ಬೆಂಗಳೂರು
Mangaluru drug bust : ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ – ಮಂಗಳೂರಿನಲ್ಲಿ ಬ್ರಹ್ಮಾಂಡ ಡ್ರಗ್ಸ್ ಜಾಲ ಪತ್ತೆ; ನೈಜೀರಿಯಾ ಲಿಂಕ್ ಬಯಲು! ಪೊಲೀಸರ ಬಲೆಗೆ ನಾಲ್ವರು!
“ಮಂಗಳೂರು ಪೊಲೀಸರಿಂದ ಬೃಹತ್ ಡ್ರಗ್ಸ್ ಜಾಲ ಭೇದನೆ. 50 ಲಕ್ಷ ಮೌಲ್ಯದ MDMA ಮಾದಕ ದ್ರವ್ಯ ವಶ, ನಾಲ್ವರ ಬಂಧನ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿಗಳಿವರು. ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನೈಜೀರಿಯಾ ಸಂಪರ್ಕವೂ ಬಯಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತು, ಕಾರು ಮತ್ತು ಹೆಚ್ಚಿನ ತನಿಖೆಯ ಬಗ್ಗೆ ವಿವರಗಳಿಗೆ ಮುಂದೆ ಓದಿ”

Mangaluru drug bust ಮಂಗಳೂರು :ಡಿ 7: ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ದೊಡ್ಡ ಜಾಲವನ್ನು ಮಂಗಳೂರು ನಗರ ಪೊಲೀಸರು ಭೇದಿಸಿದ್ದಾರೆ. ಸುಮಾರು 50 ಲಕ್ಷ ರೂಪಾಯಿ ಮೌಲ್ಯದ 517.76 ಗ್ರಾಂ MDMA ಮಾದಕ ದ್ರವ್ಯವನ್ನು ವಶಪಡಿಸಿಕೊಂಡು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯ ವಿವರಗಳು
ಮಂಗಳೂರು ನಗರದ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ, ಸಿಸಿಬಿ ತಂಡಕ್ಕೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಡಿ 6ರಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ ಕನ್ವಿನ್ಷನ್ ಹಾಲ್ ಬಳಿ ದಾಳಿ ನಡೆಸಲಾಯಿತು. ಈ ವೇಳೆ, ಕಾರಿನಲ್ಲಿ ಮಾದಕ ವಸ್ತು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದರು.
ಬಂಧಿತ ಆರೋಪಿಗಳು ಮತ್ತು ವಶಪಡಿಸಿಕೊಂಡ ವಸ್ತುಗಳು
ಬಂಧಿತ ಆರೋಪಿಗಳನ್ನು (1) ಮೊಹಮ್ಮದ್ ಶಿಯಾಬ್ @ ಶಿಯಾಬ್, ನಾವುಂದ ಗ್ರಾಮ, ಕುಂದಾಪುರ, ಬೈಂದೂರು ತಾಲ್ಲೂಕು, (2) ಮೊಹಮ್ಮದ್ ನೌಷದ್ @ ನೌಷದ್, ನರಿಂಗಾನ ಗ್ರಾಮ, ಉಳ್ಳಾಲ ತಾಲ್ಲೂಕು, (3) ಇಮ್ರಾನ್ @ ಇಂಬ, ಕಸಬಾ ಬೆಂಗ್ರೆ, ಮಂಗಳೂರು, ಮತ್ತು (4) ನಿಸಾರ್ ಅಹಮ್ಮದ್ @ ನಿಸಾರ್, ಬ್ರಹ್ಮರ ಕೊಟ್ಲು, ಬಂಟ್ವಾಳ ತಾಲ್ಲೂಕು ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ 517.76 ಗ್ರಾಂ MDMA ಮಾದಕ ವಸ್ತು, ಕೃತ್ಯಕ್ಕೆ ಬಳಸಿದ 10 ಲಕ್ಷ ಮೌಲ್ಯದ ಕಾರು, ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾದಕ ವಸ್ತು ಪೂರೈಕೆಯ ಮೂಲ
ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವಂತೆ, ಆರೋಪಿಗಳು ಬೆಂಗಳೂರಿನಲ್ಲಿ ನೈಜೀರಿಯಾ ದೇಶದ ಓರ್ವ ವ್ಯಕ್ತಿಯಿಂದ ಮಾದಕ ವಸ್ತುವನ್ನು ತಂದು, ಮಂಗಳೂರು ನಗರದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗುತ್ತಿದ್ದರು.
ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಲಂ: 22(ಸಿ), 21(C) ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದು ಮಂಗಳೂರು ಪೊಲೀಸರ ಉತ್ತಮ ಕಾರ್ಯಚರಣೆಯಾಗಿದ್ದು, ನಗರದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ನಿಯಂತ್ರಿಸಲು ಸಹಕಾರಿಯಾಗಿದೆ.
Mangaluru police bust a major drug racket, seizing MDMA worth ₹50 lakhs and arresting four individuals involved in supplying drugs to students and public places. The operation, led by ACP Manoj Kumar Naik, uncovered a Nigerian connection. Read more about the seized drugs, vehicle, and ongoing investigation.”
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್, ಎಸ್ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
-
ಅಪರಾಧ21 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ21 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್20 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ20 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ18 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ19 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್24 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
-
ಮಂಗಳೂರು19 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















