Connect with us

ರಾಜಕೀಯ

Medical college-ಮೆಡಿಕಲ್ ಕಾಲೇಜು ವಿಚಾರ, ವಿಟ್ಲಕ್ಕೆ ಡಯಾಲಿಸಿಸ್ ಕೇಂದ್ರ, ಸರಕಾರಿ ಆಸ್ಪತ್ರೆಗೆ ಹೆಚ್ಚುವರಿ ವೈದ್ಯರ ನೇಮಕ; ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತರನ್ನು ಭೇಟಿಯಾದ ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜುಅನುಮೋದನೆಗೊಂಡಿದ್ದು ಮೆಡಿಕಲ್ ಕಾಲೇಜು ಕಡತವನ್ನು ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಇಲಾಖೆಗೆ ಹಸ್ತಾಂತರ ಮಾಡುವ ಬಗ್ಗೆ , ವಿಟ್ಲ ಸಮುದಾಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಸ್ಥಾಪನೆ ಮಾಡುವುದು ಹಾಗೂ ಪುತ್ತೂರು,ವಿಟ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ವೈದ್ಯರನ್ನು ನೇಮಕ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಖೆಯ ಅಪರ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತ ಅವರ ಜೊತೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜುಅನುಮೋದನೆಗೊಂಡಿದ್ದು ಮೆಡಿಕಲ್ ಕಾಲೇಜು ಕಡತವನ್ನು ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಇಲಾಖೆಗೆ ಹಸ್ತಾಂತರ ಮಾಡುವ ಬಗ್ಗೆ , ವಿಟ್ಲ ಸಮುದಾಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಸ್ಥಾಪನೆ ಮಾಡುವುದು ಹಾಗೂ ಪುತ್ತೂರು,ವಿಟ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ವೈದ್ಯರನ್ನು ನೇಮಕ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಖೆಯ ಅಪರ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತ ಅವರ ಜೊತೆ ಮಾತುಕತೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನಲ್ಲಿ ಅಧಿಕಾರಿಯನ್ನು ಭೇಟಿಯದ ಶಾಸಕರು ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಈಗಾಗಗಲೇ ಸರಕಾರದಿಂದ ಅನುಮೋದನೆಗೊಂಡಿದ್ದು ಆರೋಗ್ಯ ಇಲಖೆಯಿಂದ ವೈಧ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿ ಸರಕರ ಆದೇಶ ಮಾಡಿದ. ಈ ಆದೇಶವನ್ನು ಆದಷ್ಟು ಶೀಘ್ರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರ ಮಾಡುವಂತೆ ಕೇಳಿಕೊಂಡಿದ್ದಾರೆ.ಸರಕಾರಿ ಆಸ್ಪತ್ರೆಗಳು ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ. ಪುತ್ತೂರಿಗೆ 300 ಬೆಡ್ ನ ಆಸ್ಪತ್ರೆ ಮಂಜೂರಾಗಿದ್ದು ಇದು ಮೆಡಿಕಲ್ ಕಾಲೇಜಿಗೆ ಸಂಬಂಧಪಟ್ಟಿರುವ ಕಾರಣ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ವಿಭಾಗಕ್ಕೆ ಹಸ್ತಾಂತರವಾಗಬೇಕಿದೆ.

Ad Widget

Ad Widget <> Ad Widget

ವಿಟ್ಲದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ
ವಿಟ್ಲದಲ್ಲಿ ಅನೇಕ ಮಂದಿ ಕಿಡ್ನಿ ಕಾಯಿಲೆಗೆ ಸಂಬಂಧಿಸಿದ ರೋಗಿಗಳಿದ್ದು ಡಯಾಲಿಸಿಸ್ ವ್ಯವಸ್ಥೆ ಇಲ್ಲದೆ ಕಷ್ಟಪಡುವಂತಾಗಿದೆ. ಡಯಾಲಿಸಿಸ್ ಕೇಂದ್ರವನ್ನು ಪ್ರಾರಂಭ ಮಾಡುವ ಬಗ್ಗೆ ಶಾಸಕರು ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಲ್ಲಿ ಮನವಿ ಮಾಡಿದ್ದರು. ಸಚಿವರು ಶೀಘ್ರ ಕೇಂದ್ರ ಸ್ಥಾಪನೆಯ ಭರವಸೆಯನ್ನು ನೀಡಿದ್ದರು. ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಈ ವಿಚಾರವನ್ನು ಶಾಸಕರು ಪ್ರಸ್ತಾಪ ಮಾಡಿದ್ದರು. ಇದೀಗ ಆರೋಗ್ಯ ಇಲಾಖೆಯ ಮೂಲಕ ಡಯಾಲಿಸಿಸ್ ಕೇಂದ್ರ ಸ್ಥಾಪನೆಯಾಗಲಿದ್ದು ಶೀಘ್ರ ಮಂಜೂರಾತಿಗೆ ಅಧಿಕಾರಿ ಜೊತೆ ಶಾಸಕರು ಮಾತುಕತೆ ನಡೆಸಿದರು.



Ad Widget

ಸರಕಾರಿ ಆಸ್ಪತ್ರೆಗೆ ಹೆಚ್ಚುವರಿ ವೈದ್ಯರ ನೇಮಿಸಿ
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ಪ್ರಸೂತಿ ತಜ್ಞರು, ಕಣ್ಣಿನ ತಜ್ಞರ ಕೊರತೆ ಇದ್ದು ಅದನ್ನು ಶೀಘ್ರ ಭರ್ತಿ ಮಾಡುವಂತೆ ಅಧಿಕಾರಿಗೆ ತಿಳಿಸಿದರು. ವಿಟ್ಲ ಸಮುದಾಯ ಕೇಂದ್ರದಲ್ಲೂ ವೈದ್ಯರ ಕೊರತೆಯನ್ನು ಪರಿಹರಿಸುವಂತೆ ಕೇಳಿಕೊಂಡ ಶಾಸಕರು, ವೈದ್ಯರ ಕೊರತೆಯಿಂದಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಗುತ್ತಿದೆ. ಈ ವಿಚಾರವನ್ನು ಈಗಾಗಲೇ ಆರೋಗ್ಯ ಸಚಿವರ ಗಮನಕ್ಕೆ ತರಲಾಗಿದೆ. ಇಲಾಖೆಯಿಂದ ಸೂಕ್ತ ಕ್ರಮ ಅಗತ್ಯವಿದೆ ಎಂದು ಅಧಿಕಾರಿಗೆ ಶಾಸಕರು ತಿಳಿಸಿದರು.

Click to comment

Leave a Reply

ರಾಜಕೀಯ

Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ

Published

on



Ad Widget

Ad Widget

Ad Widget

Ad Widget

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

Ad Widget

Ad Widget <> Ad Widget

2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.



Ad Widget

ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.

Ad Widget

Ad Widget

ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.

ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್‌ ಮಾಜಿ ಅಧ್ಯಕ್ಷ ಸೌಕತ್‌ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.



Ad Widget

ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

Ad Widget

Ad Widget

ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.

ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.

Ad Widget
Continue Reading

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading