಲಾ ರೂ.5 ಲಕ್ಷ ನೆರವು ಸಿಗಲಿದೆ. ಈ ನಿಟ್ಟಿನಲ್ಲಿ ಶಾಸಕರ ಈ ಪ್ರಯತ್ನವನ್ನು ಎಲ್ಲಾ ಕಂಬಳ ಸಮಿತಿಯವರು ಅಭಿನಂದಿಸಬೇಕು
-ಎನ್.ಚಂದ್ರಹಾಸ ಶೆಟ್ಟಿ, ಅಧ್ಯಕ್ಷರು, ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿ
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ
ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್‌ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್‌ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಜಯ ಬ್ಯಾಂಕ್‌ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.
ಕಾರ್ಯಕ್ರಮಗಳು
Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.
ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.
ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್‌ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.

ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್‌ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.
ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್‌ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.
ಸ್ಥಳೀಯ
Wedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಉಜಿರೆ: ಕ್ಯಾಸೆಟ್‌ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್‌ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.
ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.
ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.
ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮತ್ತು ರಶ್ಮಿತಾ ಜೈನ್ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.
-
ಅಪರಾಧ20 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್17 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ17 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು18 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ13 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ18 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು19 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ18 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















