Connect with us

ಸ್ಥಳೀಯ

Parameshwar-Big Breaking: ಬೆಳ್ತಂಗಡಿಯಲ್ಲಿ ಸಿಐಡಿ ಉಪವಿಭಾಗ ಸ್ಥಾಪನೆ ಮಾಡಲಾಗಿದೆ – ಗೃಹ ಸಚಿವ ಪರಮೇಶ್ವರ್

Published

on



Ad Widget

Ad Widget

Ad Widget

Ad Widget

ಕರಾವಳಿ ಭಾಗದಲ್ಲಿ ಕೋಮು ಗಲಭೆ ಮತ್ತು ಹತ್ಯೆಗಳನ್ನು ನಿಯಂತ್ರಿಸಲು ರಚಿಸಲಾದ ವಿಶೇಷ ಕಾರ್ಯಪಡೆ ಮಾದರಿಯಲ್ಲೇ, ಮಂಡ್ಯ ಜಿಲ್ಲೆಗೂ ಪ್ರತ್ಯೇಕ ವಿಶೇಷ ಕಾರ್ಯಪಡೆಯನ್ನು ನೇಮಕ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಸಿಐಡಿಯಲ್ಲಿ ಠೇವಣಿ ವಂಚನೆ ಮತ್ತು ಕ್ರಿಮಿನಲ್ ಗುಪ್ತಚರ ಘಟಕವನ್ನು ಮಾಡಲಾಗಿದೆ. ಬೆಳ್ತಂಗಡಿಯಲ್ಲಿ ಸಿಐಡಿ ಉಪ ವಿಭಾಗವನ್ನು ಸ್ಥಾಪನೆ ಮಾಡಲಾಗಿದೆ. ಅನೇಕ ಘಟನೆಗಳು ಮತ್ತು ಪ್ರಕರಣಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಸಿಐಡಿ ಉಪವಿಭಾಗ ಸ್ಥಾಪಿಸಲಾಗಿದೆ ಎಂದು ಜಿ.ಪರಮೇಶ್ವರ್ ವಿವರಿಸಿದರು.

Ad Widget

Ad Widget

Ad Widget

Ad Widget

ಕರಾವಳಿ ಭಾಗದಲ್ಲಿ ಕೋಮು ಗಲಭೆ ಮತ್ತು ಹತ್ಯೆಗಳನ್ನು ನಿಯಂತ್ರಿಸಲು ರಚಿಸಲಾದ ವಿಶೇಷ ಕಾರ್ಯಪಡೆ (Special Action Force) ಮಾದರಿಯಲ್ಲೇ, ಮಂಡ್ಯ ಜಿಲ್ಲೆಗೂ ಪ್ರತ್ಯೇಕ ವಿಶೇಷ ಕಾರ್ಯಪಡೆಯನ್ನು ನೇಮಕ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬೆಂಗಳೂರು ನಗರದಲ್ಲಿ ಹೊಸದಾಗಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಸಿಐಡಿಯಲ್ಲಿ ಠೇವಣಿ ವಂಚನೆ ಮತ್ತು ಕ್ರಿಮಿನಲ್ ಗುಪ್ತಚರ ಘಟಕವನ್ನು ಮಾಡಲಾಗಿದೆ. ಬೆಳ್ತಂಗಡಿಯಲ್ಲಿ ಸಿಐಡಿ ಉಪ ವಿಭಾಗವನ್ನು ಸ್ಥಾಪನೆ ಮಾಡಲಾಗಿದೆ. ಅನೇಕ ಘಟನೆಗಳು ಮತ್ತು ಪ್ರಕರಣಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಸಿಐಡಿ ಉಪವಿಭಾಗ ಸ್ಥಾಪಿಸಲಾಗಿದೆ ಎಂದು ಜಿ.ಪರಮೇಶ್ವರ್ ವಿವರಿಸಿದರು.

Ad Widget

Ad Widget <> Ad Widget

ಬೆಂಗಳೂರಿನ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಪೊಲೀಸ್ ಇಲಾಖೆಯ ಕಾರ್ಯಕ್ರಮವೊಂದರಲ್ಲಿ ‘ಪ್ರಗತಿಯ ಸ್ತಂಭಗಳು’ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.



Ad Widget

ಮಂಡ್ಯಕ್ಕೆ ವಿಶೇಷ ಪಡೆ ಏಕೆ?
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಂತಿ ಕದಡುವ ಘಟನೆಗಳು ಹೆಚ್ಚಾದಾಗ 300ಕ್ಕೂ ಹೆಚ್ಚು ಸಿಬ್ಬಂದಿಗೆ ವಿಶೇಷ ತರಬೇತಿ ನೀಡಿ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ರಚಿಸಲಾಯಿತು. ಇದರ ಪರಿಣಾಮವಾಗಿ ಅಲ್ಲಿ ಹತ್ಯೆ ಮತ್ತು ಗಲಭೆಗಳು ಸಂಪೂರ್ಣ ನಿಯಂತ್ರಣಕ್ಕೆ ಬಂದಿವೆ. ಇದೇ ಮಾದರಿಯಲ್ಲಿ, ಲಭ್ಯವಿರುವ ಗುಪ್ತಚರ ಮಾಹಿತಿ ಆಧರಿಸಿ ಮಂಡ್ಯ ಜಿಲ್ಲೆಗೂ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ನೇಮಿಸಲಾಗಿದೆ ಎಂದು ಸಚಿವರು ತಿಳಿಸಿದರು.

Ad Widget

Ad Widget

ನಮಗೆ ಸಿಕ್ಕ ಮಾಹಿತಿ ಆಧರಿಸಿ ಮಂಡ್ಯ ಜಿಲ್ಲೆಗೂ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ನೇಮಕ ಮಾಡಲಾಗಿದೆ. ಈ ನೇಮಕ ಕಾರ್ಯಪಡೆ ಮಾಡಿದ ಬಳಿಕ ಕರಾವಳಿ ಭಾಗದಲ್ಲಿ ಯಾವುದೇ ರೀತಿಯ ಕೊಲೆ, ಗಲಭೆಗಳಾಗಿಲ್ಲ. ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ. ಮೂರು ದಿನಗಳ ಹಿಂದೆ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸರಕಾರದ ಕಾರ್ಯವೈಖರಿ ಬಗ್ಗೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಯಿತು ಎಂದು ಜಿ.ಪರಮೇಶ್ವರ್ ತಿಳಿಸಿದರು.

ಪೊಲೀಸ್ ಇಲಾಖೆಯು ಜನಸ್ನೇಹಿಯಾಗಿ, ನಾಗರಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜನರಿಗೆ ಕೇಂದ್ರಿಕೃತವಾಗಿ ಕೆಲಸ ಮಾಡುತ್ತಿದೆ. ಹಿಂದಿನ ಎರಡು ವರ್ಷದಲ್ಲಿ ನಮ್ಮಸರಕಾರ ಹಾಗೂ ಪೊಲೀಸ್ ಇಲಾಖೆ ಅನೇಕ ಸವಾಲುಗಳನ್ನು ಎದುರಿಸಿಕೊಂಡು ಬಂದಿದೆ. ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂಬುದು ಪೊಲೀಸ್ ಇಲಾಖೆಯ ಉದ್ದೇಶ. ಯಾವುದೇ ಅಹಿತಕರ ಘಟನೆ ಆಗಬಾರದು. ಎರಡು ವರ್ಷದ ಅವಧಿಯಲ್ಲಿ ಈ ನಿಟ್ಟಿನಲ್ಲೇ ಕೆಲಸ ಇಲಾಖೆ ಮಾಡಿದೆ ಎಂದು ಜಿ.ಪರಮೇಶ್ವರ್ ಹೇಳಿದರು.

ಇಲಾಖೆಯಲ್ಲಿ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಬದಲಾವಣೆಗಳನ್ನು ತಂದಿದ್ದೇವೆ. ರಾಜ್ಯದ ಪೊಲೀಸ್ ಇಲಾಖೆ ಸ್ನೇಹತ್ವದಿಂದ ಜನಗಳ ಕೆಲಸಗಳಾಗಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಅನ್ಯರಿಗೆ ತೊಂದರೆಯಾಗಬಾರದು. ಬದಲಾದ ಪರಿಸ್ಥಿತಿಯಲ್ಲಿ ತಂತ್ರಜ್ಞಾನವನ್ನು ಉಪಯೋಗದಿಂದ ಅಪರಾಧಗಳನ್ನು ಕಂಡು ಹಿಡಿಯುವ ರೀತಿಯಲ್ಲಿ ಕೆಲಸ ಮಾಡಲಾಗಿದೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

ನಮ್ಮ ಸರಕಾರವು ಅನೇಕ ಬದಲಾವಣೆಗಳನ್ನು ತಂದಿದೆ. ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 33 ಡಿಸಿಆರ್‌ಇ ಠಾಣೆಗಳನ್ನು ಸ್ಥಾಪಿಸಲಾಗಿದೆ. ಡಿಸಿಆರ್ ಇ ಅಧಿಕಾರಿಗಳು ಪ್ರತಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈಗ ಪ್ರತ್ಯೇಕಗೊಳಿಸಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

ದೇಶದಲ್ಲಿ ಬೇರೆ ಯಾವ ರಾಜ್ಯದಲ್ಲಿಯೂ ಡಿಸಿಆರ್‌ಇ ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ಸ್ಥಾಪಿಸಿಲ್ಲ. ಜಿಲ್ಲೆಗಳ ಪೊಲೀಸ್‌ ಪ್ರಗತಿ ಪರಿಶೀಲನೆ ವೇಳೆ ಎಸ್‌ಸಿ, ಎಸ್‌ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವುದಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. ಇದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ಎರಡು ಐಆರ್‌ಬಿ ಬೆಟಾಲಿಯನ್ ಸ್ಥಾಪಿಸಲಾಗುತ್ತಿದೆ. ಕೆಜಿಎಫ್ ಮತ್ತು ಆಹುತಿಯಲ್ಲಿ ಎರಡು ಐಆರ್‌ಬಿ ಬೆಟಾಲಿಯನ್ ಆರಂಭಿಸಿಲಾಗುವುದು ಎಂದು ಜಿ.ಪರಮೇಶ್ವರ್ ವಿವರಿಸಿದರು.

ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ(ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್) 112 ಸಹಾಯವಾಣಿಗೆ ಪ್ರತಿದಿನ ರಾಜ್ಯಾದ್ಯಂತ 24 ಸಾವಿರ ಕರೆಗಳು ಬರುತ್ತಿವೆ. 1400 ದೂರುಗಳಿಗೆ ನಮ್ಮ ಸಿಬ್ಬಂದಿಗಳು ಸ್ಪಂದಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 112 ಸಹಾಯವಾಣಿ ದೂರುಗಳಿಗೆ 6.59 ನಿಮಿಷದಲ್ಲಿ ಸ್ಪಂದಿಸುತ್ತಾರೆ. ಗ್ರಾಮೀಣ ಭಾಗದಲ್ಲಿ 13.58 ನಿಮಿಷದಲ್ಲಿ ಘಟನಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಜಿ.ಪರಮೇಶ್ವ‌ರ್ ಹೇಳಿದರು.

ಕರ್ನಾಟಕ ಪೊಲೀಸ್‌ಗೆ ದೇಶದಲ್ಲೇ ಮೊದಲ ಸ್ಥಾನ:
ಕರ್ನಾಟಕ ಪೊಲೀಸ್ ನಾಗರಿಕರಿಗೆ ನ್ಯಾಯವನ್ನು ಒದಗಿಸುವುದರಲ್ಲಿ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿವಿಧ ಮಾನದಂಡಗಳನ್ನು ಇಟ್ಟುಕೊಂಡು ಇಂಡಿಯಾ ಜಸ್ಟೀಸ್ ರಿಪೋರ್ಟ್ ಸಮೀಕ್ಷಾ ವರದಿ ನೀಡಿದೆ. 10 ಅಂಕಗಳಲ್ಲಿ ಕರ್ನಾಟಕಕ್ಕೆ 6.78 ಅಂಕಗಳನ್ನು ಪಡೆದು ಮೊದಲನೆಯ ಸ್ಥಾನ ಗಳಿಸಿದೆ. ಪೊಲೀಸ್ ಮತ್ತು ನ್ಯಾಯಾಂಗ ಎರಡು ಸಾಮ್ಯತೆಯಿಂದ ಕೆಲಸ ಮಾಡಿ, ವಿಶೇಷವಾಗಿ ಶೋಷಿತ ಸಮುದಾಯಗಳಿಗೆ ನ್ಯಾಯ ಕೊಡಿಸುವುದರಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ

Published

on



Ad Widget

Ad Widget

Ad Widget

Ad Widget

ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.



Ad Widget

ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget

ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.

ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.

ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.

ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.

ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.

ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.

ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ

Published

on



Ad Widget

Ad Widget

Ad Widget

Ad Widget

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

Ad Widget

Ad Widget

Ad Widget

Ad Widget

ಚನ್ನಪಟ್ಟಣ, ಅ.6: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

Ad Widget

Ad Widget <> Ad Widget

ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಸಚಿವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನೂ ಪರಿಶೀಲಿಸಿದರು. ಕರ್ತವ್ಯದಲ್ಲಿದ್ದ ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.



Ad Widget

ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಖಾದರ್ ಅವರು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

Ad Widget

Ad Widget

“ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಔಷಧಿಗಳಿದ್ದರೂ ರೋಗಿಗಳಿಗೆ ಹೊರಗಡೆ ಔಷಧಿ ಬರೆದುಕೊಡುವುದು ಏಕೆ?” ಎಂದು ಪ್ರಶ್ನಿಸಿದ ಸಚಿವರು, ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಷ್ಟನೆ ಪಡೆದರು.

ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಹಾಗೂ ಸಮಯೋಚಿತ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದರು.

Ad Widget
Continue Reading

ನಿಧನ ವಾರ್ತೆ

Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು

Published

on



Ad Widget

Ad Widget

Ad Widget

Ad Widget

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.



Ad Widget

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತರು ಪತ್ನಿ ಶಶಿಕಲಾ, ಪುತ್ರರಾದ ಹರ್ಷಿತ್ ಹಾಗೂ ರಕ್ಷಿತ್, ಸಹೋದರರು ಮತ್ತು ಸಹೋದರಿಯರನ್ನು ಅಗಲಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading