ನಿಧನ ವಾರ್ತೆ
Savanur-ಸವಣೂರು: ಒಂದೂವರೆ ತಿಂಗಳ ಹಸುಗೂಸು ಸಾವು
ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೇವಲ ಒಂದೂವರೆ ತಿಂಗಳ ಹಸುಗೂಸೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ. ಈ ಕರುಳು ಹಿಂಡುವ ಘಟನೆಯು ಪೋಷಕರಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.
ಸವಣೂರು: ವಾಂತಿ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೇವಲ ಒಂದೂವರೆ ತಿಂಗಳ ಹಸುಗೂಸೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಸವಣೂರು ಸಮೀಪದ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿ ನಡೆದಿದೆ. ಈ ಕರುಳು ಹಿಂಡುವ ಘಟನೆಯು ಪೋಷಕರಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.
ಗುತ್ತಿಗಾರು ಗ್ರಾಮದ ಕಮಿಲ ನಿವಾಸಿಗಳಾದ ಮಾಧವ ಮತ್ತು ವೀಣಾ ದಂಪತಿಯ ಪುತ್ರ ನಿಶ್ಚಿತ್ ಮೃತಪಟ್ಟ ದುರ್ದೈವಿ ಶಿಶು. ಈ ಎಳೆಯ ಕಂದಮ್ಮನ ಅಕಾಲಿಕ ಮರಣ ಎಲ್ಲರ ಮನಸ್ಸನ್ನು ಕಲಕಿದೆ.
ಘಟನೆಯ ವಿವರ:
ವೀಣಾ ಅವರು ತಮ್ಮ ಮಗುವಿನೊಂದಿಗೆ ಸವಣೂರಿನ ಪುಣ್ಯಪ್ಪಾಡಿ ಗ್ರಾಮದ ಓಡಂತರ್ಯದಲ್ಲಿರುವ ತಮ್ಮ ತವರು ಮನೆಯಲ್ಲಿದ್ದರು. ಡಿ. 5ರಂದು ಮಗುವಿಗೆ ಅನಿರೀಕ್ಷಿತವಾಗಿ ವಾಂತಿ ಕಾಣಿಸಿಕೊಂಡಿತು. ಕೂಡಲೇ ಎಚ್ಚೆತ್ತ ಪೋಷಕರು, ಕುಂಬ್ರದಲ್ಲಿರುವ ಖಾಸಗಿ ಕ್ಲಿನಿಕ್ಗೆ ತೆರಳಿ ಮಗುವಿಗೆ ಔಷಧ ತಂದು ನೀಡಿದ್ದಾರೆ.
ಆದರೆ, ಅದೇ ದಿನ ರಾತ್ರಿ ಮಗುವಿನ ಆರೋಗ್ಯ ಮತ್ತಷ್ಟು ಹದಗೆಟ್ಟಿತು. ವಾಂತಿಯ ಜೊತೆಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಮಗುವಿನ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಪೋಷಕರು ತಡಮಾಡದೆ ಮಗುವನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಪುತ್ತೂರಿನ ವೈದ್ಯರು ಮಗುವಿನ ಸ್ಥಿತಿಯ ಗಂಭೀರತೆಯನ್ನು ಅರಿತು, ಹೆಚ್ಚಿನ ಮತ್ತು ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಂತೆ ಸಲಹೆ ನೀಡಿದ್ದಾರೆ. ವೈದ್ಯರ ಸಲಹೆಯಂತೆ ಮಗುವನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ದುರದೃಷ್ಟವಶಾತ್, ಮಂಗಳೂರಿನ ಆಸ್ಪತ್ರೆಯಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದಾಗ, ಪುಟ್ಟ ನಿಶ್ಚಿತ್ ಈಗಾಗಲೇ ಕೊನೆಯುಸಿರೆಳೆದಿರುವುದಾಗಿ ತಿಳಿಸಿದ್ದಾರೆ. ಈ ಸುದ್ದಿ ಕೇಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಒಂದೂವರೆ ತಿಂಗಳ ಎಳೆಯ ಕಂದಮ್ಮನ ಈ ಅಕಾಲಿಕ ಸಾವು ಕುಟುಂಬಕ್ಕೆ ಅಘಾತವನ್ನುಂಟು ಮಾಡಿದೆ. ಈ ಘಟನೆ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಸಾವಿಗೆ ನಿಖರ ಕಾರಣಗಳ ಕುರಿತು ತನಿಖೆ ನಡೆಯುತ್ತಿದೆ. ಈ ದುರಂತವು ಸ್ಥಳೀಯರಲ್ಲಿ ಆತಂಕ ಮತ್ತು ವಿಷಾದ ಮೂಡಿಸಿದೆ.
ನಿಧನ ವಾರ್ತೆ
Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.
ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಅಪರಾಧ18 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ17 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ23 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್16 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ22 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ23 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ23 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ23 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು















