ಸ್ಥಳೀಯ
Elephant Task Force-ದ.ಕ.: ಕಾಡಾನೆ ಸಮಸ್ಯೆಗೆ ಶೀಘ್ರ ಪರಿಹಾರ: ಮುಂದಿನ ವಾರವೇ ‘ಎಲಿಫೆಂಟ್ ಟಾಸ್ಕ್ ಫೋರ್ಸ್’ ಕಾರ್ಯಾರಂಭ; ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ
ದಕ್ಷಿಣ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಕಾಡಾನೆ ಹಾವಳಿಗೆ ಕಡಿವಾಣ ಹಾಕಲು ಮುಂದಿನ ವಾರವೇ ‘ಎಲಿಫೆಂಟ್ ಟಾಸ್ಕ್ ಫೋರ್ಸ್’ (ETF) ಕಾರ್ಯಾರಂಭ ಮಾಡಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.
ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಕಾಡಾನೆ ಹಾವಳಿಗೆ ಕಡಿವಾಣ ಹಾಕಲು ಮುಂದಿನ ವಾರವೇ ‘ಎಲಿಫೆಂಟ್ ಟಾಸ್ಕ್ ಫೋರ್ಸ್’ (ETF) ಕಾರ್ಯಾರಂಭ ಮಾಡಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಸಚಿವರನ್ನು ಭೇಟಿಯಾಗಿ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಚಿವರು ಈ ಮಹತ್ವದ ಘೋಷಣೆ ಮಾಡಿದರು.
ಸಮಸ್ಯೆಯ ಗಂಭೀರತೆ ವಿವರಿಸಿದ ಶಾಸಕರು:
ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಕಾಡಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು, ಬಾಳೆ ಮುಂತಾದ ಬೆಳೆಗಳು ನಾಶವಾಗುತ್ತಿದ್ದು, ಕೃಷಿಕರು ಸಂಕಷ್ಟದಲ್ಲಿದ್ದಾರೆ. ಅಷ್ಟೇ ಅಲ್ಲದೆ, ಆನೆ ದಾಳಿಯಿಂದ ಜೀವಹಾನಿ ಮತ್ತು ಗಾಯಗಳಾಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆಮಾಡಿದೆ. ಈ ಹಿಂದೆ ಸದನದಲ್ಲಿ ನೀಡಿದ್ದ ಭರವಸೆಯಂತೆ ತಕ್ಷಣವೇ ಜಿಲ್ಲೆಯಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ಸ್ಥಾಪಿಸಬೇಕು ಎಂದು ಶಾಸಕ ಕಿಶೋರ್ ಕುಮಾರ್ ಅವರು ಸಚಿವರನ್ನು ಒತ್ತಾಯಿಸಿದರು.
ಸಚಿವರ ಸ್ಪಂದನೆ ಮತ್ತು ಮುಂದಿನ ನಡೆ:
ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ ಈಶ್ವರ್ ಖಂಡ್ರೆ, “ಸರ್ಕಾರ ರೈತರ ರಕ್ಷಣೆಗೆ ಬದ್ಧವಾಗಿದೆ. ಮುಂದಿನ ವಾರದಿಂದಲೇ ಇಟಿಎಫ್ ತಂಡ ಕಾರ್ಯಪ್ರವೃತ್ತವಾಗಲಿದೆ,” ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಸುಳ್ಯ ತಾಲೂಕಿಗೆ ಖುದ್ದು ಭೇಟಿ ನೀಡುವುದಾಗಿ ಸಚಿವರು ತಿಳಿಸಿದರು. “ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಮತ್ತು ಸಂತ್ರಸ್ತ ರೈತರೊಂದಿಗೆ ಒಂದೇ ವೇದಿಕೆಯಲ್ಲಿ ಚರ್ಚಿಸಿ, ಆನೆಗಳ ಚಲನವಲನ ಆಧರಿಸಿ ವೈಜ್ಞಾನಿಕ ತಡೆಗೋಡೆ, ಕಂದಕ ಹಾಗೂ ತಂತ್ರಜ್ಞಾನ ಆಧಾರಿತ ಶಾಶ್ವತ ಪರಿಹಾರ ರೂಪಿಸಲಾಗುವುದು,” ಎಂದು ಅವರು ತಿಳಿಸಿದರು.
ಬಿಗ್ ನ್ಯೂಸ್
Chetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಚೇತನ್ ಪ್ರಕಾಶ್ ಕಜೆಯವರಿಗೆ ಪ್ರಧಾನ ಮಾಡಲಾಗಿದೆ.
ಪುತ್ತೂರು : ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಚೇತನ್ ಪ್ರಕಾಶ್ ಕಜೆಯವರಿಗೆ ಪ್ರಧಾನ ಮಾಡಲಾಗಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅಮೂಲ್ಯ ಸೇವೆ, ರೋಗಿಗಳ ಆರೈಕೆಯಲ್ಲಿ, ತೋರುತ್ತಿರುವ ಕಾಳಜಿ ಹಾಗೂ ಸಮಾಜದ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಮಾಡುತ್ತಿರುವ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಚೇತನ್ ಪ್ರಕಾಶ್ ಸಾಧನೆಯನ್ನು ಅಭಿನಂದಿಸುವ ನಿಟ್ಟಿನಲ್ಲಿ ಪ್ರಸ್ತುತಿ ಸಾಂಸ್ಕೃತಿಕ ಕಲಾಪರಿಷತ್ತು, ಗೋವಾ ವತಿಯಿಂದ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನೀಡಲಾಗುವ ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಈ ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.
ಚೇತನ್ ಪ್ರಕಾಶ್ ಅವರಿಗೆ ಇತ್ತೀಚೆಗೆ ಕನ್ನಡಪ್ರಭ ಸುವರ್ಣ ನ್ಯೂಸ್ ಆರೋಗ್ಯ ಸೇವಾ ವಿಭಾಗದಲ್ಲಿ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಗೂ ಭಾಜನವಾಗಿತ್ತು.
ಅಲರ್ಜಿ ಲ್ಯಾಬ್ ಎಂದೇ ಪ್ರಖ್ಯಾತಿ ಪಡೆದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಇತ್ತೀಚೆಗೆ ತನ್ನ 11ನೇ ಶಾಖೆಯನ್ನು ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ತೆರೆಯುವ ಮೂಲಕ ಸಾಧನೆ ಮೆರೆದಿತ್ತು.
ಅಪರಾಧ
Excise raid-ಬಾಳ್ತಿಲ, ಮೆಲ್ಕಾರ್‌ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್‌ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್‌ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.
ಕಾರ್ಯಕ್ರಮಗಳು
Puttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ.
ಪುತ್ತೂರು: ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ ಎಂದು ದ್ವಾರಕಾ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಿರ್ಮಾಣ ಕ್ಷೇತ್ರದಲ್ಲಿ ಎರಡು ದಶಕಗಳಿಗೂ ಅಧಿಕ ಪಯಣ ನಡೆಸಿರುವ ಸಂಸ್ಥೆಯು ಆರಂಭದಲ್ಲಿ ಪಡೀಲು ಬಾಳಪ್ಪ ಕಾಂಪ್ಲೆಕ್ಸ್, ಬೊಳುವಾರು, ಕಬಕ ಹಾಗೂ ಸರ್ಕಾರಿ ನೌಕರರ ಕಟ್ಟಡದಲ್ಲಿ ಕಚೇರಿ ಹೊಂದಿ ಕಾರ್ಯಾಚರಿಸುತ್ತಿತ್ತು. ಇದೀಗ ಸ್ವಂತ ಕಟ್ಟಡದಲ್ಲಿ ಸಂಸ್ಥೆಯ ಕಚೇರಿ ಆರಂಭವಾಗುತ್ತಿರುವುದು ಸಂತಸದ ವಿಚಾರ. ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆ
ನೂತನ ವಾಣಿಜ್ಯ ಸೌಧದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ ಅರ್ತ್ಯಡ್ಕ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಶಿಕ್ಷಣ ಕರ್ಮಯೋಗಿ ಪದ್ಮಶ್ರೀ ಡಾ. ಹರೇಕಳ ಹಾಜಬ್ಬ, ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ಮಾಸ್ಟರ್ ಪ್ಲಾನರಿ ಸಂಸ್ಥೆಯ ಎಸ್.ಕೆ. ಆನಂದ ಕುಮಾರ್, ಹಿರಿಯ ಉದ್ಯಮಿ ಮಂಜುನಾಥ್ ನಾಯಕ್, ಐಶ್ವರ್ಯ ಕನ್‌ಸ್ಟ್ರಕ್ಷನ್‌ನ ರಘುರಾಮ ಭಟ್ ಉಪ್ಪಂಗಳ, ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೋ, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ನಗರಸಭೆ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿ ಗುರುಪ್ರಸಾದ್ ಎ.ಬಿ. ಹಾಗೂ ಹೋಟೆಲ್ ಅಶ್ವಿನಿ ಮಾಲಕ ಕರುಣಾಕರ ರೈ ದೇರ್ಲ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು ಗೋಪಾಲಕೃಷ್ಣ ಭಟ್ ವಿವರಿಸಿದರು.
‘ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್’ ಪ್ರಮುಖ ಆಕರ್ಷಣೆ
ನಾಲ್ಕು ಅಂತಸ್ತಿನ ಈ ವಾಣಿಜ್ಯ ಸೌಧದ ನೆಲಹಂತ ಹಾಗೂ ಮೊದಲ ಮಹಡಿಯಲ್ಲಿ ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್ ಕಾರ್ಯಾಚರಿಸಲಿದೆ. ಇಲ್ಲಿ ದ್ವಾರಕಾ ಹಾಲಿನ ಉತ್ಪನ್ನಗಳು, ತರಕಾರಿ, ದಿನಸಿ ಸಾಮಗ್ರಿಗಳು, ಹಣ್ಣು, ಚಾಟ್ಸ್, ಜ್ಯೂಸ್, ಕೂಲ್‌ಝೋನ್, ಬೇಕರಿ ತಿನಿಸುಗಳು, ಸ್ಟೇಶನರಿ ಸೇರಿದಂತೆ ಗ್ರಾಹಕರ ನಿತ್ಯ ಬಳಕೆಯ ನೂರಾರು ವಸ್ತುಗಳು ಮಿತದರದಲ್ಲಿ ಲಭ್ಯವಾಗಲಿವೆ.
ಎರಡನೇ ಮಹಡಿಯಲ್ಲಿ ಹಾರ್ಡ್‌ವೇರ್, ಸ್ಯಾನಿಟರಿ, ಟೈಲ್ಸ್, ಪೇಂಟ್ಸ್, ಯುನಿಸೆಕ್ಸ್ ಸಲೂನ್, ಡೆಂಟಲ್ ಕ್ಲಿನಿಕ್, ಸಾಫ್ಟ್‌ವೇರ್ ಸಂಸ್ಥೆ, ಚಾರ್ಟರ್ಡ್ ಅಕೌಂಟೆಂಟ್ ಕಚೇರಿ ಹಾಗೂ ಟೆಕ್ಸ್‌ಟೈಲ್ಸ್ ಮಳಿಗೆಗಳು ಕಾರ್ಯನಿರ್ವಹಿಸಲಿವೆ.
ಮೂರನೇ ಮಹಡಿಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ಪ್ರಧಾನ ಕಚೇರಿ ಇರಲಿದ್ದು, ನಾಲ್ಕನೇ ಮಹಡಿಯಲ್ಲಿ ಸುಮಾರು 200 ಮಂದಿ ಆಸೀನರಾಗಬಹುದಾದ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗಿದೆ.
ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಕಟ್ಟಡ
ಗ್ರಾಹಕರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕಟ್ಟಡದ ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು 20 ಕಾರುಗಳನ್ನು ನಿಲುಗಡೆ ಮಾಡಬಹುದಾಗಿದೆ. ಕಟ್ಟಡದಲ್ಲಿ ಲಿಫ್ಟ್ ವ್ಯವಸ್ಥೆ ಸೇರಿದಂತೆ ವಿವಿಧ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.
-
Uncategorized19 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ24 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಕ್ರೈಂ5 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಅಂತರ ರಾಜ್ಯ24 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ24 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ24 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ನಿಧನ ವಾರ್ತೆ5 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್5 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
















