Connect with us

Uncategorized

kalladka prabhakara Bhat Puttur hate speech case : ಕೋಮು ದ್ವೇಷದ ಭಾಷಣ ಆರೋಪ- ಡಾ. ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ತೀರ್ಪು ಡಿ. 9ಕ್ಕೆ | ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

kalladka prabhakara Bhat Puttur hate speech case ಪುತ್ತೂರು: ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಪ್ರಚೋದನೆ ಮತ್ತು ಅವಮಾನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದ್ದು, ತೀರ್ಪನ್ನು ಡಿ. 9ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ. ಈ ಪ್ರಕರಣ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.

Ad Widget

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಅಕ್ಟೋಬರ್ 20ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ ಭಟ್ ಮಾಡಿದ ಭಾಷಣ ಸಾರ್ವಜನಿಕ ಶಾಂತಿಗೆ ಅಪಾಯಕಾರಿಯಾಗಿದ್ದು, ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯನ್ನು ಉಲ್ಲೇಖಿಸಿ ಧಾರ್ಮಿಕ ವೈಮನಸ್ಸು ಪ್ರಚೋದಿಸಿದ್ದಾರೆ ಎಂದು ಪುತ್ತೂರು ತಾಲೂಕಿನ ಈಶ್ವರಿ ಪದ್ಮುಂಜ ಎಂಬುವವರು ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಭಟ್ ಅವರ ಭಾಷಣವು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಿರುವುದನ್ನು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

Ad Widget

Ad Widget <> Ad Widget

ಪ್ರಕರಣ ದಾಖಲು, ಜಾಮೀನು ಅರ್ಜಿಗೆ ಮೊರೆ:
ದೂರಿನ ಹಿನ್ನೆಲೆಯಲ್ಲಿ, ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಯ ಕಲಂ 79, 196, 299, 302, ಹಾಗೂ 3(5) ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದರ ಬೆನ್ನಲ್ಲೇ, ಡಾ. ಭಟ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಜಾಮೀನು ಅರ್ಜಿ ಸಲ್ಲಿಸಿದ ಒಂದು ವಾರದ ನಂತರ, ಡಾ. ಭಟ್ ಪುತ್ತೂರು ಗ್ರಾಮಾಂತರ ಠಾಣೆಗೆ ತೆರಳಿ ಪೊಲೀಸ್ ವಿಚಾರಣೆಯನ್ನೂ ಎದುರಿಸಿದ್ದರು.



Ad Widget

ಅಭಿಯೋಜನೆ ಮತ್ತು ದೂರುದಾರರ ವಾದ:
ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ. ಭಟ್ ಅವರು ಈಗಾಗಲೇ ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ನಡುವೆ, ಪ್ರಕರಣದ ದೂರುದಾರರು, ಪ್ರಾಸಿಕ್ಯೂಷನ್ ಜೊತೆ ವಾದ ಮಂಡನೆಗೆ ಅವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ದೂರುದಾರರ ಪರ ವಕೀಲರಾದ ಪಿ.ಕೆ. ಸತೀಶನ್ ಅವರು ಡಿ. 6ರಂದು ತಮ್ಮ ವಾದ ಮಂಡಿಸಿದರು. ಡಾ. ಪ್ರಭಾಕರ ಭಟ್ ಪರ ವಕೀಲ ಮಹೇಶ್ ಕಜೆ ಅವರು ಡಿ. 5ರಂದು ವಾದ ಮಂಡನೆ ಮಾಡಿದ್ದಾರೆ.

Ad Widget

Ad Widget

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ತೀರ್ಪನ್ನು ಕಾಯ್ದಿರಿಸಿ ವಿಚಾರಣೆಯನ್ನು ಡಿ. 9ಕ್ಕೆ ಮುಂದೂಡಿದೆ. ಡಾ. ಪ್ರಭಾಕರ ಭಟ್ ಅವರ ಭವಿಷ್ಯ ನಿರ್ಧರಿಸುವ ಈ ತೀರ್ಪು ಸದ್ಯ ರಾಜ್ಯಾದ್ಯಂತ ಕುತೂಹಲ ಮೂಡಿಸಿದೆ. ನ್ಯಾಯಾಲಯ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Puttur hate speech case: Dr. Prabhakar Bhat anticipatory bail verdict on Dec 9. Details of Uppalige speech, FIR under BNS sections, arguments. Kalladka Bhat bail, Puttur news, latest updates.

Ad Widget
Click to comment

Leave a Reply

Uncategorized

Dharmasthala-28ನೇ ವರ್ಷದ ಭಜನಾ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ಸಾಮರಸ್ಯದ  ಸಂಕೇತವೇ ಈ ಭಜನೆ : ಪ್ರೊ. ಪವನ್ ಕಿರಣಕೆರೆ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ ಆಸೆಮ್ಸ್ ಶಿಕ್ಷಣ ಸಂಸ್ಥೆ ಕಲ್ಮಾಡಿ, ಉಡುಪಿ ಇಲ್ಲಿನ ಪ್ರಾಂಶುಪಾಲ ಪ್ರೊ. ಪವನ್ ಕಿರಣಕೆರೆ ಮಾತನಾಡಿದರು.

Ad Widget

Ad Widget

Ad Widget

Ad Widget

ಧರ್ಮಸ್ಥಳ, ಅ.02 : ಯಾವುದೇ ಮತ ಪಂಥಗಳ ತಾರತಮ್ಯವಿಲ್ಲದೆ ಸಾಮರಸ್ಯದಿಂದ ದೇವರನ್ನು ಸ್ಮರಿಸುವ ಏಕೈಕ ಮಾರ್ಗವೇ ಭಜನೆಯಾಗಿದ್ದು, ಇಡೀ ಸಮಾಜಕ್ಕೆ ಸಾಮರಸ್ಯವನ್ನು ಸಾರುವ ಕಾರ್ಯವನ್ನು ಈ ಭಜನಾ ಕಮ್ಮಟ ಮಾಡುತ್ತಿದೆ ಎಂದು ಪ್ರಸಂಗಕರ್ತರು, ಅರ್ಥಧಾರಿಗಳು ಹಾಗೂ ಆಸೆಮ್ಸ್ ಶಿಕ್ಷಣ ಸಂಸ್ಥೆ ಕಲ್ಮಾಡಿ, ಉಡುಪಿ  ಇಲ್ಲಿನ ಪ್ರಾಂಶುಪಾಲ ಪ್ರೊ. ಪವನ್ ಕಿರಣಕೆರೆ ಅಭಿಪ್ರಾಯಪಟ್ಟರು.

Ad Widget

Ad Widget

Ad Widget alt="Ad Widget"/>

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ  ಮಾತನಾಡಿದರು.

Ad Widget

Ad Widget <> Ad Widget

  ಮನುಷ್ಯನ ಮನಸ್ಸಿನಲ್ಲಿರುವ ಅಸೂಯೆ, ಮತ್ಸರಗಳೇ ದುಃಖದ ಮೂಲವಾಗಿದ್ದು, ಅವೆಲ್ಲವನ್ನೂ  ಕಳೆಯಲು ಭಜನೆ ಹಾಗೂ ಆಧ್ಯಾತ್ಮದಿಂದ ಮಾತ್ರ ಸಾಧ್ಯ. ಸುಖದಲ್ಲಿ ಹಿಗ್ಗದೆ, ಕಷ್ಟ ಬಂದಾಗ ಕುಗ್ಗದೆ ಎಲ್ಲವನ್ನೂ ಸಮಚಿತ್ತವಾಗಿ ಸ್ವೀಕರಿಸುವ ಮೂಲಕ ಸಾಮರಸ್ಯದ ಬದುಕನ್ನು ಭಜನೆಯಿಂದ ಕಂಡುಕೊಳ್ಳಬಹುದಾಗಿದೆ. ಭಗವಂತನ ದೃಷ್ಟಿಯಲ್ಲಿ ಭಕ್ತಿಗೆ ಪ್ರಾಧಾನ್ಯತೆಯೇ ಹೊರತು ಯಾವುದೇ ಆಡಂಬರದ ಆಚರಣೆಗಳಿಗಲ್ಲ. ಭಗವಂತನನ್ನು ಒಲಿಸಿಕೊಳ್ಳಲು ಶ್ರದ್ಧೆಯೇ ಅತ್ಯಂತ ಉತ್ತಮ ಹಾದಿಯಾಗಿದೆ ಎಂದು ಎಲ್ಲಾ ಶಿಬಿರಾರ್ಥಿಗಳಿಗೆ ಭೋದಿಸಿದರು.



