Connect with us

ಸ್ಥಳೀಯ

Hate Speech-ದ್ವೇಷ ಭಾಷಣ ತಡೆ ಮಸೂದೆ ಅಂಗೀಕಾರ: ಪ್ರಕರಣ ದಾಖಲಾದರೆ ಇನ್ನು ಮುಂದೆ ಜಾಮೀನು ಇಲ್ಲ : ವಿದ್ಯುನ್ಮಾನ ಮಾಧ್ಯಮ, ಯೂಟ್ಯೂಬ್ ಗಳಿಗೂ ಅನ್ವಯ : ಶಿಕ್ಷೆ ಪ್ರಮಾಣ ಎಷ್ಟು..?

Published

on



Ad Widget

Ad Widget

Ad Widget

Ad Widget

ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ವಾಕ್ಸಮರ, ಕೋಲಾಹಲ, ಗದ್ದಲದ ನಡುವೆಯೇ ದ್ವೇಷ ಭಾಷಣ ಮತ್ತು ದ್ವೇಷಾಪರಾಧ ಎಸಗುವವರನ್ನು ಶಿಕ್ಷೆಗೆ ಗುರಿಪಡಿಸುವ ಮಸೂದೆಗೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.

Ad Widget

Ad Widget

Ad Widget

Ad Widget

ಸುವರ್ಣ ವಿಧಾನಸೌಧ (ಬೆಳಗಾವಿ): ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ವಾಕ್ಸಮರ, ಕೋಲಾಹಲ, ಗದ್ದಲದ ನಡುವೆಯೇ ದ್ವೇಷ ಭಾಷಣ ಮತ್ತು ದ್ವೇಷಾಪರಾಧ ಎಸಗುವವರನ್ನು ಶಿಕ್ಷೆಗೆ ಗುರಿಪಡಿಸುವ ಮಸೂದೆಗೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.

Ad Widget

Ad Widget

Ad Widget alt="Ad Widget"/>

Ad Widget

‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ-2025’ಗೆ ಅನುಮೋದನೆ ನೀಡುವಂತೆ ಗೃಹ ಸಚಿವ ಜಿ. ಪರಮೇಶ್ವರ ಪ್ರಸ್ತಾಪಿಸಿದರು.

Ad Widget

Ad Widget <> Ad Widget

ಮಸೂದೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಕೇಂದ್ರ ಸರ್ಕಾರ ಜಾರಿಗೆ ತಂದ ಬಿಎನ್ಎಸ್ ಕಾಯ್ದೆಯು ದ್ವೇಷ ಭಾಷಣ ತಡೆಗೆ ಅವಕಾಶ ಕಲ್ಪಿಸಿದೆ. ಹಾಗಿದ್ದರೂ ಎದುರಾಳಿಗಳನ್ನು ಹತ್ತಿಕ್ಕಲು ಮಸೂದೆ ತರಲಾಗುತ್ತಿದೆ’ ಎಂದು ದೂರಿದರು.



Ad Widget

ಪರ-ವಿರೋಧದ ಚರ್ಚೆಯ ಮಧ್ಯೆಯೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ‘ಕರಾವಳಿಯಲ್ಲಿ ಬೆಂಕಿ ಹಚ್ಚಿದ್ದೀರ, ಇಲ್ಲಿಯೂ ಬೆಂಕಿ ಹಚ್ಚುತ್ತೀರ’ ಎಂದು ಹೇಳಿದ್ದು, ಕರಾವಳಿ ಭಾಗದ ಬಿಜೆಪಿ ಸದಸ್ಯರನ್ನು ಕೆರಳಿಸಿತು. ಸಚಿವರು ಕ್ಷಮೆ ಯಾಚಿಸಿಬೇಕು ಎಂದು ಬಿಜೆಪಿ ಸದಸ್ಯರು ಪಟ್ಟುಹಿಡಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು.

