Connect with us

ಅಂತರ ರಾಜ್ಯ

Sabarimala-ಶಬರಿಮಲೆ: ಭಕ್ತರ ದಟ್ಟಣೆ ನಿಯಂತ್ರಣಕ್ಕೆ ಕಠಿಣ ಕ್ರಮ; ಸ್ಪಾಟ್ ಬುಕ್ಕಿಂಗ್ ಮಿತಿ 5,000ಕ್ಕೆ ಇಳಿಕೆ

Published

on



Ad Widget

Ad Widget

Ad Widget

Ad Widget

ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿ ನಾಲ್ಕು ದಿನಗಳು ಕಳೆದಿವೆ. ಆರಂಭಿಕ ಜನಸಂದಣಿಯ ಸವಾಲುಗಳ ಬಳಿಕ, ಇದೀಗ ಶಬರಿಮಲೆ ಆಡಳಿತ ವ್ಯವಸ್ಥೆಯು ಭಕ್ತರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಕೊಂಚ ಯಶಸ್ವಿಯಾಗಿದೆ. ಸುಗಮ ದರ್ಶನಕ್ಕಾಗಿ ಹೈಕೋರ್ಟ್ ನಿರ್ದೇಶನದನ್ವಯ ಸ್ಪಾಟ್ ಬುಕ್ಕಿಂಗ್ (ಸ್ಥಳದಲ್ಲೇ ನೋಂದಣಿ) ಮಿತಿಯನ್ನು ಕಡಿತಗೊಳಿಸಲಾಗಿದೆ.

Ad Widget

Ad Widget

Ad Widget

Ad Widget

ಶಬರಿಮಲೆ: ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿ ನಾಲ್ಕು ದಿನಗಳು ಕಳೆದಿವೆ. ಆರಂಭಿಕ ಜನಸಂದಣಿಯ ಸವಾಲುಗಳ ಬಳಿಕ, ಇದೀಗ ಶಬರಿಮಲೆ ಆಡಳಿತ ವ್ಯವಸ್ಥೆಯು ಭಕ್ತರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಕೊಂಚ ಯಶಸ್ವಿಯಾಗಿದೆ. ಸುಗಮ ದರ್ಶನಕ್ಕಾಗಿ ಹೈಕೋರ್ಟ್ ನಿರ್ದೇಶನದನ್ವಯ ಸ್ಪಾಟ್ ಬುಕ್ಕಿಂಗ್ (ಸ್ಥಳದಲ್ಲೇ ನೋಂದಣಿ) ಮಿತಿಯನ್ನು ಕಡಿತಗೊಳಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸ್ಪಾಟ್ ಬುಕ್ಕಿಂಗ್‌ಗೆ ಕತ್ತರಿ:
ಹೈಕೋರ್ಟ್ ಆದೇಶದ ಪ್ರಕಾರ, ನವೆಂಬರ್ 24ರವರೆಗೆ ದೈನಂದಿನ ಸ್ಪಾಟ್ ಬುಕ್ಕಿಂಗ್ ಮಿತಿಯನ್ನು 20,000 ದಿಂದ 5,000ಕ್ಕೆ ಇಳಿಸಲಾಗಿದೆ. ಭಕ್ತರು ಹೆಚ್ಚಾಗಿ ವರ್ಚುವಲ್ ಕ್ಯೂ (Virtual Queue) ಮೂಲಕ ಸ್ಲಾಟ್ ಕಾಯ್ದಿರಿಸಿಕೊಂಡೇ ದರ್ಶನಕ್ಕೆ ಆಗಮಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿ ಮನವಿ ಮಾಡಿದೆ.

Ad Widget

Ad Widget <> Ad Widget

ಪ್ರಸ್ತುತ ನೀಲಕ್ಕಲ್ ಮತ್ತು ವಂಡಿಪೆರಿಯಾರ್‌ನಲ್ಲಿ ಮಾತ್ರ ಸ್ಪಾಟ್ ಬುಕಿಂಗ್ ಲಭ್ಯವಿದ್ದು, ಪಂಪಾ, ಎರುಮೇಲಿ ಮತ್ತು ಚೆಂಗನ್ನೂರಿನಲ್ಲಿ ಈ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದಾಗ್ಯೂ, ಗುರುವಾರ ಬೆಳಿಗ್ಗೆ ಪಂಪಾದಲ್ಲಿರುವ ಕೌಂಟರ್‌ಗಳ ಮುಂದೆ ಅನ್ಯ ರಾಜ್ಯದ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದು ಗೊಂದಲಕ್ಕೆ ಕಾರಣವಾಗಿತ್ತು. ನಿಗದಿತ ಪಾಸ್‌ಗಳು ಖಾಲಿಯಾದ ನಂತರವೂ ಜನರು ಕಾಯುತ್ತಿರುವುದು ಕಂಡುಬಂತು.



Ad Widget

ಆರಂಭಿಕ ನ್ಯೂನತೆಗಳ ಪರಿಹಾರ – ಎಡಿಎಂ ಸ್ಪಷ್ಟನೆ:
ಸನ್ನಿಧಾನದಲ್ಲಿ ಉಂಟಾಗಿದ್ದ ವಿಪರೀತ ದಟ್ಟಣೆ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಉನ್ನತ ಮಟ್ಟದ ಪರಿಶೀಲನಾ ಸಭೆ ಜರಗಿತು. ಸಭೆಯ ಬಳಿಕ ಮಾತನಾಡಿದ ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ (ಎಡಿಎಂ) ಡಾ. ಅರುಣ್ ಎಸ್. ನಾಯರ್, “ಶಬರಿಮಲೆಯಲ್ಲಿ ಜನದಟ್ಟಣೆಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಗಿದೆ. ಯಾತ್ರೆಯ ಆರಂಭದ ದಿನಗಳಲ್ಲಿ ಕಂಡುಬಂದಿದ್ದ ಸಣ್ಣಪುಟ್ಟ ನ್ಯೂನತೆಗಳನ್ನು ಸರಿಪಡಿಸಲಾಗಿದೆ,” ಎಂದು ಸ್ಪಷ್ಟಪಡಿಸಿದರು.

Ad Widget

Ad Widget

ಭಕ್ತರಿಗೆ ಸೂಚನೆಗಳು:
*ತುರ್ತು ವೈದ್ಯಕೀಯ ನೆರವು, ನೈರ್ಮಲ್ಯ, ಕುಡಿಯುವ ನೀರು ಮತ್ತು ಆಹಾರ ಪೂರೈಕೆಗೆ ಆದ್ಯತೆ ನೀಡಲಾಗಿದೆ.
*ವರ್ಚುವಲ್ ಕ್ಯೂ ಮೂಲಕ ಬುಕ್ಕಿಂಗ್ ಮಾಡಿದ ಭಕ್ತರು ತಮಗೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಹಾಜರಾಗಬೇಕು.
*ದರ್ಶನವನ್ನು ಸುಗಮಗೊಳಿಸಲು ಭಕ್ತರು ದೇವಸ್ವಂ ಮಂಡಳಿ ಹಾಗೂ ಪೊಲೀಸ್ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆಡಳಿತ ಮಂಡಳಿ ಕೋರಿದೆ.

Ad Widget
Click to comment

Leave a Reply

ನಿಧನ ವಾರ್ತೆ

Accident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು

Published

on



Ad Widget

Ad Widget

Ad Widget

Ad Widget

ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.

Ad Widget

Ad Widget

Ad Widget

Ad Widget

ಸುಲ್ತಾನ್‌ಪುರ (ಉತ್ತರ ಪ್ರದೇಶ): ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಯೋಧ್ಯೆ-ಸುಲ್ತಾನ್‌ಪುರ ಗಡಿಯಲ್ಲಿರುವ ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 79.6ನೇ ಕಿಲೋಮೀಟರ್ ಬಳಿ ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.

Ad Widget

Ad Widget <> Ad Widget

ಡಿಯೋರಿಯಾ ಜಿಲ್ಲೆಯ ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಲಿಯಾ ದುದೈಲಾ ಗ್ರಾಮದ ನಿವಾಸಿ ಸುಬೇದಾರ್ ಮೇಜರ್ ಸತ್ಯವಾನ್ ಅವರು ಚಂಡೀಗಢದಲ್ಲಿ ನಿಯೋಜನೆಗೊಂಡಿದ್ದರು. ಇತ್ತೀಚೆಗೆ ಅವರು ಮೃತಪಟ್ಟಿದ್ದು, ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿತ್ತು.



Ad Widget

ಆಂಬ್ಯುಲೆನ್ಸ್‌ನಲ್ಲಿ ಸತ್ಯವಾನ್ ಅವರ ಮಗ ಗೌರವ್ ಸಿಂಗ್, ಸಹೋದರ ರಾಜನ್ ಚೌಧರಿ, ಸೋದರಳಿಯ ರಾಮ್ ಸಂಜು ಸಿಂಗ್ ಹಾಗೂ ಚಾಲಕ ಜಸ್ಪಾಲ್ ಪ್ರಯಾಣಿಸುತ್ತಿದ್ದರು.

Ad Widget

Ad Widget

ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗೌರವ್ ಸಿಂಗ್ ಹಾಗೂ ಚಾಲಕ ಜಸ್ಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ರಾಜನ್ ಚೌಧರಿ ಹಾಗೂ ರಾಮ್ ಸಂಜು ಸಿಂಗ್ ಅವರನ್ನು ಅಯೋಧ್ಯೆಯ ಕುಮಾರ್‌ಗಂಜ್‌ನ ಸಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಪೊಲೀಸ್ ಠಾಣೆ ಆವರಣದಲ್ಲಿ ಯೋಧರ ಪೂರ್ಣ ಗೌರವದೊಂದಿಗೆ ಇರಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವುದರ ಜೊತೆಗೆ ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Honeytrap-ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಹಸ್ಯ ಮಾಹಿತಿ ಸೋರಿಕೆ ಮಾಡಿದ ನೌಕಾಪಡೆ ಸಿಬ್ಬಂದಿ ಬಂಧನ

Published

on



Ad Widget

Ad Widget

Ad Widget

Ad Widget

ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕೊಯಮತ್ತೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ (31) ಎಂದು ಗುರುತಿಸಲಾಗಿದೆ. 2014ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿದ್ದ ಮುಖರ್ಜಿ, ವಿಶಾಖಪಟ್ಟಣದಲ್ಲಿರುವ ಈಸ್ಟರ್ನ್ ನೇವಲ್ ಕಮಾಂಡ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಕೆಲವು ತಿಂಗಳ ಹಿಂದೆ ಪಾಕಿಸ್ತಾನದ ಗುಪ್ತಚರ ಏಜೆಂಟ್ ಎಂದು ಶಂಕಿಸಲಾಗಿರುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಮುಖರ್ಜಿಯನ್ನು ಸಂಪರ್ಕಿಸಿದ್ದಳು. ಬಳಿಕ ಆಕೆಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ ಆತ, ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಆಕೆಗೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.



Ad Widget

ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Ad Widget

ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಆರೋಪ: ಅಸ್ಸಾಂನಲ್ಲಿ ಇಬ್ಬರ ಬಂಧನ

ಗುವಾಹಟಿ: ಪಾಕಿಸ್ತಾನಕ್ಕೆ ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಬ್ಬರು ನಿವೃತ್ತ ಯೋಧ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಬಂಧಿತರನ್ನು ಶೀಘ್ರದಲ್ಲೇ ಕೇಂದ್ರ ತನಿಖಾ ಸಂಸ್ಥೆಗಳ ವಶಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Ad Widget
Continue Reading

ಅಂತರ ರಾಜ್ಯ

Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್

Published

on



Ad Widget

Ad Widget

Ad Widget

Ad Widget

ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.

Ad Widget

Ad Widget

Ad Widget

Ad Widget

ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.



Ad Widget

ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.

Ad Widget

Ad Widget

ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.

ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.

ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.‌

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading