Connect with us

Uncategorized

Liquor shop-ರಾಜ್ಯದಲ್ಲಿ 569 ಮದ್ಯದಂಗಡಿ ಲೈಸೆನ್ಸ್ ಹಂಚಿಕೆ: ಅಬಕಾರಿ ಇಲಾಖೆಯಿಂದ ಇ-ಹರಾಜು ಪ್ರಕ್ರಿಯೆ ಆರಂಭ

Published

on

Ad Widget

Ad Widget

Ad Widget

Ad Widget

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಂಚಿಕೆಯಾಗದೆ ಉಳಿದಿರುವ ಹಾಗೂ ಸ್ಥಗಿತಗೊಂಡಿರುವ ಒಟ್ಟು 569 ಮದ್ಯದಂಗಡಿ ಸನ್ನದುಗಳ (Licenses) ಹಂಚಿಕೆಗೆ ಅಬಕಾರಿ ಇಲಾಖೆಯು ಅಧಿಕೃತವಾಗಿ ಚಾಲನೆ ನೀಡಿದೆ. ಈ ಪ್ರಕ್ರಿಯೆಯು ಪಾರದರ್ಶಕ ಇ-ಹರಾಜಿನ ಮೂಲಕ ನಡೆಯಲಿದ್ದು, ಡಿಸೆಂಬರ್ 22ರಿಂದಲೇ ಆರಂಭವಾಗಲಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಂಚಿಕೆಯಾಗದೆ ಉಳಿದಿರುವ ಹಾಗೂ ಸ್ಥಗಿತಗೊಂಡಿರುವ ಒಟ್ಟು 569 ಮದ್ಯದಂಗಡಿ ಸನ್ನದುಗಳ (Licenses) ಹಂಚಿಕೆಗೆ ಅಬಕಾರಿ ಇಲಾಖೆಯು ಅಧಿಕೃತವಾಗಿ ಚಾಲನೆ ನೀಡಿದೆ. ಈ ಪ್ರಕ್ರಿಯೆಯು ಪಾರದರ್ಶಕ ಇ-ಹರಾಜಿನ ಮೂಲಕ ನಡೆಯಲಿದ್ದು, ಡಿಸೆಂಬರ್ 22ರಿಂದಲೇ ಆರಂಭವಾಗಲಿದೆ.

Ad Widget

Ad Widget alt="Ad Widget"/>

Ad Widget

ಬಜೆಟ್ ಘೋಷಣೆ ಜಾರಿ:
2025-26ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದಂತೆ, ರಾಜ್ಯದಲ್ಲಿ ಬಳಕೆಯಾಗದ ಮದ್ಯದಂಗಡಿ ಸನ್ನದುಗಳನ್ನು ಪಾರದರ್ಶಕ ಇ-ಹರಾಜಿನ ಮೂಲಕ ಹಂಚಿಕೆ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಈಗ ಅಬಕಾರಿ ಇಲಾಖೆಯು ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದೆ.

Ad Widget

Ad Widget <> Ad Widget

ಸನ್ನದುಗಳ ವರ್ಗೀಕರಣ:
ಈ ಹರಾಜು ಪ್ರಕ್ರಿಯೆಯಲ್ಲಿ ಸನ್ನದುಗಳನ್ನು ಎರಡು ಪ್ರಮುಖ ವಿಭಾಗಗಳಾಗಿ ವರ್ಗೀಕರಿಸಲಾಗಿದೆ:
ಸಿಎಲ್-2ಎ (CL-2A): ಈ ಹಿಂದೆ ಸ್ಥಗಿತಗೊಂಡಿದ್ದ ಅಥವಾ ಹಂಚಿಕೆಯಾಗದ ಸಿಎಲ್-2 ಮತ್ತು ಸಿಎಲ್-11ಸಿ ಸನ್ನದುಗಳನ್ನು ಈ ವರ್ಗಕ್ಕೆ ಸೇರಿಸಲಾಗಿದ್ದು, ಒಟ್ಟು 477 ಸನ್ನದುಗಳು ಹರಾಜಿಗೆ ಲಭ್ಯವಿವೆ.
ಸಿಎಲ್-9ಎ (CL-9A): ಸ್ಥಗಿತಗೊಂಡಿದ್ದ ಸಿಎಲ್-9 (ಬಾರ್ ಮತ್ತು ರೆಸ್ಟೋರೆಂಟ್) ಸನ್ನದುಗಳನ್ನು ಈ ವರ್ಗಕ್ಕೆ ಸೇರಿಸಲಾಗಿದ್ದು, ಒಟ್ಟು 92 ಸನ್ನದುಗಳು ಲಭ್ಯವಿವೆ.

ಭಾಗವಹಿಸುವಿಕೆ ಮತ್ತು ನೋಂದಣಿ:
ಯಾವುದೇ ವ್ಯಕ್ತಿ, ಏಕವ್ಯಕ್ತಿ ಮಾಲೀಕತ್ವದ ಸಂಸ್ಥೆ, ಟ್ರಸ್ಟ್, ಸೊಸೈಟಿ ಅಥವಾ ಪಾಲುದಾರಿಕೆ ಸಂಸ್ಥೆಗಳು ಈ ಹರಾಜಿನಲ್ಲಿ ಭಾಗವಹಿಸಬಹುದು. ಇ-ಹರಾಜು ಪ್ರಕ್ರಿಯೆಯು ಭಾರತ ಸರ್ಕಾರದ ಎಂಎಸ್‌ಟಿಸಿ ಲಿಮಿಟೆಡ್ (MSTC Ltd) ಪೋರ್ಟಲ್‌ನಲ್ಲಿ ನಡೆಯಲಿದೆ. ಆಸಕ್ತರು ₹1,000 ಪಾವತಿಸಿ ಈ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

Ad Widget

Ad Widget

ಶುಲ್ಕ ಮತ್ತು ನಿಯಮಗಳು:
ಅರ್ಜಿ ಶುಲ್ಕ: ಪ್ರತಿ ಸನ್ನದಿಗೆ ಅರ್ಜಿ ಸಲ್ಲಿಸಲು ₹50,000 ಶುಲ್ಕ ನಿಗದಿಪಡಿಸಲಾಗಿದೆ (ಇದು ಹಿಂತಿರುಗಿಸಲಾಗದ ಮೊತ್ತ). ಒಬ್ಬರೇ ಹಲವು ಸನ್ನದುಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದರೂ, ಪ್ರತಿ ಸನ್ನದಿಗೆ ಪ್ರತ್ಯೇಕ ಅರ್ಜಿ ಶುಲ್ಕ ಪಾವತಿಸಬೇಕು.
ಇಎಂಡಿ (EMD): ಪ್ರತಿ ಸನ್ನದಿನ ಮೂಲ ಬೆಲೆಯ ಶೇಕಡಾ 2ರಷ್ಟು ಮೊತ್ತವನ್ನು ಮುಂಗಡ ಠೇವಣಿಯಾಗಿ ಇರಿಸಬೇಕು.
ಹರಾಜು ಮೊತ್ತ: ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಕನಿಷ್ಠ ₹2 ಲಕ್ಷ ಅಥವಾ ಅದರ ಗುಣಾಕಾರದಷ್ಟು (4, 6, 8 ಲಕ್ಷ ಹೀಗೆ) ಮೊತ್ತವನ್ನು ಹೆಚ್ಚಿಸುತ್ತಾ ಹೋಗಲು ಅವಕಾಶ ನೀಡಲಾಗಿದೆ.

ಈ ಪಾರದರ್ಶಕ ಹರಾಜು ಪ್ರಕ್ರಿಯೆಯ ಮೂಲಕ ರಾಜ್ಯ ಸರ್ಕಾರವು ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ, ಕಾನೂನುಬದ್ಧವಾಗಿ ಮದ್ಯದ ವಹಿವಾಟು ನಡೆಸಲು ಆಸಕ್ತಿ ಇರುವವರಿಗೆ ಮುಕ್ತ ಅವಕಾಶ ನೀಡಿದೆ.

Ad Widget
Click to comment

Leave a Reply

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!