ಮಂಗಳೂರು
ಇಂದಿಗೂ ದೈವದ ನುಡಿಯನ್ನು ಅಲ್ಲಗಳೆದು ಮುಂದಡಿ ಇಟ್ಟವರಿಗೆ ಉಳಿಗಾಲವಿಲ್ಲ – ದೈವ ಮತ್ತು ಶ್ರೀಸಾಮಾನ್ಯನಿಗಿರುವ ಸಂಬಂಧ, ತಾಯಿ ಹಾಗೂ ಮಗುವಿನ ಸಂಬಂಧದಂತೆ : ಇದು ಈ ತುಳುನಾಡಿನ ವಿಶೇಷತೆ – ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್
ಮಂಗಳೂರು ನ22:
ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಉಮೇಶ್ ಪಂಬದ ಸನ್ಮಾನ ಸಮಿತಿ, ಜಾರಪ್ಪ ಪಂಬದ ಸಂಸ್ಮರಣಾ ಸಮಿತಿ ಮತ್ತು ಅರಸು ಧರ್ಮ ಜಾರಂದಾಯ, ಬಂಟ ಮತ್ತು ವಾರಾಹಿ ದೇವಸ್ಥಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಉಮೇಶ್ ಪಂಬದ ಮತ್ತಿತರರನ್ನು ಸನ್ಮಾನಿಸಿ ಮಾತನಾಡಿದರು.
ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ ಎಂಬುದು ಸದಾ ಕಾಲದ ನಂಬಿಕೆಯೇ ಆಗಿದೆ ಎಂದರು.
ಸರ್ಕಾರಿ ಕೆಲಸವನ್ನು ಬಿಟ್ಟು ಉಮೇಶ್ ಪಂಬದ ಅವರು ದೈವದ ಚಾಕರಿಗೆ ನಿಂತು, ದೈವವಾಡುವ ನುಡಿಗಳನ್ನಾಡುತ್ತಲೇ ಪರೋಕ್ಷವಾಗಿ ಹಲವು ಕುಟುಂಬಗಳಿಗೆ ಸಂತೈಸುವ ಶಕ್ತಿಯಾಗಿದ್ದಾರೆ. ಇಂಥವರನ್ನು ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಅತ್ಯಂತ ಔಚಿತ್ಯಪೂರ್ಣ ಸಂಗತಿ ಎಂದರು.
ದೈವವೆಂಬುದು ಕುಟುಂಬದ ಬೆನ್ನಿಗೆ ಸದಾ ನಿಂತು ಸಂತೈಸುವ, ಮುನ್ನಡೆಸುವ ಶಕ್ತಿ. ಇಂಥ ‘ಮಾಯಕ’ ಶಕ್ತಿಯನ್ನು ಪಡೆದು, ಅದನ್ನು ಆರಾಧಿಸುತ್ತಿರುವುದು ದಕ್ಷಿಣದ ಕನ್ನಡದ ಹಿರಿಮೆಗಳಲ್ಲಿ ಒಂದಾಗಿದೆ ಎಂದರು.
ಇಂದಿಗೂ ದೈವದ ನುಡಿಯನ್ನು ಅಲ್ಲಗಳೆದು ಮುಂದಡಿ ಇಟ್ಟವರಿಗೆ ಉಳಿಗಾಲವಿಲ್ಲ ಎಂಬುದು ಈ ಭಾಗದಲ್ಲಿ ಜನಜನಿತ. ಸತ್ಯ, ನ್ಯಾಯ ಹಾಗೂ ಸಮಾನತೆಗೆ ಕಟ್ಟಿಬದ್ಧವಾಗಿರುವ ದೈವಗಳು ನಮ್ಮೊಳಗಿನ ಚೇತನಗಳು. ಈ ಚೇತನಗಳನ್ನು ಎಂದಾದರೂ ಮೀರಿ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
‘ನಾನಿದ್ದೇನೆ ಚಿಂತೆ ಬಿಡು’ ಎಂದು ದೈವವಾಡುವ ಮಾತು ಎಂಥ ಪರಿಸ್ಥಿತಿಯಲ್ಲಿದ್ದವರನ್ನೂ ಧೈರ್ಯಸ್ಥರನ್ನಾಗಿ ಮಾಡುತ್ತದೆ. ಹಿರಿಯರಿಲ್ಲದ, ಸಾಂತ್ವನಕ್ಕೆ ಹೆಗಲೇ ಇಲ್ಲದವರಿಗೂ ದೈವ ತಾನಿದ್ದೇನೆ ಎಂದು ಭರವಸೆ ಕೊಡುವುದು, ಅಸಹಾಯಕರ ಪರವಾಗಿ ನಿಲ್ಲುವುದರ ಹಿಂದೆಯೂ ಸಮಾನತೆ ಹಾಗೂ ಅಂತಃಕರಣದ ಆಶಯವೇ ಅಡಗಿದೆ ಎಂದರು.
ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಜಾರಂದಾಯ ದೈವದ ನೇಮ ಕಟ್ಟುವ ಹಾಗೂ ಇತರ ಪ್ರಮುಖ ದೈವಸ್ಥಾನಗಳಲ್ಲಿ ದೈವ ಚಾಕರಿಯನ್ನು ಉಮೇಶ್ ಪಂಬದ ಅವರು ನಿಷ್ಠೆಯಿಂದ ಮಾಡಿಕೊಂಡು ಬಂದಿದ್ದಾರೆ. ಅವರ ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಇಲ್ಲಿ ಸೇರಿರುವ ಜನರೇ ಸಾಕ್ಷಿ.
ಆಧುನೀಕರಣದ ಹಲವು ಒತ್ತಡಗಳ ನಡುವೆ ದೈವ ನರ್ತನವೆಂಬ ಕಲೆಗೆ ಯಾವ ಆಪತ್ತು ಒದಗಿ ಬಾರದಂತೆ ನೋಡಿಕೊಳ್ಳಬೇಕಿದೆ. ನೇಮ, ಕೋಲಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಮನಸ್ಸುಗಳಿರುವಾಗ, ದೈವ ನರ್ತಕರ ಬದುಕನ್ನು ಒಪ್ಪಗೊಳಿಸುವ ಕಾರ್ಯಕ್ಕೂ ಇಂಥ ಸಹೃದಯರ ನೆರವು ಪಡೆಯುವ ಕೆಲಸ ಆಗಬೇಕಿದೆ ಎಂದು ಕರೆ ನೀಡಿದರು.
ಪಂಬದ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ರಿಷಬ್ ಶೆಟ್ಟಿ ನನಗೆ ಆತ್ಮೀಯರು. ಕಾಂತಾರ ಸಿನಿಮಾ ಮೂಲಕ ದೈವಾಚಾರಣೆಯತ್ತ ಇಡೀ ಜಗತ್ತೇ ತಿರುಗಿ ನೋಡುವಂತೆ ಮಾಡಿರುವ ಶ್ರೇಯ ರಿಷಭ್ ಶೆಟ್ಟಿ ಅವರಿಗೆ ಸಲ್ಲುತ್ತದೆ. ಹೀಗಾಗಲೂ ದೈವದ ಆಶೀರ್ವಾದವೇ ಕಾರಣವೆಂದು ರಿಷಭ್ ಹೇಳುತ್ತಾರೆ ಎಂದೂ ಗೊತ್ತಿದೆ. ದೈವ ಮತ್ತು ಶ್ರೀಸಾಮಾನ್ಯನಿಗಿರುವ ಸಂಬಂಧ, ತಾಯಿ ಹಾಗೂ ಮಗುವಿನ ಸಂಬಂಧದಂತೆ. ಇದು ಈ ತುಳುನಾಡಿನ ವಿಶೇಷತೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಕ್ಷಣ
Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.
ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.
ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಎಸ್ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್ಐಟಿಕೆ (NITK) ಸುರತ್ಕಲ್ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.
ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.
ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.
ಮಂಗಳೂರು
Girish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
ಎಸ್ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಮಂಗಳೂರಿನ ಎಸ್ಐಟಿ ಕಚೇರಿಗೆ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು, ಮಾಹಿತಿ ಹಾಗೂ ಪತ್ರಿಕಾ ವರದಿಗಳನ್ನು ಎಸ್ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್ಐಟಿ ಕಚೇರಿಗೆ ದಾಖಲೆಗಳ ಸಮೇತ ಆಗಮಿಸಿದ್ದಾರೆ.
ಎಸ್ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಕಚೇರಿಗೆ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು, ಮಾಹಿತಿ ಹಾಗೂ ಪತ್ರಿಕಾ ವರದಿಗಳನ್ನು ಎಸ್ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಇದೇ ವೇಳೆ, ಪ್ರಕರಣದ ಮತ್ತೊಬ್ಬ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೂ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣನವರ್, ನಿರಂತರ ಹೋರಾಟದ ಫಲವಾಗಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. 14 ವರ್ಷಗಳ ಬಳಿಕ ಇದೀಗ ಪ್ರಕರಣದ ತನಿಖೆಯನ್ನು ಎಳೆಎಳೆಯಾಗಿ ನಡೆಸಲಾಗುತ್ತಿದೆ. 14 ವರ್ಷಗಳ ಹಿಂದೆಯೇ ಈ ರೀತಿಯ ತನಿಖೆ ನಡೆದಿದ್ದರೆ, ಇಂದು ಇಷ್ಟು ದೊಡ್ಡ ಹೋರಾಟ ಮಾಡುವ ಅಗತ್ಯವೇ ಇರಲಿಲ್ಲ ಎಂದು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಆರ್. ಅಶೋಕ್ ಅವರು ರಾಜೀನಾಮೆ ನೀಡಬೇಕು ಹಾಗೂ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ ಮಟ್ಟಣ್ಣನವರ್, ಸಿಬಿಐ ತನಿಖೆಗೆ ಆದೇಶ ನೀಡಿದ್ದೇವೆ ಎಂದು ಹೇಳುವವರು, ತನಿಖೆಯ ಪ್ರಕ್ರಿಯೆ ವಿಳಂಬವಾಗಿರುವ ಬಗ್ಗೆ ಉತ್ತರಿಸಬೇಕು ಎಂದರು.
ಸಿಬಿಐ ತನಿಖೆಗೆ ಆದೇಶ ನೀಡಿದ್ದು 2013ರ ನವೆಂಬರ್ 6ರಂದು, ಆದರೆ ಎಫ್ಐಆರ್ ದಾಖಲಾಗಿದ್ದು 2014ರ ಮಾರ್ಚ್ 6ರಂದು. ಆದೇಶವಾದ ನಾಲ್ಕು ತಿಂಗಳ ಬಳಿಕ ಎಫ್ಐಆರ್ ದಾಖಲಿಸಲಾಗಿದೆ. ರಾಜಕೀಯ ಹಸ್ತಕ್ಷೇಪದಿಂದಲೇ ಇಷ್ಟು ವರ್ಷ ತನಿಖೆ ಮುಂದುವರಿದಿದೆ ಎಂಬ ಆರೋಪಕ್ಕೆ ಆರ್. ಅಶೋಕ್ ಅವರು ಪ್ರತಿಕ್ರಿಯೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಎಸ್ಐಟಿ ತನಿಖೆ ಕುರಿತು ಮಾತನಾಡಿದ ಅವರು, ತನಿಖಾಧಿಕಾರಿಗಳು ಉತ್ತಮ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಹೈವಿಟ್ನೆಸ್ ಆಗಿರುವ ಎಂಟು ಮಂದಿಯನ್ನು ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನಮಗೆ ತಿಳಿದಿರುವ ಎಲ್ಲಾ ಮಾಹಿತಿ ಹಾಗೂ ದಾಖಲೆಗಳನ್ನು ಎಸ್ಐಟಿಗೆ ಒದಗಿಸಿದ್ದೇವೆ ಎಂದು ತಿಳಿಸಿದರು.
ಸೌಜನ್ಯ ಅವರ ತಾಯಿ ಕುಸುಮಾವತಿ ಸೇರಿದಂತೆ ಪ್ರಕರಣದ ಹೋರಾಟಗಾರರು ಎಸ್ಐಟಿ ತನಿಖೆಗೆ ಸಮಯಮಿತಿಯ ಒತ್ತಡ ಹೇರುವುದಿಲ್ಲ. ತನಿಖೆಗೆ ಅಗತ್ಯವಿರುವಷ್ಟು ಸಮಯವನ್ನು ಅಧಿಕಾರಿಗಳು ತೆಗೆದುಕೊಳ್ಳಲಿ. 14 ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇವೆ. ತನಿಖೆ ಸರಿಯಾಗಿ ನಡೆದರೆ ಸಾಕು ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.
ಅಪರಾಧ
Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.
ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್ನ ಮೊಬೈಲ್ ಪಾಸ್ವರ್ಡ್ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.
ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.
ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.
ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
-
ಸ್ಥಳೀಯ18 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ11 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಬಿಗ್ ನ್ಯೂಸ್17 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಮಂಗಳೂರು11 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್13 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು12 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ11 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ19 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