Ad Widget

   ರಾಜ್ಯಾದ್ಯಂತ ಎಲ್ಲಾ ಭಕ್ತರನ್ನು ಒಗ್ಗೂಡಿಸಿ ಎಲ್ಲರ ಮಾನಸಿಕ ಶುದ್ಧತೆಯನ್ನು ಕಾಪಾಡುವ ಮೂಲಕ ಭಜನಾ ಕಮ್ಮಟವು ಅತಿ ಮುಖ್ಯ ಪಾತ್ರ ವಹಿಸಿದ್ದು, ಈ ಕಮ್ಮಟವನ್ನು ಪರ್ವವಾಗಿಸುವಲ್ಲಿ ಕಾರಣಿಭೂತರಾದ  ಹೆಗ್ಗಡೆ ದಂಪತಿಗಳ ಪರಿಶ್ರಮ ಬಲು ದೊಡ್ಡದು ಎಂದು ಶ್ಲಾಘಿಸಿದರು.

Ad Widget

Ad Widget

 ಈ ಸಂದರ್ಭದಲ್ಲಿ ಹಿಂದಿನ 27ನೇ ವರ್ಷದ ಭಜನಾ ಕಮ್ಮಟದಲ್ಲಿ ಭಾಗಿಯಾಗಿ ಸಾರ್ಥಕತೆಯನ್ನು ಕಂಡ ಹೇಮಂತ್ ಸುಳ್ಯ ತನ್ನ ಅನುಭವದ ಮಾತುಗಳನ್ನಾಡಿದರು.

ಈ ಕಾರ್ಯಕ್ರಮದಲ್ಲಿ ಸಂಗೀತ ವಿದುಷಿ ಉಷಾ ಹೆಬ್ಬಾರ್, ಭಜನಾ ಕಮ್ಮಟ ಸಮಿತಿ ಸಂಚಾಲಕ ಸುಬ್ರಮಣ್ಯ ಪ್ರಸಾದ್, ಸಮಿತಿಯ ಸರ್ವ ಸದಸ್ಯರು ಹಾಗೂ ಶಿಬಿರಾರ್ಥಿಗಳು ಭಾಗಿಯಾಗಿದ್ದರು.

Ad Widget
Continue Reading

Uncategorized

ಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ

Published

on



Ad Widget

Ad Widget

Ad Widget

Ad Widget

ಎಂ.ಜಿ. ಹೆಗಡೆ ಅವರು ರಚಿಸಿರುವ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಅ.6ರಂದು ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯಾಗಲಿದೆ. ಸಂಜೆ 3.30ಕ್ಕೆ ದಾಖಲೆಗಳ ಪ್ರದರ್ಶನ ಉದ್ಘಾಟನೆಯಾಗಲಿದ್ದು, ಸಂಜೆ 5.30ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಎಂ.ಜಿ. ಹೆಗಡೆ ಅವರು ರಚಿಸಿರುವ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಅ.6ರಂದು ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯಾಗಲಿದೆ.

Ad Widget

Ad Widget

Ad Widget alt="Ad Widget"/>

Ad Widget

14 ಜಿಲ್ಲೆಗಳ 350 ಪೊಲೀಸ್ ಠಾಣೆಗಳು ಹಾಗೂ ಗೃಹ ಇಲಾಖೆಯಿಂದ RTI ಮೂಲಕ ಪಡೆದ ದಾಖಲೆಗಳನ್ನು ಒಳಗೊಂಡಿರುವ ಈ ಕೃತಿಯ ಬಿಡುಗಡೆ ಕಾರ್ಯಕ್ರಮದ ಜೊತೆಗೆ ದಾಖಲೆಗಳ ಪ್ರದರ್ಶನವೂ ನಡೆಯಲಿದೆ.

Ad Widget

Ad Widget <> Ad Widget

ಅ.6ರಂದು ಸಂಜೆ 3.30ಕ್ಕೆ ದಾಖಲೆಗಳ ಪ್ರದರ್ಶನ ಉದ್ಘಾಟನೆಯಾಗಲಿದ್ದು, ಸಂಜೆ 5.30ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.



Ad Widget

ಕಾರ್ಯಕ್ರಮದ ಅಂಗವಾಗಿ ಸಂಜೆ 3.30ಕ್ಕೆ ‘ಶರ ಸೇತು ಬಂಧನ’ ತಾಳಮದ್ದಳೆ ನಡೆಯಲಿದೆ. ಕವಿ ಹಟ್ಟಿಯಂಗಡಿ ರಾಮಭಟ್ಟ ಅವರ ಕೃತಿಗೆ ಬಲಿಪ ಶಿವಶಂಕರ ಭಟ್ಟ ಅವರು ಭಾಗವತರಾಗಿ, ಕಾರ್ಕಳದ ರವಿರಾಜ್ ಜೈನ್ ಮದ್ದಳೆ ವಾದಕರಾಗಿ ಹಾಗೂ ಬೆಳುವಾಯಿಯ ಎಂ. ದೇವಾನಂದ ಭಟ್ಟ ಚೆಂಡೆ ವಾದಕರಾಗಿ ಭಾಗವಹಿಸಲಿದ್ದಾರೆ.

Ad Widget

Ad Widget

ತಾಳಮದ್ದಳೆಯಲ್ಲಿ ದಿನೇಶ ಶೆಟ್ಟಿ ಕಾವಳಕಟ್ಟೆ ಅವರು ಅರ್ಜುನನಾಗಿ, ಜಬ್ಬಾರ್ ಸಮೋ ಸಂಪಾಜೆ ಅವರು ಹನುಮಂತನಾಗಿ ಹಾಗೂ ಕೃತಿಕಾರ ಎಂ.ಜಿ. ಹೆಗಡೆ ಅವರು ವೃದ್ಧ ವಿಪ್ರನ ಪಾತ್ರ ನಿರ್ವಹಿಸಲಿದ್ದಾರೆ.

ಕ್ರಿಯಾ ಮಾಧ್ಯಮ, ಬೆಂಗಳೂರು ಹಾಗೂ ಎಂ.ಜಿ. ಹೆಗಡೆ ಸ್ನೇಹಿತರ ಬಳಗ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದೆ.

Ad Widget
Continue Reading

Uncategorized

SIT Report-ಧರ್ಮಸ್ಥಳ ಎಸ್ಐಟಿ ವರದಿ : ಪೊಲೀಸ್ ಠಾಣೆಯಲ್ಲಿ 1480 UDR – ಪಂಚಾಯತ್ ನ ದಾಖಲೆಯಲ್ಲಿ 1510…! ಎಸ್ಐಟಿ ಗೆ 73 ದೂರು ದಾಖಲು..!

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅಸಹಜ ಸಾವುಗಳ ಸಂಖ್ಯೆಯಲ್ಲಿ ಪೊಲೀಸ್‌ ಠಾಣೆಯಲ್ಲಿಯ ದಾಖಲೆಗೂ ಇತರೆ ದಾಖಲೆಗಳಿಗೂ ವ್ಯತ್ಯಾಸ ಇರುವುದನ್ನು ಪತ್ತೆ ಹಚ್ಚಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅಸಹಜ ಸಾವುಗಳ ಸಂಖ್ಯೆಯಲ್ಲಿ ಪೊಲೀಸ್‌ ಠಾಣೆಯಲ್ಲಿಯ ದಾಖಲೆಗೂ ಇತರೆ ದಾಖಲೆಗಳಿಗೂ ವ್ಯತ್ಯಾಸ ಇರುವುದನ್ನು ಪತ್ತೆ ಹಚ್ಚಿದೆ.

Ad Widget

Ad Widget

Ad Widget alt="Ad Widget"/>

Ad Widget

1998ರಿಂದ 2014ರ ಅವಧಿಯಲ್ಲಿ ಬೆಳ್ತಂಗಡಿ ಠಾಣೆ ವ್ಯಾಪ್ತಿಯಲ್ಲಿ 1,480 ಅಸ್ವಾಭಾವಿಕ ಸಾವು ಸಂಭವಿಸಿದ ಕುರಿತು ಠಾಣೆಯಲ್ಲಿ ಮಾಹಿತಿ ಇದೆ. ಆದರೆ, ಬೆಳ್ತಂಗಡಿ ಠಾಣೆ, ರಾಜ್ಯ ಅಪರಾಧ ದಾಖಲಾತಿ ಘಟಕ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯಿತಿಯ ದಾಖಲಾತಿಗಳಿಂದ ಕಲೆ ಹಾಕಿರುವ ಮಾಹಿತಿ ಪ್ರಕಾರ ಈ ಅವಧಿಯಲ್ಲಿ ಠಾಣಾ ವ್ಯಾಪ್ತಿಯಲ್ಲಿ 1,510 ಅಸಹಜ ಸಾವುಗಳು ಸಂಭವಿಸಿರುವುದು ಗೊತ್ತಾಗಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Ad Widget

Ad Widget <> Ad Widget

“ಎಸ್‌ಐಟಿ ಇದುವರೆಗೆ ಕೈಗೊಂಡಿರುವ ವಿಚಾರಣೆ ಹಾಗೂ ತನಿಖಾ ಪ್ರಗತಿಯ ಸಮಗ್ರ ವರದಿಯನ್ನು ಪೊಲೀಸ್‌ ಮಹಾನಿರ್ದೇಶಕರ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ (2026ರ ಮಾರ್ಚ್‌ 24ರಂದು) ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ’ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಆಗಸ್ಟ್ 31ರಂದು ಪತ್ರ ಬರೆದು ಮಾಹಿತಿ ನೀಡಿದ್ದಾರೆ.



Ad Widget

ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ ಸಂಸ್ಥೆಯ ಅಧ್ಯಕ್ಷೆ ಬೆಂಗಳೂರಿನ ಜ್ಯೋತಿ ಎ. ಅವರು ಮಾಹಿತಿ ಹಕ್ಕಿನಡಿ ಕೋರಿದ್ದ ಅರ್ಜಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಇದೇ 15ರಂದು ಉತ್ತರ ನೀಡಿದ್ದು, ಅದರಲ್ಲಿ ಎಸ್‌ಐಟಿ ಸರ್ಕಾರಕ್ಕೆ ಸಲ್ಲಿಸಿದ ವರದಿಯ ಪ್ರತಿಯನ್ನು ಹಂಚಿಕೊಂಡಿದೆ. ತನಿಖೆಗೆ ಸಂಬಂಧಿಸಿದ ಕೆಲ ಪ್ರಮುಖ ವಿವರಗಳು ಅದರಲ್ಲಿದ್ದು, ಅದರ ಪ್ರತಿ ಲಭ್ಯವಾಗಿದೆ.

Ad Widget

Ad Widget

‘ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಶೋಧನೆ ನಡೆಸಿದ ವೇಳೆ ಸಿಕ್ಕ 7 ತಲೆಬುರುಡೆ ಹಾಗೂ ಮಾನವ ಶರೀರದ ಅಸ್ಥಿಪಂಜರಗಳನ್ನು ತಜ್ಞರ ಅಭಿಪ್ರಾಯಕ್ಕಾಗಿ ಕಳುಹಿಸಿ, ಅವು ಪುರುಷನದ್ದೇ ಅಥವಾ ಮಹಿಳೆಯದ್ದೇ? ಸಾವಿಗೆ ಕಾರಣವಾದ ಅಂಶಗಳ ಕುರಿತ ಅಭಿಪ್ರಾಯಗಳನ್ನು ಕೋರಲಾಗಿತ್ತು. ಲಭ್ಯ ಸಾಕ್ಷ್ಯಗಳನ್ನು ಆಧರಿಸಿ ರಕ್ತ ಸಂಬಂಧಿಕರ ಪತ್ತೆಹಚ್ಚಿ ಪ್ರಕರಣದ ತನಿಖೆ ನಡೆಸಲಾಗಿದೆ’ ಎಂದು ಎಸ್‌ಐಟಿ ತಿಳಿಸಿದೆ.

‘ಸ್ಥಳೀಯ ಠಾಣೆಗಳು, ಹೊರಠಾಣೆ ದಾಖಲೆಗಳು, ಉಪವಿಭಾಗಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತಿ, ಡಿಸಿಆರ್‌ಬಿ, ಎಸ್‌ಸಿಆರ್‌ಬಿ ಹಾಗೂ ದೇವಸ್ಥಾನ ಟ್ರಸ್ಟ್‌ನ ಮಾಹಿತಿ ಕಚೇರಿ ಇತ್ಯಾದಿ ವಿವಿಧ ಮೂಲಗಳಿಂದ ಲಭ್ಯವಾದ ಅಸಹಜ ಸಾವು ಪ್ರಕರಣಗಳು, ಕಾಣೆಯಾದ ಪ್ರಕರಣಗಳು, ಕೊಲೆ ಪ್ರಕರಣಗಳು ಮುಂತಾದ ಮಾಹಿತಿ ಆಧರಿಸಿ ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಮಾಹಿತಿ ಸಂಗ್ರಹಿಸುವ, ಸಮಗ್ರಗೊಳಿಸುವ, ವಿಶ್ಲೇಷಿಸುವ ಪ್ರಕ್ರಿಯೆ ಜಾರಿಯಲ್ಲಿದೆ’ ಎಂದು ಹೇಳಿದೆ.

‘ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2002ರಲ್ಲಿ ಸಂಭವಿಸಿದ್ದ ಪ್ರಕರಣದಲ್ಲಿ ಹುಡುಗಿಯ ಅಸ್ವಾಭಾವಿಕ ಮರಣ ಪ್ರಕರಣ ಕಾನೂನು ಪ್ರಕ್ರಿಯೆಗೆ ಒಳಪಟ್ಟಿರುವುದು ಕಂಡುಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆ ಹತ್ತಿರ ರಸ್ತೆ ಬದಿಯಲ್ಲಿ ಮುಖಕ್ಕೆ ಆ್ಯಸಿಡ್‌ ಹಾಕಿ ಕೊಲೆ ಮಾಡಲಾದ ಸ್ಥಿತಿಯಲ್ಲಿ ಸಿಕ್ಕಿದ್ದ ಹೆಂಗಸಿನ ಮೃತದೇಹವನ್ನೂ ನಾನು ಹೂತುಹಾಕಿರುತ್ತೇನೆ ಎಂದು ಧರ್ಮಸ್ಥಳದಲ್ಲಿ ಶವಗಳನ್ನು ಹೂತುಹಾಕಿರುವುದಾಗಿ ದೂರು ನೀಡಿದ್ದ ವ್ಯಕ್ತಿ (ಚಿನ್ನಯ್ಯ) ತಿಳಿಸಿದ್ದ. 2009ರ ಸೆ. 18ರಂದು ಕೆ.ಬಿ.ವೀರಪ್ಪ ಮಲೆಕುಡಿಯ ದೂರು ನೀಡಿದ್ದ ಪ್ರಕರಣ ಇದಾಗಿದ್ದು, ಅದೂ ಕಾನೂನು ಪ್ರಕ್ರಿಯೆಗೆ ಒಳಪಟ್ಟಿತ್ತು’ ಎಂದು ಎಸ್‌ಐಟಿ ಹೇಳಿದೆ.

‘ದೂರುದಾರ ಚಿನ್ನಯ್ಯನ ಹೇಳಿಕೆಗೆ ಸೀಮಿತವಾಗಿ ತನಿಖೆ ನಡೆಸದೇ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ. ಎಸ್‌ಐಟಿ ರಚನೆಯ ಉದ್ದೇಶದಂತೆ ಧರ್ಮಸ್ಥಳ ಮತ್ತು ಉಜಿರೆ ಗ್ರಾಮಗಳಲ್ಲಿ 1998ರಿಂದ 2014ರವರೆಗೆ ಆಗಿರುವ ಅಸಹಜ ಮರಣ ಪ್ರಕರಣಗಳು, ಮಹಿಳೆಯರ ನಾಪತ್ತೆ ಪ್ರಕರಣಗಳು ಇತ್ಯಾದಿ ಕುರಿತು ಲಭ್ಯ ದಾಖಲೆಗಳಿಂದ ಮಾಹಿತಿ ಕಲೆಹಾಕಿ ವಿಚಾರಣೆಯನ್ನು ನಡೆಸಲಾಗುತ್ತಿದೆ. ಎಸ್‌ಐಟಿ ಇದುವರೆಗೆ 73 ದೂರು ಅರ್ಜಿಗಳನ್ನು ಸ್ವೀಕರಿಸಿದ್ದು, ಈ ಬಗ್ಗೆಯೂ ಎಲ್ಲಾ ಆಯಾಮಗಳಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗಿದೆ’ ಎಂದು ಎಸ್‌ಐಟಿ ಸ್ಪಷ್ಟಪಡಿಸಿದೆ.

‘ಮಹಿಳೆ ಕೊಲೆ ಪ್ರಕರಣದ ಶವ ಪರೀಕ್ಷೆ ವರದಿ ಲಭ್ಯವಿಲ್ಲ’
2010ರ ಏ.4ರಂದು ಬೆಳಿಗ್ಗೆ 6.50ರಿಂದ ಏ.6ರ ಬೆಳಿಗ್ಗೆ 6.30ರ ನಡುವೆ ಧರ್ಮಸ್ಥಳದ ಶರಾವತಿ ವಸತಿ ಗೃಹದ ಕೊಠಡಿ ಸಂಖ್ಯೆ 246ರಲ್ಲಿ ನರಸಿಂಹ ರಾಜು ಎಂದು ವಸತಿ ಗೃಹದ ದಾಖಲೆಗಳಲ್ಲಿ ಹೆಸರು ನೀಡಿರುವ ವ್ಯಕ್ತಿಯೊಬ್ಬ ಅಪರಿಚಿತ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಕುತ್ತಿಗೆಯನ್ನು ಒತ್ತಿ ಕೊಲೆ ಮಾಡಿದ್ದಾನೆ ಎಂದು ರಜತಗಿರಿ ವಸತಿ ಗೃಹದ ವ್ಯವಸ್ಥಾಪಕ ಸುರೇಂದ್ರ ಬಳ್ಳಾಲ್ 2010ರ ಏ. 6ರಂದು ದೂರು ನೀಡಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಈ ಬಗ್ಗೆ ಶವ ಪರೀಕ್ಷೆ ನಡೆಸಲಾಗಿದೆ ಎಂದು ಠಾಣಾ ದಾಖಲೆಗಳಲ್ಲಿ ನಮೂದಿಸಲಾಗಿದೆ. ಆದರೆ, ಶವ ಪರೀಕ್ಷೆಯ ವರದಿಯು ದಾಖಲೆಗಳಲ್ಲಿ ಲಭ್ಯವಿಲ್ಲದೇ ಇರುವುದರಿಂದ ಅಗತ್ಯ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಎಸ್‌ಐಟಿ, ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ಉಲ್ಲೇಖಿಸಿದೆ.

“ಬಾಲಕಿ ಶವ ದಫನ ಅಂಕಿ ಅಂಶದಲ್ಲಿ ವ್ಯತ್ಯಾಸ’
‘ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟೆ ಬಳಿ 2003ರ ಸೆ. 3ರಂದು ನೇತ್ರಾವತಿ ನದಿಯಲ್ಲಿ 35ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯ ಶವದೊಂದಿಗೆ 10ರಿಂದ 12 ವರ್ಷದ ಹುಡುಗಿಯ ಶವ ಪತ್ತೆಯಾದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ‘ಆಕಸ್ಮಿಕವಾಗಿ ನದಿ ನೀರಿನಲ್ಲಿ ಮುಳುಗಿ ಸಾವು’ ಪ್ರಕರಣ ದಾಖಲಾಗಿದೆ. ಕಾನೂನು ರೀತಿಯ ಕ್ರಮ ಜರುಗಿಸಿದ ಬಗ್ಗೆ ಮತ್ತು ಮೃತದೇಹಗಳನ್ನು ದಫನ ಮಾಡಿರುವ ಬಗ್ಗೆ ಠಾಣೆಯ ದಾಖಲಾತಿಗಳಲ್ಲಿ ನಮೂದಿಸಲಾಗಿದೆ. ಈ ಪ್ರಕರಣ ಸಂಬಂಧ ಪೊಲೀಸ್ ಠಾಣೆಯ ಯುಡಿಆರ್ ನೋಂದಣಿಯಲ್ಲಿರುವ ದಫನದ ವಿವರಗಳು ಮತ್ತು ಗ್ರಾಮ ಪಂಚಾಯಿತಿ ನಿರ್ವಹಿಸಿರುವ ದಫನ ದಾಖಲೆಗಳಲ್ಲಿರುವ ಅಂಕಿ-ಅಂಶಗಳ ನಡುವೆ ವ್ಯತ್ಯಾಸ ಕಂಡುಬಂದಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂಬ ಅಂಶ ಎಸ್‌ಐಟಿ ವರದಿಯಲ್ಲಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading