ರಾಜಕೀಯ
Bayrati Basavaraj-ಬಿಕ್ಲು ಶಿವ ಕೊಲೆ ಕೇಸ್: ತಲೆಮರೆಸಿಕೊಂಡ ಶಾಸಕ ಬೈರತಿ ಬಸವರಾಜ ಪತ್ತೆಗೆ ಗೋವಾ, ಪುಣೆಯಲ್ಲಿ ಸಿಐಡಿ ಶೋಧ..!
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗಾಗಿ ಸಿಐಡಿ (CID) ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಶಾಸಕರನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸದ್ಯ ಗೋವಾ ಮತ್ತು ಪುಣೆಯಲ್ಲಿ ಶೋಧ ಕಾರ್ಯ ಚುರುಕುಗೊಂಡಿದೆ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗಾಗಿ ಸಿಐಡಿ (CID) ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಶಾಸಕರನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸದ್ಯ ಗೋವಾ ಮತ್ತು ಪುಣೆಯಲ್ಲಿ ಶೋಧ ಕಾರ್ಯ ಚುರುಕುಗೊಂಡಿದೆ.
ಜಾಮೀನು ನಿರಾಕರಣೆ, ಶಾಸಕ ಭೂಗತ:
ಶಾಸಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವೂ ನಿರಾಕರಿಸಿದೆ. ಈ ಬೆಳವಣಿಗೆಯ ನಂತರ ಶಾಸಕರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರಿನಿಂದ ನಾಪತ್ತೆಯಾಗಿದ್ದಾರೆ. ಅವರು ರಾಜ್ಯ ಬಿಟ್ಟು ಹೊರ ಹೋಗಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸಿಐಡಿ ತಂಡಗಳು ನೆರೆಯ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.
ಲುಕ್‌ಔಟ್ ನೋಟಿಸ್ ಜಾರಿ:
ಆರೋಪಿ ಶಾಸಕರು ದೇಶ ಬಿಟ್ಟು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಇರುವುದರಿಂದ, ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಅವರ ವಿರುದ್ಧ ‘ಲುಕ್‌ಔಟ್ ನೋಟಿಸ್’ ಜಾರಿಗೊಳಿಸಲಾಗಿದೆ. ಅಲ್ಲದೆ, ಹೊರ ರಾಜ್ಯಗಳ ಪೊಲೀಸರ ಜೊತೆಗೂ ಸಿಐಡಿ ಸಮನ್ವಯ ಸಾಧಿಸಿದೆ.
ಪ್ರಕರಣದ ಹಿನ್ನೆಲೆ:
ಬೆಂಗಳೂರು ಪೂರ್ವ ತಾಲ್ಲೂಕಿನ ಕಿತ್ತಗನೂರಿನಲ್ಲಿರುವ ಸರ್ವೇ ನಂ. 212ರ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಜುಲೈ 15ರಂದು ರೌಡಿಶೀಟರ್ ಬಿಕ್ಲು ಶಿವನನ್ನು 12 ಜನರ ಗುಂಪೊಂದು ಹತ್ಯೆ ಮಾಡಿತ್ತು. ಈ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ ಅವರ ಕುಮ್ಮಕ್ಕಿದೆ ಎಂಬ ಆರೋಪ ಕೇಳಿಬಂದಿದ್ದು, ಎಫ್‌ಐಆರ್‌ನಲ್ಲಿ ಅವರು 5ನೇ ಆರೋಪಿಯಾಗಿದ್ದಾರೆ. ಈ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ರೌಡಿ ಜಗದೀಶ್ ಅಲಿಯಾಸ್ ಜಗ್ಗ ಮತ್ತು ಮಲಯಾಳ ಅಜಿತ್ ಸೇರಿದಂತೆ 15 ಮಂದಿಯನ್ನು ಬಂಧಿಸಲಾಗಿದೆ.
ಸಿಐಡಿ ತನಿಖೆ:
ಪ್ರಕರಣದ ತನಿಖೆಯನ್ನು ಜುಲೈ 24ರಂದು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ತನಿಖೆಯ ವೇಳೆ ಹತ್ಯೆಯ ಪ್ರಮುಖ ಸಂಚುಕೋರ ಜಗದೀಶ್ ಜೊತೆ ಶಾಸಕರು ನೇರ ಸಂಪರ್ಕ ಹೊಂದಿದ್ದರು ಮತ್ತು ಹತ್ಯೆಗೂ ಮುನ್ನ ಹಲವು ಬಾರಿ ಭೇಟಿಯಾಗಿದ್ದರು ಎಂಬ ಸಾಕ್ಷ್ಯಾಧಾರಗಳು ಸಿಐಡಿಗೆ ಲಭ್ಯವಾಗಿವೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಶಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಸ್ಥಳೀಯ
UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಚನ್ನಪಟ್ಟಣ, ಅ.6: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಸಚಿವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನೂ ಪರಿಶೀಲಿಸಿದರು. ಕರ್ತವ್ಯದಲ್ಲಿದ್ದ ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.
ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಖಾದರ್ ಅವರು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
“ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಔಷಧಿಗಳಿದ್ದರೂ ರೋಗಿಗಳಿಗೆ ಹೊರಗಡೆ ಔಷಧಿ ಬರೆದುಕೊಡುವುದು ಏಕೆ?” ಎಂದು ಪ್ರಶ್ನಿಸಿದ ಸಚಿವರು, ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಷ್ಟನೆ ಪಡೆದರು.
ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಹಾಗೂ ಸಮಯೋಚಿತ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದರು.
ರಾಜಕೀಯ
DK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಬೆಂಗಳೂರು: ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ ₹5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗದ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.
ಪದಕ ವಿಜೇತರ ಬಹುಮಾನ ಮೊತ್ತ ಭಾರೀ ಹೆಚ್ಚಳ
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನೀಡುತ್ತಿದ್ದ ನಗದು ಬಹುಮಾನವನ್ನು ಸರ್ಕಾರ ಹೆಚ್ಚಿಸಿದೆ. ಈ ಹಿಂದೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿಗೆ ₹15 ಲಕ್ಷ ನೀಡಲಾಗುತ್ತಿತ್ತು.
ಇನ್ನು ಮುಂದೆ ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ.
ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ನೇರ ನೇಮಕಾತಿ
ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಒಲಿಂಪಿಕ್ಸ್ ತಯಾರಿಗೆ ತಲಾ ₹10 ಲಕ್ಷ
ಮುಂದಿನ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ಪ್ರೋತ್ಸಾಹ ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್. ಹಾಗೂ ಶ್ರೇಯಾಂಕಾ ಪಾಟೀಲ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು 2026-27ನೇ ಸಾಲಿನ ‘ಗುರಿ ಒಲಿಂಪಿಕ್ಸ್’ ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಇವರಿಗೆ ಒಲಿಂಪಿಕ್ಸ್ ತಯಾರಿಗಾಗಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುತ್ತದೆ.
ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ
ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಹಾಗೂ ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026ರಂದು ಅಧಿಸೂಚನೆ ಹೊರಡಿಸಲಾಗಿದೆ.
8 ಪದಕ ವಿಜೇತ ಕ್ರೀಡಾಪಟುಗಳು
ಶ್ರೇಯಾಂಕ ಆರ್. ಪಾಟೀಲ್ – ಮಹಿಳಾ ಕ್ರಿಕೆಟ್ ತಂಡ, ಚಿನ್ನ
ಎಂ.ಆರ್. ಪೂವಮ್ಮ – 4×400 ಮೀ. ಮಿಶ್ರ ರಿಲೇ, 4×400 ಮೀ. ಮಹಿಳಾ ರಿಲೇ – ಚಿನ್ನ ಮತ್ತು ಬೆಳ್ಳಿ
ತಿಲೋತ್ತಮಾ ಸೇನ್ – ಮಹಿಳೆಯರ 50 ಮೀ. ರೈಫಲ್, ಬೆಳ್ಳಿ
ಆಯುಷ್ ಆರ್. ಶೆಟ್ಟಿ – ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ
ಸ್ನೇಹಾ ಎಸ್.ಎಸ್. – 4×100 ಮೀ. ಮಿಶ್ರ ರಿಲೇ, ಕಂಚು
ಅದಿತಿ ಅಶೋಕ್ – ಮಹಿಳಾ ತಂಡ ಗಾಲ್ಫ್, ಬೆಳ್ಳಿ
ಪ್ರಣವಿ ಎಸ್. ಅರಸ್ – ಮಹಿಳಾ ತಂಡ ಗಾಲ್ಫ್ ಹಾಗೂ ವೈಯಕ್ತಿಕ ಸ್ಪರ್ಧೆ, ಬೆಳ್ಳಿ ಮತ್ತು ಚಿನ್ನ
ಮೋಹಿತ್ ಎಚ್.ಎಸ್. – ಪುರುಷರ ಹಾಕಿ ತಂಡ, ಚಿನ್ನ
ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು
ಯಶಸ್ ಪಾಲಾಕ್ಷ, ಸುಪ್ರಿಯಾ ಸಿಂಡಿಗೆರೆ ಬಸವರಾಜು, ಉನ್ನತಿ ಅಯ್ಯಪ್ಪ, ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಆಯುಷ್ ಶೆಟ್ಟಿ, ಶ್ರೇಯಾಂಕ ಆರ್. ಪಾಟೀಲ್, ಕೀರ್ತಿ ರಂಗಸ್ವಾಮಿ, ಫವಾದ್ ಮಿರ್ಜಾ, ಅದಿತಿ ಅಶೋಕ್, ಪ್ರಣವಿ ಎಸ್. ಅರಸ್, ಮೋಹಿತ್ ಎಚ್.ಎಸ್., ತಿಲೋತ್ತಮಾ ಸೇನ್, ಆಕಾಶ್ ಮಣಿ, ಶ್ರೀಹರಿ ನಟರಾಜ್, ದಕ್ಷಣ್ ಎಸ್., ಅನೀಶ್ ಗೌಡ, ಯಶಸ್ವಿನಿ ಘೋರ್ಪಡೆ, ಸಿಂಧುಶ್ರೀ ಹಾಗೂ ದೀಪು ಮಲ್ಲೇಶ್ ಅವರು ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದಿದ್ದಾರೆ.
ರಾಜಕೀಯ
Ashok Rai-ಅಶೋಕ ಜನಮನ-2026 ಪೂರ್ವಭಾವಿ ಸಭೆ; ವಿಧಾನಸಭಾ ಕ್ಷೇತ್ರದ ಪ್ರತೀ ಮನೆಗೂ ಆಮಂತ್ರಣ ನೀಡುತ್ತಿದ್ದೇನೆ: ಶಾಸಕ ಅಶೋಕ್ ರೈ
ದೀಪಾವಳಿ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಸ್ಸುಗೊಳಿಸಬೇಕು, ಟ್ರಸ್ಟ್ನ ಸದಸ್ಯರು ಗ್ರಾಮಗಳಿಗೆ ತೆರಳಿ ಪ್ರತೀ ಕುಟುಂಬಕ್ಕೂ ಆಹ್ವಾನ ನೀಡಲಿದ್ದಾರೆ ಎಂದು ಶಾಸಕರ ಕಚೇರಿ ಸಭಾಭವನದಲ್ಲಿ ಅ.5 ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕರು ತಿಳಿಸಿದರು.

ಪುತ್ತೂರು: ನ.8ರಂದು ದೀಪಾವಳಿ ಪ್ರಯುಕ್ತ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಸ್ಸುಗೊಳಿಸಬೇಕು, ಟ್ರಸ್ಟ್ನ ಸದಸ್ಯರು ಗ್ರಾಮಗಳಿಗೆ ತೆರಳಿ ಪ್ರತೀ ಕುಟುಂಬಕ್ಕೂ ಆಹ್ವಾನ ನೀಡಲಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.
ಅಶೋಕ ಜನಮನ ಕಾರ್ಯಕ್ರಮದ ಪ್ರಯುಕ್ತ ಶಾಸಕರ ಕಚೇರಿ ಸಭಾ ಭವನದಲ್ಲಿ ಅ.5 ರಂದು ನಡೆದ ಪೂರ್ವ ಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದರು.
ಕಳೆದ 14 ವರ್ಷದಿಂದ ದೀಪಾವಳಿ ಪ್ರಯುಕ್ತ ನಮ್ಮ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದೇವೆ. ಸಣ್ಣ ಮಟ್ಟದಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮ ಇಂದು ಲಕ್ಷಾಂತರ ಮಂದಿ ಸೇರುವ ಕಾರ್ಯಕ್ರಮವಾಗಿ ಮೂಡಿಬರುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತೀಯೊಬ್ಬರ ಆಶೀರ್ವಾದ ಮತ್ತು ಸಲಹೆ ಸಹಕಾರವೇ ಕಾರ್ಯಕ್ರಮ ಯಶಶ್ವಿಯತ್ತ ಸಾಗಲು ಕಾರಣವಾಗಿದೆ ಎಂದು ಹೇಳಿದರು. ಪ್ರತೀ ವರ್ಷದಂತೆ ಈ ವರ್ಷವೂ ನಮ್ಮ ಟ್ರಸ್ಟ್ ಸದಸ್ಯರು ಗ್ರಾಮ ಗ್ರಾಮಕ್ಕೆ ತೆರಳಿ ಕಾರ್ಯಕ್ರಮಕ್ಕೆ ಗ್ರಾಮಸ್ಥರನ್ನು ಆಹ್ವಾನಿಸಲಿದ್ದಾರೆ ಇದಕ್ಕಗಿ ಪ್ರತೀ ಗ್ರಾಮದಲ್ಲೂ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.
ವಿವಿಧ ಸಮಿತಿಗಳ ರಚನೆ
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಸಮಿತಿಯನ್ನು ರಚನೆ ಮಾಡಲಾಗಿದ್ದು ಇದರಲ್ಲಿ ಟ್ರಸ್ಟ್ ಸದಸ್ಯರ ಜೊತೆಗೆ ಪಕ್ಷ ಬೇಧ ಮರೆತು ಗ್ರಾಮಸ್ಥರನ್ನು ನೇಮಿಸಲಾಗಿದೆ. ಮಹಿಳಾ ಪ್ರಚಾರ ಸಮಿತಿಯನ್ನು ರಚನೆ ಮಾಡಲಾಗಿದೆ. ಪ್ರತೀ ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚುಗಳಲ್ಲಿ ಕಾರ್ಯಕ್ರಮದ ಬಗ್ಗೆ ಪ್ರಚಾರ ನೀಡಲಾಗುವುದು. ಜಾತಿ, ಮತ, ಪಕ್ಷ, ಧರ್ಮ ಬೇಧವಿಲ್ಲದೆ ಎಲ್ಲರನ್ನೊಳಗೊಂಡು ಈ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕರು ತಿಳಿಸಿದರು.
ತಟ್ಟೆ-ಸೀರೆ-ಬೆಡ್‌ಶೀಟ್ ಆಯ್ಕೆ ನಿಮ್ಮದು
ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತೀಯೊಬ್ಬರಿಗೂ ದೀಪಾವಳಿ ಉಡುಗೋರೆಯನ್ನು ನೀಡಲಾಗುವುದು. ಈ ಬಾರಿ ಮೂರು ಬಗೆಯ ಉಡುಗೋರೆಗಳನ್ನು ನಿಮ್ಮ ಅಯ್ಕೆಗೆ ನೀಡಲಾಗಿದೆ. ತಟ್ಟೆ, ಸೀರೆ ಮತ್ತು ಬೆಡ್ ಶೀಟ್‌ಗಳನ್ನು ನೀಡಲಾಗುತ್ತಿದ್ದು ಇದರಲ್ಲಿ ಯಾವುದು ಬೇಕಾದರೂ ಒಂದು ಐಟಂನ್ನು ಪಡೆದುಕೊಳ್ಳಬಹುದಾಗಿದೆ. ನಮ್ಮ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಶೀರ್ವಾದ ಮಾಡಲು ಬರುವ ಬಂಧುಗಳಿಗೆ ಸಣ್ಣ ಉಡುಗೋರೆಯನ್ನಾಗಿ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ಇದನ್ನು ವಿನಯಪೂರ್ವಕವಾಗಿ ಸ್ವೀಕರಿಸಬೇಕು ಎಂದು ಶಾಸಕರು ಮನವಿ ಮಾಡಿದರು.
ವೇದಿಕೆಯಲ್ಲಿ ಟ್ರಸ್ಟ್ ಸದಸ್ಯರಾದ ಮುರಳೀಧರ್ ರೈ ಮಟಂತಬೆಟ್ಟು, ಮಹಮ್ಮದ್ ಬಡಗನ್ನೂರು, ಪದ್ಮನಾಭ ಪೂಜಾರಿ ಸಣ್ಣಗುತ್ತು, ನಿಹಾಲ್ ಪಿ ಶೆಟ್ಟಿ, ಡಾ. ರಾಜಾರಾಮ್ ಕೆ ಬಿ, ಕೃಷ್ಣಪ್ರಸಾದ್ ಆಳ್ವ, ಜಯಪ್ರಕಾಶ್ ಬದಿನಾರ್, ರಾಮಣ್ಣ ಪಿಲಿಂಜ, ಯೋಗೀಶ್ ಸಾಮಾನಿ ಹಾಗೂ ಟ್ರಸ್ಟ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಅಶೋಕಜನಮನ 2026 ರ ಕಾರ್ಯಕ್ರಮದ ಬಗ್ಗೆ ಪ್ರತೀ ಗ್ರಾಮಕ್ಕೆ ತೆರಳಿ ನಾವು ಪ್ರಚಾರ ಕಾರ್ಯವನ್ನು ಮಾಡಲಿದ್ದೇವೆ. ಪ್ರತೀಯೊಬ್ಬರೂ ಭಾಗವಹಿಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಇದು ದೀಪಾವಳಿ ಪ್ರಯುಕ್ತ ಶಾಸಕರು ನಡೆಸುವ ಕಾರ್ಯಕ್ರಮ ಇದರಲ್ಲಿ ಜಾತಿ, ಮತ ಬೇಧವಿಲ್ಲದೆ ಎಲ್ಲರೂ ಭಾಗವಹಿಸುವ ಮೂಲಕ ಆಶೀರ್ವದಿಸುವ ಕಾರ್ಯವನ್ನು ಮಾಡಬೇಕು, ಇದು ಎಲ್ಲರ ಕಾರ್ಯಕ್ರಮವಾಗಿದೆ.
-ಸುದೇಶ್ ಶೆಟ್ಟಿ, ಕಾರ್ಯಾದ್ಯಕ್ಷರು ರೈ ಚಾರಿಟೇಬಲ್ ಟ್ರಸ್ಟ್
-
Uncategorized24 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized11 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ6 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ12 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ13 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ12 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್11 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು12 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















