Uncategorized
ಹಣವನ್ನು ಸಿಕ್ಕ ಸಿಕ್ಕವರಿಗೆ ಮನಸೋ ಇಚ್ಛೆ ಸಾಲ ಕೊಡುವುದಕ್ಕೆ ಇದೇನು ಧರ್ಮಛತ್ರವೇ? ಸೊಸೈಟಿ ಅವ್ಯವಹಾರದ ಬಗ್ಗೆ ಬಿಜೆಪಿ ಜಾಣ ಕುರುಡು ಪ್ರದರ್ಶಿಸುತ್ತಿದೆ: ‘ಇಡ್ಕಿದು’ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ!

ಸಂಘಟನಾತ್ಮಕವಾಗಿ ಬೆಳೆದು ಬಂದಿದ್ದ ಸಂಸ್ಥೆಯ ಹಳಿ ತಪ್ಪಿದೆ. ಹಣವನ್ನು ಸಿಕ್ಕ ಸಿಕ್ಕವರಿಗೆ ಮನಸೋ ಇಚ್ಛೆ ಕೊಡುವುದಕ್ಕೆ ಇದೇನು ಧರ್ಮಸತ್ರವೇ ಅಥವಾ ಸಂಸ್ಥೆಯೇ? ಹಿರಿಯರ ಮಾರ್ಗದರ್ಶನ ಇಲ್ಲದೆ ಮನಬಂದಂತೆ ವ್ಯವಹಾರ ನಡೆಸಿದ್ದೇ ಇಂದಿನ ದುಸ್ಥಿತಿಗೆ ಕಾರಣ
ವಿಟ್ಲ: ಗ್ರಾಮದ ಪ್ರತಿಷ್ಠಿತ ಸಹಕಾರಿ ಸಂಘದಲ್ಲಿ (ಸೊಸೈಟಿ) ದುರಾಡಳಿತ ನಡೆಸುತ್ತಿದೆಯೆಂದು ಆರೋಪಿಸಿ ಗ್ರಾಮಸ್ಥರ ಗುಂಪೊಂದು ಸಿಡಿದೆದ್ದಿದೆ. ಕಳೆದ 40 ವರ್ಷಗಳಿಂದ ಗ್ರಾಮಸ್ಥರು ಸಂಘ ಪರಿವಾರ ಮತ್ತು ಬಿಜೆಪಿಗೆ ಬೆನ್ನೆಲುಬಾಗಿ ನಿಂತಿದ್ದು, ಆದರೇ ಇದೀಗ ಪಕ್ಷದ ನಾಯಕರು ಸೊಸೈಟಿಯಲ್ಲಿ ನಿಯಮ ಬಾಹಿರವಾಗಿ ಸಾಲ ವಿತರಿಸಿದರೂ, ಏನೂ ಗೊತ್ತಿಲದ್ದವರಂತೆ ಮೌನಕ್ಕೆ ಶರಣಾಗಿದ್ದರೆಂದು ಗ್ರಾಮಸ್ಥರ ಗುಂಪೊಂದು ಕೆಂಡಾಮಂಡಲವಾಗಿದ್ದರೆ. ಭಾನುವಾರ ಕೋಲ್ಪೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಈ ಗುಂಪಿನ ಆಕ್ರೋಶದ ಕಟ್ಟೆ ಒಡೆದಿದೆ.
ಶತಮಾನದ ಸಂಸ್ಥೆಗೆ ಕಳಂಕ, ಬಿಜೆಪಿಗೆ ಮುಜುಗರ!
ಈ ಸಹಕಾರಿ ಸಂಘಕ್ಕೆ, 2025ರ ಜನವರಿಯಲ್ಲಿ ಚುನಾವಣೆ ನಡೆದು ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿತ್ತು. ಆದರೆ ಕೇವಲ 10 ತಿಂಗಳಲ್ಲಿ ಆಡಳಿತ ಮಂಡಳಿಯ ವಿರುದ್ಧ ಭ್ರಷ್ಟಾಚಾರ ಮತ್ತು ದುರಾಡಳಿತದ ಗಂಭೀರ ಆರೋಪಗಳು ಕೇಳಿಬಂದಿವೆ ಎಂದು ಸಭೆಯಲ್ಲಿ ಬಿಸಿ ಬಿಸಿ ಚರ್ಚೆಯಾಯಿತು. ಸಹಕಾರಿ ಸಂಘದಲ್ಲಿ ಇಷ್ಟೆಲ್ಲಾ ರಾದ್ಧಾಂತಗಳು ನಡೆಯುತ್ತಿದ್ದರೂ, ಕಳೆದ ಎರಡು ತಿಂಗಳಿಂದ ಬಿಜೆಪಿ ನಾಯಕರು ಜಾಣ ಕುರುಡು ಪ್ರದರ್ಶಿಸುತ್ತಿದ್ದರೆಂದು ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.

“ನಾವು 40 ವರ್ಷಗಳಿಂದ ಊರಿನ ವ್ಯವಸ್ಥೆಯಲ್ಲಿ ಪಕ್ಷಕ್ಕೆ ಮತ್ತು ಸಂಘ ಪರಿವಾರಕ್ಕೆ ಯಾವುದೇ ಕುಂದು ಬಾರದಂತೆ ನೋಡಿಕೊಂಡಿದ್ದೇವೆ. ಆದರೆ ಈಗ ಸಂಘದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನಮ್ಮನ್ನು ತಲೆ ತಗ್ಗಿಸುವಂತೆ ಮಾಡಿವೆ. ಪಕ್ಷ ತಕ್ಷಣ ಎಚ್ಚೆತ್ತುಕೊಂಡು, ದುರಾಡಳಿತಕ್ಕೆ ಕಡಿವಾಣ ಹಾಕದಿದ್ದರೆ ಪರಿಣಾಮ ನೆಟ್ಟಗಿರಲ್ಲ,” ಎಂದು ಗ್ರಾಮಸ್ಥರು ಮತ್ತು ಸಂಘದ ಸದಸ್ಯರು ಸಭೆಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೇನು ಧರ್ಮಸತ್ರವೇ?: ಮಾಜಿ ಅಧ್ಯಕ್ಷರ ಗುಡುಗು
ಸಭೆಯಲ್ಲಿ ಮಾತನಾಡಿದ ಸೊಸೈಟಿ ಮಾಜಿ ಅಧ್ಯಕ್ಷ ಉರಿಮಜಲು ಸುಬ್ರಹ್ಮಣ್ಯ ಭಟ್, ಪ್ರಸ್ತುತ ಆಡಳಿತ ಮಂಡಳಿಯ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. “ಸಂಘಟನಾತ್ಮಕವಾಗಿ ಬೆಳೆದು ಬಂದಿದ್ದ ಸಂಸ್ಥೆಯ ಹಳಿ ತಪ್ಪಿದೆ. ಹಣವನ್ನು ಸಿಕ್ಕ ಸಿಕ್ಕವರಿಗೆ ಮನಸೋ ಇಚ್ಛೆ ಕೊಡುವುದಕ್ಕೆ ಇದೇನು ಧರ್ಮಛತ್ರವೇ ಅಥವಾ ಸಂಸ್ಥೆಯೇ? ಹಿರಿಯರ ಮಾರ್ಗದರ್ಶನ ಇಲ್ಲದೆ ಮನಬಂದಂತೆ ವ್ಯವಹಾರ ನಡೆಸಿದ್ದೇ ಇಂದಿನ ದುಸ್ಥಿತಿಗೆ ಕಾರಣ. ಸಂಸ್ಥೆಯ ಮೇಲೆ ನಂಬಿಕೆ ಇಟ್ಟಿದ್ದ ಠೇವಣಿದಾರರು ಈಗ ಹಣ ಹಿಂಪಡೆಯಲು ಕ್ಯೂ ನಿಲ್ಲುವಂತಾಗಿದೆ,” ಎಂದು ಅವರು ಹರಿಹಾಯ್ದರು.

ಪಕ್ಷವು ಈ ಕೂಡಲೇ ಮಧ್ಯಪ್ರವೇಶಿಸಿ, ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿಪಡಿಸಿ ಸದಸ್ಯರಲ್ಲಿ ವಿಶ್ವಾಸ ಮೂಡಿಸಬೇಕೆಂಬ ಒಕ್ಕೊರಲ ಒತ್ತಾಯ ಸಭೆಯಲ್ಲಿ ಕೇಳಿಬಂತು.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
-
ಶಿಕ್ಷಣ9 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ8 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ8 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ7 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ8 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ8 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ3 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಆರೋಗ್ಯ7 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
















