Connect with us

ಸ್ಥಳೀಯ

Beltangadi-ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್‌ಗೆ ರಾಜ್ಯ ಸಚಿವ ಸ್ಥಾನಮಾನ: ಸರ್ಕಾರದಿಂದ ಅಧಿಕೃತ ಆದೇಶ

Published

on

Ad Widget

Ad Widget

Ad Widget

Ad Widget

ಮೆಸ್ಕಾಂ (MESCOM) ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಅವರಿಗೆ ‘ರಾಜ್ಯ ಸಚಿವ’ (State Minister Rank) ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮೆಸ್ಕಾಂ (MESCOM) ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಅವರಿಗೆ ‘ರಾಜ್ಯ ಸಚಿವ’ (State Minister Rank) ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ರಾಜ್ಯ ಸರ್ಕಾರ ಹೊರಡಿಸಿರುವ ಈ ನೂತನ ಆದೇಶದನ್ವಯ, ಹರೀಶ್ ಕುಮಾರ್ ಅವರು ಇನ್ಮುಂದೆ ರಾಜ್ಯದ ಸಚಿವರುಗಳಿಗೆ ದೊರೆಯುವ ಎಲ್ಲ ವೇತನ, ಭತ್ಯೆ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಜೊತೆಗೆ ಸಚಿವರಿಗೆ ಅನ್ವಯವಾಗುವ ಎಲ್ಲ ಸರ್ಕಾರಿ ಶಿಷ್ಟಾಚಾರಗಳು (Protocols) ಇವರಿಗೂ ಅನ್ವಯವಾಗಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget

Ad Widget <> Ad Widget

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!