ಪುತ್ತೂರು
ವಾಯುಸೇನೆಗೆ ಆಯ್ಕೆಯಾದ ಕೀರ್ತನ್ ಕೆ.ಪಿ ಗೆ ‘ವಿದ್ಯಾಮಾತಾ’ ದಲ್ಲಿ ಅಭಿನಂದನಾ ಸಮಾರಂಭ : ಸತತವಾಗಿ ಪ್ರಯತ್ನಿಸಿದರೆ ಖಂಡಿತವಾಗಿಯೂ ಎರಡು ವರ್ಷದ ಒಳಗೆ ಸೇನಾ ಸೇವೆಗೆ ಆಯ್ಕೆಯಾಗಬಹುದು – ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಸತಿಯುತ ತರಬೇತಿಯನ್ನು ಕೂಡ ಪ್ರಾರಂಭಿಸಲಾಗಿದೆ – ಭಾಗ್ಯೇಶ್ ರೈ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ವಾಯುಸೇನೆಗೆ ಆಯ್ಕೆಯಾಗಿರುವ ಕೀರ್ತನ್ ಕೆ.ಪಿ ಯವರಿಗೆ ವಿದ್ಯಾಮಾತಾದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. 2023 ರಿಂದ ವಿದ್ಯಾಮಾತಾ ಅಕಾಡೆಮಿಯ ಉಚಿತ ಮಿಲಿಟರಿ ನೇಮಕಾತಿಗಳಿಗೆ ತರಬೇತಿ ಪಡೆಯುತ್ತಿದ್ದ ಪುತ್ತೂರು ತಾಲೂಕು ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಕಂದಲಾಜೆ ನಿವಾಸಿ ಪದ್ಮಯ ಗೌಡ ಮತ್ತು ಪುಷ್ಪಲತಾ ದಂಪತಿಗಳ ಪುತ್ರರಾದ ಕೀರ್ತನ್ ರವರು ವಿವೇಕಾನಂದ ತಾಂತ್ರಿಕ ವಿದ್ಯಾಲಯದಲ್ಲಿ ಡಿಪ್ಲೋಮಾ ಪದವಿ ಓದುತ್ತಿದ್ದಾರೆ.
ಓದಿನೊಂದಿಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಿಲಿಟರಿ ಹುದ್ದೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿದ್ದರು. ವಿಶೇಷ ಏನೆಂದರೆ ಇವರು ಅಗ್ನಿಪಥ್ ಯೋಜನೆಯಲ್ಲಿ ಭೂಸೇನೆಯ ನೇಮಕಾತಿಯಲ್ಲೂ ಪ್ರಥಮ ಹಂತದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಅದರಲ್ಲಿ ದೈಹಿಕ ಕ್ಷಮತೆಯ ಪರೀಕ್ಷೆ ಮಾತ್ರ ಬಾಕಿ ಇರುತ್ತದೆ. ಇದರ ಮಧ್ಯೆಯೇ ವಾಯುಸೇನೆಯ ಎಲ್ಲಾ ಹಂತಗಳ ಪರೀಕ್ಷೆಯನ್ನು ಪಾಸ್ ಮಾಡಿ ವಾಯುಸೇನೆಗೆ ಆಯ್ಕೆಯಾಗಿದ್ದಾರೆ.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ನಿವೃತ್ತ ಸೈನಿಕರಾದ ಸುಬೇದಾರ್ ಮೇಜರ್ (ASC) ಸುರೇಶ್ ಎಂ.ರವರು ಆಗಮಿಸಿ ಕೀರ್ತನ್ ಕೆ.ಪಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆಯಲ್ಲಿರುವ ವಿವಿಧ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಝೇವಿಯರ್ ಡಿ’ಸೋಜರವರು ವಿದ್ಯಾಮಾತಾ ಅಕಾಡೆಮಿಯು ಇಂತಹ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ತರಬೇತಿ ಮತ್ತು ಮಾಹಿತಿ ನೀಡುವ ಮೂಲಕ ಭಾರತೀಯ ಸೇನೆಯ ವಿವಿಧ ವಿಭಾಗಗಳಲ್ಲಿ ಹಲವಾರು ಅವಕಾಶಗಳನ್ನು ಪಡೆಯಲು ಕಾರಣವಾಗಿರುವುದಕ್ಕೆ ಸಂಸ್ಥೆಯನ್ನು ಅಭಿನಂದಿಸಿ, ಕೀರ್ತನ್ ರವರಿಗೆ ಶುಭ ಹಾರೈಸಿದರು.
ಗ್ರಂಥಾಲಯಕ್ಕೆ ಕೀರ್ತನ್ ಕೆ ಪಿ ಅವರಿಂದ ಕೊಡುಗೆ
ತನಗೆ ಉಚಿತ ತರಬೇತಿಯನ್ನು ನೀಡುತ್ತಾ ಸತತ ತನ್ನ ಪರಿಶ್ರಮಕ್ಕೆ ಪ್ರೋತ್ಸಾಹ ನೀಡಿ ತನ್ನ ಕನಸನ್ನು ನನಸು ಮಾಡಲು ಕಾರಣವಾದ ವಿದ್ಯಾಮಾತಾ ಸಂಸ್ಥೆಯ ಗ್ರಂಥಾಲಯಕ್ಕೆ ಹತ್ತು ಸಾವಿರ ರೂಪಾಯಿಗಳನ್ನು ಕೊಡುಗೆಯಾಗಿ ನೀಡಿದರು.
ಕಾರ್ಯಕ್ರಮದಲ್ಲಿ ತರಬೇತುದಾರರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತರಬೇತಿ ಪಡೆಯಲಿಚ್ಚಿಸುವವರು ವಿದ್ಯಾಮಾತಾ ಅಕಾಡೆಮಿಯ 9620468869 ನಂಬರನ್ನು ಸಂಪರ್ಕಿಸಬಹುದು.
ಇಷ್ಟರವರೆಗೆ ಮಿಲಿಟರಿ ಭಾರತೀಯ ಸೇನೆಗಳ ಎಲ್ಲಾ ವಿಭಾಗಗಳಿಗೂ ನಮ್ಮಲ್ಲಿ ತರಬೇತಿ ಪಡೆದು ಆಯ್ಕೆಯಾಗಿದ್ದರೂ, ವಾಯುಸೇನೆಗೆ ಆಯ್ಕೆಯಾಗಿಲ್ಲ ಎಂಬ ಕೊರಗಿತ್ತು. ಕೀರ್ತನ್ ಕೆ.ಪಿ.ಯವರು ವಾಯುಸೇನೆಗೆ ಆಯ್ಕೆಯಾಗುವುದರ ಮೂಲಕ ಆ ಕೊರಗು ನೀಗಿದೆ. ಮಿಲಿಟರಿ ಅರೆಮಿಲಿಟರಿ ಹುದ್ದೆಗಳಿಗೆ ಪ್ರಯತ್ನಿಸುವವರು ಸತತವಾಗಿ ಪ್ರಯತ್ನಿಸಿದರೆ ಖಂಡಿತವಾಗಿಯೂ ಎರಡು ವರ್ಷದ ಒಳಗೆ ಸೇವೆಗೆ ಆಯ್ಕೆಯಾಗಬಹುದು. ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಸತಿಯುತ ತರಬೇತಿಯನ್ನು ಕೂಡ ಪ್ರಾರಂಭಿಸಲಾಗಿದೆ. ಕೀರ್ತನ್ ಕೆ.ಪಿ. ಅವರಿಗೆ ಅಭಿನಂದನೆಗಳು

– ಭಾಗ್ಯೇಶ್ ರೈ, ಆಡಳಿತ ನಿರ್ದೇಶಕರು. ವಿದ್ಯಾಮಾತಾ ಅಕಾಡೆಮಿ
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಮಂಗಳೂರು8 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ12 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ13 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್13 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ13 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಅಪರಾಧ8 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಮಂಗಳೂರು7 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಸಿನೆಮಾ12 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು


















