Connect with us

ಬಿಗ್ ನ್ಯೂಸ್

Puttur-ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್‌ಗೆ ಹಾನಿ; ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ: ದೂರು ನೀಡದ ಸಂಘಟಕರು – ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ

Published

on



Ad Widget

Ad Widget

Ad Widget

Ad Widget

ನವೆಂಬರ್ 29ರಂದು ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪ್ರಚಾರಕ್ಕಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಅಳವಡಿಸಿದ್ದ ಎರಡು ಬ್ಯಾನರ್‌ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ಸಂಘಟಕರಾದ ಪುತ್ತಿಲ ಪರಿವಾರ ಮತ್ತು ಕಲ್ಯಾಣೋತ್ಸವ ಸಮಿತಿಯ ಸದಸ್ಯರು ಇಂದು (ನ. 22) ದೈವಸ್ಥಾನದ ಭಂಡಾರದ ಮನೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ನವೆಂಬರ್ 29ರಂದು ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪ್ರಚಾರಕ್ಕಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಅಳವಡಿಸಿದ್ದ ಎರಡು ಬ್ಯಾನರ್‌ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ಸಂಘಟಕರಾದ ಪುತ್ತಿಲ ಪರಿವಾರ ಮತ್ತು ಕಲ್ಯಾಣೋತ್ಸವ ಸಮಿತಿಯ ಸದಸ್ಯರು ಇಂದು (ನ. 22) ದೈವಸ್ಥಾನದ ಭಂಡಾರದ ಮನೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

Ad Widget

Ad Widget

Ad Widget alt="Ad Widget"/>

Ad Widget

​ಸೀಯಾಳ-ಮಲ್ಲಿಗೆ ಸಮರ್ಪಣೆ, ಸದ್ಬುದ್ಧಿಗೆ ಪ್ರಾರ್ಥನೆ
ಸಮಿತಿಯ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಬೆಂಬಲಿಗರು ಒಗ್ಗೂಡಿ, ಸೀಯಾಳ ಮತ್ತು ಮಲ್ಲಿಗೆ ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಈ ಧಾರ್ಮಿಕ ಕಾರ್ಯಕ್ರಮದ ಬ್ಯಾನರ್‌ಗೆ ಹಾನಿ ಉಂಟುಮಾಡಿದ ದುಷ್ಕರ್ಮಿಗಳ ಕೃತ್ಯ ಶೀಘ್ರದಲ್ಲಿ ಬಯಲಾಗಲಿ ಹಾಗೂ ಅವರಿಗೆ ಭಗವಂತನು ಸದ್ಬುದ್ಧಿ ನೀಡಲಿ ಎಂದು ಇದೇ ವೇಳೆ ಪ್ರಾರ್ಥಿಸಲಾಯಿತು.

Ad Widget

Ad Widget <> Ad Widget

​ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿ ರೂಪೇಶ್, ಜೊತೆ ಕಾರ್ಯದರ್ಶಿ ರಾಜು ಶೆಟ್ಟಿ, ವೈದಿಕ ಸಮಿತಿ ಸಂಚಾಲಕ ಗುರುತಂತ್ರಿ, ಸ್ವಾಗತ ಸಮಿತಿ ಅಧ್ಯಕ್ಷ ಭೀಮಯ್ಯ ಭಟ್, ಸಂಚಾಲಕ ಅನಿಲ್ ತೆಂಕಿಲ, ಪ್ರಜ್ವಲ್ ಘಾಟೆ ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.



Ad Widget

​’ದುರಂತದ ಸನ್ನಿವೇಶ’ ಎಂದು ಅರುಣ್ ಪುತ್ತಿಲ ಆಕ್ರೋಶ

Ad Widget

Ad Widget

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು, ಈ ಘಟನೆ ನೋವು ತಂದಿದೆ ಎಂದರು. “ಧಾರ್ಮಿಕ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುವ ಇಂತಹ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಹಿಂದೂ ಸಮಾಜಕ್ಕೆ ದೊಡ್ಡ ದುರಂತ ಸನ್ನಿವೇಶವನ್ನು ತಂದೊಡ್ಡಲಿವೆ,” ಎಂದು ಆತಂಕ ವ್ಯಕ್ತಪಡಿಸಿದರು.

​ಹಾನಿ ಮಾಡಿದ ದುಷ್ಕರ್ಮಿಗಳಿಗೆ ತಾಯಿ ತಕ್ಕ ಶಾಸ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ ಅವರು, ಘಟನೆಯ ಸಮಯದ ಬಗ್ಗೆ ಸ್ಪಷ್ಟನೆ ನೀಡಿದರು. “ನಿನ್ನೆ ರಾತ್ರಿ ಬಲ್ನಾಡಿನಲ್ಲಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡ ಎರಡು ಹಸುಗಳಿಗೆ ವೈದ್ಯರಿಂದ ಚಿಕಿತ್ಸೆ ಕೊಡಿಸಿ ವಾಪಸ್ ಹೋಗುವಾಗ ರಾತ್ರಿ ಸುಮಾರು 1 ಗಂಟೆಯಾಗಿತ್ತು. ಆ ಸಮಯದವರೆಗೆ ಬ್ಯಾನರ್‌ಗೆ ಯಾವುದೇ ಹಾನಿಯಾಗಿರಲಿಲ್ಲ,” ಎಂದು ತಿಳಿಸಿದರು.

​ಠಾಣೆಗೆ ದೂರು ನೀಡದ ಸಂಘಟಕರು

ಬ್ಯಾನರ್‌ಗೆ ಹಾನಿ ಮಾಡಿರುವುದರ ಕುರಿತು ಠಾಣೆಗೆ ಈತನಕ ಯಾವುದೇ ದೂರು ಬಂದಿಲ್ಲ ಎಂದು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಖಚಿತಪಡಿಸಿದ್ದಾರೆ. ಆದಾಗ್ಯೂ, ಬ್ಯಾನರ್ ಹಾನಿಗೊಳಗಾದ ವಿಚಾರವು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಬೇಕು ಎಂಬ ಆಗ್ರಹ ಪುತ್ತಿಲ ಪರಿವಾರದ ಬೆಂಬಲಿಗರಿಂದ ವ್ಯಕ್ತವಾಗಿದೆ.

​’ಪಕ್ಷ ಕೊಟ್ಟದ್ದು ಕಣ್ಣೀರು ಮಾತ್ರ’
ಇನ್ನೊಂದೆಡೆ, ಅರುಣ್ ಪುತ್ತಿಲ ಅವರ ಆಪ್ತಬಳಗದಲ್ಲಿ ಗುರುತಿಸಿಕೊಂಡಿರುವ ಮನೀಶ್ ಎಂಬುವವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಅದರಲ್ಲಿ, “ಕಳೆದ ಹತ್ತು ಹಲವಾರು ವರ್ಷಗಳಿಂದ ಹಿಂದೂ ಸಮಾಜಕ್ಕಾಗಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿರುವ ಅರುಣಣ್ಣನಿಗೆ ಪಕ್ಷ ಕೊಟ್ಟದ್ದು ಕಣ್ಣೀರು ಮಾತ್ರ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

​”ಇದೆಲ್ಲಾ ಇರಲಿ ಬಿಡಿ ಎಂದು ಮುಂದಕ್ಕೆ ನಡೆದರೆ, ಅರುಣಣ್ಣನ ಮುಂದಾಳತ್ವದಲ್ಲಿ ನಡೆಯುತ್ತಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹರಿದು ಕೆಲವು ಕಿಡಿಗೇಡಿಗಳು ಧಾರ್ಮಿಕ ಕಾರ್ಯಕ್ರಮದಲ್ಲೂ ಇಷ್ಟು ವಿಕೃತಿ ಮೆರೆದಿದ್ದಾರೆ ಎಂದರೆ ನಂಬಲು ಸಾಧ್ಯವೇ?” ಎಂದು ಬರೆದುಕೊಂಡಿದ್ದಾರೆ.

​ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಘಟನೆಯನ್ನು ಬಳಸಿಕೊಂಡು ಯಾರೊಬ್ಬರ ಮೇಲೆ ವಿನಾಕಾರಣ ಸಾಮಾಜಿಕ ಜಾಲತಾಣದಲ್ಲಿ ಆರೋಪ ಹೊರಿಸುವ ಮೂಲಕ ಒಡಕು ಮೂಡಿಸುವ ಬದಲು, ಈ ಕುರಿತು ಪೊಲೀಸ್ ದೂರು ಕೊಟ್ಟು ನಿಜವಾದ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು ಎಂದು ಇನ್ನು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

Supreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!

Published

on



Ad Widget

Ad Widget

Ad Widget

Ad Widget

ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರತಿಭಟನೆಯಿಂದ ಹಬ್ಬದ ವ್ಯಾಪಾರಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದ ವರ್ತಕರು, ಪ್ರತಿಭಟನೆಗೆ ತಡೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಈ ಮನವಿಯ ವಿಚಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ವಿವೇಕವನ್ನು ಪ್ರತಿಭಟನಾಕಾರರು ಹೊಂದಿರುತ್ತಾರೆ ಎಂದು ಆಶಿಸಿರುವುದಾಗಿ ತಿಳಿಸಿದೆ.



Ad Widget

ಹಬ್ಬದ ಸಂದರ್ಭದಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂಬ ವರ್ತಕರ ಆತಂಕದ ನಡುವೆಯೇ, ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ನಿರ್ಬಂಧಗಳನ್ನು ವಿಧಿಸಲು ನ್ಯಾಯಾಲಯ ನಿರಾಕರಿಸಿರುವುದು ಗಮನ ಸೆಳೆದಿದೆ.

Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ

Published

on



Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯು ಮುಂಭಾಗದಲ್ಲಿದ್ದ ಕಾರನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಲಾರಿಯು ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿದೆ.

Ad Widget

Ad Widget <> Ad Widget

ಅಪಘಾತದಿಂದಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಸಾರ್ವಜನಿಕರು ಹಾಗೂ ಹಾದಿಹೋಕರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ.
ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡು, ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಬಳಸಿ ರಸ್ತೆಯಲ್ಲಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



Ad Widget
Ad Widget
Continue Reading

ಅಂತರ ರಾಜ್ಯ

Supreme Court-ಇಸ್ಲಾಂಗೆ ಮತಾಂತರಗೊಂಡ ಬಳಿಕ ಹಿಂದುಳಿದ ವರ್ಗಗಳ ಮೀಸಲಾತಿಯಿಲ್ಲ; ಸುಪ್ರೀಂಕೋರ್ಟ್

Published

on



Ad Widget

Ad Widget

Ad Widget

Ad Widget

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ. ಮತಾಂತರದ ನಂತರ ವ್ಯಕ್ತಿಯ ಸಾಮಾಜಿಕ ವರ್ಗದ ಸ್ಥಾನಮಾನ ಮತ್ತು ಮೀಸಲಾತಿ ಅರ್ಹತೆಯನ್ನು ಅನ್ವಯಿಸುವ ಕುರಿತು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

Ad Widget

Ad Widget <> Ad Widget

ಮೀಸಲಾತಿ ಅರ್ಹತೆ ಕುರಿತು ನ್ಯಾಯಾಲಯದ ಅಭಿಪ್ರಾಯ
ಮತಾಂತರ ಪೂರ್ವದ ಜಾತಿ ಅಥವಾ ಸಮುದಾಯದ ಸ್ಥಿತಿಯನ್ನು, ಮತಾಂತರದ ನಂತರದ ವ್ಯವಸ್ಥೆಯಲ್ಲಿ ಅಧಿಸೂಚಿತ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿಸಲು ಸಾಧ್ಯವಿಲ್ಲ.
ಹಿಂದುಳಿದ ವರ್ಗದಿಂದ, ಇಸ್ಲಾಂ ಅಥವಾ ಹಿಂದೂಯೇತರ ಜಾತಿಗೆ ಕನ್ವರ್ಟ್ ಆಗಲು ಇದ್ದಂತಹ ಪರಿಸ್ಥಿತಿಯು ಏನೇ ಇದ್ದರೂ, ಮತಾಂತರದ ನಂತರ ಬೇರೊಂದು ಹಿಂದುಳಿದ ವರ್ಗದ ಸದಸ್ಯತ್ವನ್ನು ನೀಡಲು ಕಾನೂನಾತ್ಮಕವಾಗಿ ಸಾಧ್ಯವಿಲ್ಲ.



Ad Widget

ಸಂವಿಧಾನದ ಪರಿಶಿಷ್ಟ ಜಾತಿಗಳ ಆದೇಶದ ಪ್ರಕಾರ, ಹಿಂದೂ, ಸಿಖ್ ಅಥವಾ ಬೌದ್ದ ಧರ್ಮವನ್ನು ಹೊರತು ಪಡಿಸಿ ಇತರ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ (SC) ಸದಸ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ.

Ad Widget

Ad Widget

ಈ ಮೂರು ಜಾತಿಯನ್ನು ಹೊರತು ಪಡಿಸಿ, ಇತರ ಧರ್ಮಕ್ಕೆ ಮತಾಂತರಗೊಂಡ ತಕ್ಷಣವೇ ಆ ವ್ಯಕ್ತಿಯ ಪರಿಶಿಷ್ಠ ಜಾತಿಯ ಸದಸ್ಯತ್ವಕ್ಕೆ ಆಧರಿಸಿ ಇರುವ ಮೀಸಲಾತಿ ವಿಧಿ 16(4) ಮತ್ತು ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾನೆ.

ಒಂದು ವೇಳೆ, ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡು, ನಂತರ ಮತ್ತೆ ಹಿಂದೂ ಧರ್ಮಕ್ಕೆ ಕನ್ವರ್ಟ್ ಆದರೆ, ಮರುಮತಾಂತರದ ನಂತರ ಮೀಸಲಾತಿ ಆಟೊಮೆಟಿಕ್ ಆಗಿ ಬರುವುದಿಲ್ಲ. ಮರುಮತಾಂತರ ನಂತರದ ಆತನ ಮೂಲ ಜಾತಿಯ ದಾಖಲೆಗಳು ಬದಲಾಗಿರುವುದು ಮುಖ್ಯ.

ಇಸ್ಲಾಂ, ಕ್ರಿಶ್ಚಿಯನ್ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ನಂತರ, ಶಾಸನಬದ್ದ ಸೌಲಭ್ಯ, ರಕ್ಷಣೆ, ಮೀಸಲಾತಿ, ಅರ್ಹತೆಯನ್ನು, ಕನ್ವರ್ಟ್ ಆಗುವ ಮುನ್ನ ಇದ್ದ ಸಾಂವಿಧಾನಿಕ ಆಧಾರದ ಮೇಲೆ ಪಡೆಯಲು ಸಾಧ್ಯವಿಲ್ಲ.

ಪ್ರಕರಣದ ಹಿನ್ನೆಲೆ ಏನು?
ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು ಅಥವಾ ಪರಿಶಿಷ್ಟ ಜಾತಿಗಳಿಗೆ ಸೇರಿದ ವ್ಯಕ್ತಿಗಳು ಇಸ್ಲಾಂ ಅಥವಾ ಇತರ ಹಿಂದೂಯೇತರ ಧರ್ಮಕ್ಕೆ ಮತಾಂತರಗೊಂಡ ಬಳಿಕವೂ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ ಪಡೆಯಲು ಅವಕಾಶ ನೀಡುವ ಸಂಬಂಧ ತಮಿಳುನಾಡು ಸರ್ಕಾರ 2024ರಲ್ಲಿ ಸರ್ಕಾರಿ ಆದೇಶ ಹೊರಡಿಸಿತ್ತು ಎನ್ನಲಾಗಿದೆ.

ಈ ಆದೇಶವನ್ನು ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಸರ್ಕಾರದ ಆದೇಶವನ್ನು ಅಸಂವಿಧಾನಿಕ ಎಂದು ಪರಿಗಣಿಸಿತ್ತು. ಈ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಮುಸ್ಲಿಂ ಹಿಂದುಳಿದ ವರ್ಗಗಳ ಪಟ್ಟಿ
1993ರ ಸರ್ಕಾರಿ ಆದೇಶದಡಿ ಮುಸ್ಲಿಂ ಸಮುದಾಯದ ಏಳು ವಿಭಾಗಗಳನ್ನು ಗುರುತಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳೆಂದರೆ ಅನ್ಸಾರ್, ಡೆಕ್ಕನಿ ಮುಸ್ಲಿಮರು, ದುಬೇಕುಲ, ಲಬ್ಬೈ, ಮಾಪಿಳೈ, ಶೇಕ್ ಮತ್ತು ಸೈಯದ್.

ಮತಾಂತರದ ಬಳಿಕ ವ್ಯಕ್ತಿಯ ಸಾಮಾಜಿಕ ವರ್ಗದ ಗುರುತು ಮತ್ತು ಮೀಸಲಾತಿ ಅರ್ಹತೆಯನ್ನು ಹೇಗೆ ನಿರ್ಧರಿಸಬೇಕು ಎಂಬ ವಿಚಾರದಲ್ಲಿ ಈ ಪ್ರಕರಣ ಮಹತ್ವ ಪಡೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading