Connect with us

ರಾಜಕೀಯ

Gruhalakshmi Cooperative Bank-ಮಹಿಳೆಯರಿಗೆ ಸಿಹಿಸುದ್ದಿ: ನ.28ಕ್ಕೆ ‘ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್‌’ ಆರಂಭ; 3 ಲಕ್ಷ ರೂ. ವರೆಗೆ ಸಾಲ ಲಭ್ಯ

Published

on

Ad Widget

Ad Widget

Ad Widget

Ad Widget

ಗೃಹಲಕ್ಷ್ಮಿ ಯೋಜನೆಯ ಯಶಸ್ಸಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿರುವ ‘ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್‌’ಗೆ ನವೆಂಬರ್ 28ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ತುಮಕೂರು/ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಯಶಸ್ಸಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿರುವ ‘ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್‌’ಗೆ ನವೆಂಬರ್ 28ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಹಿಂದೆ ಎಸ್.ಎಂ.ಕೃಷ್ಣ ಅವರ ಆಡಳಿತಾವಧಿಯಲ್ಲಿ ಸ್ತ್ರೀ ಶಕ್ತಿ ಸಂಘಗಳು ಮಹಿಳೆಯರಿಗೆ ಶಕ್ತಿ ತುಂಬಿದ್ದವು. ಇದೀಗ ಮಹಿಳೆಯರು ಕೇವಲ ಗೃಹಿಣಿಯರಾಗಿ ಉಳಿಯದೆ ಉದ್ಯಮಿಗಳಾಗುತ್ತಿದ್ದಾರೆ. ಖಾಸಗಿ ಫೈನಾನ್ಸ್ ಕಂಪನಿಗಳ ಬಡ್ಡಿ ಕಾಟ ತಪ್ಪಿಸಲು ಮತ್ತು ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಬ್ಯಾಂಕ್ ಸ್ಥಾಪಿಸಲಾಗುತ್ತಿದೆ,” ಎಂದು ಹೇಳಿದರು.

Ad Widget

Ad Widget <> Ad Widget

ಸಾಲ ಪಡೆಯಲು ನಿಯಮಗಳೇನು?
ಗೃಹಲಕ್ಷ್ಮಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಪಡೆಯಲು ಇಲಾಖೆಯು ಕೆಲವೊಂದು ಮಾನದಂಡಗಳನ್ನು ನಿಗದಿಪಡಿಸಿದೆ:
• ಸದಸ್ಯತ್ವ: ಬ್ಯಾಂಕ್‌ಗೆ ಸೇರಬಯಸುವ ಮಹಿಳೆಯರು 1,000 ರೂ. ಪಾವತಿಸಿ ಷೇರುದಾರರಾಗಬೇಕು (Shareholders).
• ಮಾಸಿಕ ಉಳಿತಾಯ: ಷೇರುದಾರರಾದ ಬಳಿಕ ಪ್ರತಿ ತಿಂಗಳು ಕನಿಷ್ಠ 200 ರೂ. ಪಾವತಿಸಬೇಕು.
• ಸಾಲದ ಅರ್ಹತೆ: ಸದಸ್ಯತ್ವ ಪಡೆದು 6 ತಿಂಗಳು ಪೂರೈಸಿದ ನಂತರ ಸಾಲ ಪಡೆಯಲು ಅರ್ಹರಾಗುತ್ತಾರೆ.
• ಸಾಲದ ಮೊತ್ತ: ಕನಿಷ್ಠ 30 ಸಾವಿರದಿಂದ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಸಿಗಲಿದೆ.
• ವೈಯಕ್ತಿಕ ಸಾಲ: ಇಲ್ಲಿ ಸಂಘ ಅಥವಾ ಗುಂಪುಗಳಿಗೆ ಸಾಲ ನೀಡುವುದಿಲ್ಲ, ಬದಲಾಗಿ ವೈಯಕ್ತಿಕ ಸಾಲವನ್ನು ಮಾತ್ರ ನೀಡಲಾಗುತ್ತದೆ.
• ಬಡ್ಡಿದರ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಬಡ್ಡಿದರವೇ ಇಲ್ಲಿಯೂ ಅನ್ವಯವಾಗಲಿದೆ. ವ್ಯವಹಾರ ಸಂಪೂರ್ಣ ನಗದು ರಹಿತವಾಗಿರುತ್ತದೆ (Cashless).

ಸರ್ಕಾರ ಬದಲಾದರೂ ಬ್ಯಾಂಕ್ ಶಾಶ್ವತ
ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವರು, “ಮುಂದೆ ಯಾವುದೇ ಸರ್ಕಾರ ಬಂದರೂ ಗೃಹಲಕ್ಷ್ಮಿ ಬ್ಯಾಂಕ್ ಮುಚ್ಚುವುದಿಲ್ಲ. ಇದು ನಿರಂತರ ಪ್ರಕ್ರಿಯೆ. ಕೃಷಿ, ಹೈನುಗಾರಿಕೆ, ವಾಹನ ಖರೀದಿ, ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ಅಗತ್ಯಗಳಿಗೆ ಮಹಿಳೆಯರು ಇಲ್ಲಿ ಸಾಲ ಪಡೆಯಬಹುದು,” ಎಂದು ತಿಳಿಸಿದರು.

Ad Widget

Ad Widget

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ
ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರಿಗೆ ಶುಭಸುದ್ದಿ ನೀಡಿದ ಸಚಿವರು, “ಈಗಾಗಲೇ ಗೌರವ ಧನ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 1,000 ರೂ. ಗೌರವ ಧನ ಹೆಚ್ಚಳ ಮಾಡಲಾಗುವುದು,” ಎಂದರು.

ನ.28ಕ್ಕೆ ಐಸಿಡಿಎಸ್ ಸುವರ್ಣ ಮಹೋತ್ಸವ
ಬೆಂಗಳೂರಿನಲ್ಲಿ ನವೆಂಬರ್ 28ರಂದು ಐಸಿಡಿಎಸ್ ಸುವರ್ಣ ಮಹೋತ್ಸವ, ‘ಅಕ್ಕ ಪಡೆ’ ಲೋಕಾರ್ಪಣೆ ಹಾಗೂ ‘ಗೃಹಲಕ್ಷ್ಮಿ ಬ್ಯಾಂಕ್’ ಉದ್ಘಾಟನೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

Ad Widget
Click to comment

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!