Connect with us

ನಿಧನ ವಾರ್ತೆ

Puttur-ಪುತ್ತೂರು: ಹೃದಯಾಘಾತದಿಂದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ ನಿಧನ

Published

on



Ad Widget

Ad Widget

Ad Widget

Ad Widget

ಬನ್ನೂರು ಮೇಲ್ಮಜಲು ಮೂಲದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ (51 ವ.) ಅವರು ಗುರುವಾರ (ಡಿ.19) ಹೃದಯಾಘಾತದಿಂದ ನಿಧನರಾದರು. ಪುತ್ತೂರು ಬೈಪಾಸ್ ರಸ್ತೆಯ ಹೋಟೆಲ್ ಒಂದಕ್ಕೆ ಉಪಹಾರಕ್ಕಾಗಿ ತೆರಳಿದ್ದರು. ತಿಂಡಿ ಮುಗಿಸಿ ಕೈ ತೊಳೆದು ಹೊರಬರುತ್ತಿದ್ದ ಸಂದರ್ಭದಲ್ಲಿ ಅವರು ಕುಸಿದು ಬಿದ್ದರು. ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಬನ್ನೂರು ಮೇಲ್ಮಜಲು ಮೂಲದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ (51 ವ.) ಅವರು ಗುರುವಾರ (ಡಿ.19) ಹೃದಯಾಘಾತದಿಂದ ನಿಧನರಾದರು.

Ad Widget

Ad Widget

Ad Widget alt="Ad Widget"/>

Ad Widget

ಅರುಣ್ ಆಚಾರ್ಯ ಅವರು ಪುತ್ತೂರು ಬೈಪಾಸ್ ರಸ್ತೆಯ ಹೋಟೆಲ್ ಒಂದಕ್ಕೆ ಉಪಹಾರಕ್ಕಾಗಿ ತೆರಳಿದ್ದರು. ತಿಂಡಿ ಮುಗಿಸಿ ಕೈ ತೊಳೆದು ಹೊರಬರುತ್ತಿದ್ದ ಸಂದರ್ಭದಲ್ಲಿ ಅವರು ಅಚಾನಕ್ಕಾಗಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

Ad Widget

Ad Widget <> Ad Widget

ಕಂದಾಯ ಇಲಾಖೆಯ ನಿವೃತ್ತ ಖಜಾನಾಧಿಕಾರಿ ವಿಠಲ ಆಚಾರ್ಯ ಅವರ ಪುತ್ರರಾದ ಅರುಣ್ ಆಚಾರ್ಯ ಅವರು ಮುಂಡೂರು ಶೆಟ್ಟಿಮಜಲಿನಲ್ಲಿ ವಾಸವಿದ್ದರು. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಅವರು ಸಮಾಜದಲ್ಲಿ ಗುರುತಿಸಿಕೊಂಡಿದ್ದರು.



Ad Widget

ಮೃತರು ತಂದೆ ವಿಠಲ ಆಚಾರ್ಯ, ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಇವರ ಸಹೋದರರಾದ ಕಿಶನ್ ಆಚಾರ್ಯ ಅವರು ಶಿಕ್ಷಕರಾಗಿದ್ದರೆ, ಕಿರಣ್ ಅವರು ಎಸ್‌ಜಿ ಸೊಸೈಟಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅರುಣ್ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.

Click to comment

Leave a Reply

ನಿಧನ ವಾರ್ತೆ

Nana Patekar-ನಟ ನಾನಾ ಪಾಟೇಕರ್ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತ ದೃಢ

Published

on



Ad Widget

Ad Widget

Ad Widget

Ad Widget

ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅಕ್ಟೋಬರ್ 8ರಂದು ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ದೋನಾ ಪೌಲಾದ ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದರು.

Ad Widget

Ad Widget <> Ad Widget

ನಂತರ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.



Ad Widget

ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಪುಣೆ ಜಿಲ್ಲೆಯ ದೋಂಜೆ ಗ್ರಾಮದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.

Continue Reading

ನಿಧನ ವಾರ್ತೆ

Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ

Published

on



Ad Widget

Ad Widget

Ad Widget

Ad Widget

ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget

Ad Widget

ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget <> Ad Widget

ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Ad Widget

ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Ad Widget

Ad Widget

ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಿಗೂಢ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ಹಿಂದಿನ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading