ಕಾರ್ಯಕ್ರಮಗಳು
Information camp-ಡಿ.14: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಹಾಗೂ ಸಮಾವೇಶ
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಹಾಗೂ ಸಮಾವೇಶವೊಂದನ್ನು 14.12.2025ನೇ ಭಾನುವಾರ ಪುತ್ತೂರಿನ ಸುಭದ್ರಾ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಪುತ್ತೂರು: ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳೇ ಮೊದಲಾದ ಹಲವಾರು ಪ್ರದೇಶಗಳಲ್ಲಿ ಕೃಷಿಕರು ಪರಂಪರಾನುಗತವಾಗಿ ಅಡಿಕೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಜತೆಗೆ ಉಪಬೆಳೆಗಳಾಗಿ ಬಾಳೆ ಕೃಷಿ, ತೆಂಗಿನ ಕೃಷಿ, ತರಕಾರಿ ಕೃಷಿ, ರಬ್ಬರ್ ಕೃಷಿಯೇ ಮೊದಲಾದ ಹಲವಾರು ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ ಅಡಿಕೆಗೆ ಬಾಧಿಸುತ್ತಿರುವ ಎಲೆಚುಕ್ಕಿಯಂತಹ ರೋಗಗಳಿಂದಾಗಿ ಕೃಷಿಕರು ಆತಂಕಕ್ಕೊಳಗಾಗುತ್ತಿದ್ದಾರೆ. ಪರ್ಯಾಯ ಬೆಳೆಗಳೆಡೆಗೂ ದೃಷ್ಟಿ ಹಾಯಿಸುತ್ತಿದ್ದಾರೆ. ಇವೆಲ್ಲದರ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಯ ಜತೆಗೆ ಕಾಳುಮೆಣಸು ಹಾಗೂ ಕಾಫಿ ಬೆಳೆ ವ್ಯಾಪಕವಾಗಿ ವಿಸ್ತರಿಸಿಕೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಕಾಳುಮೆಣಸು ಹಾಗೂ ಕಾಫಿಬೆಳೆಯಲ್ಲಿ ತೊಡಗಿಕೊಂಡ, ಸದ್ಯೋಭವಿಷ್ಯದಲ್ಲಿ ಆ ಬಗೆಗೆ ಚಿಂತನೆ ನಡೆಸಲಿರುವವರನ್ನು ಮುಖ್ಯವಾಗಿ ಲಕ್ಷ್ಯ ಇರಿಸಿಕೊಂಡು ಪುತ್ತೂರಿನ ಸುಭದ್ರಾ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 10ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಬೆಳೆಗಾರರ ಒಕ್ಕೂಟದ ವತಿಯಿಂದ ಒಂದು ದಿನದ ಕಾಳುಮೆಣಸು ಹಾಗೂ ಕಾಫಿ ಬೆಳೆಯ ಬಗೆಗಿನ ಮಾಹಿತಿ ಸಮಾವೇಶವನ್ನು ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಕೃಷಿಕರು ಬಹಳ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಂಡಿರುತ್ತಾರೆ ಮಾತ್ರವಲ್ಲದೆ ಆಗಾಗ ಇಂತಹ ಸಮಾವೇಶಗಳನ್ನು ನಡೆಸಿ ಅಡಿಕೆ ರೋಗ ಹತೋಟಿ, ಕಾಳುಮೆಣಸು, ಕಾಫಿ ಬೆಳೆಗಳ ಕುರಿತಾದ ಸಮಗ್ರ ಮಾರ್ಗದರ್ಶನ ಒದಗಿಸಿಕೊಡುವಂತೆ ಒತ್ತಡ ತಂದಿರುತ್ತಾರೆ.
