ರಾಜಕೀಯ
‘Joint’ statement-ಹೈಕಮಾಂಡ್ ಸೂಚನೆ ಅಂತಿಮ: ʼಬ್ರೇಕ್ʼ ಫಾಸ್ಟ್ ನಲ್ಲಿ ಸಿದ್ದು-ಡಿಕೆಶಿ ʼಜಾಯಿಂಟ್ʼ ಹೇಳಿಕೆ, ಒಗ್ಗಟ್ಟಿನ ಮಂತ್ರ!
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ನಾಯಕತ್ವ ಗೊಂದಲಗಳಿಗೆ ತೆರೆ ಬಿದ್ದಿದೆ! ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು, “ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ನಡೆದುಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ನಾಯಕತ್ವ ಗೊಂದಲಗಳಿಗೆ ತೆರೆ ಬಿದ್ದಿದೆ! ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು, “ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಹೈಕಮಾಂಡ್ ಸೂಚನೆಯಂತೆ ನಾವಿಬ್ಬರೂ ನಡೆದುಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.
ಶನಿವಾರ ಬೆಳಿಗ್ಗೆ ಸಿಎಂ ನಿವಾಸ ‘ಕಾವೇರಿ’ಯಲ್ಲಿ ನಡೆದ ‘ಬ್ರೇಕ್ಫಾಸ್ಟ್ ಮೀಟಿಂಗ್’ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ಘೋಷಣೆ ಹೊರಬಿದ್ದಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಹೈಕಮಾಂಡ್ ನಿರ್ದೇಶನದಂತೆ ಭೇಟಿ: ರಹಸ್ಯ ಮಾತುಕತೆಯಲ್ಲೇನಾಯ್ತು?
ನಾಯಕತ್ವದ ಗೊಂದಲಗಳನ್ನು ನಿವಾರಿಸಲು ಎಐಸಿಸಿ ನಾಯಕ ಕೆ.ಸಿ. ವೇಣುಗೋಪಾಲ್ ಮಧ್ಯಪ್ರವೇಶಿಸಿದ್ದರು. ಅವರ ಸೂಚನೆಯ ಮೇರೆಗೇ ಈ ಮಹತ್ವದ ಉಪಾಹಾರ ಸಭೆ ನಡೆದಿದೆ. ಬೆಳಿಗ್ಗೆ 10 ಗಂಟೆಗೆ ಸಿಎಂ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸಿದರು. ಸುಮಾರು 45 ನಿಮಿಷಗಳ ಕಾಲ ನಡೆದ ಈ ರಹಸ್ಯ ಮಾತುಕತೆಯಲ್ಲಿ ಬೇರೆ ಯಾರಿಗೂ ಪ್ರವೇಶವಿರಲಿಲ್ಲ ಎಂಬುದು ಕುತೂಹಲಕ್ಕೆ ಮತ್ತಷ್ಟು ತುಪ್ಪ ಸುರಿದಿದೆ. ಸಭೆಯ ಸಾರಾಂಶವೇನು ಎಂಬುದು ನಿಗೂಢವಾಗಿಯೇ ಉಳಿದಿದೆ.
ವಿಪಕ್ಷಗಳಿಗೆ ಸವಾಲು: ಸಿದ್ದು-ಡಿಕೆಶಿ ರಣತಂತ್ರ!
ಡಿಸೆಂಬರ್ 8ರಂದು ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನಕ್ಕೆ ಈಗಲೇ ರಣಕಹಳೆ ಮೊಳಗಿದೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮಂಡಿಸಲಿರುವ ಅವಿಶ್ವಾಸ ನಿರ್ಣಯವನ್ನು ಸಮರ್ಥವಾಗಿ ಎದುರಿಸಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ತಂತ್ರ ರೂಪಿಸಿದ್ದಾರೆ. “ನಮ್ಮ ಬಳಿ 140 ಶಾಸಕರ ಬಲವಿದೆ. ವಿಪಕ್ಷಗಳ ಬಳಿ ಕೇವಲ 82 ಶಾಸಕರಿದ್ದಾರೆ. ಅವರ ಸುಳ್ಳು ಆರೋಪಗಳನ್ನು ನಾವು ಹಿಮ್ಮೆಟ್ಟಿಸುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
‘ನಮ್ಮದು ಕಾಂಗ್ರೆಸ್ ಗುಂಪು ಮಾತ್ರ’: ಡಿಕೆಶಿ ಸ್ಪಷ್ಟನೆ
ಡಿ.ಕೆ. ಶಿವಕುಮಾರ್ ಮಾತನಾಡಿ, “ನಮ್ಮ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್ ಗುಂಪು” ಎಂದು ಸ್ಪಷ್ಟಪಡಿಸಿದರು. 2023ರ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡಿದಂತೆಯೇ, ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ 2028ರ ಚುನಾವಣೆಯಲ್ಲೂ ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನಡೆಸುತ್ತೇವೆ ಎಂದು ಅವರು ಭರವಸೆ ನೀಡಿದರು.
‘ಊಟಕ್ಕೆ ಸೀಮಿತವಾಗಿದ್ದ ಚರ್ಚೆ’ ಎಂದ ಸಿಎಂ: ಆದರೆ ರೆಸಾರ್ಟ್ ವದಂತಿ?
“ಬ್ರೇಕ್ಫಾಸ್ಟ್ ತುಂಬಾ ಚೆನ್ನಾಗಿತ್ತು, ಅಲ್ಲಿ ಕೇವಲ ಉಪಾಹಾರ ಸೇವಿಸಿದೆವು, ರಾಜಕೀಯ ಮಾತನಾಡಲಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಲಘು ಧಾಟಿಯಲ್ಲಿ ಹೇಳಿ ನಕ್ಕರು. ಆದರೆ, ಶುಕ್ರವಾರ ರಾತ್ರಿ ಡಿ.ಕೆ. ಶಿವಕುಮಾರ್ ಅವರು ಆಪ್ತ ಶಾಸಕರೊಂದಿಗೆ ರೆಸಾರ್ಟ್ನಲ್ಲಿ ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂಬ ವದಂತಿಯೂ ಹಬ್ಬಿದೆ. ಈ ವದಂತಿಗಳು ಸಿದ್ದು-ಡಿಕೆಶಿ ಜಂಟಿ ಹೇಳಿಕೆಯ ನಡುವೆಯೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.
ಕಾಂಗ್ರೆಸ್ನ ಒಗ್ಗಟ್ಟು ಕಾಯುವುದೇ ಸವಾಲು?
ನಾಯಕತ್ವದ ಗೊಂದಲಗಳಿಗೆ ತಾತ್ಕಾಲಿಕ ತೆರೆ ಬಿದ್ದಿದ್ದರೂ, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವಿನ ಹೊಂದಾಣಿಕೆ ಹಾಗೂ ಪಕ್ಷದೊಳಗಿನ ಬಣ ರಾಜಕೀಯವನ್ನು ನಿಭಾಯಿಸುವುದು ಕಾಂಗ್ರೆಸ್ಗೆ ದೊಡ್ಡ ಸವಾಲಾಗಲಿದೆ. ಹೈಕಮಾಂಡ್ನ ಮಧ್ಯಪ್ರವೇಶ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಅಪರಾಧ17 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ24 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ರಾಜಕೀಯ17 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ22 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್16 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ22 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ23 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ23 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















