ರಾಷ್ಟ್ರೀಯ
Indian currency-ರೂಪಾಯಿ ಸಾರ್ವಕಾಲಿಕ ಕುಸಿತ: ₹90.15ಕ್ಕೆ ಇಳಿದ ಭಾರತದ ಕರೆನ್ಸಿ
ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ 90ರ ಗಡಿ ದಾಟಿ, ₹90.15ಕ್ಕೆ ತಲುಪಿದೆ.
ಮುಂಬೈ: ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ 90ರ ಗಡಿ ದಾಟಿ, ₹90.15ಕ್ಕೆ ತಲುಪಿದೆ.
ಬುಧವಾರದ ವಹಿವಾಟಿನ ಆರಂಭದಲ್ಲಿ ₹89.96ರಷ್ಟಿದ್ದ ರೂಪಾಯಿ ಮೌಲ್ಯ, ದಿನದ ಮಧ್ಯಭಾಗದಲ್ಲಿ ₹90.30ರವರೆಗೂ ಕುಸಿದಿತ್ತು. ದಿನದಂತ್ಯಕ್ಕೆ ₹90.15ಕ್ಕೆ ಸ್ಥಿರವಾಯಿತು. ಮಂಗಳವಾರದ ವಹಿವಾಟಿಗೆ ಹೋಲಿಸಿದರೆ ಬುಧವಾರ ಒಂದೇ ದಿನ ರೂಪಾಯಿ 19 ಪೈಸೆಯಷ್ಟು ಮೌಲ್ಯ ಕಳೆದುಕೊಂಡಿದೆ.
ರೂಪಾಯಿ ಕುಸಿತಕ್ಕೆ ಪ್ರಮುಖ ಕಾರಣಗಳೇನು?
• ವಿದೇಶಿ ಬಂಡವಾಳದ ಹೊರಹರಿವು: ವಿದೇಶಿ ಹೂಡಿಕೆದಾರರು ಭಾರತದ ಷೇರುಪೇಟೆಗಳಲ್ಲಿ ನಿರಂತರವಾಗಿ ಷೇರುಗಳನ್ನು ಮಾರಾಟ ಮಾಡಿ ಹಣ ಹಿಂಪಡೆಯುತ್ತಿದ್ದಾರೆ. ಬುಧವಾರ ಒಂದೇ ದಿನ ವಿದೇಶಿ ಹೂಡಿಕೆದಾರರು ₹3,206 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.
• ಕಚ್ಚಾ ತೈಲ ಏರಿಕೆ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದು ರೂಪಾಯಿ ಮೇಲೆ ಒತ್ತಡ ಹೇರಿದೆ.
• ವ್ಯಾಪಾರ ಒಪ್ಪಂದದ ಅನಿಶ್ಚಿತತೆ: ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಇನ್ನೂ ಸ್ಪಷ್ಟತೆ ಸಿಗದಿರುವುದು ಹೂಡಿಕೆದಾರರಲ್ಲಿ ಗೊಂದಲ ಮೂಡಿಸಿದೆ.
• ಆರ್‌ಬಿಐ ಮೌನ?: ರೂಪಾಯಿ ಮೌಲ್ಯ ಕುಸಿತವನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷಿತ ಮಟ್ಟದಲ್ಲಿ ಮಾರುಕಟ್ಟೆಯಲ್ಲಿ ಮಧ್ಯಪ್ರವೇಶ ಮಾಡುತ್ತಿಲ್ಲ ಎಂಬುದು ವರ್ತಕರ ಅಭಿಪ್ರಾಯವಾಗಿದೆ.
• ಕ್ರಿಪ್ಟೋ ಪ್ರಭಾವ: ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯಲ್ಲಿನ ದಿಢೀರ್ ಕುಸಿತದಿಂದಾಗಿ ಸುರಕ್ಷಿತ ಹೂಡಿಕೆಗಾಗಿ ಡಾಲರ್‌ಗೆ ಬೇಡಿಕೆ ಹೆಚ್ಚಾಗಿದೆ.
ಆದರೆ, ಎಸ್‌ಬಿಐನ ಆರ್ಥಿಕ ಸಂಶೋಧನಾ ವಿಭಾಗದ ವರದಿಯ ಪ್ರಕಾರ, “ಡಾಲರ್ ಎದುರು ಮೌಲ್ಯ ಕುಸಿದಾಕ್ಷಣ ರೂಪಾಯಿ ಸಂಪೂರ್ಣ ದುರ್ಬಲವಾಗಿದೆ ಎಂದು ಅರ್ಥವಲ್ಲ,” ಎಂದು ವಿಶ್ಲೇಷಿಸಲಾಗಿದೆ.
ಸೇವಾ ವಲಯದಲ್ಲಿ ಚೇತರಿಕೆ:
ರೂಪಾಯಿ ಕುಸಿತದ ಆತಂಕದ ನಡುವೆಯೂ ದೇಶದ ಆರ್ಥಿಕತೆಗೆ ಒಂದು ಸಮಾಧಾನಕರ ಸಂಗತಿ ಸಿಕ್ಕಿದೆ. ದೇಶದ ಸೇವಾ ವಲಯದ ಚಟುವಟಿಕೆಗಳು ಏರಿಕೆ ಕಂಡಿವೆ. ಎಚ್‌ಎಸ್‌ಬಿಸಿ ಇಂಡಿಯಾ ಸರ್ವಿಸಸ್ ಬ್ಯುಸಿನೆಸ್ ಆ್ಯಕ್ಟಿವಿಟಿ ಸೂಚ್ಯಂಕವು ಅಕ್ಟೋಬರ್‌ನಲ್ಲಿ 58.9ರಷ್ಟಿದ್ದು, ನವೆಂಬರ್ ತಿಂಗಳಲ್ಲಿ 59.8ಕ್ಕೆ ಏರಿಕೆಯಾಗಿದೆ. ಹೊಸ ವಹಿವಾಟುಗಳಲ್ಲಿನ ಹೆಚ್ಚಳವೇ ಇದಕ್ಕೆ ಕಾರಣವಾಗಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
Uncategorized24 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ಬಿಗ್ ನ್ಯೂಸ್12 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ನಿಧನ ವಾರ್ತೆ6 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಅಪರಾಧ12 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ11 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ12 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ10 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ12 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ


















