ಉಡುಪಿ
Karwar-ಕಾರವಾರ: ಕಡಲತೀರದಲ್ಲಿದ್ದ ಹಕ್ಕಿಯ ಮೈಮೇಲೆ ಜಿಪಿಎಸ್ ಟ್ರಾನ್ಸ್‌ಮೀಟರ್; ಚೀನಾ ಗೂಢಚರ್ಯೆ ಶಂಕೆ; 12 ಸಾವಿರ ಕಿ.ಮೀ ಹಾರಾಡಿದ ಹಕ್ಕಿಯ ರಹಸ್ಯ ಬಯಲು
ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ಮೈಮೇಲೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಹೊತ್ತು ಅಚ್ಚರಿ ಮೂಡಿಸಿದ್ದ ಕಡಲಹಕ್ಕಿಯ ರಹಸ್ಯ ಕಡೆಗೂ ಬಯಲಾಗಿದೆ. ಇದು ಯಾವುದೇ ಗೂಢಚಾರಿಕೆಯ ಹಕ್ಕಿಯಲ್ಲ, ಬದಲಿಗೆ ಪಕ್ಷಿಗಳ ವಲಸೆಯ ಕುರಿತು ಅಧ್ಯಯನ ನಡೆಸಲು ಶ್ರೀಲಂಕಾದ ವಿಜ್ಞಾನಿಗಳು ಬಳಸಿದ ಹಕ್ಕಿ ಎಂಬುದು ದೃಢಪಟ್ಟಿದೆ.
ಕಾರವಾರ: ನಗರದ ಟ್ಯಾಗೋರ್ ಕಡಲತೀರದಲ್ಲಿ ಮೈಮೇಲೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಹೊತ್ತು ಅಚ್ಚರಿ ಮೂಡಿಸಿದ್ದ ಕಡಲಹಕ್ಕಿಯ ರಹಸ್ಯ ಕಡೆಗೂ ಬಯಲಾಗಿದೆ. ಇದು ಯಾವುದೇ ಗೂಢಚಾರಿಕೆಯ ಹಕ್ಕಿಯಲ್ಲ, ಬದಲಿಗೆ ಪಕ್ಷಿಗಳ ವಲಸೆಯ ಕುರಿತು ಅಧ್ಯಯನ ನಡೆಸಲು ಶ್ರೀಲಂಕಾದ ವಿಜ್ಞಾನಿಗಳು ಬಳಸಿದ ಹಕ್ಕಿ ಎಂಬುದು ದೃಢಪಟ್ಟಿದೆ.
ಶ್ರೀಲಂಕಾದ ವನ್ಯಜೀವಿ ಸಂರಕ್ಷಣಾ ಸಂಸ್ಥೆ (ಎಸ್‌ಡಬ್ಲ್ಯೂಸಿಎಸ್) ಈ ಬಗ್ಗೆ ಮಾಹಿತಿ ನೀಡಿದ್ದು, ಪಕ್ಷಿಯ ಚಲನವಲನ ಪತ್ತೆಹಚ್ಚಲು ಅದರ ಮೈಮೇಲೆ ಜಿಪಿಎಸ್ ಅಳವಡಿಸಲಾಗಿತ್ತು ಎಂದು ಸ್ಪಷ್ಟಪಡಿಸಿದೆ.
12 ಸಾವಿರ ಕಿ.ಮೀ ಹಾರಾಟದ ಸಾಹಸಗಾಥೆ:
ಇದು ‘ಹೂಗ್ಲಿನ್ಸ್ ಸೀಗಲ್’ (Heuglin’s Gull) ಜಾತಿಗೆ ಸೇರಿದ ಹಕ್ಕಿಯಾಗಿದ್ದು, ಹಿಮಭರಿತ ಪ್ರದೇಶಗಳಲ್ಲಿ ಜನಿಸುತ್ತದೆ. ಚಳಿಗಾಲದಲ್ಲಿ ಇದು ಉಷ್ಣವಲಯದ ಶ್ರೀಲಂಕಾಕ್ಕೆ ವಲಸೆ ಬರುತ್ತದೆ. ಈ ಕುರಿತು ಮಾತನಾಡಿದ ಕೊಲಂಬೊ ವಿಶ್ವವಿದ್ಯಾಲಯದ ವಿಜ್ಞಾನಿ ಸಂಪತ್ ಸೆನೆವಿರತ್ನ, “ಕಳೆದ ಮಾರ್ಚ್ ತಿಂಗಳಲ್ಲಿ ಈ ಹಕ್ಕಿಯನ್ನು ಸೆರೆಹಿಡಿದು ಸಂಶೋಧನೆಗಾಗಿ ‘ಉಪಗ್ರಹ ಟ್ಯಾಗಿಂಗ್’ ಮಾಡಲಾಗಿತ್ತು. ಅಲ್ಲಿಂದ ಸೈಬೀರಿಯಾ ಮತ್ತು ಆರ್ಕ್ಟಿಕ್ ಅಂಚಿನವರೆಗೆ ಹಾರಿದ್ದ ಪಕ್ಷಿ, ಅಲ್ಲಿ ಸಂತಾನೋತ್ಪತ್ತಿ ಮುಗಿಸಿ ಮತ್ತೆ ಶ್ರೀಲಂಕಾದತ್ತ ಮರಳುತ್ತಿತ್ತು. ಈ ಸುದೀರ್ಘ ಪಯಣದಲ್ಲಿ ಅದು ಬರೋಬ್ಬರಿ 12,000 ಕಿ.ಮೀ ದೂರ ಕ್ರಮಿಸಿದೆ. ಮಾರ್ಗಮಧ್ಯೆ ಸುಸ್ತಾಗಿ ಕಾರವಾರದಲ್ಲಿ ಇಳಿದಿದೆ. ಈ ಜಾತಿಯ ಪಕ್ಷಿಗಳು ರಾತ್ರಿಯೂ ಹಾರಬಲ್ಲವು ಎಂಬುದು ಡಾಟಾದಿಂದ ತಿಳಿದುಬಂದಿದೆ,” ಎಂದು ವಿವರಿಸಿದ್ದಾರೆ.
ಆತಂಕ ಮೂಡಿಸಿದ್ದ ‘ಚೀನಾ’ ಹೆಸರು:
ಪಕ್ಷಿಯ ಬೆನ್ನ ಮೇಲಿದ್ದ ಜಿಪಿಎಸ್ ಟ್ರಾನ್ಸ್‌ಮೀಟರ್ ಮೇಲೆ ‘ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್’ ಎಂದು ಬರೆದಿದ್ದು ಸ್ಥಳೀಯರಲ್ಲಿ ಹಾಗೂ ನೌಕಾನೆಲೆ ಭದ್ರತಾ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿತ್ತು. ಚೀನಾ ಗೂಢಚರ್ಯೆ ನಡೆಸುತ್ತಿರಬಹುದೇ ಎಂಬ ಅನುಮಾನದಡಿ ಪೊಲೀಸರು ಮತ್ತು ನೌಕಾಪಡೆ ತನಿಖೆ ನಡೆಸಿದ್ದರು. ಆದರೆ, ಶ್ರೀಲಂಕಾದ ಸಂಸ್ಥೆಯು ಪಕ್ಷಿ ಅಧ್ಯಯನಕ್ಕಾಗಿ ಚೀನಿ ಅಕಾಡೆಮಿಯ ತಾಂತ್ರಿಕ ನೆರವು ಪಡೆದಿದ್ದರಿಂದ ಉಪಕರಣದ ಮೇಲೆ ಆ ಹೆಸರು ಇತ್ತೇ ಹೊರತು, ಇದರಲ್ಲಿ ಯಾವುದೇ ಗೂಢಚಾರಿಕೆ ಇಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.
ಟ್ರಾನ್ಸ್‌ಮೀಟರ್ ತೆರವು:
ಸುದೀರ್ಘ ಹಾರಾಟದಿಂದಾಗಿ ಪಕ್ಷಿ ಅಸ್ವಸ್ಥಗೊಂಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಸಂಸ್ಥೆಯ ಮನವಿಯ ಮೇರೆಗೆ ಪಶುವೈದ್ಯರು ಪಕ್ಷಿಯ ಮೈಮೇಲಿದ್ದ ಟ್ರಾನ್ಸ್‌ಮೀಟರ್ ಅನ್ನು ತೆರವುಗೊಳಿಸಿದ್ದಾರೆ ಎಂದು ಕೋಸ್ಟಲ್ ಮರೈನ್ ವಿಭಾಗದ ಆರ್‌ಎಫ್‌ಒ ಕಿರಣ್ ಮನವಾಚಾರಿ ತಿಳಿಸಿದ್ದಾರೆ.
ಭಾರತಕ್ಕೂ ಪಾಠ:
“ಶ್ರೀಲಂಕಾದವರು ಕಡಲಹಕ್ಕಿಗಳ ಸಂಶೋಧನೆಗೆ ಹಾಕಿರುವ ಶ್ರಮ ಮೆಚ್ಚುವಂತದ್ದು. ಭಾರತದಲ್ಲೂ ಇಂತಹ ಸಂಶೋಧನೆಗಳಿಗೆ ಸ್ವದೇಶಿ ನಿರ್ಮಿತ ಸುಧಾರಿತ ಯಂತ್ರಗಳನ್ನು ಬಳಸಿ ಅಧ್ಯಯನ ನಡೆಸಬೇಕಿದೆ,” ಎಂದು ಹಿರಿಯ ಸಂಶೋಧಕ ಅಮಿತ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
-
ಸ್ಥಳೀಯ23 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ23 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ23 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ23 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು21 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್24 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್6 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಬಿಗ್ ನ್ಯೂಸ್23 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!















