ರಾಜಕೀಯ
Siddaramaiah-ಹಿಂದುಳಿದವರು-ದಲಿತರು BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿದ್ದರಾಮಯ್ಯ ಅಪಾರ ಬೇಸರ
ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು, ನ19: ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ, “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಉದ್ಘಾಟಿಸಿ ಮಾತನಾಡಿದರು.
ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ BJP-RSS ಸೇರಿ ಇವರೇ ಮೂಲ RSS ನವರಿಗಿಂತ, ಇವರೇ ಹೆಡ್ಗೇವಾರ್ ರೀತಿ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದರು.
ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ ಎನ್ನುವುದನ್ನು ವಿವರಿಸಿದರು.
ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವತು ಈ ಜಾತಿಯ ಮೊದಲ ವಕೀಲರಾಗಿದ್ದರು ಎಂದು ಸ್ಮರಿಸಿದರು.
ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು.
ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ ಎಂದರು.
ನಾನು 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನಾನು ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು ಎಂದು ಸ್ಮರಿಸಿದರು.
ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಧಿಕ್ಷಣ ಪ್ರಮಾಣ ಶೇ68 ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದರೆ. ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಮೇಲು ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ ಎಂದರು.
ವಿದ್ಯಾವಂತರು ವಿದ್ಯೆ ಪಡೆದಷ್ಟೂ ಮೌಡ್ಯವನ್ನು ಹೆಚ್ಚೆಚ್ಚು ನಂಬುತ್ತಾರೆ. ಬಡತನಕ್ಕೆ ಹಣೆಬರಹ ಕಾರಣ ಎಂದು ನಂಬುವವರು ಇನ್ನೂ ಇದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾವಂತರೂ ಮೌಡ್ಯವನ್ನು ನಂಬುತ್ತಾರೆ ಎಂದರು.
ಬುದ್ದ, ಬಸವಣ್ಣ, ಅಂಬೇಡ್ಕರ್ ಅವರೆಲ್ಲಾ ಬಂದು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು. ಇವರು ಹೋರಾಡಿದಾಗ ಜಾತಿ ವ್ಯವಸ್ಥೆ ಸಡಿಲ ಆದಂತೆ ಕಾಣುತ್ತದೆ. ಆದರೆ ಬಳಿಕ ಮತ್ತೆ ಗಟ್ಟಿಯಾಗುತ್ತದೆ. ಜಾತಿ ವ್ಯವಸ್ಥೆ ಮಾತ್ರ ಹೋಗುತ್ತಿಲ್ಲ ಎಂದರು.
ಅದಕ್ಕೇ ಆರ್ಥಿಕ, ಸಾಮಜಿಕ ಅಸಮಾನತೆಗೆ ತುತ್ತಾಗಿರುವ ಜನರೇ ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದನ್ನು ನಾವು ಮರೆಯಬಾರದು ಎಂದರು.
ಮೀಸಲಾತಿ ಮಿತಿ ಶೇ75ಕ್ಕೆ ಹೆಚ್ಚಿಸಲೂ ಸಿದ್ಧ: ಸಿ.ಎಂ.ಸಿದ್ದರಾಮಯ್ಯ
ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ.
ನನಗೆ ಕೊನೆಯ ಉಸಿರು ಇರುವವರೆಗೂ, ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಮತ್ತೆ ಸ್ಪಷ್ಟಪಡಿಸಿದರು.
ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು
ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ “ಏನಾಯ್ತು ನಿಮ್ಮ ಗಣತಿ” ಎಂದು ನನಗೆ ಕೇಳಿದರು ಎಂದು ಸಿಎಂ ನುಡಿದರು.
ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ.
ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿಮಾಡಲು ಬದ್ದವಾಗಿದೆ ಎಂದರು.
ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದ ಸಿಎಂ
ತಮ್ಮ ಭಾಷಣದ ನಡುವೆ ಮುಖ್ಯಮಂತ್ರಿಗಳು ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದರು. ಶೂದ್ರ ಸಮುದಾಯವನ್ನು ನಾಯಿಗೆ ಹೋಲಿಸಿ ತಾರತಮ್ಯ ಆಚರಿಸುವ ಶ್ಲೋಕಗಳನ್ನು ಓದಿ, ನೀವೆಲ್ಲಾ ಮನಯಸ್ಮೃತಿ ಓದಿ ಜಾತಿ ತಾರತಮ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ರಾಜಕೀಯ
Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.
2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.
ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.
ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.
ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಸೌಕತ್ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.
ಸ್ಥಳೀಯ
B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ
ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.
ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.
ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
-
ನಿಧನ ವಾರ್ತೆ9 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್15 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ15 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ14 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ14 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ12 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ14 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ9 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















