ನಿಧನ ವಾರ್ತೆ
Bengaluru-ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಮೋಸ, ದೈಹಿಕ ಕಿರುಕುಳ: ನೊಂದ ಯುವತಿ ಖ್ಯಾತ ನಟಿ ಸಂಬಂಧಿ ಆತ್ಮಹತ್ಯೆಗೆ ಶರಣು
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಪರಿಣಾಮ ಮನನೊಂದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾಸನ ಮೂಲದ ಅಚಲಾ ಹರ್ಷ (22) ಎಂದು ಗುರುತಿಸಲಾಗಿದ್ದು, ಇವರು ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ (ಮಾವನ ಮಗಳು) ಎಂದು ತಿಳಿದುಬಂದಿದೆ.
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಪರಿಣಾಮ ಮನನೊಂದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾಸನ ಮೂಲದ ಅಚಲಾ ಹರ್ಷ (22) ಎಂದು ಗುರುತಿಸಲಾಗಿದ್ದು, ಇವರು ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ (ಮಾವನ ಮಗಳು) ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಅಚಲಾ ಅವರ ತಂದೆ ಹರ್ಷ ನೀಡಿದ ದೂರಿನ ಮೇರೆಗೆ, ಪ್ರಿಯಕರ ಮಯಾಂಕ್ ಗೌಡ ಹಾಗೂ ಆತನ ತಾಯಿ ಮೈನಾ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಘಟನೆಯ ವಿವರ:
ಎಂಜಿನಿಯರಿಂಗ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ ಅಚಲಾಗೆ, ತನ್ನ ದೂರದ ಸಂಬಂಧಿ ಮಯಾಂಕ್ ಗೌಡನ ಪರಿಚಯವಾಗಿತ್ತು. ಪ್ರೀತಿಸುವುದಾಗಿ ನಂಬಿಸಿದ್ದ ಆರೋಪಿ, ಆಕೆಯನ್ನು ಹಲವು ಕಡೆ ಕರೆದೊಯ್ದು ಮದುವೆಗೂ ಮುನ್ನವೇ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದ ಎನ್ನಲಾಗಿದೆ. ಇದಕ್ಕೆ ಅಚಲಾ ನಿರಾಕರಿಸಿದಾಗ ಹಲ್ಲೆ ನಡೆಸಿ, ಮಾನಸಿಕ ಹಿಂಸೆ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ವಿಷಯವನ್ನು ಅಚಲಾ, ಮಯಾಂಕ್ ತಾಯಿ ಮೈನಾಗೆ ತಿಳಿಸಿದಾಗ, ಅವರು ಕೂಡ ಮಗನನ್ನೇ ಸಮರ್ಥಿಸಿಕೊಂಡು ಯುವತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. “ನಾನು ಶ್ರೀಮಂತ ಯುವತಿಯನ್ನು ಮದುವೆಯಾಗುತ್ತೇನೆ, ಇದಕ್ಕೆ ನನ್ನ ತಾಯಿಯ ಸಹಕಾರವೂ ಇದೆ” ಎಂದು ಹೇಳಿ ಮಯಾಂಕ್ ಬೆದರಿಕೆ ಹಾಕಿದ್ದರಿಂದ ಅಚಲಾ ತೀವ್ರವಾಗಿ ನೊಂದಿದ್ದರು.
ಪೋಷಕರ ಆಕ್ರೋಶ:
ಮಾನಸಿಕವಾಗಿ ಕುಗ್ಗಿಹೋಗಿದ್ದ ಅಚಲಾ ಅವರನ್ನು ಬೆಂಗಳೂರಿನ ಪಾಂಡುರಂಗ ನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ನವೆಂಬರ್ 21ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಚಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದು ಹತ್ತು ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪೋಷಕರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆರೋಪಿಗಳಿಬ್ಬರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಪೊಲೀಸರು ಅಚಲಾ ಮತ್ತು ಮಯಾಂಕ್ ನಡುವಿನ ವಾಟ್ಸ್ಆ್ಯಪ್ ಸಂದೇಶಗಳನ್ನು ಪರಿಶೀಲಿಸುತ್ತಿದ್ದು, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಸಂದೇಶಗಳನ್ನು ಅಳಿಸಿಹಾಕಿದ್ದಲ್ಲಿ, ದತ್ತಾಂಶ ಮರುಸಂಗ್ರಹಕ್ಕಾಗಿ ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ನಿಧನ ವಾರ್ತೆ
Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.
ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಅಪರಾಧ17 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ24 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ರಾಜಕೀಯ17 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ22 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್16 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ22 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ23 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ23 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















