ಮೈಸೂರು
Yatnal-ರಾಜ್ಯದಲ್ಲಿ ಮುಸ್ಲಿಂ ಪರ ಸರ್ಕಾರವಿದೆ – ಹಿಂದೂತ್ವದ ಸಂಘಟನೆ ಮಾಡ್ತೇವೆ : ಸರ್ಕಾರದ ವಿರುದ್ಧ ಮಾತನಾಡದ ವಿರೋಧ ಪಕ್ಷ ಯಾಕೆ ಬೇಕು..? ಯತ್ನಾಳ್ ಆಕ್ರೋಶ
ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದ್ದು, ಇದರ ವಿರುದ್ಧ ಹಿಂದೂ ಸಮಾಜವನ್ನು ಸಂಘಟಿಸಬೇಕಿದೆ. ಆದರೆ, ರಾಜ್ಯ ಬಿಜೆಪಿಯಲ್ಲಿ ‘ಅಡ್ಜಸ್ಟ್‌ಮೆಂಟ್ ರಾಜಕಾರಣ’ ನಡೆಯುತ್ತಿದ್ದು, ಸರಕಾರದ ವಿರುದ್ಧ ಧ್ವನಿ ಎತ್ತದ ಇಂತಹ ವಿರೋಧ ಪಕ್ಷ ಯಾಕೆ ಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದ್ದು, ಇದರ ವಿರುದ್ಧ ಹಿಂದೂ ಸಮಾಜವನ್ನು ಸಂಘಟಿಸಬೇಕಿದೆ. ಆದರೆ, ರಾಜ್ಯ ಬಿಜೆಪಿಯಲ್ಲಿ ‘ಅಡ್ಜಸ್ಟ್‌ಮೆಂಟ್ ರಾಜಕಾರಣ’ ನಡೆಯುತ್ತಿದ್ದು, ಸರಕಾರದ ವಿರುದ್ಧ ಧ್ವನಿ ಎತ್ತದ ಇಂತಹ ವಿರೋಧ ಪಕ್ಷ ಯಾಕೆ ಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಸ್ವಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಏಕಕಾಲದಲ್ಲಿ ವಾಗ್ದಾಳಿ ನಡೆಸಿದರು.
ಹಿಂದೂತ್ವದ ಸಂಘಟನೆಗೆ ಪಣ:
“ಪ್ರಸ್ತುತ ರಾಜ್ಯ ಸರಕಾರ ಒಂದು ವರ್ಗದ ಓಲೈಕೆಯಲ್ಲಿ ತೊಡಗಿದ್ದು, ಇದು ಸಂಪೂರ್ಣ ಮುಸ್ಲಿಂ ಪರ ಸರ್ಕಾರವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಸಮಾಜ ಒಗ್ಗಟ್ಟಾಗುವ ಅವಶ್ಯಕತೆಯಿದೆ. ರಾಜ್ಯಾದ್ಯಂತ ಹಿಂದೂತ್ವದ ಸಂಘಟನೆ ಮಾಡುತ್ತೇವೆ ಮತ್ತು ಇದಕ್ಕಾಗಿಯೇ ರಾಜ್ಯದ ಎಲ್ಲ ಕಡೆ ಸಭೆಗಳನ್ನು ನಡೆಸಲಿದ್ದೇವೆ,” ಎಂದು ಅವರು ತಿಳಿಸಿದರು.
ವಿಜಯೇಂದ್ರ ವಿರುದ್ಧ ‘ಅಡ್ಜಸ್ಟ್‌ಮೆಂಟ್’ ಆರೋಪ:
ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಹರಿಹಾಯ್ದ ಯತ್ನಾಳ್, “ರಾಜ್ಯದಲ್ಲಿ ಅಡ್ಜಸ್ಟ್‌ಮೆಂಟ್ ರಾಜಕಾರಣ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿ.ಕೆ. ಶಿವಕುಮಾರ್ ಬಗ್ಗೆ ಒಂದು ದಿನವೂ ಗಟ್ಟಿ ಧ್ವನಿಯಲ್ಲಿ ಮಾತನಾಡಿಲ್ಲ. ಆರ್‌ಸಿಬಿ ಟಿಕೆಟ್ ವಿಚಾರದಲ್ಲಿ ಕಾಲ್ತುಳಿತವಾದಾಗಲೂ ಮೌನವಾಗಿದ್ದರು. ಹಿಂದೂ ವಿರೋಧಿ ಬಜೆಟ್ ಮಂಡಿಸಿದಾಗಲೂ ವಿರೋಧಿಸುವ ಬದಲು ಸಿದ್ದರಾಮಯ್ಯನವರನ್ನು ಹೊಗಳಿ ಧನ್ಯವಾದ ಹೇಳಿದರು. ಆಡಳಿತ ಪಕ್ಷದ ತಪ್ಪುಗಳನ್ನು ಪ್ರಶ್ನಿಸದ ಇಂತಹ ವಿರೋಧ ಪಕ್ಷ ಜನರಿಗೆ ಯಾಕೆ ಬೇಕು ಎಂಬ ಪ್ರಶ್ನೆ ಮೂಡಿದೆ,” ಎಂದು ನೇರವಾಗಿ ದಾಳಿ ಮಾಡಿದರು.
ನಾಯಕತ್ವ ಬದಲಾವಣೆಗೆ ಆಗ್ರಹ:
“ಬಿಜೆಪಿ ನಾಯಕತ್ವ ಬದಲಾಗಬೇಕು ಎಂಬುದು ನನ್ನ ಸ್ಪಷ್ಟ ನಿಲುವು. ಸದಾನಂದ ಗೌಡರಂತಹ ಹಿರಿಯರ ಸಲಹೆ ಪಡೆಯುತ್ತೇನೆ ಎಂದು ವಿಜಯೇಂದ್ರ ಹೇಳುವುದು ಸುಳ್ಳು. ಅವರು ಕೇವಲ ತಮ್ಮೇಶ್ ಗೌಡ, ಪ್ರೀತಮ್ ಗೌಡ, ರುದ್ರೇಶ್‌ರಂತಹವರ ಸಲಹೆ ಪಡೆಯುತ್ತಾರೆ ಅಷ್ಟೇ. ಹೀಗಾಗಿ ಇಂತಹ ನಾಯಕತ್ವ ಬದಲಾವಣೆಯಾಗಲೇಬೇಕು,” ಎಂದು ಯತ್ನಾಳ್ ಒತ್ತಾಯಿಸಿದರು.
ಯಕ್ಷಗಾನ ವಿವಾದ:
ಯಕ್ಷಗಾನದಲ್ಲಿ ಸಲಿಂಗಕಾಮಿಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಪುರುಷೋತ್ತಮ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ್, “ಈ ವಿಚಾರಕ್ಕೆ ಸಂಬಂಧಿಸಿದಂತೆ ಯಕ್ಷಗಾನ ಸಂಘದ ಅಧ್ಯಕ್ಷರೇ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದರು.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
ನಿಧನ ವಾರ್ತೆ9 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್14 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ15 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ13 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ14 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ12 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ14 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ8 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















