ಸ್ಥಳೀಯ
Yash Raj Punja-ಐಪಿಎಲ್ ಅಂಗಳಕ್ಕೆ ಮೂಲ್ಕಿ ಕ್ರಿಕೆಟಿಗನ ಎಂಟ್ರಿ: ರಾಜಸ್ಥಾನ್ ರಾಯಲ್ಸ್ ಪಾಲಾದ ‘ಲೆಗ್ ಸ್ಪಿನ್’ ಪ್ರತಿಭೆ ಯಶ್ ರಾಜ್ ಪೂಂಜಾ!
ಇತ್ತೀಚೆಗೆ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟಿಗರು ಮಿಂಚಿದ್ದು, ಅದರಲ್ಲಿ ಪ್ರಮುಖವಾಗಿ ಗಮನ ಸೆಳೆದವರು ದಕ್ಷಿಣ ಕನ್ನಡದ ಮೂಲ್ಕಿ ಮೂಲದ 19 ವರ್ಷದ ಯಶ್ ರಾಜ್ ಪೂಂಜಾ. ಯುವ ಪ್ರತಿಭೆಗಳಿಗೆ ಸದಾ ಆದ್ಯತೆ ನೀಡುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ, ಈ ಬಾರಿ 14 ವರ್ಷದ ವೈಭವ್ ಸೂರ್ಯವಂಶಿ ಜೊತೆಗೆ ಯಶ್ ರಾಜ್ ಪೂಂಜಾ ಅವರನ್ನೂ ತನ್ನ ತಂಡಕ್ಕೆ ಸೇರಿಸಿಕೊಂಡಿದೆ.
ಮಣಿಪಾಲ: ಇತ್ತೀಚೆಗೆ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟಿಗರು ಮಿಂಚಿದ್ದು, ಅದರಲ್ಲಿ ಪ್ರಮುಖವಾಗಿ ಗಮನ ಸೆಳೆದವರು ದಕ್ಷಿಣ ಕನ್ನಡದ ಮೂಲ್ಕಿ ಮೂಲದ 19 ವರ್ಷದ ಯಶ್ ರಾಜ್ ಪೂಂಜಾ. ಯುವ ಪ್ರತಿಭೆಗಳಿಗೆ ಸದಾ ಆದ್ಯತೆ ನೀಡುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ, ಈ ಬಾರಿ 14 ವರ್ಷದ ವೈಭವ್ ಸೂರ್ಯವಂಶಿ ಜೊತೆಗೆ ಯಶ್ ರಾಜ್ ಪೂಂಜಾ ಅವರನ್ನೂ ತನ್ನ ತಂಡಕ್ಕೆ ಸೇರಿಸಿಕೊಂಡಿದೆ.
ಮಹಾರಾಜ ಟ್ರೋಫಿಯ ಮಿಂಚಿನ ಸಾಧನೆ:
ಮೂಲತಃ ಯುಎಇಯಲ್ಲಿ ಜನಿಸಿದ ಯಶ್ ರಾಜ್ ಪೂಂಜಾ, ನಂತರ ಕರ್ನಾಟಕಕ್ಕೆ ಬಂದು ಕ್ರಿಕೆಟ್‌ನಲ್ಲಿ ಹೆಸರು ಮಾಡಿದರು. 2025ರ ‘ಮಹಾರಾಜ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಪ್ರತಿನಿಧಿಸಿದ್ದ ಇವರು, ಕೇವಲ 10 ಪಂದ್ಯಗಳಿಂದ 23 ವಿಕೆಟ್ ಕಬಳಿಸಿ ಸಂಚಲನ ಮೂಡಿಸಿದ್ದರು. ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಇವರು ಎರಡನೇ ಸ್ಥಾನ ಅಲಂಕರಿಸುವ ಮೂಲಕ ಆಯ್ಕೆಗಾರರ ಗಮನ ಸೆಳೆದಿದ್ದರು. ಕ್ವಾಲಿಫೈಯರ್ ಪಂದ್ಯದಲ್ಲಿ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಇವರು ನೀಡಿದ 30 ರನ್ನಿಗೆ 2 ವಿಕೆಟ್ ಪ್ರದರ್ಶನ ಮರೆಯುವಂತಿಲ್ಲ.
ಇಯಾನ್ ಬಿಶಪ್ ಮೆಚ್ಚಿದ ‘ಜೈಂಟ್’ ಬೌಲರ್:
ಯಶ್ ರಾಜ್ ಅವರ ಎತ್ತರವೇ ಅವರಿಗೆ ದೊಡ್ಡ ಪ್ಲಸ್ ಪಾಯಿಂಟ್. 2024ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೆಟ್ ಬೌಲರ್ ಆಗಿದ್ದಾಗ, ವೆಸ್ಟ್ ಇಂಡೀಸ್‌ನ ದಂತಕಥೆ ಇಯಾನ್ ಬಿಶಪ್ ಅವರ ಕಣ್ಣಿಗೆ ಇವರು ಬಿದ್ದರು. ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುಮಾರು 6 ಅಡಿ 6 ಇಂಚು ಎತ್ತರದ ಈ ಹುಡುಗನನ್ನು ಕಂಡ ಬಿಶಪ್, ಅವರ ಫೋಟೋ ತೆಗೆದು ‘ಬೆಂಗಳೂರಿನ ಹುಡುಗ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಲಕ್ಷಾಂತರ ಜನರು ವೀಕ್ಷಿಸಿದ ಈ ಪೋಸ್ಟ್ ಯಶ್ ರಾಜ್ ಪೂಂಜಾ ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಿತು.
ಕುಂಬ್ಳೆಯಂತೆ ಬದಲಾದ ಪಥ:
ಲೆಜೆಂಡರಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರಂತೆಯೇ ಯಶ್ ರಾಜ್ ಕೂಡ ಆರಂಭದಲ್ಲಿ ವೇಗದ ಬೌಲರ್ ಆಗಿದ್ದವರು. ಆದರೆ, ಬೌಲಿಂಗ್ ಆಕ್ಷನ್ ಸಮಸ್ಯೆಯಿಂದಾಗಿ ನಂತರ ಲೆಗ್ ಸ್ಪಿನ್ನರ್ ಆಗಿ ಬದಲಾದರು. ಇವರ ಅಣ್ಣ ಯೋಧಿನ್ ಪೂಂಜಾ ಕೂಡ ಕ್ರಿಕೆಟಿಗರಾಗಿದ್ದು, ಯುಎಇ ತಂಡವನ್ನು ಪ್ರತಿನಿಧಿಸಿದ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.
ಅಣ್ಣನ ಪ್ರೇರಣೆಯಿಂದ ಹಾಗೂ ಅಂಡರ್-19 ಪಂದ್ಯಗಳ ವೇಳೆ ರಶೀದ್ ಖಾನ್ ಮತ್ತು ಮುಜೀಬ್ ಉರ್ ರೆಹಮಾನ್ ಅವರ ಬೌಲಿಂಗ್ ತಂತ್ರಗಳನ್ನು ಸೂಕ್ಷ್ಮವಾಗಿ ಗಮನಿಸಿದ ಯಶ್ ರಾಜ್, ಇಂದು ಯಶಸ್ವಿ ಲೆಗ್ ಸ್ಪಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಮೂರೇ ಬೆರಳುಗಳನ್ನು ಬಳಸಿ ಚೆಂಡನ್ನು ಸ್ಪಿನ್ ಮಾಡುವ ವಿಶೇಷ ಕಲೆ ಹೊಂದಿರುವ ಪೂಂಜಾ, ಈಗ ಐಪಿಎಲ್ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಹೊಸ ಛಾಪು ಮೂಡಿಸಲು ಸಜ್ಜಾಗಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















