ರಾಜಕೀಯ
Ashok Rai-ಪುತ್ತೂರು ನಗರವಲಯ ಕಾಂಗ್ರೆಸ್ ಅಧ್ಯಕ್ಷರುಗಳ, ಕಾರ್ಯಕರ್ತರ ಸಭೆ; ಕಾಂಗ್ರೆಸ್‌ಪರ ಅಲೆ ಪುತ್ತೂರಿನಲ್ಲಿದೆ- ನಗರಸಭೆಯಲ್ಲಿ 30 ಸ್ಥಾನವನ್ನು ಗೆಲ್ಲುವ ಗುರಿಯಿರಲಿ: ಶಾಸಕ ಅಶೋಕ್ ರೈ
ಪುತ್ತೂರಿನ ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಕಾಂಗ್ರೆಸ್‌ಗೆ ಚಾಲನೆ ನೀಡಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು ನಗರ ಕಾಂಗ್ರೆಸ್‌ಗೆ ಬದಲಾಗಿ ಪುತ್ತೂರು ನಗರದಲ್ಲಿ ಏಳು ವಲಯಗಳನ್ನು ಸ್ಥಾಪಿಸಲಾಗಿದ್ದು ಏಳು ವಲಯಗಳ ಅಧ್ಯಕ್ಷರುಗಳು ಸಭೆಯಲ್ಲಿ ಹಾಜರಿದ್ದರು.
ಪುತ್ತೂರು: ಕರ್ನಾಟಕದ ಕಾಂಗ್ರೆಸ್ ಸರಕಾರ ಜನಪರ ಹಾಗೂ ಅಭಿವೃದ್ದಿಪರ ಸರಕಾರವಾಗಿದ್ದು, ಸರಕಾರದ ಪಂಚ ಗ್ಯಾರಂಟಿ ಹಾಗೂ ಪುತ್ತೂರಿನಲ್ಲಿ ನಡೆದಿರುವ ಅಭಿವೃದ್ದಿ ಕಾರ್ಯಗಳಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್ ಪರ ಅಲೆ ಇದ್ದು ಈ ಬಾರಿಯ ನಗರಸಭಾ ಚುನಾವಣೆಯಲ್ಲಿ 30 ಸ್ಥಾನವನ್ನು ಗೆಲ್ಲುವ ಗುರಿಯೊಂದಿಗೆ ಪ್ರತೀಯೊಬ್ಬ ನಾಯಕ, ಕಾರ್ಯಕರ್ತರು ಒಟ್ಟು ಸೇರಿ ಕೆಲಸಮಾಡಬೇಕು ಹಾಗಿದ್ದಲ್ಲಿ ಇಲ್ಲಿ ಕಾಂಗ್ರೆಸ್ಸನ್ನು ಅಲುಗಾಡಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಅವರು ಪುತ್ತೂರಿನ ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಕಾಂಗ್ರೆಸ್‌ಗೆ ಚಾಲನೆ ನೀಡಿ ಮಾತನಾಡಿದರು. ಪುತ್ತೂರು ನಗರ ಕಾಂಗ್ರೆಸ್‌ಗೆ ಬದಲಾಗಿ ಪುತ್ತೂರು ನಗರದಲ್ಲಿ ಏಳು ವಲಯಗಳನ್ನು ಸ್ಥಾಪಿಸಲಾಗಿದ್ದು ಏಳು ವಲಯಗಳ ಅಧ್ಯಕ್ಷರುಗಳು ಸಭೆಯಲ್ಲಿ ಹಾಜರಿದ್ದರು.
ರಾಜ್ಯವನ್ನಾಳಿದ ಯಾವುದೇ ಸರಕಾರಗಳು ಮಾಡದ ಕೆಲಸವನ್ನು ಈ ಬಾರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಾಡಿದೆ, ಪಂಚ ಗ್ಯಾರಂಟಿ ಯೋಜನೆಗಳು ಶೇ. 98.88 ಕುಟುಂಬಗಳನ್ನು ತಲುಪಿದೆ, ಕಾಂಗ್ರೆಸ್, ಬಿಜೆಪಿ ಎನ್ನದೆ ಪ್ರತೀಯೊಬ್ಬರಿಗೂ ಕಾಂಗ್ರೆಸ್ ಸರಕಾರದ ಯೋಜನೆಯ ಲಾಭಗಳು ದೊರಕಿದೆ. ಪ್ರತೀ ಮನೆಯ ಪ್ರತೀ ಮಹಿಳೆಯ ಖಾತೆಯಲ್ಲೂ ಇಂದು ಹಣ ಇರುವಂತೆ ಸರಕಾರ ವ್ಯವಸ್ಥೆ ಮಾಡಿದೆ, ಪಂಚ ಗ್ಯಾರಂಟಿ ಯೋಜನೆಗಳೇ ನಮಗೆ ಚುನಾವಣೆಗೆ ಮತ ಕೇಳಲು ದೊಡ್ಡ ಆಯುಧವಾಗಿದೆ ಎಂದು ಹೇಳಿದರು.
ಪುತ್ತೂರಿನಲ್ಲಿ 2006ಕೋಟಿ ರೂ ಅನುದಾನವನ್ನು ತಂದಿದ್ದೇನೆ. ನಗರಸಭಾ ವ್ಯಾಪ್ತಿಯಲ್ಲಿರುವ ಕುಡಿಯುವನೀರು, ರಸ್ತೆ ಸಮಸ್ಯೆಗೆ ಸ್ಪಂದನೆ ನೀಡಲಾಗಿದೆ. ವಲಯ, ಬೂತ್ ಅಧ್ಯಕ್ಷರುಗಳಿಗೆ ಗೌರವ ನೀಡುವ ಕೆಲಸ ಆಗಿದೆ. ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದೆ, ನಗರದಲ್ಲಿ ಚರಂಡಿ ವ್ಯವಸ್ಥೆ ಶೀಘ್ರದಲ್ಲೇ ಆರಂಭವಾಗಲಿದೆ, ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಬಿರುಮಲೆ ಬೆಟ್ಟದ ಅಭಿವೃದ್ದಿ ಕಾರ್ಯಗಳು ನಡೆಯುತ್ತಿದೆ ಇದೆಲ್ಲವೂ ನಮಗೆ ಚುನಾವಣೆಗೆ ಅಸ್ತçಗಳಾಗಿದೆ ಎಂದು ಶಾಸಕರು ಹೇಳಿದರು.
ಹಿಂದುತ್ವದ ಆಧಾರದಲ್ಲಿ ಹೇಗೆ ಮತ ಕೇಳುತ್ತಾರೆ?
ವಿರೋಧ ಪಕ್ಷದವರು ಪ್ರತೀ ಬಾರಿ ಚುನಾವಣೆ ಬಂದಾಗ ಹಿಂದುತ್ವದ ಆಧಾರದಲ್ಲಿ ವೋಟು ಕೇಳುತ್ತಾರೆ, ಅಭಿವೃದ್ದಿ ಅವರಿಗೆ ಬೇಕಾಗಿಲ್ಲ, ಬಿಜೆಪಿಯವರು ಗೆದ್ದ ಬಳಿಕ ಕ್ಷೇತ್ರವನ್ನೇ ಮರೆತುಬಿಡುತ್ತಾರೆ, ಜನರ ಸಮಸ್ಯೆಗೂ ಸ್ಪಂದನೆ ನೀಡುತ್ತಿಲ್ಲ ಎಂಬ ವ್ಯಾಪಕ ದೂರುಗಳು ಬರುತ್ತಿದೆ. ಜನರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಅವರ ಮನ ಗೆಲ್ಲುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗವನ್ನು ಒಳಗೆ ಹಾಕಿದವರು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದ ಶಾಸಕರು ಇವರು ಯಾವ ಆಧಾರದಲ್ಲಿ ಹುಂದುತ್ವದ ಹೆಸರಲ್ಲಿ ಮತ ಕೇಳುತ್ತಾರೆ ಇದನ್ನು ಜನರು ಪ್ರಶ್ನೆ ಮಾಡಬೇಕು ಎಂದು ಶಾಸಕರು ಹೇಳಿದರು.
ಪಕ್ಷ ಸೂಚಿಸಿದವರೇ ಅಭ್ಯರ್ಥಿ
ಚುನಾವಣೆಯಲ್ಲಿ ಅವರು ನನ್ನ ಅಭ್ಯರ್ಥಿ ಇವರು ನನ್ನ ಅಭ್ಯರ್ಥಿ ಎಂದು ಯಾರೂ ಹೇಳಬಾರದು. ಪಕ್ಷ ಯಾರನ್ನು ಸೂಚನೆ ಮಾಡುತ್ತದೋ ಅವರೇ ಅಭ್ಯರ್ಥಿ, ಯಾರೇ ಅಭ್ಯರ್ಥಿಯಾದರೂ ಅವರನ್ನು ಗೆಲ್ಲಿಸುವಲ್ಲಿ ಪ್ರತೀಯೊಬ್ಬರೂ ಮುತವರ್ಜಿವಹಿಸಬೇಕು. ನಾವು ಮಾಡಿದ ಅಭಿವೃದ್ದಿ ಕೆಲಸಗಳೇ ನಮಗೆ ವರಧಾನವಾಗಲಿದೆ ಇದರಲ್ಲಿ ಯಾವುದೇ ಸಂಶಯಬೇಡ ಎಂದು ಹೇಳಿದರು. ಕಾರ್ಯಕರ್ತರು ಶಿಸ್ತನ್ನು ಅಳವಡಿಸುವ ಮೂಲಕ ತಳಮಟ್ಟದ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಮಾಡಿ, ಅವರ ಸೇವೆಯನ್ನು ಮಾಡುವ ಮೂಲಕ ಪಕ್ಷ ಕಟ್ಟುವ ಕೆಲಸ ಮಾಡಬೇಕು ಎಂದು ಶಾಸಕರು ಹೇಳಿದರು.
ವ್ಯಕ್ತಿಗಿಂದ ಪಕ್ಷವೇ ದೊಡ್ಡದು: ಕಾವು ಹೇಮನಾಥ ಶೆಟ್ಟಿ
ವ್ಯಕ್ತಿಗಿಂತ ಪಕ್ಷವೇ ದೊಡ್ಡದು. ಅಶೋಕ್ ರೈ ಶಾಸಕರಾದ ಬಳಿಕ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಮುಂದೆ ಇರುವುದೂ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಏಳಿಗೆಗೆ ಶ್ರಮಿಸಬೇಕು. ನಾನು ಮೇಲೆ ಅವನು ಕಳಗೆ ಎಂಬ ಮಾತೇ ಇಲ್ಲ ಇಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಕರ್ತರ ತರಹ ಕೆಲಸ ಮಾಡಬೇಕು ಆ gರೀತಿ ಮಾಡಿದಲ್ಲಿ ಇಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಯಾವ ಶಕ್ತಿಗೂ ಸಾಧ್ಯವಿಲ್ಲ. ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿರುವುದು ನಮ್ಮ ಭಾಗ್ಯವಾಗಿದೆ. ಇಷ್ಟರವರೆಗೆ ಇಲ್ಲಿ ಶಾಸಕರಾದವರಿಗೆ ಮೆಡಿಕಲ್ ಕಾಲೇಜು ತರಲು ಸಾಧ್ಯವಾಗಿಲ್ಲ. ಅಭಿವೃದ್ದಿಯ ಇಚ್ಚಾಶಕ್ತಿ ಇದ್ದಲ್ಲಿ ಏನೂ ಸಾಧಿಸಬಹುದು ಎಂಬುದಕ್ಕೆ ಶಾಸಕರೇ ಉಧಾಹರಣೆಯಾಗಿದ್ದಾರೆ. ಪುತ್ತೂರು ಅಭಿವೃದ್ದಿಯಾಗುತ್ತಿದೆ., ಮುಂದೆ ಉದ್ಯಮಗಳ ಬರಲಿದೆ ಆಗ ನಮ್ಮ ಮಕ್ಕಳಿಗೆ ಉದ್ಯೋಗ ದೊರೆಯಲಿದೆ. ಕಾಂಗ್ರೆಸ್ ಮಾತ್ರ ಬಡವರ ಪರ, ಅಭಿವೃದ್ದಿ ಪರ ಎಂಬುದು ಜನರಿಗೆ ಗೊತ್ತಾಗಿದೆ. ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ಕಾಂಗ್ರೆಸ್ಸಿನ ಶಕ್ತಿಯನ್ನು ತೋರಿಸಬೇಕು ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು.