ಈ ಕಾರಣದಿಂದ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಹಾಗೂ ಸಮಾವೇಶವೊಂದನ್ನು 14.12.2025ನೇ ಭಾನುವಾರ ಪುತ್ತೂರಿನ ಸುಭದ್ರಾ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಅಖಿಲ ಭಾರತ ಕಾಳುಮೆಣಸು ಬೆಳೆಗಾರರ ಸಂಘದ ವಿಜ್ಞಾನಿ ಡಾ.ವೇಣುಗೋಪಾಲ್ ಅವರು ಸಮಗ್ರ ಕಾಳುಮೆಣಸು ಕೊಯ್ಲು ಮಾಡುವ ವಿಧಾನ, ಸಂಸ್ಕರಣೆ, ಶೇಖರಣೆಗೊಳಿಸುವ ವಿಧಾನದ ಬಗೆಗೆ ವಿಷಯ ಮಂಡನೆ ನಡೆಸಿಕೊಡಲಿದ್ದಾರೆ. ಸೆವೆನ್ ಬೀನ್ ಟೀಮ್‌ನ ಮುಖ್ಯಸ್ಥರಾದ ಡಾ.ಎಚ್.ಎಸ್.ಧರ್ಮರಾಜ್ ಸಕಲೇಶಪುರ ಅವರು ಕಾಫಿ ಕೊಯ್ಲು ಮಾಡುವ ವಿಧಾನ ಸಂಸ್ಕರಣೆ, ಶೇಖರಣೆಗೊಳಿಸುವ ವಿಧಾನದ ಬಗೆಗೆ ಸಮಗ್ರ ಮಾಹಿತಿ ನೀಡುವರು. ಧೂಪದ ಗಿಡಗಳಲ್ಲಿ ಕಾಳುಮೆಣಸು ಬೆಳೆಯುತ್ತಿರುವ ಯುವ ಕೃಷಿಕ ಅನಂತರಾಮಕೃಷ್ಣ ಭಟ್ ಪಳ್ಳತ್ತಡ್ಕ ಅವರು ಧೂಪದ ಗಿಡಗಳ ನಾಟಿ ಹಾಗೂ ಇದರಲ್ಲಿ ಕಾಳುಮೆಣಸು ಗಿಡಗಳನ್ನು ಬೆಳೆಸುವುದು ಹಾಗೂ ನಿರ್ವಹಣೆ ಬಗೆಗೆ ಸಮಗ್ರ ಮಾಹಿತಿ ಒದಗಿಸಿಕೊಡಲಿದ್ದಾರೆ.
ಇಂದೋರ್‌ನ ಶ್ರೀ ಸಿದ್ಧಿ ಅಗ್ರಿ ಕಂಪೆನಿ ಪ್ರೈವೇಟ್ ಲಿಮಿಟೆಡ್‌ನ ಮುಖ್ಯಸ್ಥರಾದ ಪೆರುವೊಡಿ ನಾರಾಯಣ ಭಟ್ ಅವರು ಅಡಿಕೆ ಎಲೆಚುಕ್ಕಿ ರೋಗ ಹತೋಟಿ ಮತ್ತು ನಿರ್ಮೂಲನೆ ಬಗೆಗೆ ಸಮಗ್ರ ಮಾಹಿತಿ ನೀಡಲಿದ್ದಾರೆ.
ಕಾಸರಗೋಡಿನ ಸಿಪಿಸಿಆರ್‌ಐ ವಿಜ್ಞಾನಿ ಡಾ.ರವಿ ಭಟ್, ಕ್ಯಾಂಪ್ಕೋ ನಿರ್ದೇಶಕರಾದ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ, ಹಿರಿಯ ಪ್ರಗತಿಪರ ಕೃಷಿಕಪಡಾರು ತಿರುಮಲೇಶ್ವರ ಭಟ್ ದೇಲಂಪಾಡಿ, ಕಾಳುಮೆಣಸು ಕಸಿಕಟ್ಟಿ ಬೆಳೆಸಿದ ಅನುಭವಿ ಕೃಷಿಕೆ ಸುಜಾತಾ ರಮೇಶ್ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕಾಫಿ ಹಾಗೂ ಕಾಳುಮೆಣಸು ಕೃಷಿಯಲ್ಲಿ ಅಪಾರ ಸಾಧನೆ ಮಾಡಿರುವ ವೈ.ಎನ್.ಕೃಷ್ಣೇಗೌಡ, ಅಖಿಲ ಭಾರತ ಕಾಳುಮೆಣಸು ಬೆಳೆಗಾರರ ಸಂಘದ ವಿಜ್ಞಾನಿ ಡಾ.ವೇಣುಗೋಪಾಲ್ ಹಾಗೂ ಧೂಪದ ಗಿಡಗಳಲ್ಲಿ ಕಾಳುಮೆಣಸು ಬೆಳೆಯುತ್ತಿರುವ ಯುವ ಕೃಷಿಕ ಅನಂತರಾಮಕೃಷ್ಣ ಭಟ್ ದಂಪತಿಗಳನ್ನು ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಉಪಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಇರುತ್ತದೆ.
ಗಿಡಗಳ ಪ್ರದರ್ಶನ ಹಾಗೂ ಮಾರಾಟ :
ಕಾರ್ಯಕ್ರಮದಲ್ಲಿ ವೈವಿಧ್ಯಮಯ ಮಾವಿನ ಗಿಡಗಳು, ಹಲಸಿನ ಗಿಡಗಳು, ರಾಮ ಫಲ, ಸೀತಾಫಲ, ಚಿಕ್ಕು, ದಾಳಿಂಬೆ, ಜಾಯಿಕಾಯಿ, ಮ್ಯಾಂಗೋಸ್ಟಿನ್, ಕಿತ್ತಳೆ, ಲಿಂಬೆ, ನೇರಳೆ, ಮೂಸುಂಬಿಯೇ ಮೊದಲಾದ ಹತ್ತು ಹಲವು ಬಗೆಯ ಗಿಡಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಜತೆಗೆ ಹಲವು ಬಗೆಯ ಗೊಬ್ಬರ ತಯಾರಿಕಾ ಸಂಸ್ಥೆಗಳ ಮಳಿಗೆ, ಕಾಳುಮೆಣಸು ಕೊಯ್ಯುವುದಕ್ಕೆ ಏರುವ ಏಣಿ, ಕಾಳುಮೆಣಸು ಬಿಡಿಸುವ ಯಂತ್ರ, ಶುದ್ಧೀಕರಿಸುವ ಯಂತ್ರಗಳ ಮಳಿಗೆ, ಅಡಿಕೆ ಕೊಯ್ಲು ಹಾಗೂ ಔಷಧ ಸಿಂಪಡಣೆಗಾಗಿ ರೂಪಿಸಲಾಗಿರುವ ಹೈಟೆಕ್ ದೋಟಿ ಹಾಗೂ ಎಲೆಚುಕ್ಕಿ ರೋಗಕ್ಕೆ ಕಂಡುಹಿಡಿಯಲಾದ ಔಷಧದ ಮಳಿಗೆ, ಆಯುರ್ವೇದ ಮಳಿಗೆ, ಕಾಳುಮೆಣಸು ಬೆಳೆಯುವ ಸಿಮೆಂಟ್ ಕಂಬಗಳ ಮಳಿಗೆ, ಮಂಗಗಳ ಹಾವಳಿ ತಡೆಗಟ್ಟುವ ಸಲಕರಣೆಯ ಮಳಿಗೆ, ಹನಿನೀರಾವರಿ ವ್ಯವಸ್ಥೆಯ ಮಳಿಗೆ, ಬ್ಯಾಂಕ್‌ಗಳ ಮಳಿಗೆ, ಸಾವಯವ ಐಸ್‌ಕ್ರೀಂ ಮಳಿಗೆಯೇ ಮೊದಲಾದ ಆಹಾರ ಮಳಿಗೆಗಳೂ ಇರಲಿವೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ಮಂಗಳೂರು12 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್18 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ16 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ18 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ16 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ18 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ11 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ17 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















