ಆತನ ಇಬ್ಬರು ಸಹೋದರರು ಹೈದರಾಬಾದ್ ನಗರದಲ್ಲೇ ವಾಸವಿದ್ದಾರೆ. ಆದರೆ, ನಮ್ಮೊಂದಿಗೆ […]" /> ಆತನ ಇಬ್ಬರು ಸಹೋದರರು ಹೈದರಾಬಾದ್ ನಗರದಲ್ಲೇ ವಾಸವಿದ್ದಾರೆ. ಆದರೆ, ನಮ್ಮೊಂದಿಗೆ […]"> ಆಸ್ಟ್ರೇಲಿಯಾದ ಬೊಂಡಿ ಬೀಚ್ ನಲ್ಲಿ 15 ಜನರನ್ನು ಶೂಟೌಟ್ ನಲ್ಲಿ ಕೊಂದ ಆರೋಪಿಗಳು ಭಾರತದ ಹೈದರಾಬಾದ್ ಮೂಲದವರು ..! - Nikhara News | Kannada News Website
Connect with us

ಬಿಗ್ ನ್ಯೂಸ್

ಆಸ್ಟ್ರೇಲಿಯಾದ ಬೊಂಡಿ ಬೀಚ್ ನಲ್ಲಿ 15 ಜನರನ್ನು ಶೂಟೌಟ್ ನಲ್ಲಿ ಕೊಂದ ಆರೋಪಿಗಳು ಭಾರತದ ಹೈದರಾಬಾದ್ ಮೂಲದವರು ..!

Published

on

Ad Widget

Ad Widget

Ad Widget

Ad Widget

ಹೈದರಾಬಾದ್‌: ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಬೊಂಡಿ ಬೀಚ್ ಬಳಿ ನಡೆದ ಶೂಟೌಟ್ ನಡೆಸಿದ್ದ ಸಾಜಿದ್ ಅಕ್ರಂ (50) ಹಾಗೂ ಆತನ ಪುತ್ರ ನವೀದ್ ಅಕ್ರಂ (24) ಮೂಲತಃ ತೆಲಂಗಾಣದ ಹೈದರಾಬಾದ್ ನವರು ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಸಾಜಿದ್ ಅಕ್ರಂ ಮೂಲತಃ ಹೈದರಾಬಾದ್‌ ನಗರದ ಮಹಿಪಟ್ಟಂ ಮೂಲದವನಾಗಿದ್ದು, 27 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾ ಮೇಲೆ ಆಸ್ಟ್ರೇಲಿಯಾಗೆ ವಲಸೆ ಹೋಗಿದ್ದನು ಎಂದು ಗುಪ್ತಚರ ಸಂಸ್ಥೆಗಳು ತಿಳಿಸಿವೆ.

Ad Widget

Ad Widget alt="Ad Widget"/>

Ad Widget

ಆತನ ಇಬ್ಬರು ಸಹೋದರರು ಹೈದರಾಬಾದ್ ನಗರದಲ್ಲೇ ವಾಸವಿದ್ದಾರೆ. ಆದರೆ, ನಮ್ಮೊಂದಿಗೆ ಆತ ತೀರಾ ಕಡಿಮೆ ಸಂಪರ್ಕ ಹೊಂದಿದ್ದಾನೆ ಎಂದು ಆತನ ಸಂಬಂಧಿಕರು ಗುಪ್ತಚರ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ.

Ad Widget

Ad Widget <> Ad Widget

ಸಾಜಿದ್ ಅಕ್ರಂ ಮೂಲತಃ ಹೈದರಾಬಾದ್‌ ನಗರದ ನಿವಾಸಿ. ಹೈದರಾಬಾದ್ ನಲ್ಲಿ ಬಿಕಾಂ ಪದವಿ ಪೂರೈಸಿದ್ದ ಆತ, ಉದ್ಯೋಗವನ್ನರಸಿ ಸುಮಾರು 27 ವರ್ಷಗಳ ಹಿಂದೆ ಆಸ್ಟ್ರೇಲಿಯಾಗೆ ವಲಸೆ ಹೋಗಿದ್ದ. ಆಸ್ಟ್ರೇಲಿಯಾದಲ್ಲಿ ಶಾಶ್ವತವಾಗಿ ನೆಲೆಸುವುದಕ್ಕೂ ಮುನ್ನ, ವೆನೆರೊ ಗ್ರಾಸೊ ಎಂಬ ಯುರೋಪ್ ಮೂಲದ ಮಹಿಳೆಯನ್ನು ಆತ ವಿವಾಹವಾಗಿದ್ದ ದಾಳಿಕೋರರ ಪೈಕಿ ಒಬ್ಬನಾಗಿದ್ದ ನವೀದ್ ಅಕ್ರಂ ಆತನ ಪುತ್ರನಾಗಿದ್ದು, ಆತನಿಗೆ ಓರ್ವ ಪುತ್ರಿಯೂ ಇದ್ದಾಳೆ ಎಂದು ತೆಲಂಗಾಣ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಾಜಿದ್ ಅಕ್ರಂ ಇಂದಿಗೂ ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದರೆ, ಆಸ್ಟ್ರೇಲಿಯಾದಲ್ಲೇ ಜನಿಸಿದ್ದ ಆತನ ಪುತ್ರ ನವೀದ್ ಅಕ್ರಂ ಹಾಗೂ ಪುತ್ರಿ ಆಸ್ಟ್ರೇಲಿಯಾ ಪ್ರಜೆಗಳೇ ಆಗಿದ್ದಾರೆ.

Ad Widget

Ad Widget

ರವಿವಾರ ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ಆಯೋಜನೆಗೊಂಡಿದ್ದ ಹನುಕ್ಕ ಸಾರ್ವಜನಿಕ ಸಂಭ್ರಮಾಚರಣೆಯ ವೇಳೆ ಇಬ್ಬರು ದಾಲಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಬಂದೂಕುಧಾರಿ ಸೇರಿದಂತೆ ಒಟ್ಟು 15 ಮಂದಿ ಹತರಾಗಿದ್ದರು. ಈ ದಾಳಿಯನ್ನು ಆಸ್ಟ್ರೇಲಿಯಾ ಸರಕಾರ ಮತ್ತು ಪೊಲೀಸರು ಭಯೋತ್ಪಾದಕ ದಾಳಿ ಎಂದು ಪರಿಗಣಿಸಿದ್ದಾರೆ.

ದಾಳಿಕೋರರು ಐಸಿಸ್‌ ಸಿದ್ಧಾಂತದಿಂದ ಪ್ರೇರಿತರಾಗಿದ್ದರು ಎಂದು ವರದಿಯಾಗಿದೆ. ಈ ಸಂಬಂಧ ಆಸ್ಟ್ರೇಲಿಯಾ ಪೊಲೀಸರು ಮತ್ತಷ್ಟು ತನಿಖೆ ಕೈಗೊಂಡಿದ್ದಾರೆ.

Ad Widget

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ಸವಣೂರು ಸಹಕಾರ ಸಂಘ; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರದಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸವಣೂರು ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸವಣೂರು ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!