ಕಾರ್ಯಕ್ರಮಗಳು
Gejjegiri-ಗೆಜ್ಜೆಗಿರಿ ಕ್ಷೇತ್ರದಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ
ಆದಿ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರ ಗುರುಪೀಠ, ದೇಯಿಬೈದೈತಿ-ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸುಮಾರು 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ `ಯಾತ್ರಿ ನಿವಾಸ’ಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಇಂಧನ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯ್ಕ ಭಾಗವಹಿಸಿ ಮಾತನಾಡಿದರು.
ಪುತ್ತೂರು: ಶ್ರದ್ಧಾ ಕೇಂದ್ರಗಳು ಸಂರಕ್ಷಣೆ, ಸದ್ಭಾವನೆ, ಸೇವೆಯ ಪ್ರತೀಕ. ಧರ್ಮ ರಕ್ಷಣೆ ಮಾಡುವವನನ್ನು ಧರ್ಮವೇ ರಕ್ಷಿಸುತ್ತದೆ. ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರತಿಪಾದಿಸಿದ ಸಮಾನತೆ, ಸಂಸ್ಕಾರದ ಪರಂಪರೆ ಮುಂದಿನ ಜನಾಂಗಕ್ಕೂ ದಾಟಬೇಕು. ಆ ಕಾರ್ಯಕ್ಕೆ ಶ್ರದ್ಧಾಕೇಂದ್ರಗಳು ಪೂರಕವಾಗಿರಬೇಕು ಎಂದು ಕೇಂದ್ರ ವಿದ್ಯುತ್ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ರಾಜ್ಯ ಸಚಿವ ಶ್ರೀಪಾದ ನಾಯ್ಕ ಹೇಳಿದರು.

ಆದಿ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರ ಗುರುಪೀಠ, ದೇಯಿಬೈದೈತಿ-ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸುಮಾರು 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ `ಯಾತ್ರಿ ನಿವಾಸ’ಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ವರನ್ನೂ ಸಮಾನತೆಯಲ್ಲಿ ಕಾಣುವ ಧರ್ಮ ಹಿಂದೂ ಧರ್ಮ. ಋಷಿ ಮುನಿಗಳೂ ಇದೇ ಸಂದೇಶವನ್ನು ನೀಡಿದ್ದಾರೆ. ಬೇರೆ ಬೇರೆ ಆಚರಣೆ, ಸಂಸ್ಕೃತಿಗಳನ್ನು ಹೊಂದಿರುವವರನ್ನು ಒಗ್ಗೂಡಿಸುವುದು ಸುಲಭದ ವಿಚಾರವಲ್ಲ. ಹಿಂದೂ ಧರ್ಮಕ್ಕೆ ಆ ಶಕ್ತಿ ಇದೆ. ಸಂಘಟನಾತ್ಮಕ ಪ್ರಯತ್ನ ಇದಕ್ಕೆ ಅಗತ್ಯ ಇದೆ. ಇಂದು ನಮ್ಮಲ್ಲಿ ಎಲ್ಲಾ ವ್ಯವಸ್ಥೆಗಳು ಇವೆ. ಈ ಸಂದರ್ಭದಲ್ಲಿ ಸಮಾಶದ ಕೆಲಸವನ್ನೂ ನಾವು ಮಾಡಬೇಕು. ಸೇವಾ ಮನೋಭಾವ ತುಳುನಾಡಿನ ಗೌರವ ಎಂದರು.
ಅತಿಥಿಗಳು ದೇವರು ಎನ್ನುವವರು ನಾವು. ಇದು ನಮ್ಮ ಸಂಸ್ಕೃತಿ. ಯಾವುದೇ ಭೇದವಿಲ್ಲದೆ ನಡೆಯುವ ಅನ್ನದಾನ ಪವಿತ್ರ ಸೇವೆ. ಇದರಿಂದ ಶಾಂತಿ, ಸಮಾಧಾನ ಸಿಗುತ್ತದೆ. ಶ್ರದ್ಧಾ ಕೇಂದ್ರದ ಮೂಲಕ ಪ್ರತಿಯೊಬ್ಬರಿಗೂ ಶಾಂತಿ, ಸಮೃದ್ಧಿ ಸಿಗುತ್ತದೆ. ಇಂತಹ ಉತ್ತಮ ಕೆಲಸ ಗೆಜಗ್ಜೆಗಿರಿ ಕ್ಷೇತ್ರದಲ್ಲಿ ನಡೆಯುತ್ತಿರುವುದು ಎಲ್ಲವೂ ಮೆಚ್ಚುವ ಕಾರ್ಯವಾಗಿ ಜಗತ್ತಿನಾದ್ಯಂತ ಗುರುತಿಸಿಕೊಳ್ಳಲಿ ಎಂದು ಶ್ರೀಪಾದ್ ಶುಭಹಾರೈಸಿದರು.

ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಬಿಲ್ಲವ ಸಮುದಾಯದಲ್ಲಿ ೨೪ ಪಂಗಡಗಳಿವೆ. ಕೇರಳದಲ್ಲಿ 100 ಶೇ. ಸಾಕ್ಷರತೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪಾತ್ರವೂ ಇದೆ. ಯುವ ಪೀಳಿಗೆ ಜೈಲಿಗೆ ಹೋಗದೆ ಉನ್ನತ ಶಿಕ್ಷಣ ಪಡೆದು ಉದ್ಯೋಗದತ್ತ ಗಮನಹರಿಸಬೇಕು. ಬುದ್ಧಿ, ಸಾಮರ್ಥ್ಯದಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸ್ವಾಭಿಮಾನಕ್ಕೆ ಪ್ರೇರಣೆಯಾದ ಕೋಟಿ-ಚೆನ್ನಯರು, ನಾರಾಯಣ ಗುರುಗಳು ನಮಗೆಲ್ಲರಿಗೂ ಮಾದರಿಯಾಗಬೇಕು ಎಂದರು.
ದ.ಕ. ಸಂಸದ ಕ್ಯಾ. ಬೃಜೇಶ್ ಚೌಟ ಮಾತನಾಡಿ, ತುಳುನಾಡು ಸತ್ಯಧರ್ಮ, ನ್ಯಾಯದ ನೆಲ. ಹಿಂದೂ ಧರ್ಮಕ್ಕೆ ಆದರ್ಶ ನೆಲ. ಹಿಂದೂ ಸಮಾಜಕ್ಕೆ ಶಕ್ತಿ ಕೊಡುವೆ ಕೇಂದ್ರವಾಗಿ ಗೆಜ್ಜೆಗಿರಿ ಬೆಳಗಲಿ ಎಂದು ಆಶಯ ವ್ಯಕ್ತಪಡಿಸಿದರು. ಆಯುರ್ವೇದ ಚಿಕಿತ್ಸೆಯ ಪರಂಪರೆ ಹೊಂದಿರುವ ಗೆಜ್ಜೆಗಿರಿಯಲ್ಲಿ ಆಯುರ್ವೇದ ಕೇಂದ್ರ ಸ್ಥಾಪಿಸುವ ಉದ್ದೇಶವನ್ನು ಸಮಿತಿಯವರು ಹೊಂದಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜತೆಗೂ ತಾನು ಪ್ರಯತ್ನ ನಡೆಸುವುದಾಗಿ ಚೌಟ ಹೇಳಿದರು.
ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ ನೆರವೇರಿಸಿದ ಗುಜರಾತ್ ಬರೋಡಾದ ಉದ್ಯಮಿ ದಯಾನಂದ ಬೊಂಟ್ರ ಮಾತನಾಡಿ, ಐಕ್ಯತೆಯಿಂದ ಮಾಡುವ ಕೆಲಸಕ್ಕೆ ಯಶಸ್ಸು ಲಭಿಸುತ್ತದೆ. ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಯೊಂದಿಗೆ ಸಮಾಜದ ಉನ್ನತಿ ಪಡೆಯಲಿದೆ ಎಂದು ಹಾರೈಸಿದರು.ಸೋಲೂರು ಮಠ ಆರ್ಯಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಸ್ವಾಭಿಮಾನದ ಪ್ರವೃತ್ತಿ ನಮ್ಮಲ್ಲಿ ಬೆಳೆಯಬೇಕು. ಏರಿದ ಏಣಿಯನ್ನು ಮರೆಯುವ ಕೆಲಸ ಯಾರೂ ಮಾಡಬಾರದು. ಪುಣ್ಯ ಕ್ಷೇತ್ರಕ್ಕೆ ಬಂದಾಗ ಪಾಪ ಕಾರ್ಯಗಳು ತೊಳೆದು ಹೋಗುತ್ತವೆ ಎಂದರು. ವರ್ಷದಲ್ಲಿ ಯಾತ್ರಿ ನಿವಾಸ ಉದ್ಘಾಟನೆಯಾಗಲಿ. ಶಿವಗಿರಿಯಂತೆ ಗೆಜ್ಜೆಗರಿ ಬೆಳೆಯಲಿ ಎಂದು ಹಾರೈಸಿದರು.
ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಅಧ್ಯಕ್ಷತೆ ವಹಿಸಿದ್ದರು. ಶಿವಗಿರಿ ಮಠದ ಜ್ಞಾನಾನಂದ ಸ್ವಾಮೀಜಿ, ಮುಂಬೈ ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ.ಅಮೀನ್, ಮುಂಬೈ ಬಿಲ್ಲವ ಚೇಂಬರ್ ಆಪ್ ಕಾಮರ್ಸ್ ನ ಅಧ್ಯಕ ಎನ್.ಟಿ.ಪೂಜಾರಿ,ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಅಧ್ಯಕ್ಷ ಮಹೇಶ್ ಎನ್. ಅಂಚನ್, ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಮುಂಬೈ ಭಾರತ್ ಕೊ-ಅಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಸೂರ್ಯಕಾಂತ ಜೆ. ಸುವರ್ಣ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ, ನಾರಾಯಣಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕಡೆಂಜಿಗುತ್ತು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ, ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಸದಸ್ಯ ಲಕ್ಷ್ಮೀನರಸಯ್ಯ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ್ ಶೆಟ್ಟಿ ಕಾವು, ಮಳೂರು ಯುವವಾಹಿನಿ ಕೇಂದ್ರ ಸಮಿತಿ, ಅಧ್ಯಕ್ಷ ಲೋಕೇಕ್ ಕೋಟ್ಯಾನ್, ಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಮಂಗಳೂರು ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಲಿ. ಅಧ್ಯಕ್ಷ ಚಂದ್ರಶೇಖರ ಕುಮಾರ್, ಉಡುಪಿ ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ನ ಅಧ್ಯಕ್ಷ ಹರೀಶ್ಚಂದ್ರ ಅಮೀನ್, ಪ್ರಮುಖರಾದ ಸದಾನಂದ ಪೆರ್ಲ, ಹರೀಶ್ ಪೂಜಾರಿ ಬರೋಡ, ಸುಜಿತಾ ಬಂಗೇರ, ಸರಿತಾ ಕೋಟ್ಯಾನ್, ಪಿ.ವಿ. ಮೋಹನ್, ಬಿಲ್ಲವ ಬ್ರಗೇಡ್‌ನ ಅವಿನಾಶ್, ಹರೀಶ್ ಪೂಜಾರಿ ಮಸ್ಕತ್, ವಾಸ್ತು ಶಿಲ್ಪಿ ಪ್ರಮೋದ್ ಕುಮಾರ್, ಮೊದಲಾದವರು ವೇದಿಕೆಯಲ್ಲಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮೊದಲಾದವರು ಶಿಲಾನ್ಯಾಸದ ಸಂದರ್ಭದಲ್ಲಿ ಪಾಲ್ಗೊಂಡರು.
ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷರಾದ
ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಜಯಂತ ನಡುಬೈಲು, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಉಪಧ್ಯಕ್ಷ ದೀಪಕ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ, ಜತೆ ಕಾರ್ಯದರ್ಶಿಗಳಾದ ಜಯವಿಕ್ರಮ್ ಕಲ್ಲಾಪು, ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ಹರೀಶ್ ಡಿ. ಸಾಲ್ಯಾನ್ ಬಜೆಗೋಳಿ ಅತಿಥಿಗಳನ್ನು ಗೌರವಿಸಿದರು.
ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಡಾ. ರಾಜಶೇಖರ ಕೋಟ್ಯಾನ್ ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಲ ಹಾಗೂ ದಿನೇಶ್ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.

ಶ್ರೀ ಕ್ಷೇತ್ರದ ತಂತ್ರಿಯವರಾದ ಶಿವಾನಂದ ತಂತ್ರಿಗಳ ಪೌರೋಹಿತ್ಯದಲ್ಲಿ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ತೌಳವ ಶೈಲಿಯಲ್ಲಿ ಯಾತ್ರಿ ನಿವಾಸದ ಕಟ್ಟಡದ ನಿರ್ಮಾಣ ನಡೆಯಲಿದೆ.
ಇದೇ ಸಂದರ್ಭದಲ್ಲಿ ಡಿ.3 ರಂದು ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆಯುವ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಬಿಡುಗಡೆ ಮಾಡಲಾಯಿತು. ಪುಣ್ಯದ ಗೆಜ್ಜೆಗಿರಿ ಆಡಿಯೋ ಬಿಡುಗಡೆಗೊಳಿಸಲಾಯಿತು.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ24 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು5 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ


















