Connect with us

ಸ್ಥಳೀಯ

Yatnal-ಡಿಕೆಶಿ ಸಿಎಂ, ವಿಜಯೇಂದ್ರ ಡಿಸಿಎಂ ಆದರೆ ಉಸಿರಾಡುವ ಗಾಳಿಗೂ ಟ್ಯಾಕ್ಸ್ ಫಿಕ್ಸ್: ಯತ್ನಾಳ್ ವ್ಯಂಗ್ಯ

Published

on

Ad Widget

Ad Widget

Ad Widget

Ad Widget

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸದಿದ್ದರೆ ಹೊಸ ಪಕ್ಷ ಕಟ್ಟಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್‌ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Ad Widget

Ad Widget

Ad Widget

Ad Widget

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಕೆಳಗಿಳಿಸದಿದ್ದರೆ ಹೊಸ ಪಕ್ಷ ಕಟ್ಟಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್‌ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Ad Widget

Ad Widget alt="Ad Widget"/>

Ad Widget

ಯತ್ನಾಳ್ ಆರೋಪಗಳೇನು?
ಪಕ್ಷ ದುರ್ಬಲ: ವಿಜಯೇಂದ್ರ ಚುಕ್ಕಾಣಿ ಹಿಡಿದ ನಂತರ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ದುರ್ಬಲವಾಗಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿನ ಹೀನಾಯ ಸೋಲೇ ಇದಕ್ಕೆ ಸಾಕ್ಷಿ.
ಕೃತಕ ಸನ್ಮಾನ: ವಿಜಯೇಂದ್ರ ನಾಲ್ಕಾರು ಬೆಂಬಲಿಗರನ್ನು ಸುತ್ತಿಟ್ಟುಕೊಂಡು ರಾಜ್ಯ ಸುತ್ತುತ್ತಿದ್ದಾರೆ. ಕಾರಿನ ಡಿಕ್ಕಿಯಲ್ಲೇ ಹಾರ, ಶಾಲು ಇಟ್ಟುಕೊಂಡು ತಮಗೆ ತಾವೇ ಸನ್ಮಾನ ಮಾಡಿಸಿಕೊಳ್ಳುತ್ತಾ, ಬೆಂಬಲಿಗರಿಂದ ಜೈಕಾರ ಹಾಕಿಸಿಕೊಳ್ಳುತ್ತಿದ್ದಾರೆ.
ತಾರತಮ್ಯ: ಪಕ್ಷದ ನಿಷ್ಠಾವಂತರೆನಿಸಿಕೊಂಡವರಿಗೆ ಮನ್ನಣೆ ಇಲ್ಲ. ಕೇವಲ ತಮ್ಮ ಹಿಂಬಾಲಕರನ್ನೇ ಆಯ್ದು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿಕೊಳ್ಳುತ್ತಿದ್ದಾರೆ.

Ad Widget

Ad Widget <> Ad Widget

ಹೊಸ ಪಕ್ಷದ ಸುಳಿವು:
“ರಾಜ್ಯದಲ್ಲಿ ಹಿಂದುತ್ವದ ಅಲೆ ಜೋರಾಗಿದೆ. ಒಂದು ವೇಳೆ ನಾವು ಹೊಸ ಪಕ್ಷ ಕಟ್ಟಿದರೆ ಬಿಜೆಪಿಯ ಮೂಲ ನಿಷ್ಠಾವಂತರು ನಮ್ಮೊಂದಿಗೆ ಬರುತ್ತಾರೆ. ಆಗ ನಿರೀಕ್ಷೆಗೂ ಮೀರಿದ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ,” ಎಂದು ಯತ್ನಾಳ್ ವಿಶ್ವಾಸ ವ್ಯಕ್ತಪಡಿಸಿದರು.

ಡಿಕೆಶಿ-ವಿಜಯೇಂದ್ರ ಮೈತ್ರಿ ಬಗ್ಗೆ ಲೇವಡಿ:
“ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದು ಸಿಎಂ ಆದರೆ, ವಿಜಯೇಂದ್ರ ಡಿಸಿಎಂ ಆಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಂದು ವೇಳೆ ಇದೇನಾದರೂ ನಿಜವಾದರೆ ರಾಜ್ಯದ ನೈಸರ್ಗಿಕ ಸಂಪತ್ತು ಉಳಿಯುವುದಿಲ್ಲ. ಜನ ಉಸಿರಾಡುವ ಗಾಳಿಗೂ ತೆರಿಗೆ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ,” ಎಂದು ಗಂಭೀರ ಆರೋಪ ಮಾಡಿದರು.

Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!