Connect with us

ವೈರಲ್‌ ನ್ಯೂಸ್‌

ಇಂಡಿಗೋ ಅವ್ಯವಸ್ಥೆ : ವಿಮಾನ ಟಿಕೆಟ್ ದರ ಭಾರಿ ಏರಿಕೆ : ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತ ಕೇಂದ್ರ..! ಟಿಕೆಟ್ ದರಕ್ಕೆ ಮಿತಿ

Published

on



Ad Widget

Ad Widget

Ad Widget

Ad Widget

ನವದೆಹಲಿ: ಇಂಡಿಗೋ ವಿಮಾನ ಸೇವೆ ವ್ಯತ್ಯಯದಿಂದ ದೇಶದಲ್ಲಿ ವಿಮಾನ ಟಿಕೆಟ್ ದರದಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರ ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಎಚ್ಚೆತ್ತು ಟಿಕೆಟ್ ದರಕ್ಕೆ ಮಿತಿ ಹೇರಿದೆ. 500 ಕಿ.ಮೀ ದೂರದವರೆಗಿನ ಪ್ರಯಾಣಕ್ಕೆ ಗರಿಷ್ಠ 7500 ರೂ.ಗಳ ಮಿತಿ ವಿಧಿಸಿದೆ.

Ad Widget

Ad Widget

Ad Widget

Ad Widget

ಸರ್ಕಾರ ವಿಧಿಸಿರುವ ಈ ಮಿತಿ ಬ್ಯುಸಿನೆಸ್ ಕ್ಲಾಸ್ ಹಾಗೂ ಉಡಾನ್ ವಿಮಾನಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಿಮಾನಗಳಿಗೆ ಅನ್ವಯವಾಗುತ್ತದೆ ಎಂದು ಹೇಳಿದೆ. 500 ರಿಂದ 1000 ಕಿಮೀ ವ್ಯಾಪ್ತಿಗೆ 12000 ರೂ. 10000 ದಿಂದ 15000 ವ್ಯಾಪ್ತಿಗೆ 15000 ರೂ. 15000 ಕಿ.ಮೀ. ಮೀರಿದರೆ 18000 ರೂ.ಗಳ ಮಿತಿಯನ್ನು ಸರ್ಕಾರ ವಿಧಿಸಿದೆ. ಅಲ್ಲದೇ ಈ ದರದಲ್ಲಿ ತೆರಿಗೆ ಸೇರಿರುವುದಿಲ್ಲ ಎಂದು ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿಮಾನ ಸೇವೆ ಒದಗಿಸುವ ಸಂಸ್ಥೆಗಳ ವೆಬ್‌ಸೈಟ್ ಅಥವಾ ಮತ್ಯಾವುದೇ ವೆಬ್‌ಸೈಟ್‌ನಿಂದ ಟಿಕೆಟ್ ಬುಕ್ ಮಾಡಿದರೂ ಇದು ಅನ್ವಯವಾಗಬೇಕು. ಎಲ್ಲಾ ವಿಮಾನಯಾನ ಸಂಸ್ಥೆಗಳು ಈ ದರವನ್ನು ತಮ್ಮ ದರಪಟ್ಟಿಯಲ್ಲಿ ನಿರ್ವಹಣೆ ಮಾಡಬೇಕು. ಮುಂದಿನ ಆದೇಶದವರೆಗೆ ಅಥವಾ ವಿಮಾನದರ ನಿಯಂತ್ರಣಕ್ಕೆ ಬರುವವರೆಗೆ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ಹೇಳಿದೆ.

Ad Widget

Ad Widget <> Ad Widget

ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆ 5 ದಿನಗಳಿಂದ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಸಾವಿರಾರು ವಿಮಾನ ಸೇವೆ ರದ್ದುಗೊಂಡಿವೆ. ಹೀಗಾಗಿ ಹಲವು ಮಾರ್ಗಗಳಲ್ಲಿ ವಿಮಾನ ಸಂಖ್ಯೆ ಕಡಿಮೆ ಇದ್ದಿದ್ದರಿಂದ. ಇತರೆ ಸಂಸ್ಥೆಗಳು ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ್ದವು. ಇದಕ್ಕೆ ಜನತೆಯಿಂದ ಭಾರಿ ವಿರೋಧ ವ್ಯಕ್ತವಾಗಿತ್ತು.



