ನಿಧನ ವಾರ್ತೆ
Udupi-ಉಡುಪಿ : ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತರೊಳಗೆ ಜಗಳ : ಯುವಕನ ಸಾವು – ನಾಲ್ವರು ವಶಕ್ಕೆ
ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರ ನಡುವೆ ಉಂಟಾದ ಜಗಳವೊಂದು ಓರ್ವನ ಸಾವಿನಲ್ಲಿ ಅಂತ್ಯಗೊಂಡ ದಾರುಣ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕರೆಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತರನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.
ಕೋಟ: ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತರ ನಡುವೆ ಉಂಟಾದ ಜಗಳವೊಂದು ಓರ್ವನ ಸಾವಿನಲ್ಲಿ ಅಂತ್ಯಗೊಂಡ ದಾರುಣ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕರೆಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಮೃತ ಸಂತೋಷ್ ಹಾಗೂ ಆರೋಪಿಗಳು ಪರಸ್ಪರ ಸ್ನೇಹಿತರು ಮತ್ತು ಸಂಬಂಧಿಕರಾಗಿದ್ದಾರೆ. ರವಿವಾರ ರಾತ್ರಿ ಇವರ ನಡುವೆ ಕ್ಷುಲ್ಲಕ ವಿಚಾರವೊಂದಕ್ಕೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ಹೋಗಿದ್ದು, ಸಂತೋಷ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಭೇಟಿ ಮತ್ತು ತನಿಖೆ:
ವಿಷಯ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ, ಕೋಟ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಟಿ., ಠಾಣಾ ಎಎಸ್‌ಐ ಮಾಂತೇಶ್ ಹಾಗೂ ಸಿಬ್ಬಂದಿಗಳಾದ ಪ್ರದೀಪ್ ಮತ್ತು ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಧನ ವಾರ್ತೆ
Accident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.
ಮೂಡುಬಿದಿರೆ, ಅ.8: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.
ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.
ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Nana Patekar-ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಗೋವಾದ ಡೊನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಬೆಳಗಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬಳಿಕ ಬೆಳಗ್ಗೆ ಸುಮಾರು 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ಅವರು ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯಕೀಯ ತಂಡ ಸತತ ಪ್ರಯತ್ನ ನಡೆಸಿತ್ತು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.
ನಾನಾ ಪಾಟೇಕರ್ ಅವರು ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ, ಗಂಭೀರ ಸಂಭಾಷಣೆ ಶೈಲಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
‘ಪರಿಂದಾ’, ‘ಕ್ರಾಂತಿವೀರ’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ವೆಲ್‌ಕಮ್’ ಚಿತ್ರದ ಉದಯ್ ಶೆಟ್ಟಿ ಪಾತ್ರದ ಮೂಲಕ ಹಾಸ್ಯಪ್ರಧಾನ ಅಭಿನಯದಲ್ಲೂ ಅವರು ಪ್ರೇಕ್ಷಕರ ಮನ ಗೆದ್ದಿದ್ದರು. ಕನ್ನಡದಲ್ಲಿಯೂ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು.
ಬಹುಮುಖ ಪ್ರತಿಭೆಯ ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
-
ಸ್ಥಳೀಯ10 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಮಂಗಳೂರು5 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ8 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್10 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಸಿನೆಮಾ9 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ10 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್9 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ5 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