Ad Widget

Ad Widget

‘ಸಚಿವರ ಹೇಳಿಕೆಯನ್ನು ಕಡತದಿಂದ ತೆಗೆದುಹಾಕುತ್ತೇನೆ’ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಭರವಸೆ ನೀಡಿದರು. ಅದಕ್ಕೆ ಸಮಾಧಾನಗೊಳ್ಳದ ಬಿಜೆಪಿ ಸದಸ್ಯರು, ಸಭಾಧ್ಯಕ್ಷರ ಪೀಠದ ಮುಂಭಾಗಕ್ಕೆ ಬಂದು ಘೋಷಣೆ ಕೂಗಿದರು. ಈ ವೇಳೆ ಅಶೋಕ ಅವರು ಮಸೂದೆ ಪ್ರತಿ ಹರಿದುಹಾಕಿದರು. ಗದ್ದಲದ ಮಧ್ಯೆಯೇ ಪರಮೇಶ್ವರ ಅವರು ಮಸೂದೆಗೆ ಅಂಗೀಕಾರ ಪಡೆದರು.

ಪರಮೇಶ್ವರ ಹೇಳಿದ್ದೇನು?:
‘ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ ಮಾಡಿ ಸಮಾಜದ ಸಾಮರಸ್ಯ ಹದಗೆಡಿಸುವುದು ಮತ್ತು ದ್ವೇಷ ಹರಡುವವರಿಗೆ ಕಡಿವಾಣ ಹಾಕಲು ಮತ್ತು ಅಂತಹ ಅಪರಾಧಗಳನ್ನು ಎಸಗುವ ವ್ಯಕ್ತಿ, ವ್ಯಕ್ತಿಗಳು, ಸಂಘಟನೆಯವರಿಗೆ ಶಿಕ್ಷೆ ವಿಧಿಸುವ ಉದ್ದೇಶದಿಂದ ಈ ಮಸೂದೆ ರೂಪಿಸಲಾಗಿದೆ’ ಎಂದು ಪರಮೇಶ್ವರ ಪ್ರತಿಪಾದಿಸಿದರು.
‘ಇತ್ತೀಚೆಗೆ ದ್ವೇಷ ಮಾತು, ಶಬ್ದಗಳ ಬಳಕೆಯಿಂದ ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯ ಎತ್ತಿ ಕಟ್ಟುವ ಕೆಲಸಗಳಾಗುತ್ತಿವೆ. ದ್ವೇಷ ಭಾಷಣಗಳಿಂದ ಎಷ್ಟೋ ಕೊಲೆಗಳು, ಹೊಡೆದಾಟಗಳು ನಡೆದಿವೆ. ಇದರಿಂದ ಸಮಾಜದ ಸ್ವಾಸ್ಥ್ಯ ಮತ್ತು ಸಾಮರಸ್ಯ ಹಾಳಾಗುತ್ತಿದೆ. ಪೂರ್ವಗ್ರಹಪೀಡಿತವಾಗಿ ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗ ಆಧಾರದಲ್ಲಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ಈ ಮಸೂದೆ ರೂಪಿಸಲಾಗಿದೆ’ ಎಂದರು.
‘ಗುಪ್ತಚರ ವರದಿ ಆಧರಿಸಿ ಇತ್ತೀಚೆಗೆ ವ್ಯಕ್ತಿಯೊಬ್ಬರನ್ನು ಬೇರೆ ಜಿಲ್ಲೆಗೆ ಹೋಗದಂತೆ ನಿಷೇಧಿಸಿದ್ದೇವೆ. ಹೀಗೆ ಎಷ್ಟು ಜನರನ್ನು ನಿಷೇಧಿಸುವುದು? ಇಂತಹ ದ್ವೇಷ ಭಾಷಣ ಹಾಗೂ ದ್ವೇಷಾಪರಾಧಿಗಳಿಗೆ ಕಡಿವಾಣ ಹಾಕಲು ಕಾನೂನು ಅಗತ್ಯವಿದೆ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ವಾಸಸ್ಥಳ, ಅಂಗವೈಕಲ್ಯ ಅಥವಾ ಬುಡಕಟ್ಟು ಜನರ ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವುದು ಅಥವಾ ದ್ವೇಷ ಉತ್ತೇಜಿಸುವುದು ಅಥವಾ ಪ್ರಚಾರ ಮಾಡುವುದನ್ನು ದ್ವೇಷಾಪರಾಧ ಎಂದು ಪರಿಗಣಿಸಲಾಗುವುದು’ ಎಂದು ಹೇಳಿದರು.

