ರಾಜಕೀಯ
Ashok Rai-ಸರಕಾರದ ವಿವಿಧ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ; ಚೀಟಿ ಎತ್ತುವ ಮೂಲಕ ಫಲಾನುಭವಿಗಳ ಆಯ್ಕೆ ನಡೆಸಿದ್ದೇವೆ: ಶಾಸಕ ಅಶೋಕ್ ರೈ
ರಾಜ್ಯದಲ್ಲಿ ಕಾಂಗ್ರೆಸ್ ಸರಕರ ಅಧಿಕಾರಕ್ಕೆ ಬಂದ ಬಳಿಕ ಸರಕಾರ ವಿವಿಧ ಯೋಜನೆಗಳು ಎಲ್ಲಾ ಸಮುದಾಯಕ್ಕೂ ನೀಡುತ್ತಿದೆ. ಸರಕಾರದ ವಿವಿಧ ಯೋಜನೆಗಳಿಗೆ ನೂರಾರು ಮಂದಿ ಫಲಾನುಭವಿಗಳು ಅರ್ಜಿ ಹಾಕುತ್ತಿದ್ದಾರೆ. ಆದರೆ ಸರಕಾರದ ಆದೇಶದಂತೆ ಸೀಮಿತ ಅರ್ಜಿದಾರರಿಗೆ ಮಾತ್ರ ಈ ಯೋಜನೆ ನೀಡಲಾಗುತ್ತಿದ್ದು, ಫಲಾನುಭವಿಗಳನ್ನು ಚೀಟಿ ಎತ್ತುವ ಮೂಲಕ ಪಕ್ಷಾತೀತವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕರ ಅಧಿಕಾರಕ್ಕೆ ಬಂದ ಬಳಿಕ ಸರಕಾರ ವಿವಿಧ ಯೋಜನೆಗಳು ಎಲ್ಲಾ ಸಮುದಾಯಕ್ಕೂ ನೀಡುತ್ತಿದೆ. ಸರಕಾರದ ವಿವಿಧ ಯೋಜನೆಗಳಿಗೆ ನೂರಾರು ಮಂದಿ ಫಲಾನುಭವಿಗಳು ಅರ್ಜಿ ಹಾಕುತ್ತಿದ್ದಾರೆ. ಆದರೆ ಸರಕಾರದ ಆದೇಶದಂತೆ ಸೀಮಿತ ಅರ್ಜಿದಾರರಿಗೆ ಮಾತ್ರ ಈ ಯೋಜನೆ ನೀಡಲಾಗುತ್ತಿದ್ದು, ಫಲಾನುಭವಿಗಳನ್ನು ಚೀಟಿ ಎತ್ತುವ ಮೂಲಕ ಪಕ್ಷಾತೀತವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಕೆಲವೊಂದು ಯೋಜನೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಮತ್ತೆ ಕೆಲವು ಯೋಜನೆಗಳು ಒಂದೆರಡು ಮಂದಿಗೆ ಮಾತ್ರ ನೀಡಲು ಅವಕಾಶವಿರುದ್ದೆ. ಈ ಎಲ್ಲಾ ಯೋಜನೆಗಳಿಗೂ ಅರ್ಜಿಗಳು ತುಂಬಾ ಬಂದಿದ್ದು ಈ ಕಾರಣಕ್ಕೆ ಅರ್ಜಿ ಹಾಕಿರುವ ಎಲ್ಲಾ ಫಲಾನುಭವಿಗಳ ಹೆಸರನ್ನು ಬರೆದು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಗಿದೆ. ಯಾರಿಗೂ ಅನ್ಯಾಯ ಆಗಬಾರದು , ಮನಸ್ಸಿಗೆ ನೋವಾಗಬಾರದು ಎಂಬ ಉದ್ದೇಶದಿಂದ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಆಯ್ಕೆಯಾದ ಅದೃಷ್ಠ ಫಲಾನುಭವಿಗಳು:
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಗಂಗಾ ಕಲ್ಯಾಣ ಯೋಜನೆ: ಉಮೇಶ ಬಲ್ನಾಡು, ಕೇಶವ ಶಾಂತಿಗೋಡು, ಚನಿಯ ಬಡಗನ್ನೂರು ,ಚೋಮಕೊಳ್ತಿಗೆ ಗ್ರಾಮ , ಕವಿತ ನೆಟ್ಟಣಿಗೆಮುಡ್ನೂರು , ಗಣೇಶ ಆರ್ಯಾಪು ಗ್ರಾಮ ,ಕೊಗ್ಗು ಮುಗೇರ ಅಳಿಕೆ ಗ್ರಾಮ ಮತ್ತು ಅಂಚೆ ಬಂಟ್ವಾಳ ತಾಲೂಕು , ಚನಿಯ ಮುಗೇರನಿಡ್ಪಳ್ಳಿ ಗ್ರಾಮ ,ರಾಧಆರ್ಯಾಪು ಗ್ರಾಮ ,ಗೀತಾಸರ್ವೆ ಗ್ರಾಮ ,ಚನಿಯ ಬೆಟ್ಟಂಪಾಡಿ ಗ್ರಾಮ ,ಯಮುನಾ ಪೆರುವಾಯಿ ಗ್ರಾಮ ಬಂಟ್ವಾಳ ತಾಲೂಕು , ಕಮಲ ಪುಣಚ ಗ್ರಾಮ ಪುತ್ತೂರು ತಾಲೂಕು ,ಕಾಂತಪ್ಪ ಕಬಕ ಗ್ರಾಮ, ಬಾಬು ಮುಗೇರ ಪುಣಚ ಗ್ರಾಮ ಇವರು ಆಯ್ಕೆಯಾಗಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ: ಕೃಷ್ಣಪ್ಪ ಪಡ್ನೂರು ಗ್ರಾಮ ಪುತ್ತೂರು ತಾಲೂಕು ಹಾಗೂ ಉಮೇಶ ಕೊಡಿಂಬಾಡಿ ಅಂಚೆ ಬೆಳ್ಳಪ್ಪಾಡಿ ಗ್ರಾಮ ಪುತ್ತೂರು ತಾಲೂಕು ರವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಆದಿಜಾಂಬ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ದಿವ್ಯ ಕೆ ದರ್ಬೆ ಇವರು ಆಯ್ಕೆಯಾಗಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಹೈನುಗಾರಿಕೆ ಯೋಜನೆಯಡಿ ಪೂವಪ್ಪ ಎ ಪೆರ್ನೆ ಗ್ರಾಮ ಮತ್ತು ಅಂಚೆ ಬಂಟ್ವಾಳ ತಾಲೂಕು ಆಯ್ಕೆಯಾಗಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆ: ರಾಮಣ್ಣ ವಿಟ್ಲಮುಡ್ನೂರು ಗ್ರಾಮ ಮತ್ತು ಅಂಚೆ ಬಂಟ್ವಾಳ ತಾಲೂಕು ಹಾಗೂ ವಿನಾಯಕ ಕೆಮಾಣಿಲ ಗ್ರಾಮ ಮತ್ತು ಅಂಚೆ ಬಂಟ್ವಾಳ ತಾಲೂಕು ರವರು ಆಯ್ಕೆಯಗಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕತ್ತೋಡಿ ಕೆದಂಬಾಡಿ ಗ್ರಾಮ , ಕೆ ಶಾರದ ಕೊಳ್ತಿಗೆ ಗ್ರಾಮ ,ಬಾಬು ಪಿಆರ್ಯಾಪು ಗ್ರಾಮ,ಡಿಕಯ್ಯವಿಟ್ಲ ಕಸಬ ಗ್ರಾಮ ಮತ್ತು ಅಂಚೆ ಬಂಟ್ವಾಳ ತಾಲೂಕು ,
ಸಂದೇಶ ಕೆಅಳಿಕೆ ಗ್ರಾಮ ಮತ್ತು ಅಂಚೆ ಬಂಟ್ವಾಳ ತಾಲೂಕು ,ರವಿ ಬೆಳ್ಲಿಪ್ಪಾಡಿ ಗ್ರಾಮ ಇವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಆದಿಜಾಂಬ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಯೋಜನೆ: ಮುರಳಿ ಎಸ್ ನೆಕ್ಕಿಲಾಡಿ ಗ್ರಾಮ ಪುತ್ತೂರು ತಾಲೂಕುರವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಆದಿಜಾಂಬ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಯೋಜನೆ: ಪ್ರಶಾಂತ್ ಬಜತ್ತೂರು ಗ್ರಾಮ ಪುತ್ತೂರು ತಾಲೂಕುರವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಆದಿಜಾಂಬ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಸ್ವಾವಲಂಭಿ ಸಾರಧಿ-೪ ಚಕ್ರದ ವಾಹನ ಯೋಜನೆಯಡಿ ಯೋಜನೆ: ಭಾಸ್ಕರ ಪಿ ಆರ್ಯಾಪು ಗ್ರಾಮ,ಪುಷ್ಪರಾಜಚಿಕ್ಕಮುಡ್ನೂರು ಗ್ರಾಮ ರವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಬೋವಿ ಅಭಿವೃದ್ದೀ ನಿಗಮ ದಕ್ಷಿಣ ಕನ್ನಡ ಜಿಲ್ಲೆ 2025-26ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆಯಡಿ ಯೋಜನೆ: ಗುರಿ- 01- ಕಲೈಚೆಲ್ವಿ ಎಸ್. ಕೊಳ್ತಿಗೆ ಗ್ರಾಮ ಮತ್ತು ಅಂಚೆ ಪುತ್ತೂರು ತಾಲೂಕು ಇವರು ಆಯ್ಕೆಯಾಗಿದ್ದಾರೆ.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
ಪುತ್ತೂರು19 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು22 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್21 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ22 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ21 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ22 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ22 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















