ಶಿಕ್ಷಣ
Vivekananda-ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ವಿಜ್ಞಾನ ಮತ್ತು ಸೃಜನಶೀಲತೆಯ ಮಹಾಸಂಭ್ರಮ: ಆವಿಷ್ಕಾರ -2k25, ಅಂತರ್ ಜಿಲ್ಲಾ ವಿಜ್ಞಾನ ಮೇಳ, ಚಿಣ್ಣರ ಚಿತ್ತಾರ..!
ನೆಹರುನಗರದ ಪ್ರತಿಷ್ಠಿತ ವಿವೇಕಾನಂದ ಸೆಂಟ್ರಲ್ ಸ್ಕೂಲ್, ಡಿ. 4 ರಿಂದ 6 ರವರೆಗೆ ವಿಜ್ಞಾನ ಮತ್ತು ಕಲಾ ಲೋಕದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಲಿದೆ. ‘ಆವಿಷ್ಕಾರ -2k25’ ಅಂತರ್ ಜಿಲ್ಲಾ ವಿಜ್ಞಾನ ಮೇಳ ಮತ್ತು ‘ಚಿಣ್ಣರ ಚಿತ್ತಾರ’ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ಸೃಜನಶೀಲತೆ ಹಾಗೂ ದೈನಂದಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಬೆಳೆಸುವ ಮಹತ್ತರ ಗುರಿಯನ್ನು ಈ ಕಾರ್ಯಕ್ರಮಗಳು ಹೊಂದಿವೆ.
ಪುತ್ತೂರು: ನೆಹರುನಗರದ ಪ್ರತಿಷ್ಠಿತ ವಿವೇಕಾನಂದ ಸೆಂಟ್ರಲ್ ಸ್ಕೂಲ್, ಡಿ. 4 ರಿಂದ 6 ರವರೆಗೆ ವಿಜ್ಞಾನ ಮತ್ತು ಕಲಾ ಲೋಕದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಲಿದೆ. ‘ಆವಿಷ್ಕಾರ -2k25’ ಅಂತರ್ ಜಿಲ್ಲಾ ವಿಜ್ಞಾನ ಮೇಳ ಮತ್ತು ‘ಚಿಣ್ಣರ ಚಿತ್ತಾರ’ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ಸೃಜನಶೀಲತೆ ಹಾಗೂ ದೈನಂದಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಬೆಳೆಸುವ ಮಹತ್ತರ ಗುರಿಯನ್ನು ಈ ಕಾರ್ಯಕ್ರಮಗಳು ಹೊಂದಿವೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ರ ಆಶಯಗಳಿಗೆ ಪೂರಕವಾಗಿ ಈ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶಾಲೆಯ ಅಧ್ಯಕ್ಷೆ ವಸಂತಿ ಕೆದಿಲ ಮತ್ತು ಪ್ರಾಂಶುಪಾಲೆ ಸಿಂಧು ವಿ.ಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಿ. 4 – ಇಂಡಿಯನ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ಫೇರ್ ಪ್ರಾಜೆಕ್ಟ್ ಪ್ರದರ್ಶನ:
ಕಾರ್ಯಕ್ರಮಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಅನಿರ್ಬನ್ ಚಕ್ರಬರ್ತಿ ಅತಿಥಿಗಳಾಗಿ ಭಾಗವಹಿಸಲಿದ್ದು, ಸೈನ್ಸ್ ಸೊಸೈಟಿ ಇಂಡಿಯಾದ ಅಧ್ಯಕ್ಷ ನಾರಾಯಣ ಐಯ್ಯರ್ ಗೌರವ ಉಪಸ್ಥಿತಿ ಇರಲಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಆಡಳಿತ ಮಂಡಳಿ ಸದಸ್ಯ ಅಜೆಯ ಪಡಿವಾಳ್ ವಹಿಸಲಿದ್ದಾರೆ. ವಿವೇಕಾನಂದ ಇನ್ಸಿಟ್ಯೂಟ್ ಆಫ್ ಫಾರ್ಮಾಸೂಟಿಕಲ್ ಸೈನ್ಸಸ್ನ ಪ್ರಾಂಶುಪಾಲ ಡಾ. ಗುರುರಾಜ ಎಂ ಪಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಡಿ. 5 – ಜ್ಞಾನದ ಅಮೃತ ಹಂಚಿಕೆ ಮತ್ತು ಸ್ಪರ್ಧೆಗಳು:
ಟಾಟಾ ಇನ್ಸಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್, ಮುಂಬೈಯ ವಿಜ್ಞಾನಿಗಳು ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನದ ಮೂಲ ತತ್ವಗಳು ಮತ್ತು ಪರಿಕಲ್ಪನೆಗಳನ್ನು ಸರಳ ಪ್ರಾತ್ಯಕ್ಷಿಕೆಗಳ ಮೂಲಕ ವಿವರಿಸಿ, ಸಂವಾದ ನಡೆಸಲಿದ್ದಾರೆ. ಈ ಅಪೂರ್ವ ಅವಕಾಶವನ್ನು ಪ್ರತಿ ಶಾಲೆಯಿಂದ 40 ಮಕ್ಕಳಿಗೆ ಕಲ್ಪಿಸಲಾಗಿದೆ. ಇದೇ ದಿನ 6 ರಿಂದ 8ನೇ ಮತ್ತು 9 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಆವಿಷ್ಕಾರ’ ಅಂತರ್ ಶಾಲಾ ವಿವಿಧ ಸ್ಪರ್ಧೆಗಳು ನಡೆಯಲಿವೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ.ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವೈದ್ಯ ಸೈಂಟಿಫಿಕ್ ಆಫೀಸರ್, ಮುಂಬೈ ಇದರ ಉಲ್ಲಾಸ್ ಎಂ.ವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಹುಮಾನ ವಿತರಣೆಯಲ್ಲಿ ಮರಿಕೆ ಸಾವಯವ ಮಳಿಗೆಯ ಮಾಲೀಕ ಸುಹಾಸ್ ಎ.ಪಿ.ಎಸ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಡಿ. 6 – ಚಿಣ್ಣರ ಚಿತ್ತಾರ ಮತ್ತು ಸಾಧಕರಿಗೆ ಸನ್ಮಾನ:
ಕೊನೆಯ ದಿನ ‘ಚಿಣ್ಣರ ಚಿತ್ತಾರ’ ಕಾರ್ಯಕ್ರಮಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಆಡಳಿತ ಮಂಡಳಿ ಸದಸ್ಯೆ ಶಂಕರಿ ಶರ್ಮ ಅವರು ಚಾಲನೆ ನೀಡಲಿದ್ದಾರೆ. ಸುಳ್ಯ ಕೇಶವಕೃಪ ಯೋಗ ಕಲಾ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀದೇವಿ ನಾಗರಾಜ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯಲಿರುವ ‘ಚಿಣ್ಣರ ಸಾಧನಾ ಸನ್ಮಾನ’ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಪ್ರೀತಿ ಶೆಣೈ ವಹಿಸಲಿದ್ದು, ನಿವೇದಿತ ಶಿಶು ಮಂದಿರದ ಅಧ್ಯಕ್ಷೆ ಲಕ್ಷ್ಮೀ ವಿ.ಜಿ. ಭಟ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆ – ತಾರಾಲಯ ವೀಕ್ಷಣೆ!
ಡಿ. 5 ಮತ್ತು 6 ರಂದು ವಿಶೇಷ ಆಕರ್ಷಣೆಯಾಗಿ ತಾರಾಲಯ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವನ್ನು ಮಕ್ಕಳಿಗೆ ಉಚಿತವಾಗಿ ನೀಡಲಾಗಿದ್ದು, ಭಾಗವಹಿಸುವ ಎಲ್ಲಾ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಂಚಾಲಕ ಭರತ್ ಪೈ, ಪ್ರಾಂಶುಪಾಲೆ ಸಿಂಧು ವಿ.ಜಿ, ಉಪಪ್ರಾಂಶುಪಾಲೆ ಶ್ರೀದೇವಿ ಹೆಗ್ಡೆ ಉಪಸ್ಥಿತರಿದ್ದರು.
ಶಿಕ್ಷಣ
Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.
2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.
ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಶಿಕ್ಷಣ
Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
-
ಬಿಗ್ ನ್ಯೂಸ್19 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್19 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ22 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ಶಿಕ್ಷಣ23 hours agoNarendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
-
ನಿಧನ ವಾರ್ತೆ25 minutes agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ಸ್ಥಳೀಯ16 minutes agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ನಿಧನ ವಾರ್ತೆ5 minutes agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ















