ಬಿಗ್ ನ್ಯೂಸ್
GL Acharya Jewellers-ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋಫೆಸ್ಟ್’ಗೆ ಚಾಲನೆ : ವಜ್ರಗಳಲ್ಲಿ ಎರಡು ವಿಧಗಳಿವೆ ಜಿ.ಎಲ್ ನಲ್ಲಿ ಮಾರಟವಾಗೋದು ಪ್ರಕೃತಿಯಲ್ಲಿ ಸಿಗುವ ನೈಜ ವಜ್ರ ಅದರ ಮೌಲ್ಯ ಏರುತ್ತಲೇ ಇದೆ; ನನ್ನ ತಾಯಿ ಮದುವೆಗೆ ಮೊದಲು ಜಿ.ಎಲ್ ನಲ್ಲಿ ಖರೀದಿಸಿದ ಉಂಗುರವನ್ನು ಇವತ್ತೂ ಬದಲಿಸಲು ಬಿಡುವುದಿಲ್ಲ ಅದಕ್ಕೆ ಕಾರಣ ಇಲ್ಲಿಯ ಪ್ಯೂರಿಟಿ – ಶಾಸಕ ಅಶೋಕ್ ರೈ ಸಹೋದರಿ ನಳಿನಿ ಪಿ.ಶೆಟ್ಟಿ
ಪುತ್ತೂರು ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ವಜ್ರಾಭರಣಗಳ ವಿಶೇಷ ಉತ್ಸವ ‘ಗ್ಲೋ-ಫೆಸ್ಟ್’ಗೆ ಡಿ.15ರಂದು ಚಾಲನೆ ನೀಡಲಾಯಿತು.
ಪುತ್ತೂರು: ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ‘ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ವಜ್ರಾಭರಣಗಳ ವಿಶೇಷ ಉತ್ಸವ ‘ಗ್ಲೋ-ಫೆಸ್ಟ್’ಗೆ ಡಿ.15ರಂದು ಚಾಲನೆ ನೀಡಲಾಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ. ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉತ್ಸವವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ವಜ್ರಾಭರಣಗಳನ್ನು ಖರೀದಿಸುವುದು ಮತ್ತು ಧರಿಸುವುದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ವಜ್ರವು ಕೇವಲ ಒಂದು ಕಲ್ಲಲ್ಲ; ಅದು ಶುದ್ಧತೆ, ಶಕ್ತಿ, ಪ್ರೇಮ ಮತ್ತು ವಿಶ್ವಾಸದ ಸಂಕೇತವಾಗಿದೆ. ಜಿ.ಎಲ್ ಆಚಾರ್ಯ ಸಂಸ್ಥೆಯು ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು, ವೈವಿಧ್ಯಮಯ ವಿನ್ಯಾಸಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನೈಜ ವಜ್ರಗಳಿಗೆ ಮಾತ್ರ ಆದ್ಯತೆ:
ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಬಿ. ಆಚಾರ್ಯ ಮಾತನಾಡಿ, “ಪ್ರಸ್ತುತ ಮಾರುಕಟ್ಟೆಯಲ್ಲಿ ನೈಜ ವಜ್ರಗಳು ಮತ್ತು ಲ್ಯಾಬ್ ತಯಾರಿತ ವಜ್ರಗಳು ಎಂಬ ಎರಡು ವಿಧಗಳಿವೆ. ಆದರೆ, ನಮ್ಮಲ್ಲಿ ಕೇವಲ ನೈಜ ವಜ್ರಗಳು ಮಾತ್ರ ಲಭ್ಯವಿವೆ. ಲ್ಯಾಬ್ ತಯಾರಿತ ವಜ್ರಗಳ ಬೆಲೆ ಕುಸಿಯುತ್ತಿದ್ದರೂ, ನೈಜ ವಜ್ರಗಳ ಮೌಲ್ಯವು ಸದಾ ಏರಿಕೆಯಾಗುತ್ತಲೇ ಇರುತ್ತದೆ. ಈ ಬಾರಿಯ ಉತ್ಸವದಲ್ಲಿ ಅತ್ಯುತ್ತಮ ವಜ್ರಾಭರಣಗಳ ಸಂಗ್ರಹದೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತಿದೆ,” ಎಂದು ತಿಳಿಸಿದರು.
‘ಗ್ಲೋ ಫೆಸ್ಟ್’ನ ವಿಶೇಷತೆಗಳೇನು?
ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ. 7000 ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ.
ವಜ್ರಾಭರಣದ ಬೆಲೆ ರೂ. 2500ರಿಂದ ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ, ಪೆಂಡೆಂಟ್, ಉಂಗುರ, ಕಿವಿಯೋಲೆ ನೆಕ್ಸಸ್, ಬಳೆಗಳ ವಿವಿಧ ವಿನ್ಯಾಸಗಳ ಅಮೋಘ ಸಂಗ್ರಹವಿದೆ. 2600ಕ್ಕೂ ಮಿಕ್ಕಿದ ಡಿಸೈನ್ ಗಳಲ್ಲಿ ಕಣ್ಮನ ಸೆಳೆಯುವ ವಜ್ರಾಭರಣಗಳ ಅಮೋಘ ಸಂಗ್ರಹವಿದ್ದು, ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಮರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ವಜ್ರಾಭರಣಗಳು ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ.
ಜೊತೆಗೆ ನುರಿತ ತಜ್ಞರಿಂದ ವಜ್ರಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ ಪ್ರತಿಷ್ಠಿತ ಪ್ರಮಾಣೀಕೃತ ಏಜೆನ್ಸಿಗಳಿಂದ ಧೃಡೀಕರಣಗೊಂಡ ವಜ್ರಾಭರಣಗಳ ಶ್ರೇಣಿ. ಪ್ರಮಾಣೀಕೃತ ಇಎಫ್ ಬಣ್ಣದ ಹಳೆಯ ವಜ್ರಾಭರಣಗಳ ವಿನಿಮಯ, ಮರುಖರೀದಿಯ ಗ್ಯಾರಂಟಿ, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳನ್ನು ತಮ್ಮದಾಗಿಸುವ ಸುವರ್ಣಾವಕಾಶವಿದೆ.
ಪ್ಲೋರ್ ಮ್ಯಾನೇಜರ್ ಬಾರ್ಗವ್ ಸ್ವಾಗತಿಸಿ, ವಂದಿಸಿದರು. ಶೋರೂಂ ಮ್ಯಾನೇಜರ್ ಶೇಖರ್ ಮತ್ತು ಪುರಂದರ, ಮಾರ್ಕೆಟಿಂಗ್ ಮ್ಯಾನೇಜರ್ ಕೀರ್ತನ್ ಸಹಕರಿಸಿದರು. ಗ್ರಾಹಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಳೆದ ಹಲವು ವರ್ಷಗಳಿಂದ ಡಿಸೆಂಬರ್ ತಿಂಗಳಲ್ಲಿ ವಜ್ರಾಭರಣಗಳ ಮಹೋತ್ಸವ ಗ್ಲೋ ಪೆಸ್ಟ್ ಆಯೋಜಿಸಲಾಗುತ್ತಿದೆ. ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ. ವಿವಿಧ ವಿನ್ಯಾಸದ ವಜ್ರದ ಆಭರಣಗಳು ಮಳಿಗೆಯಲ್ಲಿ ಲಭ್ಯವಿದೆ. ಜೊತೆಗೆ ತರಬೇತಿ ಪಡೆದ ಸಿಬ್ಬಂದಿಗಳಿಂದ ವಜ್ರಾಭರಣಗಳ ಮಾಹಿತಿ ಅಭಿಯಾನವು ಗ್ಲೋ ಫೆಸ್ಟ್‌ನಲ್ಲಿದೆ. ಆ ಮೂಲಕ ಮಳಿಗೆಯಲ್ಲಿ ಪಾರದರ್ಶಕವಾಗಿ ವ್ಯವಹಾರ ನಡೆಸಲಾಗುತ್ತಿದೆ. ಫೆಸ್ಟ್ ಮೂಲಕ ಗ್ರಾಹಕರಿಗೆ ಉತ್ತಮ ದರ ಹಾಗೂ ಕೊಡುಗೆಗಳನ್ನು ನೀಡಲಾಗುತ್ತಿದೆ. ಡಿ.15ರಿಂದ ಪ್ರಾರಂಭಗೊಂಡು ಜ.15ರ ತನಕ ಗ್ಲೋ ಫೆಸ್ಟ್ ನಡೆಯಲಿದೆ. -ಬಲರಾಮ ಆಚಾರ್ಯ, ಚೆಯರ್‌ಮೆನ್ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್
ಬಿಗ್ ನ್ಯೂಸ್
Puttur Dasara-92ನೇ ವರ್ಷದ ಶಾರದೋತ್ಸವಕ್ಕೆ ಹೊಸ ರೂಪ; ‘ಪುತ್ತೂರು ದಸರಾ’ ನಾಮಾಂಕಿತದಲ್ಲಿ ನವರಾತ್ರಿಯ ವೈಭವದ ಆಚರಣೆ
ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಪುತ್ತೂರು: ಮೈಸೂರು, ಮಡಿಕೇರಿ ಹಾಗೂ ಕುದ್ರೋಳಿಯಂತೆ ಪುತ್ತೂರಿನಲ್ಲೂ ಹಿಂದೆ ವೈಭವದಿಂದ ದಸರಾ ಉತ್ಸವಗಳು ನಡೆಯುತ್ತಿದ್ದವು. ಕಾಲಕ್ರಮೇಣ ಆ ಪರಂಪರೆಯ ವೈಭವ ಕಡಿಮೆಯಾಗಿದ್ದರೂ, ಕಳೆದ ಮೂರು ವರ್ಷಗಳಿಂದ ಶ್ರೀ ಶಾರದೋತ್ಸವದ ಮೂಲಕ ಪುತ್ತೂರಿನ ದಸರಾ ಪರಂಪರೆಯನ್ನು ಮರುಕಳಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಈ ಉತ್ಸವಕ್ಕೆ ಮತ್ತಷ್ಟು ವಿಶಾಲ ರೂಪ ನೀಡುವ ಉದ್ದೇಶದಿಂದ ಈ ವರ್ಷದಿಂದ ಪುತ್ತೂರು ಶಾರದೋತ್ಸವವನ್ನು ‘ಪುತ್ತೂರು ದಸರಾ’ ಎಂಬ ನಾಮಾಂಕಿತದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅ.11ರಿಂದ 21ರವರೆಗೆ 92ನೇ ವರ್ಷದ ನವರಾತ್ರಿ ಪೂಜೆ ಹಾಗೂ ಶ್ರೀ ಶಾರದೋತ್ಸವ ವೈಭವದಿಂದ ನಡೆಯಲಿದೆ.
ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.21ರಂದು 20ಕ್ಕೂ ಅಧಿಕ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳೊಂದಿಗೆ ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಇದರೊಂದಿಗೆ ‘ಪುತ್ತೂರು ದಸರಾ’ ಸಂಪನ್ನಗೊಳ್ಳಲಿದೆ.
ದಸರಾ ಪರಂಪರೆಗೆ ಹೊಸ ರೂಪ
ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ ಮಾತನಾಡಿ, ಹಲವು ಪವಾಡಗಳಿಗೆ ಸಾಕ್ಷಿಯಾಗಿರುವ ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಕಳೆದ ಮೂರು ವರ್ಷಗಳಿಂದ ಶಾರದೋತ್ಸವವನ್ನು ಗತಕಾಲದ ವೈಭವವನ್ನು ಮರುಕಳಿಸುವ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದರು.
ಈ ಬಾರಿ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ನಾಮಾಂಕಿತ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಪುತ್ತೂರು ತಾಲೂಕಿನ ದಸರಾ ಮಹೋತ್ಸವವಾಗಿ ರೂಪಿಸುವ ಉದ್ದೇಶವಿದೆ. ಈ ಕುರಿತು ಮೂರು ವರ್ಷಗಳ ಹಿಂದೆಯೇ ಸಮಿತಿಯಲ್ಲಿ ಚಿಂತನೆ ನಡೆದಿತ್ತು ಎಂದು ಅವರು ತಿಳಿಸಿದರು.
ಪುತ್ತೂರಿನಲ್ಲೇ ದಸರಾ ವೈಭವ
ಹಿಂದೆ ದಸರಾ ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಳ್ಳಲು ಪುತ್ತೂರಿನ ಜನರು ಮಂಗಳೂರು ಹಾಗೂ ಮಡಿಕೇರಿಗೆ ತೆರಳುತ್ತಿದ್ದರು. ಆದರೆ ಕಳೆದ ಮೂರು ವರ್ಷಗಳಿಂದ ಪುತ್ತೂರು ಶಾರದೆಯ ವೈಭವದ ಶೋಭಾಯಾತ್ರೆ ಜನರ ಗಮನ ಸೆಳೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೊಸತನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಸೀತಾರಾಮ ರೈ ಹೇಳಿದರು.
ಪುತ್ತೂರಿನಲ್ಲೇ ಜನರು ದಸರಾ ವೈಭವವನ್ನು ಕಣ್ತುಂಬಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಶಾರದೋತ್ಸವಕ್ಕೆ ‘ಪುತ್ತೂರು ದಸರಾ’ ಎಂಬ ವಿಶಾಲ ರೂಪ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದು ಪುತ್ತೂರು ತಾಲೂಕಿನ ಜನತೆಯ ದಸರಾ ಮಹೋತ್ಸವವಾಗಿ ಬೆಳೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹತ್ತು ದಿನ ಧಾರ್ಮಿಕ-ಸಾಂಸ್ಕೃತಿಕ ಸಂಭ್ರಮ
ಅ.11ರಿಂದ ಆರಂಭವಾಗುವ ಉತ್ಸವದಲ್ಲಿ ನವರಾತ್ರಿ ಪೂಜೆ, ಶ್ರೀ ಶಾರದಾ ಆರಾಧನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಚಂಡಿಕಾ ಹೋಮ ಸೇರಿದಂತೆ ವಿಶೇಷ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರು ಹಾಗೂ ಸಾರ್ವಜನಿಕರನ್ನು ರಂಜಿಸಲಿವೆ.
ಅ.21ರಂದು ನಡೆಯುವ ಸಮಾರೋಪದಂದು 20ಕ್ಕೂ ಅಧಿಕ ಪ್ರಸಿದ್ಧ ಕಲಾತಂಡಗಳು, ಸಾವಿರಾರು ಕುಣಿತ ಭಜನಾ ತಂಡಗಳು ಹಾಗೂ ವಿವಿಧ ವಾದ್ಯಘೋಷಗಳು ಶೋಭಾಯಾತ್ರೆಗೆ ಮೆರುಗು ನೀಡಲಿವೆ. ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆಯೊಂದಿಗೆ ಈ ಬಾರಿಯ ‘ಪುತ್ತೂರು ದಸರಾ’ ವೈಭವಕ್ಕೆ ತೆರೆ ಬೀಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ದಸರಾ ಸಮಿತಿಯ ಗೌರವ ಮಾರ್ಗದರ್ಶಕ ಡಾ. ಸುರೇಶ್ ಪುತ್ತೂರಾಯ, ಉಪಾಧ್ಯಕ್ಷ ದಯಾನಂದ ಪಿ., ಶಾರದಾ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ವಸಂತ್ ಕುಮಾರ್ ಹಾಗೂ ಶೋಭಾಯಾತ್ರೆಯ ಸಂಚಾಲಕರಾದ ಕೃಷ್ಣ ಎಂ. ಅಳಿಕೆ ಮತ್ತು ನವೀನ್ ಕುಲಾಲ್ ಪುತ್ತೂರು ಉಪಸ್ಥಿತರಿದ್ದರು.
ಸ್ಥಳೀಯ
Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ
ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.
ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.
ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.
ಬಿಗ್ ನ್ಯೂಸ್
Master Anand-ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಮಾಸ್ಟರ್ ಆನಂದ್
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಎಸ್.ಕೆ. ಆನಂದ್ ಆಯ್ಕೆಯಾಗಿದ್ದಾರೆ.
ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಎಸ್.ಕೆ. ಆನಂದ್ ಆಯ್ಕೆಯಾಗಿದ್ದಾರೆ.
ವೈಜ್ಞಾನಿಕ ಮನೋಭಾವ, ಪರಿಸರ ಕಾಳಜಿ ಹಾಗೂ ಸುಸ್ಥಿರ ಜೀವನಶೈಲಿಯನ್ನು ತಮ್ಮ ವೃತ್ತಿ ಬದುಕಿನಲ್ಲಿ ಅಳವಡಿಸಿಕೊಂಡಿರುವ ಎಸ್.ಕೆ. ಆನಂದ್ ಅವರು, ಸಿಮೆಂಟ್ ಪ್ರೀಕಾಸ್ಟ್ ತಂತ್ರಜ್ಞಾನದ ಮೂಲಕ ಮರಕ್ಕೆ ಪರ್ಯಾಯವಾದ ‘ಕಾಂಕೂಡ್’ (Concood™) ಎಂಬ ಉತ್ಪನ್ನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಆವಿಷ್ಕಾರದ ಮೂಲಕ ಕಳೆದ ಹಲವು ದಶಕಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಮರಮುಟ್ಟುಗಳ ಬಳಕೆಯನ್ನು ತಪ್ಪಿಸಿ, ಲಕ್ಷಾಂತರ ಮರಗಳನ್ನು ಕೊಡಲಿಗೆ ಬಲಿಯಾಗದಂತೆ ಸಂರಕ್ಷಿಸಿದ ಸಾಧನೆ ಅವರದ್ದಾಗಿದೆ.
1951ರಲ್ಲಿ ಪುತ್ತೂರಿನಲ್ಲಿ ಜನಿಸಿದ ಎಸ್.ಕೆ. ಆನಂದ್ ಅವರು ದಿವಂಗತ ಎಸ್.ಕೆ. ಈಶ್ವರ ಭಟ್ ಹಾಗೂ ಶಾರದಾ ಭಟ್ ದಂಪತಿಯ ಪುತ್ರ. ಮಂಗಳೂರಿನ ಕೆ.ಆರ್.ಇ.ಸಿ. (ಪ್ರಸ್ತುತ NITK, ಸುರತ್ಕಲ್)ಯಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಹಾಗೂ ಎಂ.ಟೆಕ್ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಡೆದ ಅವರು, 1975ರಲ್ಲಿ ತಂದೆಯವರು ಸ್ಥಾಪಿಸಿದ್ದ ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡರು. ಉನ್ನತ ಅವಕಾಶಗಳಿದ್ದರೂ ದೊಡ್ಡ ನಗರಗಳತ್ತ ತೆರಳದೆ ಪುತ್ತೂರಿನಲ್ಲೇ ನೆಲೆಸಿ, ಸುಸ್ಥಿರ ನಿರ್ಮಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
‘ಕಾಂಕೂಡ್’ ಮೂಲಕ ಮರಕ್ಕೆ ಪರ್ಯಾಯ
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮನೆ, ಕಚೇರಿ, ಶಾಲಾ-ಕಾಲೇಜುಗಳ ನಿರ್ಮಾಣಕ್ಕೆ ದಾರಂದ, ಕಿಟಕಿ, ಮೇಲ್ಛಾವಣಿಯ ತೊಲೆ, ಬೆಂಚ್-ಡೆಸ್ಕ್ ಸೇರಿದಂತೆ ವಿವಿಧ ಕಾರ್ಯಗಳಿಗೆ ಅಪಾರ ಪ್ರಮಾಣದ ಮರಮುಟ್ಟುಗಳನ್ನು ಬಳಸಲಾಗುತ್ತಿತ್ತು. ಈ ಸಮಸ್ಯೆಗೆ ಪರಿಸರಸ್ನೇಹಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆನಂದ್ ಅವರು ಸಿಮೆಂಟ್ ಪ್ರೀಕಾಸ್ಟ್ ತಂತ್ರಜ್ಞಾನದ ಕುರಿತು ಸುದೀರ್ಘ ಸಂಶೋಧನೆ ನಡೆಸಿ, ಮರದ ಬಲಕ್ಕೆ ಪರ್ಯಾಯವಾಗಬಲ್ಲ ಕಾಂಕ್ರೀಟ್ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದರು.
‘ಕಾಂಕೂಡ್’ ಹೆಸರಿನ ಈ ಉತ್ಪನ್ನಗಳಿಗೆ 2007ರಲ್ಲಿ ಭಾರತ ಸರ್ಕಾರದಿಂದ ಅಧಿಕೃತ ಟ್ರೇಡ್‌ಮಾರ್ಕ್ ನೋಂದಣಿಯೂ ದೊರೆತಿದೆ. ಇಂದು ವಿವಿಧ ಅಗತ್ಯಗಳಿಗೆ ಬಳಸಬಹುದಾದ 250ಕ್ಕೂ ಅಧಿಕ ಕಾಂಕ್ರೀಟ್ ಪರಿಕರಗಳು ‘ಮಾಸ್ಟರ್ ಪ್ಲಾನರಿ’ಯಲ್ಲಿ ಲಭ್ಯವಿವೆ.
36.5 ಲಕ್ಷಕ್ಕೂ ಅಧಿಕ ಮರಗಳ ಸಂರಕ್ಷಣೆ
‘ಮಾಸ್ಟರ್ ಪ್ಲಾನರಿ’ ಸಂಸ್ಥೆಯಲ್ಲಿ ಪ್ರತಿದಿನ ಸರಾಸರಿ 200 CFTಗೂ ಅಧಿಕ ಕಾಂಕ್ರೀಟ್ ಪರಿಕರಗಳನ್ನು ಉತ್ಪಾದಿಸಲಾಗುತ್ತಿದ್ದು, ಈ ಪರಿಕರಗಳ ಬಳಕೆಯಿಂದ ಪ್ರತಿದಿನ ಸರಾಸರಿ 20 ಬೃಹತ್ ಮರಗಳು ಕಡಿಯುವುದನ್ನು ತಪ್ಪಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಕಳೆದ 50 ವರ್ಷಗಳ ಈ ಸೇವೆಯ ಲೆಕ್ಕಾಚಾರದಂತೆ, ಇದುವರೆಗೆ ಸುಮಾರು 36.5 ಲಕ್ಷಕ್ಕೂ ಅಧಿಕ ಬೃಹತ್ ಮರಗಳು ಕೊಡಲಿಗೆ ಬಲಿಯಾಗುವುದನ್ನು ತಪ್ಪಿಸಿ ಸಂರಕ್ಷಿಸಲಾಗಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಸಂಸ್ಥೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಮರದ ಪರ್ಯಾಯವಾಗಿ ‘ಕಾಂಕೂಡ್’ ಉತ್ಪನ್ನಗಳನ್ನು ಬಳಸಲಾಗುತ್ತಿದೆ.
ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ದೇಶಾದ್ಯಂತ ನಿರ್ಮಿಸಿರುವ 30ಕ್ಕೂ ಅಧಿಕ ತೂಗು ಸೇತುವೆಗಳಲ್ಲೂ ಮರದ ಹಲಗೆಗಳ ಬದಲಿಗೆ ‘ಕಾಂಕೂಡ್’ ಪರಿಕರಗಳನ್ನು ಬಳಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಅರಣ್ಯ ಇಲಾಖೆ ಸೇರಿದಂತೆ ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲೂ ಈ ತಂತ್ರಜ್ಞಾನ ಬಳಕೆಯಾಗಿದೆ.
50 ಎಕರೆಗೂ ಅಧಿಕ ಹಸಿರು ಕಾಡು
ಮರಗಳ ಸಂರಕ್ಷಣೆಯ ಜತೆಗೆ ವೈಯಕ್ತಿಕವಾಗಿಯೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿರುವ ಎಸ್.ಕೆ. ಆನಂದ್ ಅವರು ಸೊರಕೆ ಹಾಗೂ ಕುಡಿಪಾಡಿಯಲ್ಲಿ ‘ಕುಡಿಕಾಡು’ ಹೆಸರಿನಲ್ಲಿ 50 ಎಕರೆಗೂ ಅಧಿಕ ಪ್ರದೇಶದಲ್ಲಿ ಸಾವಿರಾರು ಗಿಡ-ಮರಗಳನ್ನು ಬೆಳೆಸಿ ಹಸಿರು ಕಾಡು ನಿರ್ಮಿಸಿದ್ದಾರೆ.
‘ಮಾಸ್ಟರ್ ಪ್ಲಾನರಿ’ ಸಂಸ್ಥೆಯಡಿ 9 ಕೇಂದ್ರಗಳಲ್ಲಿ 24 ಸಂಸ್ಥೆಗಳ ಮೂಲಕ 800ಕ್ಕೂ ಅಧಿಕ ಮಂದಿಗೆ ನೇರ ಉದ್ಯೋಗ ಕಲ್ಪಿಸಲಾಗಿದೆ. ಇವರಲ್ಲಿ 200ಕ್ಕೂ ಅಧಿಕ ಮಹಿಳೆಯರು ಹಾಗೂ 20ಕ್ಕೂ ಅಧಿಕ ಭಿನ್ನಸಾಮರ್ಥ್ಯ ಹೊಂದಿರುವವರು ಸೇರಿದ್ದಾರೆ. ಪರೋಕ್ಷವಾಗಿ 3,000ಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗಿರುವುದಾಗಿ ತಿಳಿಸಲಾಗಿದೆ.
ಸಂಸ್ಥೆಯ ಸಿಬ್ಬಂದಿಯ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಆವರಣದಲ್ಲೇ ಅಂಗನವಾಡಿ ಮಾದರಿಯ ಪ್ಲೇ ಸ್ಕೂಲ್ ಆರಂಭಿಸಿರುವುದು ಅವರ ಸಾಮಾಜಿಕ ಕಾಳಜಿಗೆ ಮತ್ತೊಂದು ಉದಾಹರಣೆಯಾಗಿದೆ.
ಚಾಮರಾಜನಗರ ಹಾಗೂ ನಾಗರಹೊಳೆ ಭಾಗದ ಅರಣ್ಯವಾಸಿ ಗಿರಿಜನರಿಗೆ 8,000ಕ್ಕೂ ಅಧಿಕ ಮನೆಗಳನ್ನು ನಿರ್ಮಿಸಿಕೊಟ್ಟಿರುವ ಅವರು, ಸುಳ್ಯದಲ್ಲಿ ಕಳೆದ 20 ವರ್ಷಗಳಿಂದ ‘ಸ್ನೇಹ ಶಿಕ್ಷಣ ಸಂಸ್ಥೆ’ ಮೂಲಕ ಗ್ರಾಮೀಣ ಮಕ್ಕಳಿಗೆ ಕನ್ನಡ ಮಾಧ್ಯಮ ಶಿಕ್ಷಣ ನೀಡುತ್ತಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲೂ ಆಸಕ್ತಿ ಹೊಂದಿರುವ ಆನಂದ್ ಅವರು ‘ಭಾವಲೋಕ’ ಎಂಬ ಕವನ ಸಂಕಲನ ಸೇರಿದಂತೆ ಹಲವು ಭಾವಗೀತೆಗಳನ್ನು ರಚಿಸಿ ಪ್ರಕಟಿಸಿದ್ದಾರೆ.
ಎಸ್.ಕೆ. ಆನಂದ್ ಹಾಗೂ ರೇಖಾ ಆನಂದ್ ದಂಪತಿಯ ನಾಲ್ವರು ಮಕ್ಕಳಾದ ಅಕ್ಷಯ್, ಅರ್ಜುನ್, ಆಕಾಶ್ ಹಾಗೂ ಆರತಿ ಅವರು ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದು, ಕುಟುಂಬದ ಸುಸ್ಥಿರ ಹಾಗೂ ಪರಿಸರಸ್ನೇಹಿ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಹಲವು ಪ್ರಶಸ್ತಿಗಳ ಗರಿ
ಪರಿಸರ ಸೇವೆಗಾಗಿ 2003ರಲ್ಲಿ ‘ಪರಿಸರಪ್ರೇಮಿ’ ಪ್ರಶಸ್ತಿ, 2008ರಲ್ಲಿ ICI ವತಿಯಿಂದ ‘ಕರ್ನಾಟಕದ ಅತ್ಯುತ್ತಮ ಕಾಂಕ್ರೀಟ್ ಇಂಜಿನಿಯರ್’ ಪ್ರಶಸ್ತಿ ಸೇರಿದಂತೆ ರಾಷ್ಟ್ರೀಯ ಜೆಸಿಐ ‘TOBIP’ ಹಾಗೂ ACCE-UltraTech ಪ್ರಶಸ್ತಿಗಳು ಎಸ್.ಕೆ. ಆನಂದ್ ಅವರಿಗೆ ಸಂದಿವೆ.
ಬಾಲವನ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ, ಉಪವಿಭಾಗಾಧಿಕಾರಿ ಹಾಗೂ ಬಾಲವನ ಪ್ರಶಸ್ತಿ ಸಮಿತಿ ಕಾರ್ಯದರ್ಶಿ ಸ್ಟೆಲ್ಲಾ ವರ್ಗೀಸ್, ತಾಲೂಕು ಕಸಾಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಹಿರಿಯ ಸಾಹಿತಿಗಳಾದ ವಿ.ಬಿ. ಆರ್ತಿಕಜೆ ಹಾಗೂ ರೆ. ವಿಜಯ್ ಹಾರ್ವಿನ್ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಎಸ್.ಕೆ. ಆನಂದ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಅಕ್ಟೋಬರ್ 10, 2026ರಂದು ಪುತ್ತೂರಿನ ಐತಿಹಾಸಿಕ ಬಾಲವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ ಪ್ರದಾನ ಮಾಡಿ ಎಸ್.ಕೆ. ಆನಂದ್ ಅವರನ್ನು ಗೌರವಿಸಲಾಗುವುದು.
-
ನಿಧನ ವಾರ್ತೆ16 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್21 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ22 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ20 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ21 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ19 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
Uncategorized10 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ರಾಜಕೀಯ15 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