‘ದ್ವೇಷಾಪರಾಧವನ್ನು ಜಾಮೀನುರಹಿತ ಅಪರಾಧ ಎಂದು ಪರಿಗಣಿಸಲಾಗುವುದು. ನೋಂದಾಯಿತ, ನೋಂದಾಯಿತವಲ್ಲದ ಸಂಘಟನೆಗಳು, ಸಂಸ್ಥೆಗಳು, ವಿದ್ಯುನ್ಮಾನ ಮಾಧ್ಯಮಗಳು, ಯುಟ್ಯೂಬ್‌ಗಳು ಈ ಮಸೂದೆಯ ವ್ಯಾಪ್ತಿಗೆ ಬರುತ್ತವೆ. ದ್ವೇಷ ಬಿತ್ತುವ ಪುಸ್ತಕಗಳು, ಚಿತ್ರಗಳು, ಪ್ರಕಟಣೆಗಳು, ಕರಪತ್ರಗಳಿಗೂ ಅನ್ವಯವಾಗುತ್ತದೆ’ ಎಂದು ಪರಮೇಶ್ವರ ವಿವರಿಸಿದರು.

ಆಗ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ವಿ. ಸುನಿಲ್ ಕುಮಾರ್, ‘ಇದು ಮುಂದಾಲೋಚನೆ ಇಲ್ಲದೆ ತಂದ ಮಸೂದೆಯಾಗಿದ್ದು, ಅಪಾಯದ ಸೂಚನೆ ನೀಡುತ್ತಿದೆ’ ಎಂದರು. ಅದಕ್ಕೆ ಪರಮೇಶ್ವರ, ‘ಬಿಎನ್‌ಎಸ್ ಕಾಯ್ದೆ ವ್ಯಾಪ್ತಿಗೆ ಬಾರದನ್ನು ಈ ಮಸೂದೆಯಡಿ ತಂದಿದ್ದೇವೆ. ಹೀಗಾಗಿ ಮಸೂದೆಗೆ ಅಂಗೀಕಾರ ನೀಡಬೇಕು’ ಎಂದು ಕೋರಿದರು.

ಶಿಕ್ಷೆ ಪ್ರಮಾಣ ಎಷ್ಟು
*ಮೊದಲ ಬಾರಿಯ ಕೃತ್ಯಕ್ಕೆ 1 ವರ್ಷದಿಂದ 7 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ₹50 ಸಾವಿರ ದಂಡ
*ಪುನರಾವರ್ತಿತವಾದರೆ 2 ವರ್ಷದಿಂದ 10 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಲು ಮೊದಲು ಅವಕಾಶ ಕಲ್ಪಿಸಲಾಗಿತ್ತು. ಮಸೂದೆ ಅಂಗೀಕರಿಸುವಾಗ, ಪುನರಾವರ್ತಿತ ಪ್ರಕರಣದಲ್ಲಿ ಜೈಲು ಶಿಕ್ಷೆಯನ್ನು 2 ವರ್ಷದಿಂದ 7 ವರ್ಷಗಳವರೆಗೆ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.

