ಸ್ಥಳೀಯ
HDK-ದೇವೇಗೌಡರನ್ನು ಸಿಎಂ ಮಾಡಿದ್ದು ಸ್ವಾಮೀಜಿಗಳಲ್ಲ: ಡಿಕೆಶಿ ಹೇಳಿಕೆಗೆ ಎಚ್‌ಡಿಕೆ ತಿರುಗೇಟು
“ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಖ್ಯಮಂತ್ರಿಯಾಗಲು ಯಾವುದೇ ಮಠಾಧೀಶರ ಪ್ರಭಾವ ಕಾರಣವಾಗಿರಲಿಲ್ಲ. ಒಂದು ವೇಳೆ ಅವರು ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಿದ್ದರೆ 1972ರಲ್ಲೇ ಮುಖ್ಯಮಂತ್ರಿಯಾಗುತ್ತಿದ್ದರು, 1994ರವರೆಗೆ ಕಾಯುವ ಅಗತ್ಯವಿರಲಿಲ್ಲ,” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ: “ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಖ್ಯಮಂತ್ರಿಯಾಗಲು ಯಾವುದೇ ಮಠಾಧೀಶರ ಪ್ರಭಾವ ಕಾರಣವಾಗಿರಲಿಲ್ಲ. ಒಂದು ವೇಳೆ ಅವರು ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಿದ್ದರೆ 1972ರಲ್ಲೇ ಮುಖ್ಯಮಂತ್ರಿಯಾಗುತ್ತಿದ್ದರು, 1994ರವರೆಗೆ ಕಾಯುವ ಅಗತ್ಯವಿರಲಿಲ್ಲ,” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು. “ದೇವೇಗೌಡರು ಸಿಎಂ ಆಗಿದ್ದಾಗ ಪಟ್ಟ ಶ್ರಮದ ಬಗ್ಗೆ ಯಾರೂ ಚರ್ಚಿಸುವುದಿಲ್ಲ. ಆದರೆ, ಅವರನ್ನು ಸಿಎಂ ಮಾಡಲು ಅಂದು ಯಾವ ಸ್ವಾಮೀಜಿಯೂ ಸಭೆ ನಡೆಸಿರಲಿಲ್ಲ ಅಥವಾ ಹೇಳಿಕೆ ನೀಡಿರಲಿಲ್ಲ. ಪಾಪ, ಈಗ ಇವರು (ಕಾಂಗ್ರೆಸ್ ನಾಯಕರು) ಹಾಗೆ ಹೇಳುತ್ತಿದ್ದಾರೆ,” ಎಂದು ವ್ಯಂಗ್ಯವಾಡಿದರು.
ಆರ್ಥಿಕ ದಿವಾಳಿ ಮತ್ತು ಆಡಳಿತ ನಿಷ್ಕ್ರಿಯ:
ಮುಖ್ಯಮಂತ್ರಿ ಸ್ಥಾನದ ಆಂತರಿಕ ಗುದ್ದಾಟದಲ್ಲಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. “ಪ್ರಸಕ್ತ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹದಲ್ಲಿ ₹15,000 ಕೋಟಿ ಕೊರತೆ ಉಂಟಾಗಿದೆ. ತುಂಗಭದ್ರಾ ಜಲಾಶಯದ ಗೇಟ್ ಅಳವಡಿಸಿದ ಗುತ್ತಿಗೆದಾರನಿಗೆ ಇನ್ನೂ ಹಣ ಪಾವತಿಸಿಲ್ಲ. ಕೆಪಿಎಸ್ ಶಾಲೆಗಳನ್ನು ನಿರ್ಮಿಸಲು ಖಾಸಗಿ ಕಂಪನಿಗಳ ಸಿಎಸ್‌ಆರ್ (CSR) ನಿಧಿಯನ್ನು ಅವಲಂಬಿಸುವ ದುಸ್ಥಿತಿಗೆ ಸರ್ಕಾರ ತಲುಪಿದೆ,” ಎಂದು ಟೀಕಿಸಿದರು.
ಪೊಲೀಸರ ಮೇಲೆಯೇ ದರೋಡೆ ಆರೋಪ:
ಸಿಎಂ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, “ಸಿದ್ದರಾಮಯ್ಯ 2013ರಲ್ಲಿ ಸಿಎಂ ಆಗಿದ್ದಾಗ ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ಚಿನ್ನದ ವ್ಯಾಪಾರಿಯನ್ನು ದರೋಡೆ ಮಾಡಿದ್ದರು. ಪ್ರಸ್ತುತ ದಾವಣಗೆರೆ ಮತ್ತು ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣಗಳ ನೇತೃತ್ವವನ್ನೂ ಪೊಲೀಸರೇ ವಹಿಸಿದ್ದಾರೆ. ಅತ್ತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಡಿಸ್ಟಿಲರಿ ನಡೆಸುತ್ತಿದ್ದಾರೆ. ಇದೆಲ್ಲವೂ ರಾಜ್ಯದ ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ,” ಎಂದು ವಾಗ್ದಾಳಿ ನಡೆಸಿದರು.
ಶಿಕ್ಷಣ
Philomena-ಸಾಂಸ್ಕೃತಿಕ ಸ್ಪರ್ಧೆ: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಸೃಜನಾ ಪಿ.ಸಿ. ರಾಜ್ಯ ಮಟ್ಟಕ್ಕೆ ಆಯ್ಕೆ
ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಸಹಯೋಗದಲ್ಲಿ ಗೋವಿಂದ ದಾಸ ಪದವಿ ಪೂರ್ವ ಕಾಲೇಜು ಸುರತ್ಕಲ್ ಆಯೋಜಿಸಿದ ದಕ್ಷಿಣ ಕನ್ನಡ ಪ ಪೂ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಸೃಜನಾ ಪಿ ಸಿ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ
ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.
ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಕಾಲೇಜಿನ ಆವರಣದಲ್ಲಿ ನಡೆಯುವ ಈ ಪ್ರದರ್ಶನದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಯಾರಿಸಿದ ನವೀನ ವಿನ್ಯಾಸದ
ವಿವಿಧ ಪ್ರಾಜೆಕ್ಟ್ಗಳು ಪ್ರದರ್ಶಿಸಲ್ಪಡುತ್ತವೆ.
ಕಂಪ್ಯೂಟರ್ ಸೈನ್ಸ್, ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್, ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗಗಳ ಹೊಸ ಹೊಸ ಯೋಜನೆಗಳ ಮಾದರಿಗಳನ್ನು ಪ್ರದರ್ಶನಕ್ಕೆ ಸಿದ್ದಗೊಳಿಸಲಾಗಿದೆ.
ಆಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಪ್ರಾಂಶುಪಾಲ ಡಾ. ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಅಪರಾಧ
FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.
ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ24 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ23 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಶಿಕ್ಷಣ2 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ1 hour agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ

















