ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ […]" /> ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ […]"> C.M. Siddaramaiah-ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ; ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ : ಸಿ.ಎಂ.ಸಿದ್ದರಾಮಯ್ಯ - Nikhara News | Kannada News Website
Connect with us

ಸ್ಥಳೀಯ

C.M. Siddaramaiah-ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ; ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ : ಸಿ.ಎಂ.ಸಿದ್ದರಾಮಯ್ಯ

Published

on

Ad Widget

Ad Widget

Ad Widget

Ad Widget

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Ad Widget

Ad Widget

Ad Widget

Ad Widget

ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Ad Widget

Ad Widget <> Ad Widget

ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.

2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ

Ad Widget

Ad Widget

ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಬಗ್ಗೆ ಮಾಡಿದ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.

ಸಂಪುಟ ಪುನರ್ರಚನೆ: ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ

ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ , ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.

ಜನರು ಅಪೇಕ್ಷಿಸುವವರೆಗೆ ಬಜೆಟ್ ಮಂಡನೆ

2028 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು.

ಬೆಂಗಳೂರು ಬ್ಯಾಂಕ್ ದರೋಡೆ :ಅಪರಾಧಿಗಳ ಬಂಧನಕ್ಕೆ ಕ್ರಮ

ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ದರೋಡೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಕಳುವಿನ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು.

ಪ್ರಧಾನಿ ಮೋದಿ ಭೇಟಿ

ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಬಗ್ಗೆ ವಿವರಗಳನ್ನು ಕೇಳಲಾಗಿ, ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು , ಕಾರ್ಖಾನೆ ಮಾಲಿಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!