ಬಿಜೆಪಿ-ಜೆಡಿಎಸ್ ಸಭಾತ್ಯಾಗ
ಮಸೂದೆಯ ಕುರಿತು ತಮ್ಮ ಸದಸ್ಯರಿಗೆ ಮಾತನಾಡಲು ಅವಕಾಶ ನೀಡದ್ದನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ನಡೆಸಿದರು.
ತರಾತುರಿಯಲ್ಲಿ ಮಸೂದೆ ಅಂಗೀಕಾರ ಮಾಡಿದ್ದನ್ನು ಖಂಡಿಸಿ ಭೋಜನ ವಿರಾಮದ ಬಳಿಕ ಬಿಜೆಪಿ-ಜೆಡಿಎಸ್‌ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ಧರಣಿ ನಡೆಸಿದರು. ತಮ್ಮನ್ನು ಮತ್ತು ಆಡಳಿತ ಪಕ್ಷದವರನ್ನು ಕರೆಸಿ ಚರ್ಚೆ ನಡೆಸುವಂತೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ, ಬಿಜೆಪಿಯ ವಿ.ಸುನಿಲ್‌ಕುಮಾರ್ ಸಲಹೆ ನೀಡಿದರು. ಬಳಿಕ ಸಭಾಧ್ಯಕ್ಷ ಖಾದರ್ ಅವರು ಕಲಾಪ ಮುಂದೂಡಿ ಸಭೆಯನ್ನು ಕರೆದರು. ಕಲಾಪ ಸೇರಿದಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಸದನ ಸಮಿತಿಗೆ ಒಪ್ಪಿಸುವಂತೆ ಒತ್ತಾಯಿಸಿದರು. ಸರ್ಕಾರ ಇದಕ್ಕೆ ಒಪ್ಪದೇ ಇದ್ದಾಗ ವಿರೋಧಪಕ್ಷಗಳು ಸಭಾತ್ಯಾಗ ನಡೆಸಿದವು.

ಪೊಲೀಸರು ಹಿಟ್ಲರ್ ಆಗುತ್ತಾರೆ: ಅಶೋಕ
ಕಾಯ್ದೆ ಜಾರಿಯಾದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಮರೆಯಾಗಿ, ಪೊಲೀಸರು ಹಿಟ್ಲರ್‌ಗಳಂತೆ ವರ್ತಿಸತೊಡಗುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಮಸೂದೆ ವಿರೋಧಿಸಿ ಮಾತನಾಡಿದ ಅವರು, ‘ದ್ವೇಷ ಭಾಷಣಕ್ಕೆ ಬಿಎನ್‌ಎಸ್ ಕಾಯ್ದೆಯಡಿ ಶಿಕ್ಷೆ ವಿಧಿಸುವ ಅವಕಾಶ ಇದೆ. ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮಸೂದೆ ಬ್ರಹ್ಮಾಸ್ತ್ರವಾಗಲಿದೆ. ಮಸೂದೆ ತಂದಿರುವುದರ ಹಿಂದೆ ಮತ ಬ್ಯಾಂಕ್ ರಾಜಕಾರಣವಿದೆ. ಯಾರನ್ನೋ ಸಂತೃಪ್ತಿಪಡಿಸಲು ಯಾರನ್ನೋ ಜೈಲಿಗೆ ಹಾಕಲಾಗುತ್ತದೆ. ಲೋಕಸಭೆಯಲ್ಲಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಇಲ್ಲಿ ಸ್ವಾತಂತ್ರ್ಯ ಹತ್ತಿಕ್ಕಲಿದೆ’ ಎಂದರು.

‘ಪತ್ರಿಕಾ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಿದೆ. ಭ್ರಷ್ಟಾಚಾರದ ಸುದ್ದಿ ಪ್ರಸಾರ ಮಾಡಿದವರು ಜೈಲು ಸೇರಬೇಕಾಗುತ್ತದೆ. ವ್ಯಕ್ತಿ ಹೇಳಿಕೆ ನೀಡಿದರೆ, ಸಂಸ್ಥೆ ಮೇಲೆ ಕೇಸ್. ಯಾವ ಉದ್ದೇಶಕ್ಕೆ ಈ ಮಸೂದೆ ತರುತ್ತಿದ್ದೀರಿ? ಪೊಲೀಸ್ ಇಲಾಖೆ ಮತ್ತಷ್ಟು ಭ್ರಷ್ಟಾಚಾರ, ದುಡ್ಡು ವಸೂಲಿ ಮಾಡಲು ಅವಕಾಶ ನೀಡುತ್ತಿದ್ದೀರಾ? ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದವರಿಂದ ಮತ್ತೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ಟೀಕಿಸಿದರು.

‘ಕರಾವಳಿ ಬೆಂಕಿ’ಯ ಕಿಡಿ
ಚರ್ಚೆಯ ವೇಳೆ ಸಚಿವ ಸಂತೋಷ್ ಲಾಡ್ ಅವರ ಮಾತಿನಿಂದ ಕೆರಳಿದ ಕರಾವಳಿ ಭಾಗದ ಬಿಜೆಪಿ ಸದಸ್ಯರು, ‘ಅಂಬೇಡ್ಕ‌ರ್ ಸತ್ತಾಗ ಸಮಾಧಿ ಮಾಡಲು ದೆಹಲಿಯಲ್ಲಿ ಜಾಗ ಕೊಡಲಿಲ್ಲ’ ಎಂದು ಆಡಳಿತ ಪಕ್ಷದವರ ಕಾಲೆಳೆದರು. ಈ ವೇಳೆ ಸದನದಲ್ಲಿ ಗದ್ದಲ ಏರ್ಪಟ್ಟಿತು. ಆಗ ಸಚಿವ ಬೈರತಿ ಸುರೇಶ್, ‘ನೀವು ಏಕೆ ಪಕ್ಷಪಾತಿಗಳಾಗಿದ್ದೀರಿ’ ಎಂದು ಪ್ರಶ್ನಿಸಿದರು. ಅದಕ್ಕೆ ಕರಾವಳಿ ಭಾಗದ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ರೊಚ್ಚಿಗೆದ್ದ ಸಚಿವ ಬೈರತಿ, ‘ಕರಾವಳಿ ಯಲ್ಲಿ ಬೆಂಕಿ ಹಾಕಿ, ಈಗ ಇಲ್ಲಿ ಏಕೆ ಬೆಂಕಿ ಹಾಕುವಿರಿ’ ಎಂದು ಹರಿಹಾಯ್ದರು. ಈ ಮಾತಿನಿಂದ ಸದನದಲ್ಲಿ ಗದ್ದಲ ಹೆಚ್ಚಾಯಿತು. ಕರಾವಳಿ ಭಾಗದ ಶಾಸಕರು ಆಕ್ರೋಶ ವ್ಯಕ್ತಪಡಿಸಿದಾಗ ಕೆರಳಿದ ಸಚಿವ ಬೈರತಿ, ‘ನಿಮ್ಮ ಬಾಸಿಸಂಗೆ ಹೆದರುವುದಿಲ್ಲ’ ಎಂದು ಕಿಡಿಕಾರಿದರು. ಬಿಜೆಪಿಯ ವಿ.ಸುನಿಲ್ ಕುಮಾರ್, ‘ಕರಾವಳಿ ಬಿಟ್ಟಿ ಬಿದ್ದಿದೆಯಾ? ಕರಾವಳಿ ಬಗ್ಗೆ ಹಗುರವಾಗಿ ಮಾತನಾಡಬಾರದು’ ಎಂದರು. ‘ಕರಾವಳಿ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವರು ಕ್ಷಮೆ ಕೇಳಬೇಕು’ ಎಂದು ಆ ಭಾಗದ ಸದಸ್ಯರು ಆಗ್ರಹಿಸಿದರು. ‘ಸಭಾಧ್ಯಕ್ಷರೇ ನೀವೂ ಕರಾವಳಿ ಭಾಗದವರು. ಇಂತಹ ಮಾತು ಕೇಳಿಯೂ ನೀವು ಹೇಗೆ ಪೀಠದ ಮೇಲೆ ಕೂರುತ್ತೀರಿ’ ಎಂದು ಕೇಳಿದರು. ಬಳಿಕ ಬಿಜೆಪಿ, ಜೆಡಿಎಸ್ ಶಾಸಕರು ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟಿಸಿದರು.

Ad Widget
Click to comment

Leave a Reply

ಪುತ್ತೂರು

ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



Ad Widget
Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಬಿಗ್ ನ್ಯೂಸ್

Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget <> Ad Widget

ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



Ad Widget

ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget

ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.

ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading