Connect with us

ಮಂಗಳೂರು

Crop insurance-ಅಡಿಕೆ ಬೆಳೆಗಾರರಿಗೆ ಶಾಕ್: ಕೈಕೊಟ್ಟ ಬೆಳೆ ವಿಮೆ! ಕಟ್ಟಿದ್ದ 20 ಸಾವಿರ ಪ್ರೀಮಿಯಂ -ಸಿಕ್ಕಿದ್ದು ಕೇವಲ 10 ಸಾವಿರ! ಪ್ರತಿಭಟನೆ ಕಾನೂನು ಹೋರಾಟಕ್ಕೆ ಮುಂದಾದ ಅಡಿಕೆ ಬೆಳೆಗಾರರು

Published

on

Ad Widget

Ad Widget

Ad Widget

Ad Widget

ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ ಅಡಿಕೆ ಬೆಳೆ, ಕಳೆದ ಐದಾರು ವರ್ಷಗಳಿಂದ ರೈತರ ಪಾಲಿಗೆ ನರಕಸದೃಶ ಅನುಭವ ನೀಡುತ್ತಿದೆ. ರೋಗಬಾಧೆ, ಹವಾಮಾನ ವೈಪರೀತ್ಯಗಳ ಜೊತೆಗೆ, ಈಗ ಬಹು ನಿರೀಕ್ಷಿತ ‘ಹವಾಮಾನ ಆಧಾರಿತ ಬೆಳೆ ವಿಮೆ’ ಕೂಡ ಕೈಕೊಟ್ಟಿದ್ದು, ಬೆಳೆಗಾರರು ಸರ್ಕಾರದ ಹಾಗೂ ವಿಮಾ ಕಂಪನಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಕರಾವಳಿ ಕರ್ನಾಟಕದ ಹಸಿರು ಸಿರಿಯ ಅಡಿಕೆ ತೋಟಗಳು ಇಂದು ಕಣ್ಣೀರ ಕಥೆ ಹೇಳುತ್ತಿವೆ. ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ ಅಡಿಕೆ ಬೆಳೆ, ಕಳೆದ ಐದಾರು ವರ್ಷಗಳಿಂದ ರೈತರ ಪಾಲಿಗೆ ನರಕಸದೃಶ ಅನುಭವ ನೀಡುತ್ತಿದೆ. ರೋಗಬಾಧೆ, ಹವಾಮಾನ ವೈಪರೀತ್ಯಗಳ ಜೊತೆಗೆ, ಈಗ ಬಹು ನಿರೀಕ್ಷಿತ ‘ಹವಾಮಾನ ಆಧಾರಿತ ಬೆಳೆ ವಿಮೆ’ ಕೂಡ ಕೈಕೊಟ್ಟಿದ್ದು, ಬೆಳೆಗಾರರು ಸರ್ಕಾರದ ಹಾಗೂ ವಿಮಾ ಕಂಪನಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಇನ್ನೂ ರೈತ ಪರ ಸಂಘಟನೆಗಳು ಇದರ ವಿರುದ್ಧ ಪ್ರತಿಭಟನೆ ಹೋರಾಟ ನಡೆಸಲು ಚಿಂತನೆ ನಡೆಸುತ್ತಿದ್ದಾರೆ. ಇನ್ನು ರೈತರು ಹಾಗೂ ಸಹಕಾರಿ ಸಂಘಗಳು ಇದರ ವಿರುದ್ಧ ಕಾನೂನು ಹೋರಾಟ ನಡೆಸಲು ಮನೆ ಮಾಡಿದೆ.

Ad Widget

Ad Widget alt="Ad Widget"/>

Ad Widget

ಸಂಕಷ್ಟಗಳ ಸುರಿಮಳೆ:
ಹಳದಿ ರೋಗ, ಎಲೆ ಚುಕ್ಕೆ ರೋಗ, ಕೊಳೆ ರೋಗಗಳು ಅಡಿಕೆ ತೋಟಗಳನ್ನು ಆವರಿಸಿವೆ. ಇದರ ಜೊತೆಗೆ, ಕಳೆದ ಎರಡು ವರ್ಷಗಳಿಂದ ಹೆಚ್ಚುತ್ತಿರುವ ತಾಪಮಾನ ಅಡಿಕೆ ಮರಗಳನ್ನು ಬೋಳಾಗಿಸಿವೆ. ನಳ್ಳಿಗಳು ಅಡಿಕೆ ಹಣ್ಣಾಗುವ ಮೊದಲೇ ನೆಲಕ್ಕೆ ಬೀಳುತ್ತಿದೆ. ಫಸಲು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕಿಳಿದಿದ್ದು, ಅಡಿಕೆ ಬೆಳೆಗಾರನ ಬದುಕು ಮೂರಾಬಟ್ಟೆಯಾಗಿದೆ.

Ad Widget

Ad Widget <> Ad Widget

2024-25ನೇ ಸಾಲಿನಲ್ಲಿ ಅಡಿಕೆ ನಳ್ಳಿಗಳು ಹಣ್ಣಾಗುವ ಮೊದಲೇ ಉದುರಿ, ಬಹುತೇಕ ರೈತರಿಗೆ ಒಂದು ಕೊಯಿಲಿನ ಅಡಿಕೆಯಷ್ಟೇ ಸಿಕ್ಕಿದೆ. ಇದಲ್ಲದೆ, ಜುಲೈನಿಂದ ಆಗಸ್ಟ್ ನಡುವೆ ಸುರಿದ ಭಾರೀ ಮಳೆಯಿಂದಾಗಿ ಬಹುತೇಕ ಎಲ್ಲ ತೋಟಗಳಲ್ಲಿಯೂ ಕೊಳೆ ರೋಗ ಕಾಣಿಸಿಕೊಂಡು ಭಾರೀ ನಷ್ಟಕ್ಕೆ ಕಾರಣವಾಗಿತ್ತು. ಈ ಎರಡು ಕಾರಣಗಳಿಂದ ಶೇಕಡಾ 75ಕ್ಕೂ ಅಧಿಕ ಬೆಳೆ ಹಾನಿ ಸಂಭವಿಸಿದ್ದರೂ, ರೈತರ ನಿರೀಕ್ಷೆಯಷ್ಟು ಬಿಡಿ, ಕಳೆದ ಬಾರಿಗಿಂತಲೂ ಕಡಿಮೆ ವಿಮಾ ಪರಿಹಾರ ಖಾತೆಗೆ ಬಿದ್ದಿದೆ ಎಂಬುದು ಬೆಳೆಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ದಶಕಗಳ ಹಿಂದೆ ರೈತರ ಪಾಲಿನ ಲಾಟ್ರಿ ಎಂದೇ ಜನಜನಿತವಾಗಿದ್ದ ‘ಹವಾಮಾನ ಆಧಾರಿತ ಬೆಳೆ ವಿಮೆ’ ಈ ಬಾರಿ ರೈತರ ಕೈ ಹಿಡಿಯಲಿಲ್ಲ. ಸುಳ್ಯ ಭಾಗದ ಕೆಲವು ಗ್ರಾಮಗಳಲ್ಲಿ 9 ಪಟ್ಟು ಪರಿಹಾರ ಬಂದಿದ್ದರೆ, ಪುತ್ತೂರು ತಾಲೂಕಿನ ಬಹುತೇಕ ಗ್ರಾಮಗಳಲ್ಲಿ 5 ಪಟ್ಟು ಮಾತ್ರ ಬಂದಿದೆ. ಇದು ರೈತರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಮಾ ಕಂಪನಿಗೆ ಕಟ್ಟಿದ ಒಟ್ಟು ಪ್ರೀಮಿಯಂ ಹಣಕ್ಕಿಂತಲೂ ಕಡಿಮೆ ಎಂಬ ಆರೋಪ ಕೇಳಿ ಬಂದಿದೆ.

Ad Widget

Ad Widget

ಲೆಕ್ಕಾಚಾರ ಹೀಗಿದೆ:
ಒಂದು ಎಕರೆಗೆ ರೈತ 2590 ರೂಪಾಯಿ ಪ್ರೀಮಿಯಂ ಪಾವತಿಸಿದರೆ, ಕೇಂದ್ರ 5180 ರೂಪಾಯಿ, ರಾಜ್ಯ 10360 ರೂಪಾಯಿ ಪಾವತಿಸುತ್ತದೆ. ಹೀಗೆ ವಿಮಾ ಕಂಪನಿಗೆ ಪಾವತಿಯಾದ ಒಟ್ಟು ಪ್ರೀಮಿಯಂ ಮೊತ್ತ 18130 ರೂಪಾಯಿಗಳು. ಆದರೆ, ಹಲವು ರೈತರಿಗೆ ಈ ಪ್ರೀಮಿಯಂ ಮೊತ್ತಕ್ಕಿಂತಲೂ ಕಡಿಮೆ, ಕೆಲವರಿಗೆ ಅರ್ಧದಷ್ಟು ಅಥವಾ ಅದಕ್ಕಿಂತಲೂ ಕಡಿಮೆ ಹಣ ಬಂದಿದೆ. ಇದರಿಂದ, ಬೆಳೆ ವಿಮೆಯಿಂದ ನಿಜವಾಗಿ ಲಾಭ ಪಡೆದವರು ವಿಮಾ ಕಂಪನಿಗಳು ಎಂಬುದು ಸ್ಪಷ್ಟವಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ರೈತ ಪಾವತಿಸಿದ ಪ್ರೀಮಿಯಂ ಮೊತ್ತಕ್ಕಿಂತಲೂ ಕಡಿಮೆ ಹಣ ಬಂದಿರುವುದು ರೈತರನ್ನು ಕಂಗಾಲಾಗಿಸಿದೆ.

ವಿಮಾ ಮೊತ್ತ ಕಡಿಮೆ ಬರಲು ಕಾರಣವೇನು?
• ನಿಯಮಾವಳಿಗಳ ತಿದ್ದುಪಡಿ: 2023ರಲ್ಲಿ ಹೊಸ ಸರ್ಕಾರ ಬಂದ ನಂತರ, ವಿಮಾ ಕಂಪನಿಗಳು ಪ್ರೀಮಿಯಂ ಸ್ವೀಕಾರಕ್ಕೆ ಹಿಂದೇಟು ಹಾಕಿದ್ದವು. ಈ ಸಂದರ್ಭದಲ್ಲಿ, ಜಿಲ್ಲಾ ಮಟ್ಟದಲ್ಲಿ ಟರ್ಮ್ ಶೀಟ್ನಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿ, ಕಳೆದ 10 ವರ್ಷಗಳ ಹವಾಮಾನ ಬದಲಾವಣೆ ಗಮನದಲ್ಲಿಟ್ಟುಕೊಂಡು ಪರಿಹಾರ ನೀಡುವುದಾಗಿ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿತ್ತು.
• ಪ್ರೀಮಿಯಂ ಪಾವತಿ ವಿಳಂಬ: 2024-25ನೇ ಸಾಲಿನ ವಿಮೆ ಪ್ರೀಮಿಯಂ ಪಾವತಿ 3 ತಿಂಗಳು ವಿಳಂಬವಾಗಿತ್ತು. ಇದು ವಿಮಾ ಮೊತ್ತ ಕಡಿಮೆ ಬರಲು ಒಂದು ಕಾರಣ ಎನ್ನಲಾಗುತ್ತಿದೆ.
ಕಳೆದ ವರ್ಷ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ತೀವ್ರ ಮಳೆ ಮತ್ತು ಮಾರ್ಚ್-ಏಪ್ರಿಲ್ನಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿತ್ತು. ಮೇನಲ್ಲಿ ಪ್ರಾರಂಭವಾದ ಮಳೆ ಸುಮಾರು ಮೂರು ತಿಂಗಳ ಕಾಲ ಎಡೆಬಿಡದೆ ಸುರಿದಿದೆ. ಇದರಿಂದ ಕೃಷಿಗೆ ಶೇಕಡಾ 75ಕ್ಕೂ ಅಧಿಕ ಹಾನಿಯಾಗಿದ್ದರೂ, ಪರಿಹಾರ ಮೊತ್ತ ಕಡಿಮೆಯಾಗಿ ಬರಲು ಕಾರಣವೇನೆಂಬ ಪ್ರಶ್ನೆಗೆ ಉತ್ತರವಿಲ್ಲದಾಗಿದೆ.

ಅನ್ಯಾಯ ಪ್ರಶ್ನಿಸಲು ಕೃಷಿಕರ ಸಿದ್ಧತೆ:
ವಿಮಾ ಪರಿಹಾರ ವಿತರಣೆಯಲ್ಲಿ ಕೃಷಿಕರಿಗೆ ಆಗಿರುವ ಅನ್ಯಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಯಾವ ಮಾನದಂಡವನ್ನಿಟ್ಟುಕೊಂಡು ಪರಿಹಾರ ವಿತರಣೆ ಮಾಡಲಾಗಿದೆ ಎಂಬ ಪ್ರಶ್ನೆಯನ್ನು ರೈತರು ವಿವಿಧ ಇಲಾಖೆಗಳಿಂದ ಪಡೆಯುವ ಜತೆಗೆ, ವಿಮಾ ಸಂಸ್ಥೆಯನ್ನು ಪ್ರಶ್ನಿಸಲು ಚಿಂತನೆ ನಡೆಸುತ್ತಿದ್ದಾರೆ. ಮಳೆ ಪ್ರಮಾಣದ ಲೆಕ್ಕಾಚಾರವನ್ನು ಆರ್.ಟಿ.ಐ. ಮೂಲಕ ಪಡೆಯಲು ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು ಅವರು ಪತ್ರ ಬರೆದಿದ್ದಾರೆ.

ಮೂರು ವರ್ಷದ ಪರಿಹಾರದ ಲೆಕ್ಕಾಚಾರ:
ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಗಣಪತಿ ಭಟ್ ಅವರು ಕಳೆದ ಮೂರು ವರ್ಷ ಅಡಿಕೆಗೆ ಕಟ್ಟಿದ ವಿಮೆ ಮತ್ತು ಪಡೆದ ಪರಿಹಾರದ ಲೆಕ್ಕಾಚಾರವನ್ನು ಹಂಚಿಕೊಂಡಿದ್ದಾರೆ:
• 2022-23: 5 ಸಾವಿರ ರೂ. ಕಟ್ಟಿದ್ದು, 60 ಸಾವಿರ ರೂ. ಪರಿಹಾರ ಲಭಿಸಿತ್ತು. (ಕೇಂದ್ರ 35 ಸಾವಿರ, ರಾಜ್ಯ 60 ಸಾವಿರ ಪಾವತಿಸಿತ್ತು).
• 2023-24: 10 ಸಾವಿರ ರೂ. ಪಾವತಿಸಿದ್ದು, 80 ಸಾವಿರ ರೂ. ಪರಿಹಾರ ಲಭಿಸಿತ್ತು. (ಕೇಂದ್ರ 70 ಸಾವಿರ, ರಾಜ್ಯ 1.20 ಲಕ್ಷ ಪಾವತಿಸಿತ್ತು).
• 2024-25: 20 ಸಾವಿರ ರೂ. ಪ್ರೀಮಿಯಂ ಕಟ್ಟಿದ್ದು, ಕೇವಲ 10 ಸಾವಿರ ರೂ. ಪರಿಹಾರ ಲಭಿಸಿದೆ. (ಕೇಂದ್ರ 1.40 ಲಕ್ಷ, ರಾಜ್ಯ 2.40 ಲಕ್ಷ ಪಾವತಿಸಿತ್ತು).

ರೈತರ ಆಕ್ರೋಶ:
ವಿಟ್ಲ ಕಸಬಾದ ಕೃಷಿಕ ಶ್ಯಾಮ್ ಮರಡಿತ್ತಾಯ ಅವರು 2.74 ಎಕರೆಗೆ ಕರಿಮೆಣಸಿಗೆ 951 ರೂ. ಹಾಗೂ ಅಡಿಕೆಗೆ 7122 ರೂ. ವಿಮಾ ಮೊತ್ತ ಪಾವತಿಸಿದ್ದು, ಸದ್ಯ ಪರಿಹಾರ 3995 ರೂ. ಮಾತ್ರ ಬಂದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೊಳೆರೋಗದಿಂದ ತತ್ತರಿಸಿದ ರೈತನ ಜೀವನದ ಮೇಲೆ ವಿಮಾ ಪರಿಹಾರವು ಗಾಯದ ಮೇಲೆ ಬರೆ ಹಾಕಿದಂತೆ ಆಗಿದೆ,” ಎಂದು ಅವರು ನೋವು ತೋಡಿಕೊಂಡಿದ್ದಾರೆ.
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಅವರು, “ಎರಡು ವರ್ಷದ ಮಳೆಯ ಪ್ರಮಾಣದಲ್ಲಿ ದೊಡ್ಡ ವ್ಯತ್ಯಾಸಗಳಿಲ್ಲ. ಈಗಿನ ಮಾಹಿತಿಗಳ ಪ್ರಕಾರ ಕಳೆದ ಸಾಲಿನಲ್ಲಿ ಪಾವತಿಯಾದ ಪರಿಹಾರದ ಮೊತ್ತದಷ್ಟೇ ಈ ಬಾರಿ ಪರಿಹಾರ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲಾಗುವುದು,” ಎಂದು ಹೇಳಿದ್ದಾರೆ.

ಕರಾವಳಿ ಕರ್ನಾಟಕದ ಅಡಿಕೆ ಬೆಳೆಗಾರರ ಬದುಕು ಇಂದು ಹತಾಶೆಯಿಂದ ಕೂಡಿದೆ. ಪ್ರಕೃತಿಯ ವಿಕೋಪ, ರೋಗಗಳ ಬಾಧೆ, ವಿಮೆಯ ವಂಚನೆ ಮತ್ತು ಸರ್ಕಾರದ ನಿರ್ಲಕ್ಷ್ಯ – ಈ ಎಲ್ಲವುಗಳಿಂದ ರೈತರು ಕಂಗಾಲಾಗಿದ್ದಾರೆ. ಈ ಸಮಸ್ಯೆಗೆ ಸರ್ಕಾರ ಶೀಘ್ರವೇ ಪರಿಹಾರ ಕಂಡುಕೊಳ್ಳಬೇಕು, ರೈತರಿಗೆ ನ್ಯಾಯ ಒದಗಿಸಬೇಕು ಎನ್ನುವ ಆಗ್ರಹ ರೈತಾಪಿ ವರ್ಗದಿಂದ ಕೇಳಿ ಬರುತ್ತಿದೆ.

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!