ಉಡುಪಿ
Hindu Yuva Sena-ಅಕ್ಷತಾ ಪೂಜಾರಿಗೆ ಹಲ್ಲೆ ನಡೆಸಿ ಸುಳ್ಳು ಕೇಸು ದಾಖಲಿಸಿದ ಪೊಲೀಸರನ್ನು ತಕ್ಷಣ ಅಮಾನತು ಮಾಡಿ : ಹಿಂದೂ ಯುವ ಸೇನೆ ಆಗ್ರಹ
ಉಡುಪಿಯಲ್ಲಿ ಮುಂಜಾನೆ 4.30 ಸಮಯದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿ, ಯುವತಿಯ ವಿರುದ್ಧವೇ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿ, ಘಟನೆಗೆ ಕಾರಣೀಕರ್ತರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಹಿಂದೂ ಯುವ ಸೇನೆ ಆಗ್ರಹಿಸಿದೆ.
ಉಡುಪಿಯಲ್ಲಿ ಮುಂಜಾನೆ 4.30 ಸಮಯದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿ, ಯುವತಿಯ ವಿರುದ್ಧವೇ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿ, ಘಟನೆಗೆ ಕಾರಣೀಕರ್ತರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಹಿಂದೂ ಯುವ ಸೇನೆ ಆಗ್ರಹಿಸಿದೆ.
ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಅಕ್ಷತಾ ಪೂಜಾರಿ ಯವರಿಗೆ ಹಲ್ಲೆ ನಡೆಸಿದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರಿಗೆ ದೂರು ಕೊಟ್ಟಾಗ ಠಾಣಾಧಿಕಾರಿ ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿರುವ ಬಗ್ಗೆ ಯುವತಿ ಆರೋಪ ಮಾಡಿದ್ದಾರೆ.
ಹಲ್ಲೆಗೀಡಾದ ಯುವತಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಿಂದೂ ಯುವಸೇನೆ ಪದಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಘಟನೆಯ ಬಗ್ಗೆ ಮಾಹಿತಿ ಪಡೆದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಂಡು, ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾಳೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸು ದಾಖಲಿಸಿ ಯುವತಿಗೆ ನ್ಯಾಯ ಒದಗಿಸುವಂತೆ ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು ಹಾಗೂ ನಗರ ಅಧ್ಯಕ್ಷ ಸುನೀಲ್ ನೇಜಾರು ಆಗ್ರಹಿಸಿದ್ದಾರೆ.
ಅಪರಾಧ
Mangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್‌ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲ್ ವಾರ್ಡನ್ ಅವರು ಪ್ರಭಾರ ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕ ತೆಗೆದುಕೊಳ್ಳಲು ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದ್ದರು. ಈ ವೇಳೆ ಅಡುಗೆ ಕೋಣೆಯ ಎದುರುಗಡೆ ಇದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತ ಜೈಲ್ ವಾರ್ಡನ್ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು 2012ರ ಜನವರಿ 10ರಂದು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿಗೆ 2013ರ ಮೇ 29ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದೆ ಆರೋಪಿ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022ರಂತೆ ದಾಖಲಾಗಿತ್ತು.
ತಲೆಮರೆಸಿಕೊಂಡಿದ್ದ ಸಫಾನ್ ಹುಸೈನ್‌ನನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ತೀರ್ಪು ನೀಡಿದೆ
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
-
Uncategorized18 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್12 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು15 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized16 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ16 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ17 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ15 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್16 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















