Connect with us

ರಾಜಕೀಯ

Siddaramaiah-ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು; ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಸಿಎಂ ಸಿದ್ದರಾಮಯ್ಯ

Published

on



Ad Widget

Ad Widget

Ad Widget

Ad Widget

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Ad Widget

Ad Widget

Ad Widget

Ad Widget

ಬೆಂಗಳೂರು, ಡಿಸೆಂಬರ್ 2 : ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Ad Widget

Ad Widget <> Ad Widget

ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ
ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.



Ad Widget

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ
ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು,ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶುಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.

Ad Widget

Ad Widget

ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ರಾಜ್ಯ ಸಂಸದರ ಸಭೆ
ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶುಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷದ ಎಥನಾಲ್ ಗಾಗಿ ಬಳಸುತ್ತಾರೆ. ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು .ಎಥನಾಲ್ ಹಾಗೂ ಎಂ ಎಸ್ ಪಿ, ಎಫ್ ಆರ್ ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು.

ಹೈ ಕಮಾಂಡ್ ಭೇಟಿ
ಸಮಯ ಸಿಕ್ಕು ಭೇಟಿಗೆ ಅವಕಾಶ ನೀಡಿಯೇ ಹೈ ಕಮಾಂಡ್ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತೇವೆ ಎಂದರು.

ಉಪಮುಖ್ಯಮಂತ್ರಿಗಳ ಮನೆಯ ಉಪಾಹಾರದಲ್ಲಿ ಮಾಂಸಾಹಾರವಿತ್ತು, ನಮ್ಮ ಮನೆಯಲ್ಲಿ ಸಸ್ಯಾಹಾರದ ಉಪಾಹಾರವಿತ್ತು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು.

ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಿಎಲ್. ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು.

ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು
ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028 ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದರು.

ಪರಮೇಶ್ವರ್ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಉಪಾಹಾರಕ್ಕೆ ಕರೆಯುವುದಾಗಿ ಹೇಳಿರುವ ಬಗ್ಗೆ ಮಾತನಾಡಿ ಅದನ್ನು ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಾರೆ ಎಂದು ಹೇಳಿದರು.

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading