Uncategorized
Endosulfan, NGT, toxic barrels, ಭೂಮಿಯೊಳಗೆ ಹುದುಗಿತೇ ಎಂಡೋಸಲ್ಫಾನ್ ವಿಷದ ಬ್ಯಾರೆಲ್ ? 238 ಬ್ಯಾರೆಲ್ ನಾಪತ್ತೆ – NGT ‘ಶಾಕ್’! ಮಿಂಚಿನ ಪದವಿನಲ್ಲಿ ಕಾಣೆಯಾದ ಎಂಡೋ ಬ್ಯಾರಲ್ ಗಳ ಬಗ್ಗೆ ಸಮಗ್ರ ತನಿಖೆಗೆ ಹಸಿರು ಪೀಠ ಆದೇಶ

Endosulfan, NGT, toxic barrels, ನವದೆಹಲಿ: ಕರಾವಳಿ ಭಾಗದ ಜನರನ್ನು ದಶಕಗಳಿಂದ ಹಿಂಡಿ ಹಿಪ್ಪೆ ಮಾಡಿರುವ ಎಂಡೋಸಲ್ಫಾನ್ ಮಹಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಇಂದು (ಅಕ್ಟೋಬರ್ 29, 2025) ಅತ್ಯಂತ ಗಂಭೀರ ಮತ್ತು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ವೈಮಾನಿಕ ಸಿಂಪಡಣೆಗೆ ಬಳಸಲಾಗಿದ್ದ ನೂರಾರು ವಿಷದ ಪೀಪಾಯಿಗಳು (ಬ್ಯಾರೆಲ್ಗಳು) ದಾಖಲೆಗಳಲ್ಲಿದ್ದರೂ, ವಾಸ್ತವದಲ್ಲಿ ನಾಪತ್ತೆಯಾಗಿರುವುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಕೇರಳ ಸರ್ಕಾರ ವು ಕೇರಳ ಕರ್ನಾಟಕ ಸರಹದ್ದಿನ ಮಿಂಚಿಪದವು ಗೇರು ತೋಟದ ಬಾವಿಗಳಲ್ಲಿ ಎಂಡೋಸಲ್ಫಾನ್ ಹೂತು ಹಾಕಿದ್ದಾರೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ತನಿಖೆ ನಡೆಸಿದ ರಾಷ್ಟ್ರೀಯ ಹಸಿರು ಪೀಠ ಮಹತ್ವದ ಆದೇಶ ಹೊರಡಿಸಿದೆ.
ಕೇರಳ-ಕರ್ನಾಟಕ ಗಡಿ ಭಾಗದ ಗುಡ್ಡಗಾಡು ಪ್ರದೇಶದಲ್ಲಿ ಅವೈಜ್ಞಾನಿಕ ಮತ್ತು ಅಕ್ರಮವಾಗಿ ಎಂಡೋಸಲ್ಫಾನ್ ವಿಲೇವಾರಿ ಮಾಡಿದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕಾಣೆಯಾದ ಎಂಡೋ ಬ್ಯಾರಲ್ ಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ.

258 ಬ್ಯಾರೆಲ್ ವಿಷ ಎಲ್ಲಿ ಹೋಯಿತು?
ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರ, ರವೀಂದ್ರನಾಥ್ ಶಾನುಭಾಗ್ ಅವರು ವಕೀಲ ಗೌರವ್ ಕುಮಾರ್ ಬನ್ಸಾಲ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಆಲಿಸಿದ NGT, ಕೇರಳ ಪ್ಲಾಂಟೇಶನ್ ಕಾರ್ಪೊರೇಷನ್ (PCK) ವಿರುದ್ಧ ಕೆಂಡಾಮಂಡಲವಾಗಿದೆ. ವೈಮಾನಿಕ ಸಿಂಪಡಣೆಗಾಗಿ 258 ಎಂಡೋಸಲ್ಫಾನ್ ಬ್ಯಾರೆಲ್ಗಳನ್ನು ಬಳಸಲಾಗಿತ್ತು ಎಂದು ದಾಖಲೆಗಳು ಹೇಳುತ್ತವೆ. ಆದರೆ, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪರಿಶೀಲನೆ ನಡೆಸಿದಾಗ ಪತ್ತೆಯಾಗಿದ್ದು ಕೇವಲ 20 ಬ್ಯಾರೆಲ್ಗಳು ಮಾತ್ರ!
ಉಳಿದ 238 ಬ್ಯಾರೆಲ್ಗಳು ಎಲ್ಲಿ ಹೋದವು? ಬಳಸಿದ ವಿಷದ ಡಬ್ಬಿಗಳನ್ನು ಬಾವಿಗಳಲ್ಲಿ ಅಥವಾ ಮಣ್ಣಿನಲ್ಲಿ ಅಕ್ರಮವಾಗಿ ಹೂತು ಹಾಕಲಾಗಿದೆಯೇ ಎಂಬ ಬಲವಾದ ಸಂಶಯವನ್ನು NGT ವ್ಯಕ್ತಪಡಿಸಿದೆ.
6,600 ಸಂತ್ರಸ್ತರ ನರಕಯಾತನೆ:
ಕಾಸರಗೋಡು ಸೇರಿದಂತೆ ಕೇರಳ-ಕರ್ನಾಟಕ ಗಡಿಭಾಗದ 45 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸುಮಾರು 6,600ಕ್ಕೂ ಹೆಚ್ಚು ಎಂಡೋಸಲ್ಫಾನ್ ಸಂತ್ರಸ್ತರು ನರಕಯಾತನೆ ಅನುಭವಿಸುತ್ತಿದ್ದಾರೆ. ಅಂತರ್ಜಲದ ಪರೀಕ್ಷೆಯನ್ನೂ ನಡೆಸದೆ, ಜನರ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿರುವುದನ್ನು ಕಂಡು ನ್ಯಾಯಮಂಡಳಿ ಕಳವಳ ವ್ಯಕ್ತಪಡಿಸಿದೆ.

ಖಡಕ್ ಆದೇಶ – ವೆಚ್ಚವನ್ನೆಲ್ಲಾ ಕಂಪನಿಯೇ ಭರಿಸಬೇಕು:
ಇಂದು ಅಪ್ಲೋಡ್ ಆದ ಆದೇಶದಲ್ಲಿ NGT ಈ ಕೆಳಗಿನ ಸ್ಪಷ್ಟ ಸೂಚನೆ ನೀಡಿದೆ:
• ಕೇರಳ ಪ್ಲಾಂಟೇಶನ್ ಕಾರ್ಪೊರೇಷನ್ ಕೂಡಲೇ ಕೇರಳ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು CPCB ವರದಿಗಳನ್ನು ಪರಿಶೀಲಿಸಬೇಕು.
• ನಾಪತ್ತೆಯಾದ ಬ್ಯಾರೆಲ್ಗಳ ಕತೆ ಏನಾಯಿತು? ಮಣ್ಣು ಮತ್ತು ನೀರು ಎಷ್ಟು ಕಲುಷಿತಗೊಂಡಿದೆ? ಎಂಬುದರ ಬಗ್ಗೆ ಸಮಗ್ರ ವರದಿ ನೀಡಬೇಕು.
• ಈ ತನಿಖೆಗೆ ತಗಲುವ ಸಂಪೂರ್ಣ ವೆಚ್ಚವನ್ನು ಕಾರ್ಪೊರೇಷನ್ ಭರಿಸಬೇಕು.
• ಅಗತ್ಯವಿದ್ದರೆ ಪರಿಣಿತ ಸಂಸ್ಥೆಗಳ ನೆರವು ಪಡೆಯಬಹುದು, ಆದರೆ ಎಲ್ಲಾ ಪ್ರಕ್ರಿಯೆ CPCB ಮೇಲ್ವಿಚಾರಣೆಯಲ್ಲಿಯೇ ನಡೆಯಬೇಕು.
• ವರದಿಯನ್ನು ಅರ್ಜಿದಾರರು ಮತ್ತು ವಕೀಲರಿಗೆ ಒದಗಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು
ನ್ಯಾಯ ಸಿಗುವುದೇ?
ಸಾವಿರಾರು ಜನರ ಬದುಕನ್ನು ಕಸಿದುಕೊಂಡ ಎಂಡೋಸಲ್ಫಾನ್ ದುರಂತದ ಕರಾಳ ಮುಖ ಈಗಲೂ ಜನರನ್ನು ಕಾಡುತ್ತಿದೆ. ನಾಪತ್ತೆಯಾಗಿರುವ ವಿಷದ ಬ್ಯಾರೆಲ್ಗಳು ಅಂತರ್ಜಲ ಸೇರಿ ಇನ್ನಷ್ಟು ಅನಾಹುತ ಸೃಷ್ಟಿಸುವ ಮುನ್ನವೇ ಎಚ್ಚೆತ್ತುಕೊಳ್ಳಬೇಕಿ
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
Uncategorized
Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.
ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.
ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.
ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.
ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.
ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.
ಮಾರ್ಗ ಬದಲಾವಣೆ ಕುರಿತು ಎಫ್‌ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್‌ಗಳು
ಹುಳಿಮಾವು ಜಂಕ್ಷನ್‌ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು
-
ರಾಜಕೀಯ24 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್7 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized6 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್7 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು7 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಕಾರ್ಯಕ್ರಮಗಳು24 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ರಾಜಕೀಯ5 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಶಿಕ್ಷಣ23 hours agoNarendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ















