ಶಿಕ್ಷಣ
ಕೆ – ಸೆಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ ವಿದ್ಯಾಮಾತಾ : ಈ ವರ್ಷವೂ ವಿದ್ಯಾಮಾತಾ ಅಕಾಡೆಮಿಯದ್ದೇ ಮೇಲುಗೈ
ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ( K-SET ) 2025ರಲ್ಲಿ ವಿದ್ಯಾಮಾತಾ ಅಕಾಡೆಮಿಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ಕಳೆದ ಮೂರು ವರ್ಷಗಳಿಂದ K- SET ತರಬೇತಿಯನ್ನು ಆನ್ಲೈನ್ ಲೈವ್ ತರಗತಿಗಳ ಮೂಲಕ ತರಬೇತಿ ನೀಡುತ್ತಿದ್ದು, ಗ್ರಾಮೀಣ ಪ್ರದೇಶದ ಸಂಸ್ಥೆಯೊಂದು ಉನ್ನತ ಸಾಧನೆಯನ್ನು ಮಾಡುತ್ತಿದೆ. ಕರಾವಳಿ ಭಾಗದಲ್ಲಿ ಸರಕಾರಿ ನೇಮಕಾತಿಗಳು ಮತ್ತು ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ಸಂಸ್ಥೆಯಾಗಿ ವಿದ್ಯಾಮಾತಾ ಅಕಾಡೆಮಿಯು ಮನೆಮಾತಾಗಿದೆ.
K – SET 2025ರ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಯ ಐದು ಜನ ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
ಪುತ್ತೂರು ಸಾಮೆತಡ್ಕ ನಿವಾಸಿ ಲ್ಯಾನ್ಸಿ ಮಸ್ಕರೇನಸ್ ಇವರ ಪತ್ನಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಿಯಾಲತಾ ಡಿ. ಸಿಲ್ವಾ,
ಕಡಬ ತಾಲೂಕು ಏನೆಕಲ್ಲು ಬಚ್ಚನಡ್ಕ ನಿವಾಸಿ ದಿನಕರ ಗೌಡ ಮತ್ತು ವಾರಿಜಾ ದಂಪತಿಗಳ ಪುತ್ರಿ ಧನ್ಯಶ್ರೀ. ಬಿ.
ಬೆಂಗಳೂರು ಉತ್ತರಹಳ್ಳಿ ನಿವಾಸಿ ಪ್ರವೀಣ್ ಕುಮಾರ್ ಇವರ ಪತ್ನಿ ಆರ್.ಎನ್.ಎಸ್ ಪಿಯು ಕಾಲೇಜ್ ಆರ್.ಆರ್.ನಗರ ಬೆಂಗಳೂರು ಇಲ್ಲಿ ಉಪನ್ಯಾಸಕಿ ಆಗಿರುವ ವಿದ್ಯಾಶ್ರೀ,
ಹಾಸನ ಜಿಲ್ಲೆ, ನರಸೀಪುರ ಮಾಯಾ ಗೌಡನಹಳ್ಳಿ ನಿವಾಸಿ ಮಂಜುನಾಥ ಎಂ ವಿ ಇವರ ಪತ್ನಿ ಪ್ರಿಯಾಂಕಾ ಕೆ.ಎಸ್.
ಹಾಗೂ ಸುಳ್ಯ ತಾಲೂಕು ಮಡಪ್ಪಾಡಿ ಪಣಿಯಾಳ ನಿವಾಸಿ ವಿಪಿನ್ ಎಂ ಇವರ ಪತ್ನಿ ಶಾಲಿನಿ ಎ.ಜೆ. ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ.
ಕೆ ಸೆಟ್ ನಿಂದ ಆಗುವ ಪ್ರಯೋಜನಗಳು
ಕೆ ಸೆಟ್ ಅರ್ಹತೆ ಪಡೆದರೆ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಲು ಅವಕಾಶವಿರುತ್ತದೆ. ಕೆ ಸೆಟ್ ಅರ್ಹತೆ ಪಡೆದವರು UGC-NET ಅರ್ಹತೆಯನ್ನು ಪಡೆದರೆ ಆಲ್ ಓವರ್ ಇಂಡಿಯಾ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಸರಕಾರಿ ಸ್ವಾಮ್ಯದಲ್ಲಿರುವ ವಿಶ್ವವಿದ್ಯಾನಿಲಯಗಳಲ್ಲಿ ಡೈಲಿ ವೇಜಸ್, ಪಾರ್ಟ್ ಟೈಮ್ ಗೆ ಮೊದಲ ಆದ್ಯತೆಯನ್ನು ಕೂಡ ಪಡೆಯಬಹುದು.ತರಬೇತಿ ಪಡೆದು ಕೆ -ಸೆಟ್ ಅರ್ಹತೆ ಪಡೆದಿರುವ ಎಲ್ಲಾ ಅಭ್ಯರ್ಥಿಗಳನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಮತ್ತು ಆಡಳಿತ ಮಂಡಳಿ ಅಭಿನಂದಿಸಿದೆ. ತರಬೇತಿ ಪಡೆಯಲು ಆಸಕ್ತಿಯುಳ್ಳ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯ ಸಂಪರ್ಕ ಸಂಖ್ಯೆ 9620468869 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘Power BI’ ಕಾರ್ಯಾಗಾರ; ದತ್ತಾಂಶವನ್ನು ವ್ಯವಹಾರಿಕ ಒಳನೋಟಗಳಾಗಿ ಪರಿವರ್ತಿಸುವ ಕೌಶಲ್ಯಕ್ಕೆ ಒತ್ತು
ದತ್ತಾಂಶವನ್ನು ಪರಿಣಾಮಕಾರಿ ರೀತಿಯಲ್ಲಿ ವಿಶ್ಲೇಷಿಸಿ, ಅದರಿಂದ ವ್ಯವಹಾರಿಕ ನಿರ್ಧಾರಗಳಿಗೆ ಅಗತ್ಯವಾದ ಒಳನೋಟಗಳನ್ನು ಪಡೆಯುವ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ‘Power BI – Transform Data into Insights for Smarter Business Decisions’ ಎಂಬ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಪುತ್ತೂರು, ಅ.8: ದತ್ತಾಂಶವನ್ನು ಪರಿಣಾಮಕಾರಿ ರೀತಿಯಲ್ಲಿ ವಿಶ್ಲೇಷಿಸಿ, ಅದರಿಂದ ವ್ಯವಹಾರಿಕ ನಿರ್ಧಾರಗಳಿಗೆ ಅಗತ್ಯವಾದ ಒಳನೋಟಗಳನ್ನು ಪಡೆಯುವ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ‘Power BI – Transform Data into Insights for Smarter Business Decisions’ ಎಂಬ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಕಾಲೇಜಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ಅ. 8ರಂದು ಕಾಲೇಜಿನ Biz Tech Lab ನಲ್ಲಿ ಕಾರ್ಯಾಗಾರ ನಡೆಯಿತು.
ವ್ಯವಹಾರ ಕ್ಷೇತ್ರದಲ್ಲಿ ದತ್ತಾಂಶ ಆಧಾರಿತ ನಿರ್ಧಾರಗಳ ಮಹತ್ವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ Power BI ಮೂಲಕ ದತ್ತಾಂಶ ವಿಶ್ಲೇಷಣೆ, ಡ್ಯಾಶ್ಬೋರ್ಡ್ ನಿರ್ಮಾಣ, ಡೇಟಾ ಮಾಡೆಲಿಂಗ್, DAX ಹಾಗೂ ದತ್ತಾಂಶದಿಂದ ಉಪಯುಕ್ತ ಒಳನೋಟಗಳನ್ನು ಪಡೆಯುವ ವಿಧಾನಗಳ ಕುರಿತು ಪ್ರಾಯೋಗಿಕ ಪರಿಚಯ ನೀಡಲಾಯಿತು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಫಿಲೋಮಿನಾ ಕಾಲೇಜಿನ ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಶೋಧನ್ ಪಿ.ಜಿ. ಭಾಗವಹಿಸಿ Power BIಯ ವಿವಿಧ ವೈಶಿಷ್ಟ್ಯಗಳು ಮತ್ತು ಅದರ ನೈಜ ವ್ಯವಹಾರಿಕ ಬಳಕೆಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಸಂವಾದಾತ್ಮಕ ಡ್ಯಾಶ್ಬೋರ್ಡ್ಗಳ ನಿರ್ಮಾಣ, ದತ್ತಾಂಶ ವಿಶ್ಲೇಷಣೆ ಮತ್ತು ಮಾಡೆಲಿಂಗ್, DAX ಮೂಲಕ ದತ್ತಾಂಶದಿಂದ ಒಳನೋಟಗಳನ್ನು ಪಡೆಯುವುದು ಹಾಗೂ ನೈಜ ವ್ಯವಹಾರಿಕ ಸಂದರ್ಭಗಳಲ್ಲಿ Power BI ಬಳಕೆಯ ಕುರಿತು ಪ್ರಾಯೋಗಿಕ ಚಟುವಟಿಕೆಗಳನ್ನು ನಡೆಸಲಾಯಿತು.
ಕಾರ್ಯಕ್ರಮದ ಸ್ವಾಗತ ಹಾಗೂ ಪ್ರಾಸ್ತಾವಿಕ ಮಾತುಗಳನ್ನು ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥರಾದ ಡಾ. ರಾಧಾಕೃಷ್ಣ ಗೌಡ ವಿ. ನೆರವೇರಿಸಿದರು. ಅವರು Power BI ಸೇರಿದಂತೆ ದತ್ತಾಂಶ ವಿಶ್ಲೇಷಣಾ ಸಾಧನಗಳ ಅರಿವು ಇಂದಿನ ವ್ಯವಹಾರಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ವಹಿಸಿದ್ದರು. ಬೆಳಿಗ್ಗೆ 9.30ರಿಂದ ಸಂಜೆ 4.30ರವರೆಗೆ ನಡೆದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯ ಜೊತೆಗೆ ನೈಜ ವ್ಯವಹಾರಿಕ ದತ್ತಾಂಶವನ್ನು ಬಳಸಿಕೊಂಡು Power BIಯ ಪ್ರಾಯೋಗಿಕ ಅನ್ವಯಗಳ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ದತ್ತಾಂಶವನ್ನು ಅರ್ಥಪೂರ್ಣ ಮಾಹಿತಿಯಾಗಿ ಪರಿವರ್ತಿಸಿ, ಅದರ ಆಧಾರದ ಮೇಲೆ ಚುರುಕಾದ ಮತ್ತು ಪರಿಣಾಮಕಾರಿ ವ್ಯವಹಾರಿಕ ನಿರ್ಧಾರಗಳನ್ನು ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಉಪಯುಕ್ತವಾಗಿತ್ತು.
ಶಿಕ್ಷಣ
Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.
ಶಿಕ್ಷಣ
Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್ಜಿಎಫ್ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.
-
ರಾಜಕೀಯ24 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ನಿಧನ ವಾರ್ತೆ6 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಅಂತರ ರಾಜ್ಯ6 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಪರಾಧ5 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ5 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ಕಾರ್ಯಕ್ರಮಗಳು4 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ರಾಜಕೀಯ6 hours agoSting operation case-ಸ್ಟಿಂಗ್ ಆಪರೇಷನ್ ಕೇಸ್ : ಎಸ್ಐಟಿ ಅಥವಾ ಸಿಐಡಿ? ಸಚಿವ ಸಂಪುಟದಲ್ಲಿ ಏನು ನಿರ್ಧಾರ ಆಯಿತು ?


