Ad Widget

Click to comment

Leave a Reply

ವೈರಲ್‌ ನ್ಯೂಸ್‌

ಸಿಎಂ ಪುಟದಲ್ಲಿ ಮೊಳಗಿದ ಪುತ್ತೂರಿನ ಕಂಠ – ತುಳುನಾಡಿನ ಸಂಸ್ಕೃತಿ – ಭಾಷಾ ಸೊಗಡಿಗೆ ಧ್ವನಿಯಾದ ದಿವ್ಯಶ್ರೀ ರೈ ವಜ್ರದುಂಬಿ

Published

on



Ad Widget

Ad Widget

Ad Widget

Ad Widget

ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ ಹಿನ್ನಲೆ ಧ್ವನಿ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

Ad Widget

Ad Widget

Ad Widget

Ad Widget


ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಗುರುತಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಇನ್‌ಸ್ಟಾಗ್ರಾಂ ಪುಟದಲ್ಲಿ ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಆಚಾರ ವಿಚಾರವನ್ನು ಬಿಂಬಿಸುವ ವಿಡಿಯೋ ಹಂಚಿಕೊಳ್ಳಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಕಂಠಸಿರಿ ಹಿನ್ನಲೆ ಧ್ವನಿಯಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget


ವಿಡಿಯೋದಲ್ಲಿ ತುಳುನಾಡಿನ ಪ್ರಕೃತಿ ಸೌಂದರ್ಯ, ಸಾಹಿತ್ಯ , ಸಂಸ್ಕೃತಿ, ಸಂಪ್ರದಾಯ, ಬದುಕಿನ ವೈವಿಧ್ಯ ಹಾಗೂ ತುಳು ಭಾಷೆಯ ಸೊಗಡನ್ನು ಮನಮುಟ್ಟುವ ರೀತಿಯಲ್ಲಿ ಕಟ್ಟಿಕೊಡಲಾಗಿದ್ದು, ಅದಕ್ಕೆ ದಿವ್ಯಶ್ರೀ ಅವರ ಧ್ವನಿ ಮತ್ತಷ್ಟು ಜೀವ ತುಂಬಿದೆ. ಮಾತುಗಳನ್ನು ಕೇವಲ ಕೇಳಿಸುವುದಕ್ಕಿಂತ, ಅವುಗಳ ಭಾವವನ್ನು ಕೇಳುಗರ ಮನಸ್ಸಿಗೆ ತಲುಪಿಸುವ ರೀತಿಯ ಅವರ ಧ್ವನಿ ನಿರೂಪಣೆ ವಿಡಿಯೋಗೆ ವಿಶೇಷ ಮೆರುಗು ನೀಡಿದೆ.

Ad Widget

Ad Widget <> Ad Widget


ಮುಖ್ಯಮಂತ್ರಿಗಳ ಅಧಿಕೃತ ಪುಟದಲ್ಲಿ ಪ್ರಸಾರವಾದ ಈ ವಿಡಿಯೋಗೆ ಅಲ್ಪಾವಧಿಯಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ ಎರಡು ದಿನಗಳಲ್ಲಿ ಸುಮಾರು 5 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. ತುಳುವಿನ ಬಗ್ಗೆ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಕರಾವಳಿಯ ಜನರ ನಡುವೆ ಈ ವಿಡಿಯೋ ವಿಶೇಷ ಗಮನ ಸೆಳೆದಿದ್ದು, ದಿವ್ಯಶ್ರೀ ಅವರ ಕಂಠಸಿರಿಯೂ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.



Ad Widget


ನಿರೂಪಕಿ ಹಾಗೂ ವಾಯ್ಸ್‌ಓವರ್ ಆರ್ಟಿಸ್ಟ್ ಆಗಿರುವ ದಿವ್ಯಶ್ರೀ, ತಮ್ಮ ಧ್ವನಿಯ ಏರಿಳಿತ, ಉಚ್ಚಾರಣೆಯ ಸ್ಪಷ್ಟತೆ ಹಾಗೂ ಭಾವಪೂರ್ಣ ನಿರೂಪಣೆಯ ಮೂಲಕ ತುಳುನಾಡಿನ ಮಣ್ಣಿನ ಸೊಗಡನ್ನು ಧ್ವನಿಯಲ್ಲೇ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ತುಳು ಭಾಷೆಯ ಬಗ್ಗೆ ಹೆಮ್ಮೆ, ಕರಾವಳಿಯ ಸಂಸ್ಕೃತಿಯ ಬಗ್ಗೆ ಅಭಿಮಾನ ಹಾಗೂ ವಿಡಿಯೋದಲ್ಲಿನ ದೃಶ್ಯಗಳಿಗೆ ಹೊಂದಿಕೊಳ್ಳುವ ಧ್ವನಿ ನಿರೂಪಣೆ ಅವರ ವಾಯ್ಸ್‌ಓವರ್‌ನ ವಿಶೇಷತೆಯಾಗಿದೆ.

Ad Widget

Ad Widget


ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ದಿವ್ಯಶ್ರೀ, ಇದಕ್ಕೂ ಮೊದಲು ಹಲವು ಸುದ್ದಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪತ್ರಿಕೋದ್ಯಮದ ಅನುಭವದ ಜತೆಗೆ ಡಾಕ್ಯುಮೆಂಟರಿ, ವಿಶೇಷ ವರದಿ ಹಾಗೂ ಜಾಹೀರಾತುಗಳಿಗೆ ಧ್ವನಿ ನೀಡಿರುವ ಅವರು ವಾಯ್ಸ್‌ಓವರ್ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. “ನಿಖರ ನ್ಯೂಸ್”ನ ಹಲವಾರು ವಿಡಿಯೋಗಳಲ್ಲೂ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.


2023ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುವ ದಿವ್ಯಶ್ರೀ, ಅಧ್ಯಯನ ಹಾಗೂ ವೃತ್ತಿ ಎರಡೂ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.


ಅರಿಯಡ್ಕ ಗ್ರಾಮದ ತ್ಯಾಗರಾಜನಗರ ನಿವಾಸಿ ವಿಠಲ ರೈ ಹಾಗೂ ಶಾಲಿನಿ ರೈ ದಂಪತಿಯ ಪುತ್ರಿಯಾಗಿರುವ ದಿವ್ಯಶ್ರೀ ಅವರ ವೃತ್ತಿ ಬದುಕಿನ ಹೆಜ್ಜೆಗಳಿಗೆ ಸಹೋದರಿ ಮಧುಶ್ರೀ ರೈ ಅವರೂ ಪ್ರೋತ್ಸಾಹ ನೀಡುತ್ತಿದ್ದಾರೆ.
ತುಳುವಿಗೆ ಅಧಿಕೃತ ಮಾನ್ಯತೆ ದೊರೆತ ಸಂಭ್ರಮದ ಕ್ಷಣದಲ್ಲಿ, ತುಳುನಾಡಿನ ಕಥೆಯನ್ನು ತಮ್ಮ ಕಂಠದ ಮೂಲಕ ಸಾವಿರಾರು ಜನರಿಗೆ ತಲುಪಿಸಿದ ದಿವ್ಯಶ್ರೀ ರೈ ವಜ್ರದುಂಬಿ ಅವರ ಧ್ವನಿ ಈಗ ಪುತ್ತೂರಿನಿಂದ ತುಳುನಾಡಿನಾಚೆಗೂ ಕೇಳಿಸುತ್ತಿದೆ.

Ad Widget
Continue Reading

ಅಂತರ ರಾಜ್ಯ

Punjab-ಪಂಜಾಬ್ ವಿವಾಹದಲ್ಲಿ ವಧುವಿನ ಮೇಲೆ 8 ಕೋಟಿ ರೂ. ನೋಟುಗಳ ಮಳೆ: ಹಬ್ಬಿದ್ದ ವದಂತಿಗೆ ಬಿತ್ತು ಬ್ರೇಕ್; ಅಸಲಿ ಮೊತ್ತ ಎಷ್ಟು ಗೊತ್ತೇ?

Published

on



Ad Widget

Ad Widget

Ad Widget

Ad Widget

ಪಂಜಾಬ್‌ನ ತರಣ್ ತರಣ್‌ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು.

Ad Widget

Ad Widget

Ad Widget

Ad Widget

ಅಮೃತಸರ, ಫೆ.19: ಪಂಜಾಬ್‌ನ ತರಣ್ ತರಣ್‌ನಲ್ಲಿ ಇತ್ತೀಚೆಗೆ ನಡೆದ ಅದ್ಧೂರಿ ವಿವಾಹವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮದುವೆಯ ಸಂಭ್ರಮದಲ್ಲಿ ವರ ಮತ್ತು ವಧುವಿನ ಮೇಲೆ ಬರೋಬ್ಬರಿ 8 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸುರಿಮಳೆಗೈಯಲಾಗಿದೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
ರಾಜಮನೆತನದ ಶೈಲಿಯಲ್ಲಿ ನಡೆದ ಈ ವಿವಾಹದಲ್ಲಿ, ಸಂಭ್ರಮಾಚರಣೆಯ ಭಾಗವಾಗಿ ನೋಟುಗಳನ್ನು ಗಾಳಿಯಲ್ಲಿ ತೂರಿ ಸುರಿಮಳೆಗೈಯಲಾಗಿತ್ತು. ಅತಿಥಿಗಳು ಈ ದೃಶ್ಯವನ್ನು ಕಂಡು ಆಶ್ಚರ್ಯಚಕಿತರಾಗಿದ್ದರು. ಈ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದಂತೆ, ಕೆಲವರು ಇದನ್ನು ಶ್ರೀಮಂತಿಕೆಯ ಪ್ರದರ್ಶನ ಎಂದು ಟೀಕಿಸಿದರೆ, ಇನ್ನು ಕೆಲವರು ಇದು ಅಲ್ಲಿನ ಸಂಪ್ರದಾಯ ಎಂದು ಅಭಿಪ್ರಾಯಪಟ್ಟಿದ್ದರು. ಕೋಟ್ಯಂತರ ರೂಪಾಯಿ ಹಣವನ್ನು ಹೀಗೆ ಪೋಲು ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗಳು ಆರಂಭವಾಗಿದ್ದವು.

Ad Widget

Ad Widget <> Ad Widget

ಅಸಲಿ ಸತ್ಯ ಬಹಿರಂಗ:
ಆದರೆ, ಈ ಹರಡಿದ್ದ ಸುದ್ದಿಯಲ್ಲಿ ಸತ್ಯಾಂಶವಿಲ್ಲ ಎಂಬುದು ಈಗ ತಿಳಿದುಬಂದಿದೆ. ಮದುವೆಯ ಕಾರ್ಯಕ್ರಮದಲ್ಲಿದ್ದ ಡಿಜೆ ಆಪರೇಟರ್ ಈ ಕುರಿತು ಅಸಲಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ವಾಸ್ತವವಾಗಿ ಅಲ್ಲಿ ಸುರಿಸಿದ್ದು 8 ಕೋಟಿ ರೂಪಾಯಿಗಳನ್ನಲ್ಲ, ಬದಲಿಗೆ ಕೇವಲ 3 ಲಕ್ಷ ರೂಪಾಯಿಗಳನ್ನು ಮಾತ್ರ!



Ad Widget

ಹಣದ ರಾಶಿ ದೊಡ್ಡದಾಗಿ ಕಾಣಲು ಕಾರಣವೆಂದರೆ, ಅಲ್ಲಿ ಬಳಸಲಾದ ಬಹುಪಾಲು ನೋಟುಗಳು 10 ರೂಪಾಯಿ ಮುಖಬೆಲೆಯದ್ದಾಗಿದ್ದವು. ಕಡಿಮೆ ಮುಖಬೆಲೆಯ ನೋಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ, ನೋಡುವವರಿಗೆ ಅದು ಕೋಟ್ಯಂತರ ರೂಪಾಯಿಯಂತೆ ಭಾಸವಾಗಿತ್ತು. “ಇದು ಕುಟುಂಬದ ಸಂತೋಷವನ್ನು ವ್ಯಕ್ತಪಡಿಸುವ ಒಂದು ವಿಧಾನ ಮತ್ತು ಸ್ಥಳೀಯ ಆಚರಣೆಯ ಭಾಗವಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.

Ad Widget

Ad Widget

ಒಟ್ಟಿನಲ್ಲಿ, 8 ಕೋಟಿ ರೂಪಾಯಿ ಎಂದು ಹಬ್ಬಿದ್ದ ಸುದ್ದಿ ಕೇವಲ ಅತಿಶಯೋಕ್ತಿಯಾಗಿದ್ದು, ಸತ್ಯ ತಿಳಿಯುತ್ತಿದ್ದಂತೆ ವಿವಾದಕ್ಕೆ ತೆರೆ ಬಿದ್ದಿದೆ.

Ad Widget
Continue Reading

ವೈರಲ್‌ ನ್ಯೂಸ್‌

ಚೀನಾದಲ್ಲಿ ಇತಿಹಾಸ ನಿರ್ಮಾಣ : ಗಂಟೆಗೆ 700ಕಿಮೀ ವೇಗದಲ್ಲಿ ಸಂಚರಿಸುವ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

Published

on



Ad Widget

Ad Widget

Ad Widget

Ad Widget

ಬೀಜಿಂಗ್‌: ನವೀನ ತಂತ್ರಜ್ಞಾನಗಳಿಂದ ಜಗತ್ತನ್ನು ನಿಬ್ಬೆರಗುಗೊಳಿಸುವ ಚೀನಾ ಇದೀಗ ಮತ್ತೊಂದು ಇತಿಹಾಸ ನಿರ್ಮಿಸಿದೆ. ಗಂಟೆಗೆ 700 ಕಿ.ಮೀ ಸಂಚರಿಸುವ ಸೂಪರ್‌ ಕಂಡಕ್ಟಿವ್‌ ಮ್ಯಾಗ್ಲೆವ್‌ ರೈಲಿನ ಮಾದರಿಯ ಪ್ರಾಯೋಗಿಕ ಪರೀಕ್ಷೆಯನ್ನು ಚೀನಾ ಯಶಸ್ವಿಯಾಗಿ ನಡೆಸಿದೆ. ಈ ವೇಗ ನೂತನ ವಿಶ್ವದಾಖಲೆಯಾಗಿದೆ. ಒಂದು ವೇಳೆ ಈ ರೈಲು ನಿಜರೂಪ ಪಡೆದು ಹಳಿ ಮೇಲೆ ಓಡಿದರೆ ಅದು ವಿಶ್ವದ ಅತ್ಯಂತ ವೇಗದ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

Ad Widget

Ad Widget

Ad Widget

Ad Widget

ಹಾಲಿ ಚೀನಾದಲ್ಲಿ ಇರುವ ಶಾಂಘೈ ಮ್ಲಾಗ್ಲೇವ್‌ ಗಂಟೆಗೆ 460 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ವಿಶ್ವದ ಅತಿವೇಗದ ರೈಲು ಎಂಬ ಹಿರಿಮೆ ಹೊಂದಿದೆ. ಪರೀಕ್ಷಿಸಿದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯ
ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾನಿಲಯವು 700 ಕಿ.ಮೀ/ ಗಂಟೆಗೆ ಸಂಚರಿಸುವ ರೈಲಿನ ಮಾದರಿಯನ್ನು ಪರೀಕ್ಷಿಸಿದೆ. 400 ಮೀ.ಉದ್ದ ಮ್ಯಾಗ್ಲೆವ್‌ ಹಳಿಯ ಮೇಲೆ 1000 ಕೆಜಿ ತೂಕದ ರೈಲಿನ ಮಾದರಿಯನ್ನು ಪರೀಕ್ಷಿಸಲಾಗಿದೆ. ಈ ಪರೀಕ್ಷೆ ವೇಳೆ ಗಂಟೆಗೆ 700 ಕಿ.ಮೀ ದೂರ ಸಂಚರಿಸಬೇಕಾದ ವೇಗವನ್ನು ರೈಲು ಕೇವಲ 2 ಸೆಕೆಂಡ್‌ಗಳಲ್ಲೇ ಸಾಧಿಸುವ ಮೂಲಕ, ಯೋಜನೆಯ ಕಾರ್ಯಸಾಧು ಬಗ್ಗೆ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಇದು ಇದುವರೆಗೆ ಪರೀಕ್ಷಿಸಲ್ಪಟ್ಟ ಅತ್ಯಂತ ವೇಗದ ಸೂಪರ್‌ ಕಂಡಕ್ಟಿಂಗ್‌ ಮ್ಯಾಗ್ಲೆವ್‌ ರೈಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು
ಸಂಶೋಧನಾ ತಂಡವು ಒಂದು ದಶಕದಿಂದ ಈ ಯೋಜನೆಗಾಗಿ ಶ್ರಮಿಸುತ್ತಿತ್ತು, ಇದೇ ವರ್ಷದ ಜನವರಿಯಲ್ಲಿ ಇದೇ ಹಳಿ ಮೇಲೆ 648 ಕಿ.ಮೀ/ ಗಂಟೆ ಸಂಚಾರದ ಪರೀಕ್ಷೆ ನಡೆಸಿತ್ತು. ಇದೀಗ ಆ ವೇಗ 700 ಕಿ.ಮೀಗೆ ಹೆಚ್ಚಿದೆ. ಮ್ಯಾಗ್ಲೇವ್‌ ತಂತ್ರಜ್ಞಾನದ ರೈಲುಗಳಿಗೆ ಚಕ್ರ ಇರುವುದಿಲ್ಲ. ಬದಲಾಗಿ ಅವು ಹಳಿ ಮತ್ತು ರೈಲಿನ ನಡುವೆ ಉತ್ಪತ್ತಿಯಾಗುವ ಅಯಂಸ್ಕಾತೀಯ ವಲಯದಲ್ಲಿ ಗಾಳಿಯಲ್ಲೇ ತೇಲಿಕೊಂಡು ಮುಂದೆ ಸಾಗುತ್ತದೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading