ರಾಜಕೀಯ
Siddaramaiah-ಸಕಲೇಶಪುರದಲ್ಲಿ ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆಯ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ – ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ; ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ; ಅರೆಭಾಷೆ ಕಾರ್ಯಕ್ರಮದಲ್ಲಿ ಕುರುಂಜಿ ವೆಂಕಟರಮಣ ಗೌಡರನ್ನು ನೆನಪಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು, ನ.30: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ, ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ , ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ ಎಂದರು. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.
ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ.
ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣ ಗೌಡರು, ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದರು.
50 ಲಕ್ಷ ರೂ.ಬೇಡಿಕೆಯನ್ನು ಈಡೇರಿಸಲಾಗುವುದು
ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ .ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂ.ಬೇಡಿಕೆಯನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು: ಭರವಸೆ
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆಯಿತ್ತರು.
ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಡಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಚಿವ ಭೈರತಿ ಸುರೇಶ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಅಂತರಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಉಪಸ್ಥಿತರಿದ್ದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.


















