ಪುತ್ತೂರು
ಜಿಲ್ಲೆಯ ಅತೀ ದೊಡ್ಡ ಬ್ರ್ಯಾಂಡೆಡ್ ಕಂಪನಿಗಳ ಟೈಲ್ಸ್ ಮಳಿಗೆ, ಹೆಸರಾಂತ ನಿರ್ಮಾಣ ಸಂಸ್ಥೆಗಳ ನಂಬಿಕೆಯ ಪೂರೈಕೆದಾರರಾದ ಪ್ರೆಸ್ಟೀಜ್ ಗ್ರೂಪ್ ನ ಸಹಸಂಸ್ಥೆ ಪುತ್ತೂರಿನ ‘ಪ್ರೊ ಪ್ರೆಸ್ಟೀಜ್’ ನವೀಕರಣಗೊಂಡು ಡಿ.18ರಂದು (ಇಂದು) ಶುಭಾರಂಭ: ಆಕರ್ಷಕ, ವಿನೂತನ, ಅತ್ಯುತ್ತಮ ಗುಣಮಟ್ಟದ ಟೈಲ್ಸ್ ಮೆಟೀರಿಯಲ್ ಗಳು ಆಕರ್ಷಕ ದರದಲ್ಲಿ ಲಭ್ಯ
ಪುತ್ತೂರು : ಜಿಲ್ಲೆಯ ಅತೀ ದೊಡ್ಡ ಹೆಸರಾಂತ ಕಂಪನಿಯ ಟೈಲ್ಸ್, ಸ್ಯಾನಿಟರಿವೇರ್, ಸಿಪಿ ಫಿಟ್ಟಿಂಗ್ಸ್ ಸಹಿತ ಹಲವು ಬಗೆಯ ಸಾಮಾಗ್ರಿಗಳನ್ನು, ಸ್ಪರ್ಧಾತ್ಮಕ ದರದಲ್ಲಿ ಪೂರೈಸುತ್ತಿರುವ ಸಂಸ್ಥೆಯಾದ ಪ್ರೆಸ್ಟೀಜ್ ಗ್ರೂಪ್ಸ್ ನ ಸಹಸಂಸ್ಥೆ ಕಳೆದ 5 ವರುಷಗಳಿಂದ ಪುತ್ತೂರಿನ ಏಳ್ಳುಡಿ ಪ್ರೊವಿಡೆನ್ಸ್ ಪ್ಲಾಝಾ ಸಂಕೀರ್ಣದಲ್ಲಿ ವ್ಯವಹರಿಸುತ್ತಿರುವ ಪ್ರೊ ಪ್ರೆಸ್ಟೀಜ್ ಇದೀಗ ಸಂಪೂರ್ಣ ನವೀಕರಣಗೊಂಡು ಡಿ.18 ರಂದು ಮಗದೊಮ್ಮೆ ಶುಭಾರಂಭಗೊಳ್ಳಲಿದೆ.
ಜಿಲ್ಲೆಯ ಪ್ರಮುಖ ನಿರ್ಮಾಣ ಸಂಸ್ಥೆಗಳಿಗೆ ಟೈಲ್ಸ್, ಸ್ಯಾನಿಟರಿವೇರ್ ಗಳನ್ನು ಪೂರೈಸುತ್ತಿರುವ ಪ್ರೆಸ್ಟೀಜ್ ಗ್ರೂಪ್ ನ ಒಟ್ಟು 5 ಸಂಸ್ಥೆಗಳು ಜಿಲ್ಲೆಯ ಹಲವೆಡೆ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ 2 ದೊಡ್ಡ ದಾಸ್ತಾನು ಕೇಂದ್ರವನ್ನು ಹೊಂದಿದ್ದು, 50 ಸಾವಿರಕ್ಕೂ ಹೆಚ್ಚು ಗ್ರಾಹಕ ಬಳಗವನ್ನು ಕೂಡ ಹೊಂದಿದೆ.
ಸುಂದರವಾದ ಮತ್ತು ಆಕರ್ಷಕ ಮನೆ ಅಥವಾ ಕಟ್ಟಡವೊಂದನ್ನು ನೀವು ನಿರ್ಮಿಸುತ್ತಿದ್ದರೆ, ಅಂತಹ ಮನೆ ಅಥವಾ ಕಟ್ಟಡಕ್ಕೆ ಬೇಕಾಗುವಂತಹ ಅತ್ಯುತ್ತಮ ಗುಣಮಟ್ಟದ, ಸುಧೀರ್ಘ ಬಾಳಿಕೆ ಬರುವ ಆಕರ್ಷಕ ಟೈಲ್ಸ್ ಹಾಗೂ ಸ್ಯಾನಿಟರಿವೇರ್ ಸಾಮಾಗ್ರಿಗಳು ಈ ಮಳಿಗೆಯಲ್ಲಿ ಲಭ್ಯವಿದೆ. ಪ್ರಮುಖವಾಗಿ ಜಾಗ್ವಾರ್, ಅರ್ಟೈಝ್, ಎಸ್ಕೋ,ಆ್ಯಸ್ಟಲ್ ವೆಬೆರ್, ಕಾಜಾರಿಯ,ಮೊಟ್ಟೆ,ಮೆಟ್ರೋ, ಪಂಡ,ಹಲ್ಲೆ ಮತ್ತು ಮೊನೊಲಿತ್ ಹಾಗೂ ಫ್ರಾಂಕಿ ಉತ್ತನ್ನಗಳು ಲಭ್ಯವಿದ್ದು, ಎಲ್ಲವೂ ಸ್ಪರ್ಧಾತ್ಮಕ ದರದಲ್ಲೇ ಗ್ರಾಹಕರ ಕೈ ಸೇರಲಿದೆ.
ವಾಲ್ ಟೈಲ್ಸ್, ಪ್ಲೋರ್ ಟೈಲ್ಸ್, ಬಾತ್ ರೂಂ ಟೈಲ್ಸ್, ಕಿಚನ್ ಟೈಲ್ಸ್, ಟೇಬಲ್ ಟಾಪ್ ಹಾಗೂ ಔಟ್ ಡೋರ್ ಟೈಲ್ಸ್ ಗಳೆಲ್ಲಾ ಹಾಗೂ ಹೆಸರಾಂತ ಜಾಗ್ವರ್ ಕಂಪನಿಯ ಉತ್ಪನ್ನವೆಲ್ಲಾ ವಿಶೇಷ ದರದಲ್ಲಿ ಲಭ್ಯವಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಮಂಗಳೂರು11 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ14 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ16 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್16 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್9 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ9 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು10 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ16 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು


















