ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]" /> ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]"> Siddaramaiah-ನಾಯಕತ್ವ ಬದಲಾವಣೆ ಮಾಧ್ಯಮದ ಸೃಷ್ಟಿ: ಯಾಕಿಷ್ಟು ಚರ್ಚೆ..? ಹೈಕಮಾಂಡ್ ನಿರ್ಧಾರಕ್ಕೆ ಬದ್ದ : ಸಿದ್ದರಾಮಯ್ಯ - Nikhara News | Kannada News Website
Connect with us

ಮೈಸೂರು

Siddaramaiah-ನಾಯಕತ್ವ ಬದಲಾವಣೆ ಮಾಧ್ಯಮದ ಸೃಷ್ಟಿ: ಯಾಕಿಷ್ಟು ಚರ್ಚೆ..? ಹೈಕಮಾಂಡ್ ನಿರ್ಧಾರಕ್ಕೆ ಬದ್ದ : ಸಿದ್ದರಾಮಯ್ಯ

Published

on

Ad Widget

Ad Widget

Ad Widget

Ad Widget

ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನಾಯಕತ್ವ ಬದಲಾವಣೆ ವಿಷಯದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಈ ಬಗ್ಗೆ ರಾಹುಲ್ ಗಾಂಧಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ” ಎಂದು ಸ್ಪಷ್ಟಪಡಿಸಿದರು.

Ad Widget

Ad Widget

Ad Widget

Ad Widget

ಮೈಸೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನಾಯಕತ್ವ ಬದಲಾವಣೆ ವಿಷಯದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಈ ಬಗ್ಗೆ ರಾಹುಲ್ ಗಾಂಧಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ” ಎಂದು ಸ್ಪಷ್ಟಪಡಿಸಿದರು.

Ad Widget

Ad Widget alt="Ad Widget"/>

Ad Widget

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಯಕತ್ವದ ಬಗ್ಗೆ ಈಗಾಗಲೇ ನಾನು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದೇನೆ. ನಾವು ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ಅಲ್ಲಿಗೆ ಈ ಚರ್ಚೆ ಮುಗಿದ ಅಧ್ಯಾಯ” ಎಂದರು. ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಸಮರ್ಥಿಸಿದ ಸಿಎಂ, “ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದು ನೂರಕ್ಕೆ ನೂರು ನಿಜ. ಏನೇ ಸಮಸ್ಯೆಗಳಿದ್ದರೂ ಹೈಕಮಾಂಡ್ ಬಗೆಹರಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಮಾಧ್ಯಮಗಳ ವಿರುದ್ಧ ಅಸಮಾಧಾನ:
ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಅನಗತ್ಯ ಚರ್ಚೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, “ವಿಧಾನಸಭೆಯಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿದ ಮೇಲೆ ಮತ್ತೆ ಮತ್ತೆ ಪ್ರಶ್ನಿಸುವ ಅಗತ್ಯವೇನಿದೆ? ಸಂಕ್ರಾಂತಿಗೆ ಕ್ರಾಂತಿ ಆಗುತ್ತದೆ ಎಂಬುದೆಲ್ಲ ಬರಿ ಮಾತು. ಹೈಕಮಾಂಡ್ ತೀರ್ಮಾನವೇ ನಮಗೆ ಅಂತಿಮ” ಎಂದು ಪುನರುಚ್ಚರಿಸಿದರು.

ಡಿಕೆಶಿ-ರಾಜಣ್ಣ ಭೇಟಿ ಹಾಗೂ ಕ್ರೆಡಿಟ್ ವಾರ್:
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಪಕ್ಷದ ಅಧ್ಯಕ್ಷರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು, ಅದರಲ್ಲಿ ತಪ್ಪೇನಿಲ್ಲ” ಎಂದರು. ಇನ್ನು ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡಿದ ಬಗ್ಗೆ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, “ಅಧಿಕಾರದಲ್ಲಿದ್ದಾಗ ನಾನು ಮಾಡಿದೆ ಅಥವಾ ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆಗ ಎಸ್‌ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದರು, ಸರ್ಕಾರ ಆ ನಿರ್ಧಾರ ಕೈಗೊಂಡಿತ್ತು” ಎಂದು ಮಾರ್ಮಿಕವಾಗಿ ಹೇಳಿದರು.

Ad Widget

Ad Widget

ಬಜೆಟ್ ಸಿದ್ಧತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ತಯಾರಿ ಆರಂಭಿಸಿದಾಗ ಮಾಹಿತಿ ನೀಡುವುದಾಗಿ ತಿಳಿಸಿದರು.

Ad Widget
Click to comment

Leave a Reply

ಮೈಸೂರು

H. Vishwanath-ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ಸಂಚಲನ: ಎಚ್‌. ವಿಶ್ವನಾಥ್

Published

on

Ad Widget

Ad Widget

Ad Widget

Ad Widget

ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್‌. ವಿಶ್ವನಾಥ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರು: ʻಬಾಂಬೆ ಡೇಸ್ʼ ಪುಸ್ತಕ ಬಿಡುಗಡೆಯಾದರೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಲಿದೆ. ಹೀಗಾಗಿ, ಪುಸ್ತಕ ಬರವಣಿಗೆ ಪೂರ್ಣಗೊಂಡಿದ್ದರೂ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್‌. ವಿಶ್ವನಾಥ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಜನರು ರಾಜಕೀಯದ ಬಗ್ಗೆ ಸಾಕಷ್ಟು ಅಸಹ್ಯಪಟ್ಟುಕೊಂಡಿದ್ದಾರೆ. ನನ್ನ ಪುಸ್ತಕ ಬಿಡುಗಡೆಯಾದರೆ ರಾಜಕೀಯದ ಬಗ್ಗೆ ಜನರಲ್ಲಿ ಮತ್ತಷ್ಟು ಅಸಹ್ಯ ಮೂಡುವ ಸಾಧ್ಯತೆಯಿದೆ” ಎಂದು ಹೇಳಿದರು.

Ad Widget

Ad Widget <> Ad Widget

ಯತೀಂದ್ರ ಇತಿಹಾಸ ತಿಳಿದು ಮಾತನಾಡಲಿ
ರಾಜವಂಶಸ್ಥರ ಕುರಿತು ಸಚಿವ ಡಾ. ಯತೀಂದ್ರ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ವಿಶ್ವನಾಥ್, “ಅನುಭವ ಇಲ್ಲದವರಿಗೆ ಜವಾಬ್ದಾರಿ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ರಾಜವಂಶಸ್ಥರ ಕುರಿತು ಯತೀಂದ್ರ ಮಾತನಾಡಿರುವ ಹಗುರವಾದ ಹೇಳಿಕೆಯೇ ಸಾಕ್ಷಿ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಮೈಸೂರು ರಾಜಮನೆತನದ ಇತಿಹಾಸ ಹಾಗೂ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.

“ಚಾಮುಂಡೇಶ್ವರಿ ಉಪಚುನಾವಣೆಯ ಪ್ರಚಾರಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಆಗಮಿಸದೇ ಇದ್ದಿದ್ದರೆ ಸಿದ್ದರಾಮಯ್ಯ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ” ಎಂದು ಎಚ್‌. ವಿಶ್ವನಾಥ್ ಟೀಕಿಸಿದರು.

Continue Reading

ಮೈಸೂರು

Siddaramaiah–Vijayendra-ಸ್ಟಿಂಗ್ ಮತ್ತು ಪರಿಷತ್ ಫಲಿತಾಂಶ ನಡುವೆಯೇ ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ–ವಿಜಯೇಂದ್ರ; ಗಮನ ಸೆಳೆದ ಗೌರವ ವಿನಿಮಯ

Published

on

Ad Widget

Ad Widget

Ad Widget

Ad Widget

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರು, ಅ.28: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಆರೋಪ-ಪ್ರತ್ಯಾರೋಪಗಳು ಹಾಗೂ ವಿಧಾನಪರಿಷತ್ ಚುನಾವಣೆ ಫಲಿತಾಂಶದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೈಸೂರಿನ ಕೆ.ಆರ್. ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಅಕ್ಕಪಕ್ಕದಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಎರಡೂ ಕೈಗಳನ್ನು ಜೋಡಿಸಿ ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ವಿಜಯೇಂದ್ರ ಅವರ ಬೆನ್ನು ತಟ್ಟಿದರು.

Ad Widget

Ad Widget <> Ad Widget

ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರು ವೇದಿಕೆಯಲ್ಲಿ ಪರಸ್ಪರ ಗೌರವ ವಿನಿಮಯ ಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.

Ad Widget
Continue Reading

ಮೈಸೂರು

Mysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್‌ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

Published

on

Ad Widget

Ad Widget

Ad Widget

Ad Widget

ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರು: ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Ad Widget

Ad Widget alt="Ad Widget"/>

Ad Widget

‘ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು. ಅವರಿಗೆ ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೆ’ ಎಂದು ಸಚಿವರು ಹೇಳಿದ್ದು, ಈ ಹೇಳಿಕೆ ರಾಜಮನೆತನ ಮತ್ತು ಸರಕಾರದ ನಡುವಿನ ಚರ್ಚೆಗೆ ಹೊಸ ತಿರುವು ನೀಡಿದೆ.

Ad Widget

Ad Widget <> Ad Widget

ರವಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಮೋದಾದೇವಿ ಒಡೆಯರ್, ದಸರಾ ಸಂದರ್ಭದಲ್ಲಿ ರಾಜಮನೆತನ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಅವರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಆದರೆ, ಅವರು ಹೇಳಿರುವ ಎಲ್ಲ ವಿಚಾರಗಳನ್ನೂ ಒಪ್ಪಲು ಸಾಧ್ಯವಿಲ್ಲ ಎಂದರು.

‘ಸರಕಾರದ ದಸರಾಕ್ಕೂ ಇತಿಹಾಸವಿದೆ’
‘ಅವರು ಹೇಳಿದಂತೆ ಏಳು ದಿನ ದಸರಾ ಆಚರಿಸಲು ಸಾಧ್ಯವಿಲ್ಲ. ಸರಕಾರದ ದಸರಾ ಅಲ್ಲ ಎಂಬ ಪದ ಬಳಕೆಯೂ ಸರಿಯಲ್ಲ. ಸರಕಾರದ ದಸರಾಕ್ಕೂ ಇತಿಹಾಸವಿದೆ. ಅದನ್ನು ದಸರಾ ಅಲ್ಲ ಎಂದು ಹೇಳುವುದನ್ನು ನಾವು ಒಪ್ಪುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.

Ad Widget

Ad Widget

ಅಂಬಾರಿಯನ್ನು ಸರಕಾರ ಉಚಿತವಾಗಿ ಪಡೆಯುತ್ತಿಲ್ಲ. ಅದಕ್ಕೂ ಸರಕಾರ ಹಣ ಪಾವತಿಸುತ್ತದೆ ಎಂದು ತಿಳಿಸಿದ ಅವರು, ಪ್ರಮೋದಾದೇವಿ ಒಡೆಯರ್ ಅವರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಸರಕಾರದ ಗಮನಕ್ಕೆ ತರಬಹುದಿತ್ತು ಎಂದರು.

‘ನಾವು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದೆವು. ಆದರೆ, ನಮ್ಮ ಗಮನಕ್ಕೆ ಯಾವುದೇ ವಿಚಾರವನ್ನು ತಂದಿರಲಿಲ್ಲ. ಸರಕಾರಕ್ಕೆ ಪತ್ರ ಬರೆಯದೆ ಏಕಾಏಕಿ ಮಾಧ್ಯಮಗಳಿಗೆ ಪತ್ರ ಬರೆದರೆ ಹೇಗೆ?’ ಎಂದು ಪ್ರಶ್ನಿಸಿದರು.

ಅಗತ್ಯವಿದ್ದರೆ ಸರಕಾರದ ವತಿಯಿಂದ ಪ್ರತಿನಿಧಿಗಳನ್ನು ರಾಜಮನೆತನದವರ ಬಳಿಗೆ ಕಳುಹಿಸಲಾಗುವುದು. ಮುಖ್ಯಮಂತ್ರಿ ಅವರು ಈ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರಕಾರ ಸಿದ್ಧವಿದೆ ಎಂದು ತಿಳಿಸಿದರು.

ಅಂಬಾರಿ ಆನೆ ಆಯ್ಕೆಯಲ್ಲಿ ಗೊಂದಲ
ಅಂಬಾರಿ ಹೊರುವ ಆನೆಯ ಆಯ್ಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಯಾವ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂಬುದನ್ನು ರಾಜಮನೆತನಕ್ಕೆ ತಿಳಿಸುವ ಕಾನೂನುಬದ್ಧ ಅಗತ್ಯವಿಲ್ಲ ಎಂದು ಹೇಳಿದರು.

ಆರಂಭದಲ್ಲಿ ಮಹೇಂದ್ರ, ಬಳಿಕ ಧನಂಜಯ ಹಾಗೂ ನಂತರ ಪ್ರಶಾಂತ್ ಆನೆಯ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಅಂಬಾರಿ ಆನೆಯ ಆಯ್ಕೆ ವಿಳಂಬವಾಯಿತು ಎಂದು ಅವರು ವಿವರಿಸಿದರು.

ಜೆಟ್ಟಿ ಕಾಳಗ ರದ್ದತಿ ವಿಚಾರ ಪರಿಶೀಲನೆ
ದಸರಾ ಸಂದರ್ಭದಲ್ಲಿ ಜೆಟ್ಟಿ ಕಾಳಗ ರದ್ದಾದ ವಿಚಾರವಾಗಿ ಪ್ರಮೋದಾದೇವಿ ಒಡೆಯರ್ ಅವರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳಿಗೂ, ಪೊಲೀಸರು ನೀಡಿರುವ ಮಾಹಿತಿಗೂ ವ್ಯತ್ಯಾಸವಿದೆ ಎಂದು ಸಚಿವರು ಹೇಳಿದರು.

ಜೆಟ್ಟಿಗಳು ತಡವಾಗಿ ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆ ತೊಂದರೆಯಾಯಿತು; ಪೊಲೀಸರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂಬುದು ಪೊಲೀಸರ ಹೇಳಿಕೆಯಾಗಿದೆ. ಈ ಕುರಿತು ಸರಕಾರ ಪರಿಶೀಲನೆ ನಡೆಸುತ್ತಿದ್ದು, ಎಲ್ಲಿ ತಪ್ಪಾಗಿದೆ ಎಂಬುದನ್ನು ಗಮನಿಸಲಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!