ರಾಷ್ಟ್ರೀಯ
Sheikh Hasina-ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ: ಕೂಡಲೇ ಹಸ್ತಾಂತರಿಸುವಂತೆ ಬಾಂಗ್ಲಾ ಸರ್ಕಾರದಿಂದ ಭಾರತಕ್ಕೆ ಮನವಿ; ಭಾರತದ ಮುಂದಿರುವ ಆಯ್ಕೆಗಳೇನು?
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಲ್ಲಿನ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT) ಮರಣದಂಡನೆ ವಿಧಿಸಿದೆ. ಈ ತೀರ್ಪಿನ ಬೆನ್ನಲ್ಲೇ, ಪ್ರಸ್ತುತ ಭಾರತದಲ್ಲಿ ಆಶ್ರಯ ಪಡೆದಿರುವ ಹಸೀನಾ ಅವರನ್ನು ಕೂಡಲೇ ಹಸ್ತಾಂತರಿಸುವಂತೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಭಾರತಕ್ಕೆ ಅಧಿಕೃತ ಮನವಿ ಸಲ್ಲಿಸಿದೆ.
ಹೊಸದಿಲ್ಲಿ/ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಲ್ಲಿನ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT) ಮರಣದಂಡನೆ ವಿಧಿಸಿದೆ. ಈ ತೀರ್ಪಿನ ಬೆನ್ನಲ್ಲೇ, ಪ್ರಸ್ತುತ ಭಾರತದಲ್ಲಿ ಆಶ್ರಯ ಪಡೆದಿರುವ ಹಸೀನಾ ಅವರನ್ನು ಕೂಡಲೇ ಹಸ್ತಾಂತರಿಸುವಂತೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಭಾರತಕ್ಕೆ ಅಧಿಕೃತ ಮನವಿ ಸಲ್ಲಿಸಿದೆ.
ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದ ವಿದ್ಯಾರ್ಥಿ ಚಳವಳಿಯನ್ನು ನಿರ್ದಯವಾಗಿ ಹತ್ತಿಕ್ಕಿದ ಮತ್ತು ನೂರಾರು ವಿದ್ಯಾರ್ಥಿಗಳ ಸಾವಿಗೆ ಕಾರಣರಾದ ಆರೋಪದಡಿ, “ಮಾನವೀಯತೆ ವಿರುದ್ಧದ ಅಪರಾಧ”ಕ್ಕಾಗಿ ಹಸೀನಾ ತಪ್ಪಿತಸ್ಥೆ ಎಂದು ನ್ಯಾಯಮಂಡಳಿ ತೀರ್ಪು ನೀಡಿದೆ.
ಭಾರತಕ್ಕೆ ಬಾಂಗ್ಲಾ ಪತ್ರ:
ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತಕ್ಕೆ ಪತ್ರ ಬರೆದಿದ್ದು, “ದ್ವಿಪಕ್ಷೀಯ ಹಸ್ತಾಂತರ ಒಪ್ಪಂದದ ಅನ್ವಯ, ಮರಣದಂಡನೆಗೆ ಗುರಿಯಾಗಿರುವ ಶೇಖ್ ಹಸೀನಾ ಹಾಗೂ ಭಾರತದಲ್ಲಿದ್ದಾರೆ ಎನ್ನಲಾದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಅವರನ್ನು ತಕ್ಷಣವೇ ಹಸ್ತಾಂತರಿಸುವುದು ನವದೆಹಲಿಯ ಕಡ್ಡಾಯ ಜವಾಬ್ದಾರಿಯಾಗಿದೆ,” ಎಂದು ಪ್ರತಿಪಾದಿಸಿದೆ. ಅಲ್ಲದೆ, “ಮಾನವೀಯತೆ ವಿರುದ್ಧದ ಅಪರಾಧಿಗಳಿಗೆ ಆಶ್ರಯ ನೀಡುವುದು ಸ್ನೇಹಪರ ನಡೆಯಲ್ಲ,” ಎಂದು ಎಚ್ಚರಿಸಿದೆ.
ಭಾರತದ ನಿಲುವೇನು?
ಬಾಂಗ್ಲಾದೇಶದ ಮನವಿಗೆ ಭಾರತದ ವಿದೇಶಾಂಗ ಸಚಿವಾಲಯ ಎಚ್ಚರಿಕೆಯ ಪ್ರತಿಕ್ರಿಯೆ ನೀಡಿದೆ. “ಬಾಂಗ್ಲಾದೇಶದ ನ್ಯಾಯಮಂಡಳಿಯ ತೀರ್ಪನ್ನು ಗಮನಿಸಿದ್ದೇವೆ. ನಾವು ಬಾಂಗ್ಲಾದೇಶದ ಜನರ ಹಿತಾಸಕ್ತಿ ಮತ್ತು ಅಲ್ಲಿನ ಸ್ಥಿರತೆಗೆ ಬದ್ಧರಾಗಿದ್ದೇವೆ,” ಎಂದಷ್ಟೇ ಹೇಳಿರುವ ಸಚಿವಾಲಯ, ಹಸ್ತಾಂತರದ ಬಗ್ಗೆ ಯಾವುದೇ ಸ್ಪಷ್ಟ ಭರವಸೆ ನೀಡಿಲ್ಲ. ಕಾನೂನು ಸಾಧ್ಯತೆಗಳನ್ನು ಪರಿಶೀಲಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.
ಹಸ್ತಾಂತರಕ್ಕೆ ಕಾನೂನಿನ ಅಡ್ಡಿಗಳೇನು?
ಭಾರತ ಮತ್ತು ಬಾಂಗ್ಲಾದೇಶದ ನಡುವೆ 2013ರ ಹಸ್ತಾಂತರ ಒಪ್ಪಂದವಿದ್ದರೂ (2016ರಲ್ಲಿ ತಿದ್ದುಪಡಿ), ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವುದು ಭಾರತಕ್ಕೆ ಕಡ್ಡಾಯವಲ್ಲ. ಇದಕ್ಕೆ ಪ್ರಮುಖ ಕಾರಣಗಳು ಇಲ್ಲಿವೆ:
- ರಾಜಕೀಯ ಪ್ರೇರಿತ: ಒಪ್ಪಂದದ 6ನೇ ವಿಧಿಯ ಪ್ರಕಾರ, ಆರೋಪಗಳು ‘ರಾಜಕೀಯ ಸ್ವರೂಪ’ದ್ದಾಗಿದ್ದರೆ ಹಸ್ತಾಂತರವನ್ನು ನಿರಾಕರಿಸಬಹುದು.
- ಅನ್ಯಾಯದ ಕ್ರಮ: ಒಪ್ಪಂದದ 8ನೇ ವಿಧಿಯ ಅನ್ವಯ, ಆರೋಪಿಯ ಮೇಲಿನ ಕ್ರಮವು ಅನ್ಯಾಯ ಅಥವಾ ದಬ್ಬಾಳಿಕೆಯಿಂದ ಕೂಡಿದೆ ಎಂದು ಕಂಡುಬಂದರೆ ಮನವಿಯನ್ನು ತಿರಸ್ಕರಿಸಬಹುದು.
- ಭಾರತದ ಹಸ್ತಾಂತರ ಕಾಯ್ದೆ 1962: ಈ ಕಾಯ್ದೆಯ ಸೆಕ್ಷನ್ 29ರ ಪ್ರಕಾರ, ಹಸ್ತಾಂತರ ಮನವಿಯು ಕ್ಷುಲ್ಲಕ ಅಥವಾ ರಾಜಕೀಯ ಪ್ರೇರಿತ ಎಂದು ಕೇಂದ್ರ ಸರ್ಕಾರಕ್ಕೆ ಅನ್ನಿಸಿದರೆ, ಪ್ರಕ್ರಿಯೆಯನ್ನು ತಡೆಹಿಡಿಯುವ ಅಥವಾ ರದ್ದುಗೊಳಿಸುವ ಸಂಪೂರ್ಣ ಅಧಿಕಾರ ಭಾರತ ಸರ್ಕಾರಕ್ಕಿದೆ.
- ಒಟ್ಟಾರೆಯಾಗಿ, ಕಾನೂನು ಮತ್ತು ರಾಜಕೀಯ ಕಾರಣಗಳಿಂದಾಗಿ ಭಾರತವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವ ಸಾಧ್ಯತೆ ತೀರಾ ಕಡಿಮೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
Uncategorized23 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized11 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ5 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ12 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ13 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ12 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್11 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು12 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















