ಸ್ಥಳೀಯ
Dr. Heggade-ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ- ಸಿರಿ ಕೆಫೆ-ಸಿರಿ ಮಳಿಗೆ ಉದ್ಘಾಟನೆ; ಜನರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಸಭಾ ನಿಧಿ ಬಳಕೆ : ಡಾ ಹೆಗ್ಗಡೆ
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ ನಲುವತ್ತು ಸಾವಿರ ಲೀಟರ್ ಹಾಲು ಉತ್ಪತ್ತಿಯಾಗುತ್ತಿದೆ. ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಜನರ ಜೀವನ ಮಟ್ಟ ಸುಧಾರಣೆ ಅಗತ್ಯತೆ ಮನಗಂಡು ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಸೋಮವಾರ ರಾಜ್ಯಸಭಾ ಸಂಸದರಾದ ಡಾ. ವೀರೇಂದ್ರ ಹೆಗ್ಗಡೆಯವರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ. 2 ಕೋ.ರೂ. ಅನುದಾನದಡಿ ಬೆಳ್ತಂಗಡಿ ನಗರದ ಕೆಇಬಿ-ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ-ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡುತ್ತಾ, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ತಾಲೂಕಿನ ಕೆಲವು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗೆ ರಾಜ್ಯಸಭಾ ನಿಧಿಯನ್ನು ಬಳಸಲಾಗಿದೆ.
ಗ್ರಾಮಾಭಿವೃದ್ದಿ ಯೋಜನೆಯಿಂದ ಸಾವಿರಾರು ಕುಟುಂಬಗಳಿಗೆ ಬೆಳಕು ಬಂದರೆ, ಸಿರಿ ಸಂಸ್ಥೆಯಿಂದ ಸಾವಿರಾರು ಮಂದಿಗೆ ಉದ್ಯೋಗ ದೊರಕಿದೆ. ಮುಂದೆಯೂ ಇನ್ನಷ್ಟು ಉತ್ಪನ್ನಗಳನ್ನು ತಯಾರಿಸಿ ಮೂರು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವಂತೆ ಮಾಡಲಾಗುವುದು. ಇಲ್ಲಿನ ಶಾಸಕರ, ಪಟ್ಟಣ ಪಂಚಾಯಿತಿ ಅಧ್ಯಕ್ಷರ ,ಸದಸ್ಯರ ಬೇಡಿಕೆಯಂತೆ ಜನರ ಅನುಕೂಲಕ್ಕಾಗಿ ಈ ರಸ್ತೆಗೆ 2 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.
ಶಾಸಕ ಹರೀಶ್ ಪೂಂಜ ಅವರು ಮಾತನಾಡಿ, ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಡಿ ಬೆಳ್ತಂಗಡಿ ಅಯ್ಯಪ್ಪ ಮಂದಿರ ಬಳಿಯಿಂದ ಹುಣ್ಸೆಕಟ್ಟೆ ವರೆಗಿನ ರಸ್ತೆ ಅಭಿವೃದ್ದಿಗೆ 2 ಕೋಟಿ ರೂ. ನೀಡುವ ಮೂಲಕ ಉಪ್ಪಿನಂಗಡಿ- ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ಗುರುವಾಯನಕರೆಯಲ್ಲಿ ಟ್ರಾಫಿಕ್ ಸಮಸ್ಯೆ ಬಂದಾಗ ಈ ಸಂಪರ್ಕ ರಸ್ತೆ ಸಾವಿರಾರು ಜನರಿಗೆ ಅನುಕೂಲವಾಗಿದೆ.
ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಿಂದ 10 ಕೋಟಿ ರೂ. ಅನುದಾನ ನೀಡಿ ಸಾವಿರಾರು ಕುಟುಂಬಗಳ ಆರ್ಥಿಕ ಬೆಳವಣಿಗೆ ಕಾರಣವಾಗಿದ್ದಾರೆ. ಇದರಿಂದ ದೇಶದಲ್ಲಿ ಸಂಸದರ ನಿಧಿ ವಿನಿಯೋಗ ಹೇಗೆ ಮಾಡಬಹುದೆಂದು ಡಾ. ಹೆಗ್ಗಡೆಯವರು ಕೆಲಸ ಮಾಡಿ ತೋರಿಸಿಕೊಟ್ಟು ಮಾದರಿಯಾಗಿದ್ದಾರೆ.
ಸಿರಿ ಸಂಸ್ಥೆಯಲ್ಲಿ ಒಂದು ಸಾವಿರ ಸಿಬ್ಬಂದಿಗಳು ಇದ್ದಾರೆ. ಮಹಿಳೆಯರಿಗೆ ಉದ್ಯೋಗ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. ಪಟ್ಟಣ ಪಂಚಾಯತ್ ಗೆ ಅನುದಾನಗಳ ಕೊರತೆ ಇದ್ದ ಸಂದರ್ಭದಲ್ಲಿ ರಸ್ತೆಗೆ ಎರಡು ಕೋಟಿ ಅನುದಾನ ನೀಡಿ ನಗರ ಪಂಚಾಯತ್ ಗೆ ಶಕ್ತಿ ತುಂಬಿದ್ದಾರೆ. ಇದಕ್ಕಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರ ಪರವಾಗಿ ಡಾ.ಹೆಗ್ಗಡೆಯವರಿಗೆ ಅಭಿನಂದಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಧ. ಗ್ರಾ. ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್., ಸಿರಿ ಸಂಸ್ಥೆ ಟ್ರಸ್ಟಿ ರಾಜೇಶ್ ಪೈ ಉಜಿರೆ, ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸಿರಿ ಸಂಸ್ಥೆ ಸಿಇಒ ಪ್ರಸನ್ನ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ಜನಾರ್ದನ್ ಪ್ರಸ್ತಾವಿಸಿ, ಸ್ವಾಗತಿಸಿದರು.
ಸಿರಿ ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
* ಸಂಸದರಿಗೆ ವರ್ಷಕ್ಕೆ 5 ಕೋ. ಅನುದಾನ ಬರುತ್ತದೆ.
* ಸಂಸದರ ನಿಧಿಯನ್ನು ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆಗೆ ಆದ್ಯತೆ ಮೇರೆಗೆ ಬಳಕೆ. ಅಲ್ಲಿನ ಹಾಲು ಸೊಸೈಟಿಗಳಿಗೆ 10 ಕೋ. ಅನುದಾನ ನೀಡಲಾಗಿದ್ದು, ಜಿಲ್ಲೆಯಲ್ಲಿ ದಿನಕ್ಕೆ ಒಂದು ಲಕ್ಷ ಲೀ. ಹಾಲು ಉತ್ಪಾದನೆ ಆಗುತ್ತಿದೆ. ಡಾ. ಹೆಗ್ಗಡೆಯವರ ಕಾರ್ಯಕ್ಕಾಗಿ ರಾಷ್ಟ್ರಪತಿಯವರಿಂದ ಶ್ಲಾಘನೆ ಕೂಡ ಲಭಿಸಿದೆ.
* ಬೆಳ್ತಂಗಡಿ-ಹುಣ್ಸೆಕಟ್ಟೆ ರಸ್ತೆ ಅಗಲೀಕರಣ ಹಾಗೂ ಅಭಿವೃದ್ದಿಗೆ 2 ಕೋ.ರೂ. ಅನುದಾನ ಬಿಡುಗಡೆ.
* ಧರ್ಮಸ್ಥಳದ ಅಶೋಕ ನಗರದಲ್ಲಿ ರಸ್ತೆ, ಮೂಲಭೂತ ಸೌಕರ್ಯಕ್ಕಾಗಿ 2.41 ಕೋ. ಅನುದಾನ.
* 140 ಕ್ಕೂ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ 1.83 ಕೋ. ರೂ. ಬಿಡುಗಡೆ.
ಇಷ್ಟರ ವರೆಗೆ 16.74 ಕೋ. ರೂ. ಅನುದಾನ ಬಿಡುಗಡೆ ಆಗಿದೆ.
-ಕೆ ಎನ್. ಜನಾರ್ದನ್, ರಾಜ್ಯಸಭಾ ಸದಸ್ಯ ಡಾ. ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ17 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು16 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು13 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ17 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ17 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ17 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ17 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಪರಾಧ13 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!


