ಸಂಕಷ್ಟದ ಪರಿಸ್ಥಿತಿಯಲ್ಲೂ ಕಾಂಗ್ರೆಸ್ ಗೆದ್ದಿದೆ: ಮಹಮ್ಮದಾಲಿ
ಕಾಂಗ್ರೆಸ್‌ಗೆ ಪುತ್ತೂರಿನಲ್ಲಿ ಸಂಕಷ್ಟದ ಸ್ಥಿತಿ ಇದ್ದ ಕಾಲದಲ್ಲಿ ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ನಮ್ಮ ಪಕ್ಷದ ಶಾಸಕರೇ ಇಲ್ಲದ ಕಾಲದಲ್ಲಿ ನಾವು ಚುನಾವಣೆ ಗೆದ್ದಿದ್ದು, ಈಗ ನಮ್ಮ ಸರಕಾರ ಇದೆ, ಶಾಸಕರಿದ್ದಾರೆ ಚುನಾವಣೆ ವೇಳೆ ನಾವು ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಾಂಗ್ರೆಸ್ 25 ರಿಂದ 30 ಸೀಟು ಗೆದ್ದೇ ಗೆಲ್ಲುತ್ತದೆ. ಈ ಬಾರಿಯ ನಗರಸಭಾ ಆಡಳಿತದ ಬಗ್ಗೆ ಜನತೆ ರೋಸಿ ಹೋಗಿದ್ದಾರೆ. ಯಾವುದೇ ಅಭಿವೃದ್ದಿ ಕೆಲಸ ಮಾಡಿಲ್ಲ, ಜನ ಕಲ್ಲೆಸೆದು ಓಡಿಸಲು ಮಾತ್ರ ಬಾಕಿ ಇತ್ತು. ಅಶೋಕ್ ರೈ ಶಾಸಕರಾದ ಬಳಿಕ ನಗರದಲ್ಲಿ ಅಭಿವೃದ್ದಿ ಕೆಲಸ, ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂಬುದು ಇಲ್ಲಿನ ನಾಗರಿಕರಿಗೆ ಚೆನ್ನಾಗಿ ಗೊತ್ತಿದೆ ಎಂದು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಆಲಿ ಹೇಳಿದರು.
ನಗರಸಭಾ ವ್ಯಾಪ್ತಿಯಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುತ್ತಿರುವುದು ಕಾಂಗ್ರೆಸ್ ಪರ ಅಲೆಯೇ ಕಾರಣವಾಗಿದೆ. ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿ ಮತದಾರರ ಪಟ್ಟಿಯಿಂದ ಕಾಂಗ್ರೆಸ್ ಪರ ಮತದಾರರ ಹೆಸರನ್ನು ಅಳಿಸುವ ಕೆಲಸಕ್ಕೆ ಮುಂದಾಗಿದ್ದು ಕಾರ್ಯಕರ್ತರು ಎಚ್ಚರದಿಂದ ಇರಬೇಕು ಎಂದು ಹೇಳಿದರು.
ಶೀಘ್ರ ಚುನಾವಣೆ ನಡೆಯಲಿ: ಬಡಗನ್ನೂರು
ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸರಕಾರ ಶೀಘ್ರ ನಡೆಸಬೇಕು. ಈ ವಿಚಾರದ ಬಗ್ಗೆ ಶಾಸಕರು ಅಧಿವೇಶನದಲ್ಲಿ ಸರಕಾರದ ಗಮನಸೆಳೆಯಬೇಕು. ಬಿಜೆಪಿ ಸರಕಾರ ಅಧಿಕಾರದಲ್ಲಿದ್ದ ವೇಳೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಮೇಲೆ ಆಸಕ್ತಿ ತೋರಿಸದ ಕಾರಣ ಕೆಲವೊಂದು ಚುನಾವಣೆಗಳು ವಿಳಂಬವಾಗಿದೆ. ಸ್ಥಳೀಯವಾಗಿ ನಾಯಕರು ಬೆಳೆಯುವುದು ಬಿಜೆಪಿಗೆ ಬೇಕಾಗಿಲ್ಲ ಎಂದು ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಹೇಳಿದರು. ಮುಂದಿನ ಚುನಾವಣೆಯಲ್ಲಿ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯ ಹಾಗೂ ರಾಜ್ಯ ಸರಕಾರದ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದಿಟ್ಟು ಮತಯಾಚನೆ ಮಾಡಬೇಕು. ಕಾರ್ಯಕರ್ತರು ಪ್ರತೀ ಮನೆ ಮನೆಗೆ ತೆರಳಿ ಸರಕಾರದ ಅಭಿವೃದ್ದಿ ಕಾರ್ಯಗಳನ್ನು ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಗುಂಪುಗಾರಿಕೆಯೇ ಇಲ್ಲ: ಕೆ ಪಿ ಆಳ್ವ
ಪುತ್ತೂರು ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಅಶೋಕ್ ರೈ ಶಾಸಕರಾದ ಬಳಿಕ ಎಲ್ಲರನ್ನೂ ಸಮಾನವಾಗಿ ಕಾಣುತ್ತಿರುವ ಕಾರಣ ಗುಂಪುಗಾರಿಕೆ ಇಲ್ಲವಾಗಿದೆ, ಮುಂಧೆಯೂ ಯಾವುದೇ ಗುಂಪುಗಾರಿಕೆಗೆ ಅವಕಾಶ ಇಲ್ಲ. ಪಕ್ಷದ ವಿಚಾರ ಏನಿದ್ದರೂ ಅದನ್ನು ಸಾರ್ವಜನಿಕವಾಗಿ , ಸಾಮಾಜಿಕ ತಾಣದಲ್ಲಿ ಚರ್ಚಿಸುವ ಕೆಲಸವನ್ನು ಯಾವ ಕಾರ್ಯಕರ್ತರೂ ಮಾಡಬಾರದು. ಯಾವುದೇ ಸಮಸ್ಯೆ, ತೊಂದರೆಗಳಿದ್ದರೆ ಅದನ್ನು ಸಂಬಂಧಿಸಿದವರ ಗಮನಕ್ಕೆ ತರಬೇಕು. ಶಾಸಕ ಅಶೋಕ್ ರೈ ಅವರ ಸಲಹೆ ಸೂಚನೆಯಂತೆ ಇಲ್ಲಿ ಪ್ರತೀಯೊಂದು ಕಾರ್ಯಚಟುವಟಿಕೆಗಳು ನಡೆಯಲಿದೆ. ಶಾಕರ ಅಭಿವೃದ್ದಿ ಕೆಲಸಗಳು ಪುತ್ತೂರಿನಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿದೆ. ಪಕ್ಷ ಬೇದವಿಲ್ಲದೆ, ಜಾತಿ, ಧರ್ಮ ಬೇದವಿಲ್ಲದೆ ಎಲ್ಲರಿಗೂ ನೆರವು ನೀಡುವ ಮೂಲಕ ಶಾಸಕರು ಪುತ್ತೂರಿನ ಜನತೆಯ ಪಾಲಿನ ಭಾಗ್ಯವಿಧಾತರಾಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹೇಳಿದರು.
ವೇದಿಕೆಯಲ್ಲಿ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಆಝಾದ್, ಕೆಪಿಸಿಸಿ ಸದಸ್ಯ ಪ್ರಸಾದ್ ಕೌಶಲ್ ಶೆಟ್ಟಿ , ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ವಲೇರಿಯನ್ ಡಯಾಸ್, ನಗರ ವಲಯ ಅಧ್ಯಕ್ಷರುಗಳಾದ ಲೋಕೇಶ್ ಗೌಡ ಪಡ್ಡಾಯೂರು, ರೋಶನ್ ರೈ ಬನ್ನೂರು, ಹರೀಶ್ ಆಚಾರ್ಯ, ಅಬ್ದುಲ್ಲ ಕೆ ಎಂ, ಮೋನು ಬಪ್ಪಳಿಗೆ, ಮುಖೇಶ್ ಕೆಮ್ಮಿಂಜೆ, ದಾಮೋಧರ್ ಭಂಡಾರ್ಕರ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ನೀರ್ಪಾಡಿ ಉಪಸ್ಥಿತರಿದ್ದರು.
ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
ಅಂತರ ರಾಜ್ಯ
CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.
“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.
“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್–ಎಸ್‌ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್‌ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್‌ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್‌ಪಿ ವಿರುದ್ಧ ಕಿಡಿಕಾರಿದ್ದಾರೆ.
ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್‌ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
-
ಬಿಗ್ ನ್ಯೂಸ್19 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್19 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ22 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ಶಿಕ್ಷಣ23 hours agoNarendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
-
ನಿಧನ ವಾರ್ತೆ25 minutes agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ಸ್ಥಳೀಯ16 minutes agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ನಿಧನ ವಾರ್ತೆ5 minutes agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ















