Connect with us

ರಾಜಕೀಯ

Sanjeeva Matandur-ರೈತರ ಶೋಷಣೆಯಲ್ಲಿ ವಿಮಾ ಕಂಪನಿ, ಸರ್ಕಾರ ಶಾಮೀಲು: ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

Published

on



Ad Widget

Ad Widget

Ad Widget

Ad Widget

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ರೈತರಿಗೆ ಪರಿಹಾರ ನೀಡುವಲ್ಲಿ ವಿಮಾ ಕಂಪನಿಗಳು ವಿಫಲವಾಗಿದ್ದು, ರೈತರ ಈ ಶೋಷಣೆಯಲ್ಲಿ ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಗಳು ಶಾಮೀಲಾಗಿವೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ರೈತರಿಗೆ ಪರಿಹಾರ ನೀಡುವಲ್ಲಿ ವಿಮಾ ಕಂಪನಿಗಳು ವಿಫಲವಾಗಿದ್ದು, ರೈತರ ಈ ಶೋಷಣೆಯಲ್ಲಿ ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಗಳು ಶಾಮೀಲಾಗಿವೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೃಷಿ ಅಭಿವೃದ್ಧಿಗೆ ಸರಿಯಾದ ಕೆಲಸವಾಗುತ್ತಿಲ್ಲ. ಆರ್ಥಿಕ ಸಮಸ್ಯೆಯಿಂದ ಸಾಲ ಮರುಪಾವತಿಗೂ ಕಷ್ಟ ಪಡುವ ಸ್ಥಿತಿಯಿದೆ. ಸಹಕಾರಿ ಸಂಘ ರೈತರ ಪರ ನಿಲ್ಲಬೇಕು. ತಕ್ಷಣ ವಿಮಾ ಕಂಪನಿ ವಿಮಾ ಮೊತ್ತ ಪಾವತಿಸಬೇಕು, ಇದಕ್ಕೆ ಹೆಚ್ಚು ಕಾಲಾವಕಾಶ ತೆಗೆದುಕೊಳ್ಳಬಾರದು. ಒಂದು ವಾರ ಕಾಲಾವಕಾಶ ನೀಡಲಾಗುವುದು. ಇಲ್ಲದೇ ಹೋದರೆ ಬಿಜೆಪಿ ರೈತರ ಪರವಾಗಿ ಹೋರಾಟ ನಡೆಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.

Ad Widget

Ad Widget <> Ad Widget

ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಳೆ ಜಾಸ್ತಿಯಾಗಿ, ಹಾನಿ ಹೆಚ್ಚಾಗಿದ್ದರೂ, ಪರಿಹಾರ ಬರುತ್ತಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ಮಳೆ ಆಗಿರುವ ಆಧಾರದ ಮೇಲೆ ನಷ್ಟ ಲೆಕ್ಕಾಚಾರ ಮಾಡಲಾಗುತ್ತಿದೆ. ಆದರೆ ಗ್ರಾಮಗಳಲ್ಲಿ ಮಳೆ ಮಾಪಕಗಳೇ ಕಾರ್ಯ ನಿರ್ವಹಿಸುತ್ತಿಲ್ಲ. ಈ ಸಂದರ್ಭ ಯಾವ ಮಾನ ದಂಡವನ್ನು ಇಟ್ಟುಕೊಳ್ಳಲಾಗುತ್ತಿದೆ ಎಂಬ ಸ್ಪಷ್ಟತೆಯೂ ಇಲ್ಲದಾಗಿದೆ. ತಾಂತ್ರಿಕ ಸಮಸ್ಯೆ ಜಿಲ್ಲೆಯಲ್ಲಿದ್ದು, ಇದನ್ನು ಬಗೆಹರಿಸದೆ, ವೈಜ್ಞಾನಿಕವಾಗಿ ಬೆಳೆ ವಿಮೆ ಸಿಗಲು ಸಾಧ್ಯವಿಲ್ಲ. ಇದರ ಬಗ್ಗೆ ಸರ್ಕಾರ ಗಮನ ನೀಡುತ್ತಿಲ್ಲ. ವಿಮಾ ಕಂಪನಿ ಲಾಭವನ್ನು ಮಾತ್ರ ನೋಡುತ್ತಿದ್ದು, ರೈತರಿಗೆ ನೀಡಬೇಕಾದ ಪರಿಹಾರದ ಮೊತ್ತವನ್ನು ಐದು ತಿಂಗಳು ಕಂಪನಿ ಹಣವನ್ನು ಇಟ್ಟುಕೊಂಡಿದೆ. ರೈತರ ಶೋಷಣೆ ಮಾಡುವಲ್ಲಿ ಕಂಪನಿ ಹಾಗೂ ಸರ್ಕಾರ ಭಾಗಿಯಾಗಿದೆ ಎಂದು ತಿಳಿಸಿದರು.



Ad Widget

ಅಕಾಲಿಕ ಮಳೆ, ಪ್ರಾಕೃತಿಕ ವಿಕೋಪದಿಂದ ಅಡಕೆ ಬೆಳೆಗಾರರು ಹೆಚ್ಚು ನಷ್ಟವನ್ನು ಅನುಭವಿಸಿದ್ದಾರೆ. ಕೊಳೆರೋಗ, ಎಲೆಚುಕ್ಕಿ, ಹಳದಿ ರೋಗ, ಮರ ಸತ್ತು ಹೋಗುವ ಪರಿಸ್ಥಿತಿ ಜಿಲ್ಲೆಯಲ್ಲಿದೆ. ಮುಖ್ಯ ಮಂತ್ರಿಗಳೇ ಶೇ.90ರಷ್ಟು ಬೆಳೆ ಹಾನಿಯಾಗಿರುವುದನ್ನು ಉಲ್ಲೇಖಿಸಿದ್ದಾರೆ. ರೈತರಿಗೆ ಇಂತಹ ಸಂದರ್ಭ ಸರ್ಕಾರ ಸಹಾಯ ಧನವನ್ನು ನೀಡಬೇಕು. ವಿಮೆಯಲ್ಲಿ ಶೇ.5 ರೈತ, ಶೇ.10ಕೇಂದ್ರ, ಶೇ.10 ರಾಜ್ಯ ಹಾಗೂ ಉಳಿದ ಶೇ.25ನ್ನು ಕಂಪನಿ ಪಾವತಿಸಿ ಪರಿಹಾರ ನೀಡಬೇಕು. ಕಂಪನಿ ನಷ್ಟವನ್ನು ಅನುಭವಿಸುವುದಾದರೆ, ಆ ಮೊತ್ತವನ್ನು ರಾಜ್ಯ ಸರ್ಕಾರ ತುಂಬಬೇಕಾಗಿದೆ. ಕೇಂದ್ರ ಸರ್ಕಾರ ಮಾನ ದಂಡವನ್ನು ಮಾಡಿದ್ದು, ಜಿಲ್ಲೆಯಲ್ಲಿ ಕಾಲ ಕಾಲಕ್ಕೆ ಟರ್ಮ್ ಶೀಟ್ ಬದಲಾವಣೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ತೋಟಗಾರಿಕಾ ಇಲಾಖೆ ಹಾಗೂ ರಾಜ್ಯ ಅಭಿವೃದ್ಧಿ ಆಯುಕ್ತಾಲಯ ಸೇರಿಕೊಂಡು ಮೇಲ್ವಿಚಾರಣೆಯನ್ನು ಮಾಡಬೇಕು ಎಂದರು.

Ad Widget

Ad Widget

ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಶಶಿಧರ ನಾಯಕ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ವಿರೂಪಾಕ್ಷ ಮಚ್ಚಿಮಲೆ, ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು.

Ad Widget
Click to comment

Leave a Reply

ರಾಜಕೀಯ

Puttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ

Published

on



Ad Widget

Ad Widget

Ad Widget

Ad Widget

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಮುಖಂಡರು, ಪುತ್ತೂರಿನ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.

Ad Widget

Ad Widget <> Ad Widget

2020ರಲ್ಲಿ ಅಂದಿನ ಶಾಸಕ ಸಂಜೀವ ಮಟಂದೂರು ಅವರ ಅವಧಿಯಲ್ಲಿ ವಾಜಪೇಯಿ ಅವರ ಅಲ್ಪಸಂಖ್ಯಾತರ ಅಭಿವೃದ್ಧಿಯ ಕನಸಿನ ಭಾಗವಾಗಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣವಾಗಿದೆ. ಇದರ ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ದರ್ಬೆ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ 4,000 ಚದರ ಅಡಿ ವಿಸ್ತೀರ್ಣದ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.



Ad Widget

ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದ್ದ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಬಳಿಕವೂ ಕಟ್ಟಡವನ್ನು ಉದ್ಘಾಟಿಸಿ ಬಳಕೆಗೆ ನೀಡಲಾಗದೆ ಕಳೆದ ನಾಲ್ಕು ವರ್ಷಗಳಿಂದ ಪಾಳು ಬಿದ್ದಿದೆ ಎಂದು ಮೋರ್ಚಾ ಮುಖಂಡರು ಆರೋಪಿಸಿದರು.

Ad Widget

Ad Widget

ಬೇರೆ ಉದ್ದೇಶಕ್ಕೆ ಬಳಸಬೇಡಿ
ಪ್ರಸ್ತುತ ಶಾಸಕರು ಈ ಕಟ್ಟಡವನ್ನು ಬೇರೆ ಕಾರ್ಯಕ್ಕೆ ಬಳಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ಕೇಂದ್ರವಾಗಿಯೇ ಕಟ್ಟಡವನ್ನು ಬಳಕೆ ಮಾಡಬೇಕು. ಪುತ್ತೂರಿನಲ್ಲಿ ಅಲ್ಪಸಂಖ್ಯಾತರಿಗಾಗಿ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ಗಳು ಮತ್ತು ಸಮುದಾಯ ಭವನ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಿಟಿ ಗುಡ್ಡೆ ಪ್ರದೇಶದಲ್ಲಿ ಈಗಾಗಲೇ ವಾಣಿಜ್ಯ ತೆರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಗಳ ಕಚೇರಿಗಳಿವೆ. ಪುತ್ತೂರು ನಗರದ ಎರಡನೇ ಪ್ರಮುಖ ಪ್ರದೇಶವಾಗಿ ದರ್ಬೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಸೇವಾ ಕೇಂದ್ರವೂ ತನ್ನ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರುದ್ಧ ಆರೋಪ
ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡರು ಆರೋಪಿಸಿದರು.

ಅಲ್ಪಸಂಖ್ಯಾತರ ಬೆಂಬಲವನ್ನು ಪಡೆದಿರುವ ಹಾಲಿ ಶಾಸಕರು ತಮ್ಮ ಅವಧಿಯಲ್ಲಿ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ನಿರ್ಮಿಸಿರುವ ಸೇವಾ ಕೇಂದ್ರವನ್ನು ವಿರೋಧಿಸುವ ಬದಲು ಅದನ್ನು ಉದ್ಘಾಟಿಸಿ ಅಲ್ಪಸಂಖ್ಯಾತ ಸಮುದಾಯದ ಬಹುಉಪಯೋಗಕ್ಕೆ ಬಳಸಲು ಸಹಕರಿಸಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಟಿ.ಎ. ಶನವಾಜ್, ಪ್ರಧಾನ ಕಾರ್ಯದರ್ಶಿ ಫೆಡ್ರಿಕ್ ಪೌಲ್, ಉಪಾಧ್ಯಕ್ಷ ಅಜ್ಗರ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಹಿರೆಬಂಡಾಡಿ ಪಂಚಾಯತ್‌ ಮಾಜಿ ಅಧ್ಯಕ್ಷ ಸೌಕತ್‌ ಅಲಿ, ರಾಜೇಶ ಬನ್ನೂರು ಉಪಸ್ಥಿತರಿದ್ದರು.

Ad Widget
Continue Reading

ಸ್ಥಳೀಯ

B.Y. Vijayendra-ಬಣ ಕಿತ್ತಾಟ ಮುಂದುವರಿದರೆ ಗುಬ್ಬಿಯಲ್ಲಿ ನಾನೇ ಸ್ಪರ್ಧಿಸುತ್ತೇನೆ’: ಬಿ.ವೈ.ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಚೇಳೂರು (ತುಮಕೂರು), ಅ.4: ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ ವಿಜಯೇಂದ್ರ, ಇದೇ ರೀತಿಯ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸಬೇಕಾದ ಪರಿಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಚೇಳೂರಿನಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದಡಿ ಆಯೋಜಿಸಿದ್ದ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ದಿಲೀಪ್ ಕುಮಾರ್ ಮಾತನಾಡುವ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ಜಿಪಂ ಮಾಜಿ ಸದಸ್ಯ ಚಂದ್ರಶೇಖರ್ ಬಾಬು ಮಾತನಾಡುವಾಗ ದಿಲೀಪ್ ಕುಮಾರ್ ಅವರ ಹೆಸರನ್ನು ಉಲ್ಲೇಖಿಸದಿರುವುದು ಕೆಲವು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಯಿತು.



Ad Widget

ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಬಣಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

Ad Widget

Ad Widget

ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಕ್ಷದೊಳಗಿನ ಆಂತರಿಕ ಜಗಳ ಹಾಗೂ ಭಿನ್ನಾಭಿಪ್ರಾಯಗಳೇ ಅಡ್ಡಿಯಾಗುತ್ತಿವೆ ಎಂದು ಹೇಳಿದರು.

ಮುಖಂಡರು ಹಾಗೂ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಮತ್ತು ಗೆಲುವಿನತ್ತ ಗಮನಹರಿಸಬೇಕು ಎಂದು ವಿಜಯೇಂದ್ರ ಸೂಚಿಸಿದರು. ಇದೇ ರೀತಿ ಬಣ ಕಿತ್ತಾಟ ಮುಂದುವರಿದರೆ ಗುಬ್ಬಿ ಕ್ಷೇತ್ರದಲ್ಲಿ ತಾವೇ ಸ್ಪರ್ಧಿಸುವ ಸಂದರ್ಭ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು.

Ad Widget
Continue Reading

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading